ನೇಪಾಳದಲ್ಲಿ ಹಿಂಸಾಚಾರ:ಮಾಜಿ ಪ್ರಧಾನಿ ಪತ್ನಿ ಜೀವಂತ‌ ದಹನ

ಕಠ್ಮಂಡು: ನೇಪಾಳದಲ್ಲಿ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ಖಂಡಿಸಿ ಆರಂಭವಾದ ಪ್ರತಿಭಟನೆ ಹಿಂಸಾರೂಪ ಪಡೆದಿದೆ.

ಪ್ರತಿಭಟನಾಕಾರರ ಕ್ರೌರ್ಯಕ್ಕೆ ಹೆದರಿ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಓಲಿ ಈಗಾಗಲೇ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ.

ನೇಪಾಳ ಸಂಸತ್, ಅಧ್ಯಕ್ಷರ ನಿವಾಸ, ಪ್ರಧಾನಿ ಬಂಗಲೆ, ವಿವಿಧ ರಾಜಕೀಯ ನಾಯಕರ ಮನೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ.

ಈ ವೇಳೆ ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೂ ಬೆಂಕಿ ಹಚ್ಚಲಾಗಿದ್ದು,ಮನೆಯ ಒಳಗಿದ್ದ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಜೀವಂತವಾಗಿ ಸುಟ್ಟುಹೋಗಿದ್ದಾರೆ.

ಈ ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೇಪಾಳದ ಜನರ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಾಗಿದೆ.

ನೇಪಾಳದಲ್ಲಿ ಹಿಂಸಾಚಾರ:ಮಾಜಿ ಪ್ರಧಾನಿ ಪತ್ನಿ ಜೀವಂತ‌ ದಹನ Read More

ಕಠ್ಮಂಡುವಿನಲ್ಲಿ ಪ್ರತಿಭಟನೆ:19 ಮಂದಿ‌ ಸಾವು

ಕಠ್ಮಂಡು: ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಹೇರಿರುವ ನಿಷೇಧ ತೆಗೆದುಹಾಕಬೇಕು ಮತ್ತು ಭ್ರಷ್ಟಾಚಾರ ಸಂಸ್ಕೃತಿಯನ್ನು ಕೊನೆಗೊಳಿಸಬೇಕು ಎಂದು ಒತ್ತಾಯಿಸಿ ಯುವಕರು ಸೋಮವಾರ ಕಠ್ಮಂಡುವಿನಲ್ಲಿ ನಡೆಸಿದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಹಿಂಸಾಚಾರದಲ್ಲಿ‌‌ ಮೃತೊಟ್ಟವರ ಸಂಖ್ಯೆ19 ಕ್ಕೆ ಏರಿದೆ ಮತ್ತು 250 ಮಂದಿ ಗಾಯಗೊಂಡಿದ್ದಾರೆ.

ಡಮಾಕ್‌ನಲ್ಲಿ, ಪ್ರತಿಭಟನಾಕಾರರು ಡಮಾಕ್ ಚೌಕ್‌ನಿಂದ ಪುರಸಭೆ ಕಚೇರಿವರೆಗೆ ಮೆರವಣಿಗೆ ನಡೆಸಿದರು.ಈ‌ ವೇಳೆ ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರ ಪ್ರತಿಕೃತಿ ಸುಟ್ಟು ಕಚೇರಿಯ ಬಾಗಿಲುಗಳನ್ನು ಮುರಿಯಲು ಪ್ರಯತ್ನಿಸಿದರು.

ಆಗ ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದರು. ಹಲವಾರು ಬೈಕ್​ಗಳಿಗೂ ಬೆಂಕಿ ಹಚ್ಚಲಾಯಿತು.ಹಾಗಾಗಿ ಆ ಪ್ರದೇಶದಲ್ಲಿ ಉದ್ವಿಗ್ನತೆ ತೀವ್ರವಾಯಿತು.

ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಮತ್ತು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ಯೂಟ್ಯೂಬ್ ಮತ್ತು ಸ್ನ್ಯಾಪ್‌ಚಾಟ್,ಲಿಂಕ್ಡ್ ಇನ್ ಸೇರಿದಂತೆ ಹಲವಾರು ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧದ ವಿರುದ್ಧ ಕಠ್ಮಂಡುವಿನಲ್ಲಿ ಜನರೇಷನ್ ಝಡ್ ಪ್ರತಿಭಟನಾಕಾರರ ನೇತೃತ್ವದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾಕಾರರು ನಿರ್ಬಂಧಿತ ವಲಯವನ್ನು ಉಲ್ಲಂಘಿಸಿ ಸಂಸತ್ತಿನ ಆವರಣವನ್ನು ಪ್ರವೇಶಿಸಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿತು. ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ಜೀವಂತ ಮದ್ದುಗುಂಡುಗಳೊಂದಿಗೆ ಹೋರಾಟಗಾರರಿಗೆ ಬಿಸಿ ಮುಟ್ಟಿಸಿದರು.ಆಗ ಗಲಭೆ ತೀವ್ರಗೊಂಡು ಸಾವುನೋವಿಗೆ ಕಾರಣವಾಯಿತು.

ಕಠ್ಮಂಡುವಿನಲ್ಲಿ ಪ್ರತಿಭಟನೆ:19 ಮಂದಿ‌ ಸಾವು Read More

ಟಿಬೆಟ್ ಭೂಕಂಪ:100ಕ್ಕೂ ಮಂದಿ ಸಾವು

ನವದೆಹಲಿ: ಟಿಬೆಟ್, ನೇಪಾಳ, ಚೀನಾ, ಭಾರತ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು,ಟಿಬೆಟ್ ನಲ್ಲಿ ನೂರಕ್ಕೂ ಅಧಿಕ‌ ಮಂದಿ ಮೃತಪಟ್ಟಿದ್ದಾರೆ.

ಚೀನಾದಲ್ಲಿ 6.9 ತೀವ್ರತೆಯ ಭೂಕಂಪ ಸಂಭವಿಸಿದ್ದು, 60ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಒಂದು ಗಂಟೆಯಲ್ಲಿ ಟಿಬೆಟ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 6.9 ತೀವ್ರತೆಯ ಪ್ರಬಲ ಭೂಕಂಪ ಸೇರಿ ಆರು ಭೂಕಂಪಗಳು ಸಂಭವಿಸಿದೆ.

ಟಿಬೆಟ್‌ನ ಶಿಗಾಟ್ಸೆ ನಗರದಲ್ಲಿ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶದಲ್ಲಿ ಸ್ಮಶಾನ ವಾದಂತಾಗಿದೆ.ಕಟ್ಟಡಗಳು‌ ಧರೆಗುರುಳಿವೆ.ಎಲ್ಲೆಲ್ಲೂ ಆಕ್ರಂದನ ಮುಗಿಲು ಮುಟ್ಟಿದೆ.ಅವಶೇಷಗಳಡಿಯಿಂದ ದೇಹಗಳನ್ನು ಹೊರ ತೆಗೆಯಲಾಗುತ್ತಿದೆ.ಈಗಾಗಲೇ 100 ಕ್ಕೂ‌ ಮೃತದೇಹ ತೆಗೆಯಲಾಗಿದೆ.ರಕ್ಷಣಾ ಕಾರ್ಯ ಮುಂದುವರಿದಿದೆ.

ಭೂಕಂಪನದಿಂದ ಭಾರತ, ನೇಪಾಳ ಮತ್ತು ಭೂತಾನ್‌ನ ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಬಿರುಕು ಬಿಟ್ಟಿದೆ. ಟಿಬೆಟಿಯನ್ ಪ್ರದೇಶದಲ್ಲಿ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಭೂಕಂಪದ ಕೇಂದ್ರ ಬಿಂದು ಬಳಿ ಹಲವಾರು ಕಟ್ಟಡಗಳು ಕುಸಿದಿವೆ. ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ರಾಜಧಾನಿ ಪಾಟ್ನಾ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಉತ್ತರ ಭಾಗದ ಅನೇಕ ಸ್ಥಳಗಳಲ್ಲಿ ಬಲವಾದ ಕಂಪನಗಳು ಸಂಭವಿಸಿವೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲೂ ಭೂಕಂಪದ ಅನುಭವವಾಗಿದೆ.

ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ, ಬಲವಾದ ಕಂಪನದ ನಂತರ ನಿವಾಸಿಗಳು ತಮ್ಮ ಮನೆಗಳಿಂದ ಓಡಿ ಬಂದಿದ್ದಾರೆ.

ಚೀನಾದ ಅಧಿಕಾರಿಗಳು ಟಿಬೆಟ್‌ನ ಎರಡನೇ ಅತಿದೊಡ್ಡ ನಗರವಾದ ಶಿಗಾಟ್ಸೆ ನಗರದಲ್ಲಿ 6.9 ರ ತೀವ್ರತೆಯನ್ನು ದಾಖಲಿಸಿದ್ದಾರೆ. ಅದೇ ಕ್ಸಿಜಾಂಗ್ ಪ್ರದೇಶದಲ್ಲಿ 4.7 ಮತ್ತು 4.9 ತೀವ್ರತೆಯ ಎರಡು ನಂತರದ ಕಂಪನದ ವರದಿಯಾಗಿವೆ.

ಟಿಬೆಟ್ ನಲ್ಲಿ‌ ಸಂಭವಿಸಿದ ಭೂಕಂಪನದಲ್ಲಿ ಆದ ಸಾವು,ನೋವಿಗೆ ಭಾರತ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಟಿಬೆಟ್ ಭೂಕಂಪ:100ಕ್ಕೂ ಮಂದಿ ಸಾವು Read More