ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ

ನವದೆಹಲಿ: ಬಹು ನಿರೀಕ್ಷಿತ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಗಳವಾರ ಲೋಕಸಭೆಯಲ್ಲಿ ಮಂಡನೆಯಾಗಿದೆ.

ಚುನಾವಣೆಯ ವೇಳೆ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ ಮಾಡಿದಂತೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಯಿತು.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು ಮಂಡಿಸಿದರು.

ಮಸೂದೆ ಮಂಡನೆಯ ಬೆನ್ನಲ್ಲೇ ಐ ಎನ್ ಡಿ‌ ಐ ಎ ಒಕ್ಕೂಟದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿದರು.

ಸಂಸದ ಮನೀಶ್‌ ತಿವಾರಿ, ಕೇಂದ್ರ ಮತ್ತು ರಾಜ್ಯದ ಅವಧಿಯನ್ನು ಹೇಗೆ ಏಕ ಕಾಲದಲ್ಲಿ ಮಾಡಲು ಸಾಧ್ಯ ಭಾರತ ಒಕ್ಕೂಟ ದೇಶ, ಕೇಂದ್ರೀಕರಣ ಮಾಡುವುದು ಸರಿಯಲ್ಲ ಇದು ಸಂವಿಧಾನ ವಿರೋಧಿ ತಿದ್ದುಪಡಿ ಎಂದು ಕಿಡಿಕಾರಿದರು.

ಎಲ್ಲ ರಾಜ್ಯಗಳು ಬೇರೆ ಬೇರೆ ವೈವಿಧ್ಯತೆ ಹೊಂದಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಒಕ್ಕೂಟ ವ್ಯವಸ್ಥೆ ಮಾಡಿದರು. ಎಂಟು ವಿಧಾನಸಭೆ ಕ್ಷೇತ್ರಗಳ ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ಮಾಡಲು ಸಾಧ್ಯವಾಗಲಿಲ್ಲ. ನಾಲ್ಕು ರಾಜ್ಯಗಳ ಚುನಾವಣೆ ಒಟ್ಟಿಗೆ ಮಾಡಲು ಸಾಧ್ಯವಾಗಲಿಲ್ಲ. ಈಗ ಇಡೀ ದೇಶದಲ್ಲಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ ಎಂದು ಎಂದು ಎಸ್‌ಪಿ ಸಂಸದ ಧರ್ಮೇಂದ್ರ ಯಾದವ್ ವಿರೋಧ ವ್ಯಕ್ತಪಡಿಸಿದರು.

ಮಸೂದೆ ಮಂಡನೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾಂಗ್ರೆಸ್‌, ಟಿಡಿಪಿ ಸೇರಿದಂತೆ ಎನ್‌ಡಿಎ ಮಿತ್ರ ಪಕ್ಷಗಳು ಸದಸ್ಯರಿಗೆ ವಿಪ್‌ ಜಾರಿ ಮಾಡಿವೆ.

ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ Read More

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.

ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ Read More

ಒಂದು ದೇಶ, ಒಂದು ಚುನಾವಣೆ ಸಮರ್ಥ ನಿರ್ಧಾರ: ಹೇಮಾ ನಂದೀಶ್

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಒಂದು ದೇಶ, ಒಂದು ಚುನಾವಣೆ ನಿರ್ಣಯ ಸಮರ್ಥ ನಿರ್ಧಾರವಾಗಿದೆ ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್ ಶ್ಲಾಘಿಸಿದ್ದಾರೆ.

ಕೇಂದ್ರದ ಈ ನಿರ್ಣಯ ಚುನಾವಣೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಪುರಸಭೆ ಮತ್ತಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿರುವುದರಿಂದ ಒಂದೇ ಮತದಾರರ ಪಟ್ಟಿ ಎಲ್ಲಾ ಚುನಾವಣೆಗೂ ಬಳಕೆಗೆ ಅವಕಾಶವಿದೆ,ಹಾಗಾಗಿ‌ ಸಮಯದ ಜತೆಗೆ ಹಣ ಉಳಿತಾಯವಾಗಲಿದೆ ಎಂದು ಹೇಮಾನಂದೀಶ್ ತಿಳಿಸಿದ್ದಾರೆ.

ಒಂದು ದೇಶ, ಒಂದು ಚುನಾವಣೆ ಸಮರ್ಥ ನಿರ್ಧಾರ: ಹೇಮಾ ನಂದೀಶ್ Read More

ಒಂದು ರಾಷ್ಟ್ರ ಒಂದು ಚುನಾವಣೆ:ಭಾರತದ ಆರ್ಥಿಕ ಪ್ರಗತಿಗೆ ಪೂರಕ:ಜೋಗಿ ಮಂಜು

ಮೈಸೂರು: ಒಂದು ರಾಷ್ಟ್ರ ಒಂದು ಚುನಾವಣೆಯಿಂದ ನಮ್ಮ ದೇಶವು ಆರ್ಥಿಕ ಪ್ರಗತಿಯತ್ತ ಸಾಗಲಿದೆ ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿ ಮಂಜು ಅಭಿಪ್ರಾಯ ಪಟ್ಟಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆಯಿಂದ ಭಾರತದಲ್ಲಿ ಲೋಕಸಭೆ ಹಾಗೂ ವಿಧಾನ ಸಭೆ ಚುನಾವಣೆಯು ಏಕಕಾಲದಲ್ಲಿ ನಡೆಯುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲಿದೆ ಹಾಗೂ ಚುನಾವಣಾ ವೆಚ್ಚದಲ್ಲಿ ಬಾರಿ ಇಳಿಕೆಯಾಗಲಿದೆ ಜತೆಗೆ ಸಮಯ ಉಳಿತಾಯವಾಗಲಿದೆ ಆಂತರಿಕವಾಗಿ ಪ್ರಜಾಪ್ರಭುತ್ವಕ್ಕೆ ಜಯ ಸಿಗಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಸ್ವಾತಂತ್ರ್ಯ ದಿನಾಚರಣೆಯ ಸಂಧರ್ಭದಲ್ಲಿ ಕೆಂಪು ಕೋಟೆಯಲ್ಲಿ ಈ ವಿಚಾರ ಪ್ರಸ್ತಾಪಿಸುವ ಮೂಲಕ ರಾಷ್ಟ್ರಕ್ಕೆ ಸಂದೇಶವನ್ನು ನೀಡಿದ್ದರು,ಅದು ಈಗ ನಿಜವಾಗಿದೆ.

ಗ್ರಾಮ ಪಂಚಾಯತಿಯಿಂದ ಲೋಕಸಭಾ ಚುನಾವಣಾ ಯವರೆಗೂ ಒಟ್ಟೊಟ್ಟಿಗೆ ನಡೆಯುವುದು ಇದು ಐತಿಹಾಸಿಕ ನಿಲುವುವಾಗಿದೆ, ಇದು ಪ್ರಜಾಪ್ರಭುತ್ವ ದ ಗೆಲುವಾಗಿದೆ ಎಂದು ಜೋಗಿ ಮಂಜು ಹೇಳಿದ್ದಾರೆ.

ವಿರೋಧ ಪಕ್ಷಗಳು ಒಂದು ದೇಶ ಒಂದು‌ ಚುನಾವಣೆಯನ್ನು ವಿರೋಧ ಮಾಡುವುದನ್ನು ಬಿಟ್ಟು ಇದಕ್ಕೆ ಪೂರಕವಾಗಿ ಸಹಕಾರ ಕೊಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ:ಭಾರತದ ಆರ್ಥಿಕ ಪ್ರಗತಿಗೆ ಪೂರಕ:ಜೋಗಿ ಮಂಜು Read More

ಒಂದು ದೇಶ ಒಂದು ಚುನಾವಣೆಯಿಂದ ಅನಗತ್ಯ ವೆಚ್ಚ ಉಳಿತಾಯ-ಅಶೋಕ್

ಬೆಂಗಳೂರು: ಒಂದು ದೇಶ ಒಂದು ಚುನಾವಣೆಯಿಂದ ಅನಗತ್ಯ ವೆಚ್ಚ ಉಳಿಯಲಿದೆ,ಇದನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಬಹಳ ಹಿಂದೆಯೇ ಈ ತೀರ್ಮಾನ ಮಾಡಬೇಕಿತ್ತು, ಈಗಲಾದರೂ ಈ ನಿರ್ಧಾರ ಮಾಡಲಾಗಿದೆ ಅದಕ್ಕೆ ಖುಷಿ ಇದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

ಒಂದು ದೇಶ ಒಂದು ಚುನಾವಣೆಗೆ ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ. ಮುಂದಿನ ಅಧಿವೇಶನದಲ್ಲಿ ಇದರ ಮಸೂದೆ ಮಂಡನೆ ಆಗಲಿದೆ. ಕೇಂದ್ರ ಸರ್ಕಾರದ ನಡೆ ಸ್ವಾಗತಾರ್ಹವಾಗಿದೆ,ಇದರಿಂದ ಕೋಟ್ಯಂತರ ಹಣ ಉಳಿತಾಯ ಆಗಲಿದೆ ಎಂದು ಅಭಿಪ್ರಾಯ ಪಟ್ಟರು.

ವಿಪಕ್ಷಗಳು ಒಂದು ದೇಶ ಒಂದು ಚುನಾವಣೆಗೆ ವಿರೋಧ ಮಾಡುತ್ತಿವೆ, ವಿಪಕ್ಷಗಳಿಗೆ ಮೋದಿಯವರ ಭಯ ಇದೆ. ಮತ್ತೆ ಮೋದಿಯವರೇ ಗೆದ್ದು ಬರುತ್ತಾರೆ ಎಂಬ ಭಯ ಅವರಿಗೆ ಎಂದು ಅಶೋಕ್ ವ್ಯಂಗ್ಯವಾಡಿದರು.

ಒಂದು ದೇಶ ಒಂದು ಚುನಾವಣೆಯಿಂದ ಅನಗತ್ಯ ವೆಚ್ಚ ಉಳಿತಾಯ-ಅಶೋಕ್ Read More