ಎ ಡಿ ಸಂಧ್ಯಾರಾಣಿ ಅವರಿಗೆ ಸೇವಾ ಭೂಷಣ ಪ್ರಶಸ್ತಿ

ಮೈಸೂರು:ಮೈಸೂರು ಕರ್ನಾಟಕ ರಾಜ್ಯ ಒಕ್ಕಲಿಗರ ವೇದಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಶಿಕ್ಷಕ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ‌ ಎ ಡಿ ಸಂಧ್ಯಾರಾಣಿ ಅವರನ್ನು ಸೇವಾ ಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹಿಂದುಳಿದ ವರ್ಗದವರಿಗೆ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾಡಿದ 105 ರ ಸಂಭ್ರಮಾಚರಣೆಯನ್ನೂ ಹಮ್ಮಿಕೊಳ್ಳಲಾಗಿದೆ.

ಸೆ,28ರಂದು ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗ ಮಂಟಪದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಲ್ ಯಮುನಾ ಅ
ವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಎ ಡಿ ಸಂಧ್ಯಾರಾಣಿ ಅವರಿಗೆ ಸೇವಾ ಭೂಷಣ ಪ್ರಶಸ್ತಿ Read More

ಪದಗ್ರಹಣ ಆಹ್ವಾನ ಪತ್ರಿಕೆಯಲ್ಲಿ ಹೆಚ್ ಡಿಡಿ,ಹೆಚ್ ಡಿ ಕೆ ಹೆಸರಿಲ್ಲದ್ದಕ್ಕೆ ಅಭಿಮಾನಿಗಳ ಅಸಮಾಧಾನ

ಮೈಸೂರು: ಮೈಸೂರಿನಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ವತಿಯಿಂದ ನಡೆಯುತ್ತಿರುವ ಪದಗ್ರಹಣ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟಿರುವುದಕ್ಕೆ ಹೆಚ್ ಡಿ ಕುಮಾರಸ್ವಾಮಿ ಅಭಿಮಾನಿಗಳ ಬಳಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸೆಪ್ಟೆಂಬರ್ 16ರಂದು ಮೈಸೂರಿನ‌ ಕಲಾಮಂದಿರದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರುಗಳ ಪದಗ್ರಹಣ ಮತ್ತಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆದರೆ ಆಹ್ವಾನ ಪತ್ರಿಕೆಯಲ್ಲಿ ಎಚ್. ಡಿ ದೇವೇಗೌಡರು ಮತ್ತು ಹೆಚ್. ಡಿ ಕುಮಾರಸ್ವಾಮಿ ಅವರ ಹೆಸರನ್ನು ಹಾಕದೆ ಇರುವುದಕ್ಕೆ ಎಚ್ ಡಿ ಕುಮಾರಸ್ವಾಮಿ ಅಭಿಮಾನಿಗಳ ಬಳಗದವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರೀಯ ನಾಯಕರಾದ ದೇವೇಗೌಡರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಹೆಸರನ್ನು ಹಾಕದೆ ಅವಮಾನ ಮಾಡಲಾಗಿದೆ ಇದರಿಂದ ನಮ್ಮಮನಸ್ಸಿಗೆ ನೋವಾಗಿದೆ,ಅಲ್ಲದೆ ಇನ್ನೂ ಅನೇಕ ಪ್ರಮುಖ ನಾಯಕರ ಹೆಸರನ್ನು ಪ್ರಕಟಿಸಿಲ್ಲ ಇದು ಸರಿಯಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅಭಿಮಾನಿ ಬಳಗದ ಅಧ್ಯಕ್ಷ ಬೆಲವತ್ತ ರಾಮಕೃಷ್ಣ ಮತ್ತು ನಗರಾಧ್ಯಕ್ಷ ಕೆ.ಆರ್.ಮಿಲ್ ಆನಂದ್ ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪದಗ್ರಹಣ ಆಹ್ವಾನ ಪತ್ರಿಕೆಯಲ್ಲಿ ಹೆಚ್ ಡಿಡಿ,ಹೆಚ್ ಡಿ ಕೆ ಹೆಸರಿಲ್ಲದ್ದಕ್ಕೆ ಅಭಿಮಾನಿಗಳ ಅಸಮಾಧಾನ Read More