ಹಡ್ಸನ್ ನದಿಗೆ ಹೆಲಿಕಾಪ್ಟರ್ ಅಪ್ಪಳಿಸಿ 6ಮಂದಿ ಸಾ*ವು

ನ್ಯೂಯಾರ್ಕ್: ಹೆಲಿಕಾಪ್ಟರ್ ಪತನಗೊಂಡು‌ ನದಿಗೆ ಬಿದ್ದ ಪರಿಣಾಮ ಪೈಲಟ್‌ ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ.

ಮೃತರಲ್ಲಿ ನಾಲ್ವರು ಸ್ಪ್ಯಾನಿಷ್ ಮೂಲದ ಒಂದೇ ಕುಟುಂಬದವರಾಗಿದ್ದು, ಪ್ರವಾಸಕ್ಕಾಗಿ ನ್ಯೂಯಾರ್ಕ್‌ಗೆ ಬಂದಿದ್ದರು. ಮೃತಪಟ್ಟವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಪಿಯರ್ 40ರಲ್ಲಿ ಸಂಭವಿಸಿದ ಘಟನೆಯಲ್ಲಿ ಬೆಲ್ 206L-4 ಲಾಂಗ್‌ರೇಂಜರ್ IV ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ.

ಲೋವರ್​​ ಮ್ಯಾನ್‌ಹ್ಯಾಟನ್‌ನಿಂದ ಹೊರಟ ಹೆಲಿಕಾಪ್ಟರ್​​, ಲಿಬರ್ಟಿ ಪ್ರತಿಮೆಯನ್ನು ಸುತ್ತು ಹಾಕಿದ ಬಳಿಕ, ಉತ್ತರಕ್ಕೆ ಹಡ್ಸನ್ ನದಿಯ ಮೇಲಿಂದ ಜಾರ್ಜ್ ವಾಷಿಂಗ್ಟನ್ ಬ್ರಿಡ್ಜ್​​ನತ್ತ ಹೊರಟಿದೆ, ಏಕಾಏಕಿ ದಕ್ಷಿಣಕ್ಕೆ ತಿರುಗಿದ ಹೆಲಿಕಾಪ್ಟರ್ ನ್ಯೂಜೆರ್ಸಿ ಬಳಿ ನದಿಗೆ ಅಪ್ಪಳಿಸಿದೆ.

ಹೆಲಿಕಾಪ್ಟರ್‌ ಪತನದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಿಡಿಯೋದಲ್ಲಿ ಬೆಲ್ 206 ಹೆಲಿಕಾಪ್ಟರ್‌ನ ಪತನಗೊಂಡ ಭಾಗಗಳು ಹಡ್ಸನ್ ನದಿಗೆ ಬೀಳುವುದು ಕಾಣುತ್ತದೆ.

ಹಡ್ಸನ್ ನದಿಗೆ ಹೆಲಿಕಾಪ್ಟರ್ ಅಪ್ಪಳಿಸಿ 6ಮಂದಿ ಸಾ*ವು Read More

ಭಾರತ ಮೂಲದ ನಾಲ್ವರು ಸಾಧಕಿಯರಿಗೆ ಗೌರವ

ನ್ಯೂಯಾರ್ಕ್: ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಹಾಗೂ ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್‌ (ಎಫ್‌ಐಎ), ವಿಶ್ವ ಮಹಿಳಾ ದಿನದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಭಾರತ ಮೂಲದ ನಾಲ್ವರು ಸಾಧಕಿಯರನ್ನು ಸನ್ಮಾನಿಸಿ ಗೌರವಿಸಿದೆ.

ಜೆಪಿ ಮಾರ್ಗನ್ ಕಂಪನಿಯ ಸಲಹೆ, ವಿಲೀನ ಹಾಗೂ ಸ್ವಾಧೀನ ಕುರಿತ ಜಾಗತಿಕ ಮುಖ್ಯಸ್ಥೆ ಅನು ಅಯ್ಯಂಗಾರ್, ಎ-ಸೀರಿಸ್ ಮ್ಯಾನೇಜ್‌ಮೆಂಟ್ ಮತ್ತು ಇನ್ವೆಸ್ಟ್‌ಮೆಂಟ್ ಸಿಇಒ ಅಂಜುಲಾ ಆಚಾರ್ಯ, ಎಲ್‌ಡಿಪಿ ವೆಂಚರ್ಸ್‌ ಸಂಸ್ಥಾಪಕಿ ವೆಂಡಿ ಡೈಮಂಡ್ ಮತ್ತು ಸಿಎನ್‌ಬಿಸಿಯ ನಿರೂಪಕಿ ಸೀಮಾ ಮೋದಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ಮುಖ್ಯ ಅತಿಥಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅನ್ನಪೂರ್ಣ ದೇವಿ ಅವರು, ‘ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಉಭಯ ದೇಶಗಳ ಮಹಿಳೆಯರು ಮುಂಚೂಣಿ ಪಾತ್ರ ವಹಿಸಿದ್ದಾರೆ’ ಎಂದು ಹೇಳಿದರು.

ಭಾರತ ಮೂಲದ ನಾಲ್ವರು ಸಾಧಕಿಯರಿಗೆ ಗೌರವ Read More