ತಂಬಾಕು ಬೆಳೆ:ಪಿಯೂಷ್ ಗೋಯಲ್ ಸಕಾರಾತ್ಮಕವಾಗಿ ಸ್ಪಂದನೆ-ನಿಖಿಲ್

ನವದೆಹಲಿ: ಮೈಸೂರು ಭಾಗದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ತಂಬಾಕು ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಯುವ ಜೆಡಿಎಸ್‌ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ದೆಹಲಿಯಲ್ಲಿ ನಿಖಿಲ್ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ,
ಈ ಬಗ್ಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಸಲ್ಲಿಸಲಾಗಿತ್ತು, ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೂಡ ನಮ್ಮ ನಿಯೋಗದಲ್ಲಿ ಇದ್ದು, ಗೋಯಲ್ ಅವರಿಗೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲ ಆಗುತ್ತಿದೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯ ಹುಣಸೂರು, ಹೆಚ್.ಡಿ.ಕೋಟೆ, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ಪ್ರದೇಶಗಳಲ್ಲಿ ರೈತರು ತಂಬಾಕು ಬೆಳೆಯುತ್ತಿದ್ದಾರೆ, ಬೆಲೆ ಕುಸಿತದಿಂದ ಕಂಗೆಟ್ಟಿದ್ದಾರೆ. ರೈತರ ನೆರವಿಗೆ ಬರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು ಎಂದು ಹೇಳಿದರು.

ಕಳೆದ ಒಂದು ವಾರದಿಂದ ನಾನು ದೆಹಲಿಯಲ್ಲೆ ಇದ್ದೇನೆ ತಂಬಾಕು ಬೆಳೆಗಾರರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಪ್ರಕೃತಿ ವಿಕೋಪದಿಂದ ಒಳ್ಳೆಯ ಬೆಳೆ ಬಂದಿಲ್ಲ. ಗುಣಮಟ್ಟದ ತಂಬಾಕಿಗೆ ಕಂಪನಿಗಳು ಚನ್ನಾಗಿ ಹಣ ನೀಡುತ್ತಿವೆ. ಹೀಗಾಗಿ ಕೇಂದ್ರ ಸಚಿವರಾದ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ನೆರವಿಗೆ ಬರುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಬ್ರೆಜಿಲ್ ಸೇರಿದಂತೆ ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಜನವರಿ ತಿಂಗಳ ವೇಳೆಗೆ ತಂಬಾಕು ಕಟಾವಿಗೆ ಬರಲಿದೆ. ಡಿಸೆಂಬರ್ ಒಳಗಾಗಿ ನಮ್ಮ ರೈತರ ತಂಬಾಕು ಮಾರಾಟ ಆಗಬೇಕಿದೆ. ಇದಕ್ಕೆ ಸಚಿವ ಪಿಯೂಷ್ ಗೋಯಲ್ ಅವರು ಹಾಗೂ ವಾಣಿಜ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ನಿಖಿಲ್ ಹೇಳಿದರು.

ತಂಬಾಕು ಬೆಳೆ:ಪಿಯೂಷ್ ಗೋಯಲ್ ಸಕಾರಾತ್ಮಕವಾಗಿ ಸ್ಪಂದನೆ-ನಿಖಿಲ್ Read More

ಗೆಲುವಿನಲ್ಲಿಯೂ ಕಾಂಗ್ರೆಸ್ ವಿಕೃತಿ: ನಿಖಿಲ್ ಆಕ್ರೋಶ

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಆ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫಲಿತಾಂಶ ಹೊರಬಿದ್ದ ಮೇಲೆ ಕಾರ್ಯಕರ್ತರಿಗೆ ದೀರ್ಘ ಪತ್ರ ಬರೆದಿರುವ ಅವರು; ಜೆಡಿಎಸ್ ಶಾಸಕರನ್ನು ಖಾಲಿ ಮಾಡಿಸುತ್ತೇನೆ ಎಂಬ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಕಿಡಿ ಕಾರಿದ್ದಾರೆ.

ನಿಖಿಲ್‌ ಬಚ್ಚಾ, ಪಾಪ ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಬಾಲಬುದ್ಧಿಯ ಮನಸ್ಥಿತಿಯವನಲ್ಲ ನಾನು ಎಂದು ಹೇಳಿದ್ದಾರೆ.

ಕೇವಲ ಸ್ವಾರ್ಥಕ್ಕಾಗಿ, ಅಧಿಕಾರದ ಹಪಾಹಪಿಗಾಗಿ ಪಕ್ಷದಿಂದ ಪಕ್ಷಕ್ಕೆ ಜಿಗಿಯುವ, ಎಲ್ಲಿ ಹೆಚ್ಚು ಪ್ಯಾಕೇಜ್‌ ಸಿಕ್ಕಿದರೆ ಅಲ್ಲಿಗೆ ಹಾರಿ ಜೇಬು ಭರ್ತಿ ಮಾಡಿಕೊಳ್ಳುವ ರಾಜಕೀಯ ವ್ಯಾಪಾರಿಗಳಲ್ಲ ನಮ್ಮ ಶಾಸಕರು. ಗೆದ್ದಲು ಕಟ್ಟಿದ ಹುತ್ತದೊಳಕ್ಕೆ ಹಾವಿನಂತೆ ಹೊಕ್ಕು, ಕೈಹಿಡಿದವರನ್ನೇ ಕಚ್ಚಿ, ವಿಷಕಾರುವ ರಾಜಕೀಯ ವಿಷಜಂತುಗಳಿಗೆ ನಾವು ಹೆದರುವುದಿಲ್ಲ ಎಂದು ಮಾರ್ಮಿಕವಾಗಿ ಟಾಂಗ್ ನೀಡಿದ್ದಾರೆ ನಿಖಿಲ್

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿದ್ದ ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ ಕಾರಣ ಕೊಟ್ಟಿದ್ದೇನೆ. ಹಾಗೆಂದು, ಸೋಲಿಗೆ ಹೆದರಿ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ, ನಮ್ಮ ಪಕ್ಷದ್ದೂ ಅಲ್ಲ.

ಈ ಸೋಲು ನನಗೆ ನೋವುಂಟು ಮಾಡಿದೆ, ನಿಜ. ಇಲ್ಲ ಎಂದು ಹೇಳಿ ಆತ್ಮವಂಚನೆ ಮಾಡಿಕೊಳ್ಳುವುದಿಲ್ಲ. ಹಾಗಂತ, ಸೋಲುತ್ತೇನೆ ಎಂದು ನಾನು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಗೆಲ್ಲಲು ಪ್ರಾಮಾಣಿಕವಾಗಿ ಹೋರಾಡಿದ್ದೇವೆ. ಕೆಲ ಅಂಶಗಳಿಂದ ಹಿನ್ನಡೆಯಾಗಿದೆ, ಮತ್ತೆ ಪುಟಿದೆದ್ದು ಬರುವ ಛಲ ನನಗಿದೆ ಎಂದು ಬರೆದಿದ್ದಾರೆ.

ನನ್ನ ಸೋಲು ನನ್ನ ಕಾರ್ಯಕರ್ತರಿಗೆ ಅತೀವ ನೋವುಂಟು ಮಾಡಿದೆ, ಅದು ನನಗೆ ಗೊತ್ತು, ಇಡೀ ರಾಜ್ಯದ ಕಾರ್ಯಕರ್ತರೆಲ್ಲರೂ ವೀರಯೋಧರಂತೆ ಚನ್ನಪಟ್ಟಣದಲ್ಲಿ ಹಗಲಿರಳೂ ದುಡಿದರು. ಮನೆಮನೆಯನ್ನೂ ತಲುಪಿ ನನ್ನ ಗೆಲುವಿಗಾಗಿ ಶ್ರಮಿಸಿದರು. ಅಂತಿಮವಾಗಿ ಸೋಲಾಯಿತು, ಅದು ಜನತಾ ಜನಾರ್ದನನ ನಿರ್ಣಯ. ಅದನ್ನು ನಾನು ಶಿರಬಾಗಿ ಸ್ವೀಕರಿಸಿದ್ದೇನೆ.

ವಿಪರ್ಯಾಸವೆಂದರೆ, ಗೆದ್ದವರಿಗೆ ನೆಮ್ಮದಿ ಇಲ್ಲ, ಕನಿಷ್ಠ ಗೆಲುವನ್ನು ಅರ್ಥಪೂರ್ಣವಾಗಿಸಿಕೊಳ್ಳುವ ಮನಃಸ್ಥಿತಿಯೂ ಇಲ್ಲ. ಆ ಮುಖಗಳಲ್ಲಿ ನಗುವೇ ಇಲ್ಲ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಅವರು ಗೆಲುವು ಕಂಡಿದ್ದಾರೆ. ಸಂಭ್ರಮಿಸಲಿ, ವಿಜೃಂಭಣೆ ಮಾಡಿಕೊಳ್ಳಲಿ. ಅದನ್ನು ಕಂಡು ಕಣ್ಣುರಿ ಮಾಡಿಕೊಳ್ಳುವ ವ್ಯಕ್ತಿ ನಾನಲ್ಲ, ಆದರೆ, ಹೇಗೆ ಗೆದ್ದೆವು ಎಷ್ಟರಮಟ್ಟಿಗೆ ಅಧಿಕಾರ ದುರ್ಬಳಕೆ ಮಾಡಿಕೊಂಡೆವು ಎನ್ನುವ ಸಣ್ಣ ಆತ್ಮವಿಮರ್ಶೆಯಾದರೂ ಬೇಡವೇ? ಮತದಾನಕ್ಕೆ ಕೆಲ ಗಂಟೆಗಳು ಉಳಿದಿರುವಾಗ ಚನ್ನಪಟ್ಟಣದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ 4,000 ಹಣವನ್ನು ಅವರ ಬ್ಯಾಂಕ್‌ ಖಾತೆಗಳಿಗೆ ಜಮೆ ಮಾಡುತ್ತೀರಿ. ಆಯಾ ತಿಂಗಳಿಗೆ ಸಕಾಲಕ್ಕೆ ಹೋಗಬೇಕಾದ ಹಣವನ್ನು ಚುನಾವಣೆ ಉದ್ದೇಶಕ್ಕೆ ಬಳಸಿಕೊಳ್ಳುವ ದುರುದ್ದೇಶಕ್ಕೆ ಏನೆನ್ನಬೇಕು ಎಂದು ಪ್ರಶ್ನಿಸಿದ್ದಾರೆ.

ನಾವು ಸತ್ಯದ ಪರವಾಗಿದ್ದೇವೆ.ಸತ್ಯಮೇವ ಜಯತೆ ಎನ್ನುವುದು ನಮ್ಮ ಪಾಲಿಗೆ ಬರೀ ಜಾಹೀರಾತಿನ ಸ್ಲೋಗನ್ ಅಲ್ಲ, ರಾಷ್ಟ್ರಪಿತ ಬಾಪೂಜಿ ಹೇಳಿದ ಸತ್ಯ ಮಾರ್ಗದಲ್ಲಿಯೇ ನಡೆಯೋಣ. ಆ ಮರ್ಯಾದಾ ಪುರುಷೋತ್ತಮ ರಾಮನ ದಾರಿ ನಮ್ಮ ಆದರ್ಶ. ಶ್ರೀಕೃಷ್ಣ ಪರಮಾತ್ಮನ ಸತ್ಯನೀತಿ ನಮ್ಮ ಮುಂಬೆಳಕು. ನಾವು ಯಾರೂ ಧೃತಿಗೆಡಬೇಕಿಲ್ಲ, ನಿಮ್ಮೊಂದಿಗೆ ನಾನಿದ್ದೇನೆ. ಇಡೀ ಪಕ್ಷವೇ ಇದೆ ಎಂದು ಕಾರ್ಯಕರ್ತರಿಗೆ ಹುರುಪು ತುಂಬಿದ್ದಾರೆ ನಿಖಿಲ್ ಕುಮಾರಸ್ವಾಮಿ.

ಗೆಲುವಿನಲ್ಲಿಯೂ ಕಾಂಗ್ರೆಸ್ ವಿಕೃತಿ: ನಿಖಿಲ್ ಆಕ್ರೋಶ Read More

ಸರಕಾರ ದಿವಾಳಿ;ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ -ದೇವೇಗೌಡರು

ಚನ್ನಪಟ್ಟಣ: ರಾಜ್ಯ ಕಾಂಗ್ರೆಸ್ ಸರ್ಕಾರದ ಖಜಾನೆ ದಿವಾಳಿಯಾಗಿದೆ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಟೀಕಿಸಿದರು.

ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಆರೋಪಿಸಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಗೌಡರು; ಕಾಂಗ್ರೆಸ್ ಸರಕಾರ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಈ ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಟೀಕಿಸಿದರು.

ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ , ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ್ದು ಈ ದೇವೇಗೌಡ, ಬದುಕಿದ್ದಾನೆ. ಹದಿನೇಳು ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ ಎಂದು ಪ್ರಶ್ನಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು 1600 ಕೋಟಿಯಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣಪುಟ್ಟ ಕೆಲಸ ಮಾಡುತ್ತಿದೆ. ಪ್ರತಿಗ್ರಾಮಕ್ಕೆ ನೀರಾವರಿ ಸೌಲಭ್ಯ ಕೋಡಬೇಕಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಇಷ್ಟು ಹಣವನ್ನು ಕ್ಷೇತ್ರಕ್ಕೆ ಕೊಟ್ಟರು. ರಾಷ್ಟ್ರದ ಹಿತದೃಷ್ಟಿಯಿಂದ, ಮೋದಿ ಅವರ ಒತ್ತಾಸೆಯಿಂದ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಸಚಿವರಾಗಿದ್ದಾರೆ ಎಂದು ಅವರು ಹೇಳಿದರು.

ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟ ಮೇಲೆ ಯಾರು ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡಿದರು. ಹಾಗಂತ ಎಲ್ಲರನ್ನೂ ನಂಬಿಸಿದರು. ನಾಮಪತ್ರ ಸಲ್ಲಿಸುವ ಒಂದು ದಿನಕ್ಕೆ ಮೊದಲು ಇದ್ದಕ್ಕಿದ್ದ ಹಾಗೆ ತಮ್ಮ ತೀರ್ಮಾನ ಬದಲಾಯಿಸಿ ಮತ್ತೊಬ್ಬ ಸ್ನೇಹಿತರನ್ನು ನಿಲ್ಲಿಸಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ ಎಂದು ದೇವೇಗೌಡರು ಟೀಕಿಸಿದರು.

ಸರಕಾರ ದಿವಾಳಿ;ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ -ದೇವೇಗೌಡರು Read More

ಬ್ರಹ್ಮಣಿಪುರ ಗ್ರಾಮದಲ್ಲಿ ನಿಖಿಲ್ ಪರ ಜೆಡಿಎಸ್,ಬಿಜೆಪಿ ಮತ ಪ್ರಚಾರ

ಚನ್ನಪಟ್ಟಣ: ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ ಅವರ ಪರ ಇಂದು ಸಂಜೆ
ಬ್ರಹ್ಮಣಿಪುರ ಗ್ರಾಮದಲ್ಲಿ ಜೆಡಿಎಸ್,ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರ ನಡೆಸಿದರು.

ಬ್ರಹ್ಮಣಿಪುರ ಗ್ರಾಮದ ಪ್ರತಿ ಮನೆಗಳಿಗೂ ಭೇಟಿ ನೀಡಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಿರಿಯಾಪಟ್ಟಣದ ಮಾಜಿ ಶಾಸಕ ಮಹದೇವ್, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರ ಆರ್. ಲಿಂಗಪ್ಪ, ಲೋಕೇಶ್, ಮೈಸೂರು ನಗರದ ಮಾಜಿ ಮಹಾ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ನವೀನ್, ವೆಂಕಟೇಶ್ ಹಾಗೂ ಗ್ರಾಮದ ಮುಖಂಡರು, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಟ್ಟುಗೂಡಿ ಮತಯಾಚನೆ ಮಾಡಿ‌ ನಿಖಿಲ್ ಕುಮಾರಸ್ವಾಮಿ ಅವರನ್ನು ಆಶೀರ್ವದಿಸಿ ಬಹುಮತದಿಂದ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಬ್ರಹ್ಮಣಿಪುರ ಗ್ರಾಮದಲ್ಲಿ ನಿಖಿಲ್ ಪರ ಜೆಡಿಎಸ್,ಬಿಜೆಪಿ ಮತ ಪ್ರಚಾರ Read More

ನಮ್ಮದು ಅಭಿವೃದ್ಧಿ ರಾಜಕಾರಣ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ : ನಮ್ಮದು ಅಭಿವೃದ್ಧಿ ರಾಜಕಾರಣ ಎದುರಾಳಿಗಳ ಸ್ಟಾಟರ್ಜಿ ಏನೇ ಆಗಿರಲಿ.ನಾನು ಯಾವುದಕ್ಕೂ ಪ್ರವೋಕ್ ಆಗೋದಿಲ್ಲ‌ ಎಂದು ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ವಿವಿಧೆಡೆ ಪ್ರಚಾರ ಕಾರ್ಯ ನಡೆಸಿದ ನಂತರ ಅವರು ಮಾತನಾಡಿದರು.

ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ನಿಖಿಲ್,ತಮ್ಮ ಹಿನ್ನಲೆ, ಸಂಸ್ಕೃತಿಗೆ ತಕ್ಕಂತೆ ಅವರು ಮಾತಾಡ್ತಾರೆ.ನಾನು ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳಲ್ಲ ಎಂದು ಡಿ ಕೆ ಶಿಗೆ ತಿರುಗೇಟು ನೀಡಿದರು.

ನಮ್ಮದು ಅಭಿವೃದ್ಧಿ ರಾಜಕಾರಣ
ಎದುರಾಳಿಗಳ ಸ್ಟಾಟರ್ಜಿ ಏನೇ ಆಗಿರಲಿ.ನಾನು ಯಾವುದಕ್ಕೂ ಪ್ರವೋಕ್ ಆಗೋದಿಲ್ಲ‌. ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ನನ್ನ ಜತೆ ಹೆಜ್ಜೆ ಹಾಕುತಿದ್ದಾರೆ.ಯಡಿಯೂರಪ್ಪ ಅವರೆ ನನ್ನ ಹೆಸರು ಘೋಷಣೆ ಮಾಡಿದ್ದಾರೆ
ದೇವೆಗೌಡರು ನಾಳೆಯಿಂದ ಗ್ರಾಮಪಂಚಾಯತಿ ಮಟ್ಟದಿಂದ ಪ್ರಚಾರ ಮಾಡಬೇಕಿತ್ತು. ಆದರೆ ಆರೋಗ್ಯ ಸ್ವಲ್ಪ ಸರಿ ಇಲ್ಲ ಎಂದು ತಿಳಿಸಿದರು.

ನಮ್ಮದು ಅಭಿವೃದ್ಧಿ ರಾಜಕಾರಣ: ನಿಖಿಲ್ ಕುಮಾರಸ್ವಾಮಿ Read More