ಮಹಿಳೆ, ಕೃಷಿ,ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದ ಬಜೆಟ್

ನವದೆಹಲಿ: ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಈ ಬಾರಿಯ ಬಜೆಟ್ ನಲ್ಲಿ ಕೇಂದ್ರೀಕರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ದಾಖಲೆಯ ಎಂಟನೇ ಬಜೆಟ್ ಮಂಡಿಸಿದ ಸಚಿವರು,ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು.. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬಜೆಟ್ ಮಂಡನೆ ವೇಳೆ ವಿರೋಧ ಪಕ್ಷಗಳು ಗದ್ದಲ ಮಾಡಿದರೂ‌ ಕೂಡಾ ಲೆಕ್ಕಿಸದೆ ಸಚಿವೆ ಮುಂದುವರಿಸಿದರು.

2025-26ರ ಬಜೆಟ್ನಲ್ಲಿ ಬಡತನ, ಯುವಕರು, ಮಹಿಳೆಯರು, ಕೃಷಿ, ಉತ್ಪಾದನೆ, ಎಂಎಸ್ಎಂಇಗಳು, ಉದ್ಯೋಗ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ 10 ಪ್ರಮುಖ ಅಭಿವೃದ್ಧಿ ಕ್ರಮಗಳನ್ನು ನೀಡಿದ್ದಾರೆ.

ಮಹಿಳೆ, ಕೃಷಿ,ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದ ಬಜೆಟ್ Read More

ನಿರ್ಮಲಾ ವಿರುದ್ಧ ಎಫ್‌ಐಆರ್‌ ಗೂ ಸಿಎಂ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ:ಅಶೋಕ್

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೆ 1,200 ಕೋಟಿ ರೂ.ಗೂ ಅಧಿಕ ಹಣ ಹೋಗಿದೆ,ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದು ‌ತಿರುಗೇಟು ನೀಡಿದರು.

ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್‌ಐಆರ್‌ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ. ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಅನೇಕ ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದ್ದರು ಎಂದು ಟೀಕಾಪ್ರಹಾರ ನಡೆಸಿದರು.

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದರೆ, ಅವರು ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಅದಕ್ಕಾಗಿ ರಾಜೀನಾಮೆ ನೀಡಲು ಆಗ್ರಹಿಸುತ್ತಿದ್ದೇವೆ ಎಂದು ಅಶೋಕ್ ತಿಳಿಸಿದರು.

ನಿರ್ಮಲಾ ವಿರುದ್ಧ ಎಫ್‌ಐಆರ್‌ ಗೂ ಸಿಎಂ ಮುಡಾ ಹಗರಣಕ್ಕೂ ವ್ಯತ್ಯಾಸವಿದೆ:ಅಶೋಕ್ Read More