ಕಾರಿಗೆ ಕ್ಯಾಂಟರ್ ಡಿಕ್ಕಿ: ಡ್ಯಾನ್ಸರ್ ಸುಧೀಂದ್ರಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನ‌ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆಯಲ್ಲಿ ಕೆಟ್ಟು ನಿಂತ ಕಾರನ್ನು ಸುಧೀಂದ್ರ ಪರಿಶೀಲನೆ ಮಾಡುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.

ಸುದ್ದಿ ತಿಳಿದ ಕೂಡಲೇ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ‌ ಧಾವಿಸಿ ಪರಿಶೀಲಿಸಿ ಸುಧೀಂದ್ರ ಅವರ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಂಡರು.

ಸುಧೀಂದ್ರ ಸೋಮವಾರವಷ್ಟೇ ಹೊಸ ಮಾರುತಿ ಸುಜುಕಿ ಎಕೋ ಕಾರು ಡೆಲಿವರಿ ಪಡೆದಿದ್ದರು. ರಸ್ತೆ ಮಧ್ಯೆ ಕಾರು ಕೆಟ್ಟು ನಿಂತಿದ್ದರಿಂದ ಪರೀಕ್ಷಿಸಲು ಕಾರಿನಿಂದ ಕೆಳಗಿಳಿದು ನೋಡುತ್ತಿದ್ದಾಗ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ.

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ಅಲ್ಲದೇ ಡಾಬಸ್ ಪೇಟೆಯಲ್ಲಿ ಡ್ಯಾನ್ಸ್ ಕ್ಲಾಸ್ ನಡೆಸುತ್ತಾ ನೂರಾರು ಯುವಕ, ಯುವತಿಯರಿಗೆ, ಮಕ್ಕಳಿಗೆ ನೃತ್ಯ ತರಬೇತಿ ನೀಡುತ್ತಿದ್ದರು.

ಕಾರಿಗೆ ಕ್ಯಾಂಟರ್ ಡಿಕ್ಕಿ: ಡ್ಯಾನ್ಸರ್ ಸುಧೀಂದ್ರಸ್ಥಳದಲ್ಲೇ ಸಾವು Read More

ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಯುವತಿ ಬಲಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಂದು ಬಲಿ ಪಡೆದಿದೆ.

ಬೆಂಗಳೂರಿನ,ನೆಲಮಂಗಲ,ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಅಪಘಾತ ಸಂಭವಿಸಿ ಯುವತಿ ಮೃತಪಟ್ಟಿದ್ದಾರೆ.

ಪ್ರಿಯಾಂಕಾ(26) ಮೃತಪಟ್ಟ ದುರ್ದೈವಿ. ಪ್ರಿಯಾಂಕಾ ಅವರು ಅಣ್ಣನೊಂದಿಗೆ ಬೈಕ್‌ನಲ್ಲಿ ಮಾದಾವರ ಕಡೆಗೆ ತೆರಳುತ್ತಿದ್ದರು.

ಈ ವೇಳೆ ಹದಗೆಟ್ಟಿದ್ದ ಎಪಿಎಮ್‌ಸಿ ರಸ್ತೆಯಲ್ಲಿ ದೊಡ್ಡ ಗುಂಡಿಯನ್ನು ತಪ್ಪಿಸಲು ಪ್ರಿಯಾಂಕ ಅವರ ಅಣ್ಣ ಮುಂದಾದಾಗ ಬೈಕ್‌ ನಿಯಂತ್ರಣ ಕಳೆದುಕೊಂಡು ಉರುಳಿದೆ.

ಆಗ ಪ್ರಿಯಾಂಕಾ ರಸ್ತೆಗೆ ಬಿದ್ದಿದ್ದಾರೆ. ಆಗ ಕ್ಯಾಂಟರ್ ಲಾರಿಯ ಚಕ್ರದ ಕೆಳಗೆ ಸಿಲುಕಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಿಯಾಂಕಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಯುವತಿ ಬಲಿ Read More

ಸರ್ಕಾರ ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸದಿದ್ದರೆ ಪ್ರತಿಭಟನೆ:ನಿಖಿಲ್

ನೆಲಮಂಗಲ: ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳಿಗೆ ಸ್ಪಂದನೆ ಮಾಡಬೇಕು
ಇಲ್ಲದಿದ್ದರೆ ಬೆಂಬಲ ಕೊಡುವ ಮೂಲಕ ಪ್ರತಿಭಟನೆಗೆ ಇಳಿಯುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಸಿದರು.

ನೆಲಮಂಗಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಗಳು 4.5 ಲಕ್ಷ ಕೋಟಿ ಬಜೆಟ್ ಬಗ್ಗೆ ಮಾತನಾಡ್ತಾರೆ,ಬಹುಶಃ ಸರ್ಕಾರ 800 ಕೋಟಿ ವೇತನ ಪರಿಷ್ಕರಣೆಗೆ ಇಡಬೇಕಾಗುತ್ತದೆ ಎಂದು ಹೇಳಿದರು.

ಸುಮ್ಮನೆ ಲಕ್ಷಾಂತರ ಕೋಟಿ ಇದೆ ಅಂತ ಬೆನ್ನು ತಟ್ಟಿಕೊಳ್ಳೊದಲ್ಲ,
ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸಬೇಕು ಈ ಹಿಂದೆ ನೀವೆ ಭಾಷಣ ಮಾಡಿದ್ದೀರಿ ಇವಾಗ ಹಣ ಬಿಡುಗಡೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ನಿಖಿಲ್ ಒತ್ತಾಯಿಸಿದರು.

ಅಧಿಕಾರದಲ್ಲಿ ಇದ್ದಾಗ ಒಂದು ವರ್ತನೆ ವಿರೋಧ ಪಕ್ಷದಲ್ಲಿದ್ದ ಸಂಧರ್ಭದಲ್ಲಿ ಬೇರೆ ವರ್ತನೆ ಮಾಡುವುದು ಸರಿಯಲ್ಲ,
ಇದನ್ನೆಲ್ಲ ರಾಜ್ಯದ ಜನತೆ ನೋಡುತ್ತಿದ್ದಾರೆ
ಸಂಧರ್ಭದಲ್ಲಿ ಸರ್ಕಾರಕ್ಕೆ ಮಾನ,ಮರ್ಯಾದೆ ಇದ್ದರೆ ಮೊದಲಯ ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು

ಪಕ್ಷ ಸಂಘಟನೆ ಕುರಿತು ಮಾತನಾಡಿದ ಅವರು ಕಳೆದ 45 ದಿನಗಳಿಂದ ನಿರಂತರವಾಗಿ ಸಂಘಟನೆ ಸಾಗುತ್ತಿದೆ
ಇವತ್ತು ನೆಲಮಂಗಲದಲ್ಲಿ ಮಾಜಿ ಶಾಸಕ ಡಾ.ಶ್ರೀನಿವಾಸಮೂರ್ತಿ ಅವರ ನೇತೃತ್ವದಲ್ಲಿ ಸದಸ್ಯತ್ವ ನೊಂದಣಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು, ಬಹಳ ಯಶಸ್ವಿಯಾಗಿದೆ
ಎಂದು ತಿಳಿಸಿದರು.

ದೆಹಲಿಗೆ ತೆರಳುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಲವು ಮುಖಂಡರಗಳನ್ನ ಭೇಟಿ ಮಾಡುವ ಅವಶ್ಯಕತೆ ಇದೆ ಹಾಗಾಗಿ ಹೋಗುತ್ತಿದ್ದೇನೆ ಎಂದು ನಿಖಿಲ್ ಸ್ಪಷ್ಟಪಡಿಸಿದರು.

ಸರ್ಕಾರ ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸದಿದ್ದರೆ ಪ್ರತಿಭಟನೆ:ನಿಖಿಲ್ Read More

ಇಬ್ಬರು ಮನೆಗಳ್ಳರು ಅರೆಸ್ಟ್ : 343 ಗ್ರಾಂ ಚಿನ್ನಾಭರಣ ವಶ

ನೆಲಂಮಗಲ: ಮನೆಗಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ 343 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ನೆಲಮಂಗಲ ಪಟ್ಟಣಕ್ಕೆ ಸಮೀಪದ ವಾಜರಹಳ್ಳಿ ಜಾರ್ಜ್ ಲೇಔಟ್ ನಲ್ಲಿನ ಇಂಜಿನಿಯರ್ ಮನೆಯಲ್ಲಿ 56 ಲಕ್ಷ ಬೆಲೆ ಬಾಳುವ ಚಿನ್ನಾಭರಣ ದೋಚಿ ಖತರ್ನಾಕ್ ಕಳ್ಳರು ಪರಾರಿಯಾಗಿದ್ದರು.

ಅರ್ಧ ಕೆಜಿಗೂ ಹೆಚ್ಚು ಚಿನ್ನಾಭರಣವನ್ನು ಕಳ್ಳತನ ಮಾಡಿದ್ದರು.ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದ
ನೆಲಮಂಗಲ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಯಂತ್ @ ಬ್ಯಾಟರಿ ಜಯಂತ ಹಾಗೂ ಯತೀಶ್ ಬಂಧಿತ ಆರೋಪಿಗಳು,ಆರೋಪಿಗಳಿಂದ 343 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇಬ್ಬರೂ ಆರೋಪಿಗಳು ನಟೋರಿಯಸ್ ಕಳ್ಳರಾಗಿದ್ದು ಈ ಹಿಂದೆ 25-26 ಕೇಸ್ ಗಳಲ್ಲಿ ಭಾಗಿಯಾಗಿದ್ದಾರೆಂಬುದು ವಿಚಾರಣೆ ವೇಳೆ‌ ಗೊತ್ತಾಗಿದೆ

ಇಬ್ಬರು ಮನೆಗಳ್ಳರು ಅರೆಸ್ಟ್ : 343 ಗ್ರಾಂ ಚಿನ್ನಾಭರಣ ವಶ Read More

ಎಲ್ಲಾ ವಿವಿಗಳಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪಿಸಿ:ಡಾ.ಜಾನಪದ ಎಸ್ ಬಾಲಾಜಿ

ಬೆಂಗಳೂರು: ಅಂಬೇಡ್ಕರ್ ಅಧ್ಯಯನ ಪೀಠಗಳನ್ನು ರಾಜ್ಯದ ಎಲ್ಲಾ ವಿವಿಗಳಲ್ಲಿ ಸ್ಥಾಪಿಸಬೇಕೆಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಭಾರತ ಸರ್ಕಾರದ ಐಸಿಸಿಆರ್ ಸದಸ್ಯ ಡಾ ಜಾನಪದ ಎಸ್ ಬಾಲಾಜಿ ಸರ್ಕಾರವನ್ನು ಅಗ್ರಹಿಸಿದರು.

ನೆಲಮಂಗಲದ ಸಿದ್ದಗಂಗಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನೆಹರು ಯುವಕ ಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮಾತೃಭೂಮಿ ವಿವೇಕ ಸಂಘ ನೆಲಮಂಗಲ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಠ್ಯಗಳಲ್ಲಿ ಬಾಬಾ ಸಾಹೇಬರ ಬಗ್ಗೆ ಹೆಚ್ಚು ಪದ್ಯ ಮತ್ತು ಗದ್ಯಗಳನ್ನು ಅಳವಡಿಸಬೇಕು, ಶಾಲಾ ಹಂತದಲ್ಲಿ ಅಂಬೇಡ್ಕರ್ ಅವರ ಬದುಕು ಆದರ್ಶಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಸಂವಿಧಾನದ ಪ್ರತಿಯನ್ನು ಎಲ್ಲರ ಮನೆಗಳಲ್ಲಿ ಕಡ್ಡಾಯಗೊಳಿಸಬೇಕು ಎಂದು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ ಧನಲಕ್ಷ್ಮಿ ಹಾಗೂ ವಕೀಲರಾದ ಕನಕರಾಜು ಅವರು ಅಂಬೇಡ್ಕರ್ ವಿಚಾರಧಾರೆಗಳ ಬಗ್ಗೆ ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ ಅಮರೇಂದ್ರ ಅವರು ಮಾತನಾಡಿ ಅಂಬೇಡ್ಕರ್ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು, ವಿದ್ಯಾರ್ಥಿಗಳು ಹೆಚ್ಚು ಅವರ ಬಗ್ಗೆ ಓದುವ ಮೂಲಕ ಪಾಂಡಿತ್ಯವನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಭಾರತ ಸಂವಿಧಾನದ ಪೀಠಿಕೆಯನ್ನು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿದ್ದಯ್ಯ ಬೋಧಿಸಿದರು.

ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಗಂಗರಾಜು ಸ್ವಾಗತಿಸಿದರು, ಮಾತೃಭೂಮಿ ಸಂಘದ ಅಧ್ಯಕ್ಷರಾದ ಪವನ್ ಕುಮಾರ್ ನಾಯಕ್ ವಂದಿಸಿದರು.

ಕನ್ನಡ ಜಾನಪದ ಪರಿಷತ್ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ರಾ ನರಸಿಂಹಮೂರ್ತಿ, ಮಾತೃಭೂಮಿ ವಿವೇಕ ಸಂಘದ ಚೇತನ್, ನವೀನ್, ಹಾಗೂ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಎಲ್ಲಾ ವಿವಿಗಳಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪಿಸಿ:ಡಾ.ಜಾನಪದ ಎಸ್ ಬಾಲಾಜಿ Read More

ನೆಲಮಂಗಲ ಬಳಿ ಸರಣಿ ಅಪಘಾತ:6 ಮಂದಿ ದುರ್ಮರಣ

ಬೆಂಗಳೂರು: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ನಡೆದ ಸರಣಿ ಅಪಘಾತ ಸಂಭವಿಸಿ, ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲ‌ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ಟಿ.ಬೇಗೂರು ಬಳಿ ಘಟನೆ ನಡೆದಿದೆ. ಕಾರಿನ ಮೇಲೆ ಕಂಟೇನರ್‌ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂದೇ ಮನೆಯ‌ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ವಿಜಯಪುರದ ಇಂಜಿನಿಯರ್ ಚಂದ್ರಯಾಗಪ್ಪ, ಗೌರ ಬಾಯಿ, ದೀಕ್ಷಾ, ಧ್ಯಾನ್ ಮೃತಪಟ್ಟವರೆಂದು ಗುರುತಿಸಲಾಗಿದೆ.

ಅಪಘಾತದ ವೇಳೆ ಕಂಟೇನರ್‌ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ, ಕಾರು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.

ಹೆವಿ ಲೋಡ್ ತುಂಬಿದ್ದ ಕಂಟೇನರ್‌ ಮೇಲೆತ್ತಲು ಲಾರಿ ಬೆಲ್ಟ್‌, ಚೈನ್‌ಗಳನ್ನ ತರಿಸಲಾಗಿತ್ತು. ಕೊನೆಗೆ ಹರಸಾಹಸ ಪಟ್ಟು ಮೂರು ಕ್ರೇನ್‌ಗಳ ಸಹಾಯದಿಂದ ಕಂಟೇನರ್‌ ಮೇಲೆತ್ತಿ ಕಾರನ್ನು ಹೊರತೆಗೆಯಲಾಯಿತು.

ಇದರಿಂದ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿಮೀ ನಷ್ಟು ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

ವೀಕೆಂಡ್‌ ಪ್ರವಾಸಕ್ಕೆ ಹೊರಟಿದ್ದ ಕುಟುಂಬ 6 ತಿಂಗಳ ಹಿಂದೆಯಷ್ಟೇ ಕಾರು ಖರೀದಿಸಿತ್ತೆಂದು ತಿಳಿದುಬಂದಿದೆ.

ನೆಲಮಂಗಲ ಬಳಿ ಸರಣಿ ಅಪಘಾತ:6 ಮಂದಿ ದುರ್ಮರಣ Read More