ರಾಜ್ಯದಲ್ಲಿ ದರ ಬೀಜಾಸುರ ಸರಕಾರ ಜನರ ರಕ್ತ ಹೀರುತ್ತಿದೆ:ಹೆಚ್ ಡಿ ಕೆ ಕಿಡಿ

ಬೆಂಗಳೂರು: ರಾಜ್ಯದಲ್ಲಿ ದರ ಬೀಜಾಸುರ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೂ ಸೆಸ್ ವಿಧಿಸುವ ಮೂಲಕ ಜನರ ರಕ್ತ ಹೀರುತ್ತಿದೆ ಎಂದು ಟೀಕಿಸಿದ್ದಾರೆ.

ರಾಜ್ಯ ಸರಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು ಎಂದು ಲೇವಡಿ ಮಾಡಿದ್ದಾರೆ.

ದರ ಏರಿಕೆಗೆ ಪಂಚ ಗ್ಯಾರೆಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ ಜನರ ಲೂಟಿ ಮಾಡುವುದಷ್ಟೇ. ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಕುಮಾರಸ್ವಾಮಿ ವ್ಯಂಗ್ಯ ವಾಡಿದ್ದಾರೆ

ನೀರು, ಮೆಟ್ರೋ ರೈಲು, ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರಕಾರ ಎಂದು ಆರೋಪಿಸಿದ್ದಾರೆ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಏಪ್ರಿಲ್ 1ರಿಂದ ಕಸದ ಸೆಸ್ ಹೇರುತ್ತಿದೆ ಈ ದರಬೀಜಾಸುರ ಸರಕಾರ ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹಾಕಿಕೊಂಡಿದೆ ಎಂದು ಹೆಚ್ ಡಿ ಕೆ ಟೀಕಿಸಿದ್ದಾರೆ.

ರಾಜ್ಯದಲ್ಲಿ ದರ ಬೀಜಾಸುರ ಸರಕಾರ ಜನರ ರಕ್ತ ಹೀರುತ್ತಿದೆ:ಹೆಚ್ ಡಿ ಕೆ ಕಿಡಿ Read More

ಕಾಂಗ್ರೆಸ್ 60 ಪರ್ಸೆಂಟ್‌ ಕಮಿಶನ್‌ ಸರ್ಕಾರ: ಅಶೋಕ್ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಕ್ಕಾ 60 ಪರ್ಸೆಂಟ್‌ ಕಮಿಶನ್‌ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್‌ ಆಡಳಿತದಿಂದಾಗಿ ರಾಜ್ಯ ದಿವಾಳಿಯ ಕಡೆಗೆ ಸಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಮಾಚಲ ಪ್ರದೇಶ ಹಾಗೂ ಕೇರಳದಂತೆಯೇ ಕರ್ನಾಟಕ ಕೂಡ ದಿವಾಳಿಯ ಕಡೆಗೆ ಹೆಜ್ಜೆ ಇಡುತ್ತಿದೆ. ಕಾಂಗ್ರೆಸ್‌ನದ್ದು ಪಕ್ಕಾ 60 ಪರ್ಸೆಂಟ್‌ ಕಮಿಶನ್‌ನ ಸರ್ಕಾರ,ಇವರ ಬಳಿ ಗುತ್ತಿಗೆದಾರರಿಗೆ ಪಾವತಿಸಲು ಬಳಿ ಹಣವಿಲ್ಲ ಎಂದು ಕಿಡಿಕಾರಿದರು.

ಬಿಜೆಪಿ ಸರ್ಕಾರಕ್ಕೆ 40 ಪರ್ಸೆಂಟ್‌ ಎಂದು ಆರೋಪಿಸಿದ ಗುತ್ತಿಗೆದಾರರೇ ಈಗ ಕಾಂಗ್ರೆಸ್‌ ಸರ್ಕಾರ 60% ಕಮಿಶನ್‌ ಸರ್ಕಾರ ಎಂದು ಹೇಳಿ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ನೋಡುತ್ತಿದ್ದಾರೆ. ಬೆಂಗಳೂರಿನಲ್ಲಿ 30-40 ನಿವೇಶನಕ್ಕೆ 10 ಲಕ್ಷ ರೂ. 40-60 ನಿವೇಶನಕ್ಕೆ 20 ಲಕ್ಷ ರೂ., ಇದಕ್ಕೂ ಹೆಚ್ಚಿನ ನಿವೇಶನಗಳಿಗೆ 40 ಲಕ್ಷ ರೂ. ಲಂಚ ಕಮಿಶನ್‌ ಕೊಡಬೇಕಿದೆ ಎಂದು ಆರೋಪಿಸಿದರು.

ಗುತ್ತಿಗೆದಾರರಿಗೆ ಸರ್ಕಾರ 32 ಸಾವಿರ ಕೋಟಿ ರೂ. ನೀಡಬೇಕಿದೆ. ಈ ಹಣ ಹೊಂದಿಸಲು ಎಲ್ಲದಕ್ಕೂ ಸರ್ಕಾರ ತೆರಿಗೆ ಹಾಕುತ್ತಿದೆ. ಇಲ್ಲವಾದರೆ ಗುತ್ತಿಗೆದಾರರಿಗೆ ಕೆಲಸ ಸ್ಥಗಿತಗೊಳಿಸುತ್ತಾರೆ ಇದರ ನಡುವೆ ಆಶಾ ಕಾರ್ಯಕರ್ತೆಯರು ಧರಣಿ ಆರಂಭಿಸಿದ್ದಾರೆ. ಜೊತೆಗೆ ತೊಗರಿ ಖರೀದಿಗೆ ಸರ್ಕಾರದ ಬಳಿ ಹಣವಿಲ್ಲ ಎಂದು ವ್ಯಂಗ್ಯ ವಾಡಿದರು.

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಬಹಳ ಮೋಸ ಮಾಡುತ್ತಾರೆ. ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ ಸರ್ಕಾರದ ವೆಚ್ಚವನ್ನು ಅಂಕಿ ಅಂಶಗಳ ಸಹಿತ ಅಶೋಕ್ ತಿಳಿಸಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಸಚಿವ ಪ್ರಿಯಾಂಕ್‌ ಖರ್ಗೆಯವರ ಆಪ್ತರನ್ನು ಇನ್ನೂ ಬಂಧಿಸಿಲ್ಲ. ಬಹುಶಃ ಸುರಕ್ಷತೆ ದೃಷ್ಟಿಯಿಂದ ಅವರನ್ನು ಪೊಲೀಸರು ಕಬ್ಬಿನ್‌ ಗದ್ದೆಯಲ್ಲಿ ಇರಿಸಿರಬಹುದು. ಅವರ ಆಪ್ತರು ರೌಡಿಶೀಟರ್‌ ಪಟ್ಟಿಯಲ್ಲಿದ್ದು, ಆ ಪಟ್ಟಿಯಿಂದ ಹೆಸರು ತೆಗೆಸಿದ್ದೇ ಕಾಂಗ್ರೆಸ್‌ ನಾಯಕರು ಎಂದು ಇದೇ‌ ವೇಳೆ ಅಶೋಕ್ ದೂರಿದರು.

ಸಚಿವ ರಾಮಲಿಂಗಾರೆಡ್ಡಿ ಹಳೆಯ ಸುದ್ದಿ ಹೇಳಿದ್ದಾರೆ. ನಾನು ಸಚಿವನಾಗಿದ್ದಾಗ ಸಾರಿಗೆ ನಿಗಮಗಳನ್ನು ನಷ್ಟಕ್ಕೆ ದೂಡಲಿಲ್ಲ. ಎಲ್ಲ ಕಡೆ ಬಸ್‌ ನಿಲ್ದಾಣ ನಿರ್ಮಿಸಿ ಬಾಡಿಗೆ ಮೂಲಕ ಆದಾಯ ಬರುವಂತೆ ಮಾಡಲಾಗಿತ್ತು. ಈಗ ಸರ್ಕಾರ ಎಲ್ಲೂ ನಿಲ್ದಾಣ ನಿರ್ಮಿಸಿಲ್ಲ. ನಾನು ಸಚಿವ ಸ್ಥಾನದಿಂದ ಹೊರಬಂದಾಗ ಬಿಎಂಟಿಸಿ ಲಾಭದಲ್ಲಿತ್ತು. ಕೋವಿಡ್‌ ಸಮಯದಲ್ಲಿ ಆರ್ಥಿಕ ನಷ್ಟವಾಗಿದ್ದಾಗಲೂ ಟಿಕೆಟ್‌ ದರ ಏರಿಸಲಿಲ್ಲ. ಗ್ಯಾರಂಟಿಗಳಿಂದಾಗಿ ಈಗ ಟಿಕೆಟ್‌ ದರ ಏರಿಸಿದ್ದಾರೆ ಎಂದು ಟೀಕಿಸಿದರು.

ಹೊಸ ವೈರಸ್‌ ಹರಡುತ್ತಿರುವುದರಿಂದ ಸರ್ಕಾರ ಟಾಸ್ಕ್‌ ಫೋರ್ಸ್‌ ರಚಿಸಿ ಸಿದ್ಧತೆ ಮಾಡಿಕೊಳ್ಳಬೇಕು. ಆಕ್ಸಿಜನ್‌ ವ್ಯವಸ್ಥೆ ಮಾಡಬೇಕು. ಜಿಲ್ಲಾ, ತಾಲೂಕು ಕೇಂದ್ರದಲ್ಲಿ ಅಧಿಕಾರಿಗಳು ಆಡಿಟ್‌ ಮಾಡಬೇಕು. ಸರ್ಕಾರ ಕೂಡಲೇ ಸಿದ್ಧತೆ ಮಾಡಿಕೊಳ್ಳಲಿ ಎಂದು ಪ್ರತಿಪಕ್ಷದ ನಾಯಕರು ಸಲಹೆ ನೀಡಿದರು.

ಕಾಂಗ್ರೆಸ್ 60 ಪರ್ಸೆಂಟ್‌ ಕಮಿಶನ್‌ ಸರ್ಕಾರ: ಅಶೋಕ್ ವಾಗ್ದಾಳಿ Read More

ಚಂದ್ರಶೇಖರ ಸ್ವಾಮಿಗಳ ಮೇಲೆ ಎಫ್.ಐ.ಆರ್;ಕಾನೂನಿನ ಚೌಕಟ್ಟೊಳಗೆ ಬಂದರೆ ಕ್ರಮ: ಸಿಎಂ

ಬೆಂಗಳೂರು, ಡಿ.1: ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ, ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಇಲ್ಲವಾದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ‌ ಹೇಳಿದರು.

ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಜೆ ಡಿ ಎಸ್ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು, ನಾನು ಬಿಡಲಿಲ್ಲ ಎಂದು ಹೇಳಿದರು.

ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳಿದ್ದಾರೆ ಮಾಧ್ಯಮಗಳು ಏಕಿರಬೇಕು ಎಂದು ಸಿಎಂ ಖಾರವಾಗಿ ಮಾಧ್ಯಮದವರನ್ನೆ ಪ್ರಶ್ನಿಸಿದರು.

ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ ಇಲ್ಲದೆ ಅಹಿಂದ ಸಮಾವೇಶ ನಡೆಸಿದೆ, ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ, ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಏರ್ಪಡಿಸಲಾಗಿದೆ.ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದೆ ಎಂದು ಸಿದ್ದು ತಿಳಿಸಿದರು.

ಜೆಡಿಎಸ್ ಪಕ್ಷ ವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯಾತೀತವಾಗಿ ಉಳಿದಿದೆಯೇ ಎಂದು ಸಿಎಂ ಪ್ರಶ್ನಿಸಿದರು, ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಇರಲಿಲ್ಲ,ನಾನು ದೇವೇಗೌಡ, ಇಬ್ರಾಹಿಂ, ಸತೀಶ್ ಜಾರಕಿಹೊಳಿ,ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಆಗಿದ್ದು. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಚಂದ್ರಶೇಖರ ಸ್ವಾಮಿಗಳ ಮೇಲೆ ಎಫ್.ಐ.ಆರ್;ಕಾನೂನಿನ ಚೌಕಟ್ಟೊಳಗೆ ಬಂದರೆ ಕ್ರಮ: ಸಿಎಂ Read More

ಸಚಿವ ಜಮೀರ್‌ ವಿರುದ್ಧ ಆರ್‌.ಅಶೋಕ ತೀವ್ರ ವಾಗ್ದಾಳಿ

ಚನ್ನಪಟ್ಟಣ: ಸಚಿವ ಜಮೀರ್‌ ಅಹ್ಮದ್‌ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿದ್ದಾರೆಯೇ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು.

ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್‌ ಅಹ್ಮದ್‌ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಅದೇ ಜಮೀರ್‌ ಅಹ್ಮದ್‌ ಈಗ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎಂದು ಹೇಳಿದ್ದಾರೆ ಎಂದು
ಟೀಕಿಸಿದರು.

ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದ್ದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್‌ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ ಎಂದು ಕಾರವಾಗಿ ಪ್ರಶ್ನಿಸಿದರು.

ಈಗಾಗಲೇ ಸಚಿವ ಜಮೀರ್‌ ಅಹ್ಮದ್‌ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ? ನಾವು ಮಣ್ಣಿನ ಮಕ್ಕಳಾಗಿದ್ದು, ಇದೇ ನಾಡಿನಲ್ಲಿ ಹುಟ್ಟಿ ಬೆಳೆದಿದ್ದೇವೆ. ಚುನಾವಣೆ ನಡೆಯುವ ಸಮಯದಲ್ಲೇ ಕಾಂಗ್ರೆಸ್‌ ಸಚಿವರು ಖರೀದಿ ಬಗ್ಗೆ ಮಾತನಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹಿಂದೆ ಇದ್ದ ರೌಡಿಗಳು ನಾಚುವಂತೆ ಅಬಕಾರಿ ಇಲಾಖೆಯ ಮೂಲಕ ಮದ್ಯ ಮಾರಾಟಗಾರರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಕುಟುಂಬ ಖರೀದಿಸುವವರನ್ನು ಚನ್ನಪಟ್ಟಣದ ಜನರು ಕ್ಷಮಿಸುವುದಿಲ್ಲ ಎಂದು ಅಶೋಕ್ ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ಸೈಟು ಕೊಳ್ಳೆ ಹೊಡೆದು ಅದಕ್ಕಾಗಿ 62 ಕೋಟಿ ರೂ. ನೀಡಿ ಎಂದು ಕೇಳುತ್ತಾರೆ. ಅವರ ಬದುಕಿನ ತೆರೆದ ಪುಸ್ತಕದಲ್ಲಿ ದರೋಡೆಗಳೇ ತುಂಬಿದೆ ಎಂದು ಲೇವಡಿ ಮಾಡಿದರು.

ಇದನ್ನೆಲ್ಲ ಜನ ಯೋಚನೆ ಮಾಡಿ ಬದಲಾವಣೆ ತರಬೇಕು,ನಿಖಿಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಸಚಿವ ಜಮೀರ್‌ ವಿರುದ್ಧ ಆರ್‌.ಅಶೋಕ ತೀವ್ರ ವಾಗ್ದಾಳಿ Read More