ಕಾಂಗ್ರೆಸ್ ಸೇರಿದ ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ

ಕೋಲ್ಕತ್ತಾ: ನಾಲ್ಕು ವರ್ಷಗಳ ನಂತರ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೊಲ್ಕತ್ತಾದ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬುಧವಾರ ಅಭಿಜಿತ್ ಮುಖರ್ಜಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದರು.
ಇಲ್ಲಿಯವರೆಗೂ ಅವರು ತೃಣಮೂಲ ಕಾಂಗ್ರೆಸ್ ನಲ್ಲಿದ್ದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಪಶ್ಚಿಮ ಬಂಗಾಳ ಉಸ್ತುವಾರಿ ಅಹ್ಮದ್ ಮಿರ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದ ಅಭಿಜಿತ್ ಮುಖರ್ಜಿ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡು ಪಕ್ಷದ ಸದಸ್ಯತ್ವ ನೀಡಲಾಯಿತು.

ರಾಷ್ಟ್ರ ಹಾಗೂ ರಾಜ್ಯ ನಾಯಕರು ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಎರಡನೇ ಬಾರಿಗೆ ಕಾಂಗ್ರೆಸ್ ಸೇರಿದ್ದೇನೆ. ಕಳೆದ ವರ್ಷ ಜೂನ್ ನಲ್ಲಿಯೇ ಪಕ್ಷ ಸೇರಲು ಬಯಸಿದ್ದೆ. ಆದರೆ, ವಿವಿಧ ರಾಜ್ಯಗಳ ಚುನಾವಣೆಯಿಂದಾಗಿ ಮುಂದೂಡಲ್ಪಟ್ಟಿತ್ತು.

ನನ್ನ ಪಕ್ಷ ಸೇರ್ಪಡೆ ಕಾರ್ಯಕ್ರಮ ಈಗ ನೆರವೇರಿದೆ ಎಂದು ಅಭಿಜಿತ್ ಮುಖರ್ಜಿ
ತಿಳಿಸಿದರು.

ಕಾಂಗ್ರೆಸ್ ಸೇರಿದ ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ Read More

ದೆಹಲಿ ವಿಧಾನಸಭೆಗೆ ಫೆ.5ಕ್ಕೆ ಚುನಾವಣೆ

ನವದೆಹಲಿ: ರಾಷ್ಟ್ರರಾಜ್ಯಧಾನಿ ದೆಹಲಿ ವಿಧಾನಸಭೆಗೆ ಮುಹೂರ್ತ ಫಿಕ್ಸ್ ಆಗಿದೆ. ಫೆ.5 ರಂದು ಚುನಾವಣೆ ನಡೆಯಲಿದೆ.

ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು
ಫೆ.8 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

70 ಸದಸ್ಯ ಬಲದ ದಿಲ್ಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದೆ.

ಆಮ್ ಆದ್ಮಿ ಪಕ್ಷ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅರವಿಂದ್​ ಕೇಜ್ರಿವಾಲ್​​ ಚುನಾವಣೆ ಗೆದ್ದು ಮತ್ತೆ ಸಿಎಂ ಹುದ್ದೆಗೇರುವ ತವಕದಲ್ಲಿದ್ದಾರೆ. ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಬಿಜೆಪಿ 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಎಪಿ ತೊರೆದು ಬಿಜೆಪಿ ಸೇರಿದ್ದ ಕೈಲಾಶ್​ ಗೆಹ್ಲೋಟ್​ ಬಿಜವಸನ್​ನಿಂದ ಸ್ಪರ್ಧಿಸಲಿದ್ದಾರೆ. ಪಟೇಲ್​ ನಗರದಿಂದ ರಾಜ್​ ಕುಮಾರ್, ದೆಹಲಿಯ ಮಾಜಿ ಕಾಂಗ್ರೆಸ್​ ಮುಖ್ಯಸ್ಥ ಅರವಿಂದ್​ ಸಿಂಗ್​ ಲವ್ಲಿ ಗಾಂಧಿ ನಗರದಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್​ 48 ಅಭ್ಯರ್ಥಿಗಳನ್ನು ಘೋಷಿಸಿದ್ದು, ಮತ್ತೊಂದು ಪಟ್ಟಿ ಹೊರಬೇಕಿದೆ. ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್​​ ಮಗ ಸಂದೀಪ್​ ದೀಕ್ಷಿತ್​ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ದೆಹಲಿ ವಿಧಾನಸಭೆಗೆ ಫೆ.5ಕ್ಕೆ ಚುನಾವಣೆ Read More