ಪಾಕಿಸ್ತಾನದಲ್ಲಿ ಮೇಘಸ್ಫೋಟ:300 ಕ್ಕೂ ಹೆಚ್ವು ಮಂದಿ ಸಾವು;ಮನೆಗಳು ನಾಶ

ಪಾಕಿಸ್ತಾನ: ಮಳೆ ಮತ್ತು ಪ್ರವಾಹದಿಂದ ಪಾಕಿಸ್ತಾನದಲ್ಲಿ ಭಾರಿ ವಿನಾಶ ಉಂಟಾಗಿದೆ.

ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 300 ಕ್ಕೂ ಹೆಚ್ಚು ಮಂದಿ.

ಶುಕ್ರವಾರ ಧಾರಾಕಾರ ಮಳೆಯಿಂದಾಗಿ ಪ್ರಾಂತ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.ಮನೆಗಳೆಲ್ಲಾ ಕುಸಿದು ಜನ ನಾಪತ್ತೆಯಾಗಿದ್ದಾರೆ.

ಬುನೇರ್ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ, ಶುಕ್ರವಾರ ಸಂಭವಿಸಿದ ಹಠಾತ್ ಮೇಘಸ್ಫೋಟದಿಂದಾಗಿ ನೀರಿನ ಪ್ರವಾಹವು ಹಳ್ಳಿಗಳ ಕಡೆಗೆ ನುಗ್ಗಿದೆ. ಜನರು ತಪ್ಪಿಸಿಕೊಳ್ಳಲು ಕೂಡಾ ಆಗಲಿಲ್ಲ. ಈ ಜಿಲ್ಲೆಯಲ್ಲಿ ಮಾತ್ರ ಇಲ್ಲಿಯವರೆಗೆ 180ಕ್ಕೂ ಹೆಚ್ಚು ಸಾವುಗಳು ದೃಢಪಟ್ಟಿವೆ. ಹಳ್ಳಿಗಳಲ್ಲಿ ಮನೆಗಳು ಸಂಪೂರ್ಣವಾಗಿ ಕೊಚ್ಚಿಹೋಗಿದ್ದು ಬಹಳ ಕುಟುಂಬಗಳು ನಿರಾಶ್ರಿತವಾಗಿವೆ.

ಪಾಕಿಸ್ತಾನದಲ್ಲಿ ಮೇಘಸ್ಫೋಟ:300 ಕ್ಕೂ ಹೆಚ್ವು ಮಂದಿ ಸಾವು;ಮನೆಗಳು ನಾಶ Read More

ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ

ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ಉಗ್ರ ದಾಳಿ ಎಸಗಿದ ಪಾಕಿಸ್ತಾನ ಮೂಲದ ದಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಅಮೆರಿಕದ ವಿದೇಶಾಂಗ ಇಲಾಖೆ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದ್ದು,ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಮುಖಭಂಗವಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ ಬಲಿ ಪಡೆದ ಘಟನೆಯ ಹೊಣೆಗಾರಿಕೆಯನ್ನು ದಿ ರೆಸಿಸ್ಟೆನ್ಸ್ ಫ್ರಂಟ್ ಸಂಘಟನೆ ವಹಿಸಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ.

ವಿದೇಶಾಂಗ ಇಲಾಖೆಯು ದಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಗೊತ್ತುಪಡಿಸಿದ ವಿದೇಶಿ ಭಯೋತ್ಪಾದಕ ಸಂಘಟನೆ ಮತ್ತು ವಿಶೇಷವಾಗಿ ಗೊತ್ತುಪಡಿಸಿದ ಜಾಗತಿಕ ಭಯೋತ್ಪಾದಕ ಎಂದು ಹೆಸರಿಸುತ್ತದೆ. ಲಷ್ಕರ್-ಎ-ತೊಯ್ ಬಾ ಸಂಸ್ಥೆಯ ಭಾಗವಾಗಿರುರುವ ಟಿಆರ್‌ಎಫ್‌ ಪಹಲ್ಗಾಮ್ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.

2008 ರ ಮುಂಬೈ ದಾಳಿಯ ನಂತರ ಭಾರತದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಮಾರಕ ದಾಳಿ ಇದಾಗಿದೆ. ಭಾರತೀಯ ಭದ್ರತಾ ಪಡೆಗಳ ವಿರುದ್ಧದ ಹಲವಾರು ದಾಳಿಯ ಹೊಣೆಯನ್ನು ಟಿಆರ್‌ಎಫ್‌ ಹೊತ್ತುಕೊಂಡಿದೆ ಎಂದು ಮಾರ್ಕೊ ರುಬಿಯೊ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಈ ಕ್ರಮವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಭಯೋತ್ಪಾದನೆಯನ್ನು ಎದುರಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ Read More

ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು

ಪಂಜಾಬ್: ನವದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿ,ಬೇಹುಗಾರಿಕೆಯಲ್ಲಿ ಪಾಲ್ಗೊಂಡ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮಲೇರ್ಕೋಟ್ಲಾ ಪೊಲೀಸರು ಬಂಧಿಸಿದ್ದಾರೆ.

ಈ‌ ವುಷಯವನ್ನು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ಗೌರವ್ ಯಾದವ್(ಡಿಜಿಪಿ) ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಮೇರೆಗೆ ಕಾರ್ಯನಿರ್ವಹಿಸುತ್ತಾ, ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ಸೋರಿಕೆ ಮಾಡಿದ್ದಕ್ಕಾಗಿ ಒಬ್ಬನನ್ನು ಬಂಧಿಸಲಾಗೆದೆ,ಈತನ ಬಂಧನದಿಂದ ಲಭ್ಯವಾದ ಮಾಹಿತಿಯ ಆಧಾರದಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ರಹಸ್ಯ ಮಾಹಿತಿಯನ್ನು ರವಾನಿಸಿ ಆನ್‌ಲೈನ್ ವಹಿವಾಟಿನ ಮೂಲಕ ಪಾವತಿಗಳನ್ನು ಪಡೆಯುತ್ತಿದ್ದರು ಎಂದು ಡಿಜಿಪಿ ಹೇಳಿದ್ದಾರೆ.

ಆರೋಪಿಗಳಿಬ್ಬರೂ ಹ್ಯಾಂಡ್ಲರ್ ಜೊತೆ ಆಗಾಗ್ಗೆ ಸಂಪರ್ಕದಲ್ಲಿದ್ದರು ಮತ್ತು ಅವರ ಸೂಚನೆಯಂತೆ ಇತರ ಸ್ಥಳೀಯ ಕಾರ್ಯಕರ್ತರಿಗೆ ಹಣ ರವಾನಿಸುವಲ್ಲಿ ಭಾಗಿಯಾಗಿದ್ದರು. ಬಂಧಿತರಿಂದ ಎರಡು ಮೊಬೈಲ್ ಫೋನ್‌‌ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು Read More

ರಾಜಾಸ್ಥಾನ ಗಡಿಯಲ್ಲಿ ಪಾಕ್‌ ರೇಂಜರ್‌ ಬಂಧನ

ನವದೆಹಲಿ: ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಹೀನ ಕೃತ್ಯದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಉಂಟಾಗಿದ್ದು,ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕ್‌ ರೇಂಜರ್‌ನನ್ನ ರಾಜಾಸ್ಥಾನದ ಗಡಿ ಭದ್ರತಾ ಪಡೆ ಬಂಧಿಸಿದೆ.

ಏಪ್ರಿಲ್ ನಲ್ಲಿ ಗೊತ್ತಿಲ್ಲದೆ ಗಡಿ ಪ್ರವೇಶಿಸಿದ್ದ ಭಾರತೀಯ ರೇಂಜರ್‌ನನ್ನು ಬಂಧಿಸಿದ 15 ದಿನಗಳ ಬಳಿಕ ಈ ಪಾಕ್‌ ರೇಂಜರ್‌ನನ್ನ ಬಂಧಿಸಲಾಗಿದೆ.

ಗಡಿ ಸಮೀಪದ ಪ್ರದೇಶಗಳಲ್ಲಿ ಬೇಹುಗಾರಿಕೆ ನಡೆಸುತ್ತಿದ್ದಾಗ ಬಹಾವಲ್ಪುರ್ ವಲಯದಿಂದ ಬಿಎಸ್‌ಎಫ್‌ ಪಡೆ ಪಾಕಿಸ್ತಾನಿ ರೇಂಜರ್‌ನನ್ನ ಬಂಧಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ಏಪ್ರಿಲ್ 23 ರಂದು ಪಂಜಾಬ್‌ನ ಈ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ರೇಂಜರ್‌ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕ್‌ ಸೈನಿಕರು ಬಂಧಿಸಿದ್ದರು.

ಭಾರತ ಮಾತುಕತ ನಡೆಸಿದ್ದರೂ ರೇಂಜರ್‌ನನ್ನ ಪಾಕ್ ಭಾರತಕ್ಕೆ ಹಸ್ತಾಂತರಿಸಿಲ್ಲ.

ರಾಜಾಸ್ಥಾನ ಗಡಿಯಲ್ಲಿ ಪಾಕ್‌ ರೇಂಜರ್‌ ಬಂಧನ Read More

ಪಾಕ್‌ಗೆ ಮತ್ತೊಂದು ಶಾಕ್‌ ನೀಡಿದ ಭಾರತ

ನವದೆಹಲಿ: ಪಾಕಿಸ್ತಾನ ವಿಮಾನಗಳಿಗೆ ಭಾರತವು ವಾಯುಸೀಮೆ ಬಂದ್‌ ಮಾಡುವ ಮೂಲಕ‌ ಶಾಕ್ ನೀಡಿದೆ.

ಭಾರತದ ವಿಮಾನಗಳಿಗೆ ತನ್ನ ವಾಯುಸೀಮೆಯನ್ನು ಬಳಸದಂತೆ ಪಾಕ್‌ ನಿರ್ಬಂಧ ಹೇರಿದ ನಂತರ ಭಾರತ ಈ ಕ್ರಮವನ್ನು ಕೈಗೊಂಡಿದೆ.

ಭಾರತ ಮತ್ತು ಪಾಕಿಸ್ತಾನ ಎರಡೂ ಮೇ 23ರ ಮಧ್ಯರಾತ್ರಿವರೆಗೆ ಪರಸ್ಪರ ತನ್ನ ವಾಯುಸೀಮೆಯನ್ನು ಬಳಕೆ ಮಾಡುವುದನ್ನು ನಿರ್ಬಂಧಿಸಿವೆ, ಎರಡು ದೇಶಗಳ ನಡುವಿನ ಪರಿಸ್ಥಿತಿ ಸುಧಾರಣೆಯಾಗದೇ ಇದ್ದರೆ ನಿರ್ಬಂಧ ಮತ್ತೆ ಮುಂದುವರಿಯಲಿದೆ.

ಈ ನಿರ್ಧಾರದಿಂದ ಪಾಕಿಸ್ತಾನ ನೋಂದಾಯಿತ ವಿಮಾನಗಳು ಮತ್ತು ಪಾಕಿಸ್ತಾನ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಅಥವಾ ಗುತ್ತಿಗೆ ಪಡೆದ ವಿಮಾನಗಳು, ಮಿಲಿಟರಿ ವಿಮಾನಗಳು ಭಾರತೀಯ ವಾಯುಪ್ರದೇಶವನ್ನು ಬಳಸುವಂತಿಲ್ಲ.

ಭಾರತಕ್ಕೆ ಹೋಲಿಸಿದರೆ ಪಾಕಿಸ್ತಾನಕ್ಕೆ ಇದರಿಂದ ದೊಡ್ಡ ಪೆಟ್ಟು ಬೀಳಲಿದೆ. ಪಾಕ್‌ ವಿಮಾನಗಳು ಇನ್ನು ಮುಂದೆ ಮಲೇಷ್ಯಾದ ಕೌಲಾಲಂಪುರಕ್ಕೆ ಹೋಗಬೇಕಾದರೆ ಚೀನಾ ವಾಯುಸೀಮೆಯನ್ನು ಬಳಸಿ ಥಾಯ್ಲೆಂಡ್‌ ಮೂಲಕ ಸಂಚರಿಸಬೇಕಿದೆ.

ಪಾಕ್‌ಗೆ ಮತ್ತೊಂದು ಶಾಕ್‌ ನೀಡಿದ ಭಾರತ Read More

ಬಲೂಚ್ ಲಿಬರೇಶನ್ ಆರ್ಮಿ ದಾಳಿ:ಪಾಕ್ ಸೇನಾ ಬೆಂಗಾವಲು ಪಡೆಯ 10 ಮಂದಿ ಸಾವು

ಇಸ್ಲಾಮಾಬಾದ್‌: ಬಲೂಚಿಸ್ತಾನದ ಕ್ವೆಟ್ಟಾ ಬಳಿಯ ಮಾರ್ಗತ್ ಪ್ರದೇಶದಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯ ಮೇಲೆ ಬಲೂಚ್ ಲಿಬರೇಶನ್ ಆರ್ಮಿ ದಾಳಿ ನಡೆಸಿದ್ದು, ಪಾಕ್ ಸೇನೆಯ 10 ಸಿಬ್ಬಂದಿಯನ್ನು ಹತ್ಯೆ ಮಾಡಿದೆ.

ಬಲೂಚ್ ದಂಗೆಕೋರರಿಂದ ಪಾಕ್ ಸೇನೆಯ ಸುಬೇದಾರ್ ಶೆಹಜಾದ್ ಅಮೀನ್, ನಯಬ್ ಸುಬೇದಾರ್ ಅಬ್ಬಾಸ್, ಸಿಪಾಯಿ ಖಲೀಲ್, ಸಿಪಾಯಿ ಜಾಹಿದ್, ಸಿಪಾಯಿ ಖುರ್ರಂ ಮತ್ತು ಇತರರು ಹತ್ಯೆಗೀಡಾಗಿದ್ದಾರೆ.

ರಿಮೋಟ್-ನಿಯಂತ್ರಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಈ ದಾಳಿ ನಡೆಸಲಾಗಿದ್ದು, ಆಕ್ರಮಿತ ಪಾಕಿಸ್ತಾನಿ ಸೇನೆಯ 10 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಗುಂಪಿನ ವಕ್ತಾರ ಜೀಯಂಡ್ ಬಲೂಚ್ ಹೇಳಿಕೆ ನೀಡಿದ್ದಾರೆ.

ಕ್ವೆಟ್ಟಾದ ಉಪ ನಗರ ಮಾರ್ಗತ್‌ನಲ್ಲಿ ಬಲೂಚ್ ಲಿಬರೇಶನ್ ಆರ್ಮಿ ಸ್ವಾತಂತ್ರ‍್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆಯ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ರಿಮೋಟ್ ಕಂಟ್ರೋಲ್ಡ್ ಐಇಡಿ ದಾಳಿ ನಡೆಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಶತ್ರು ವಾಹನವನ್ನು ಸಂಪೂರ್ಣವಾಗಿ ನಾಶಗೊಳಿಸಲಾಗಿದೆ ಅದರಲ್ಲಿದ್ದ ಎಲ್ಲಾ 10 ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಜೀಯಂಡ್ ತಿಳಿಸಿದ್ದಾರೆ.

ಬಲೂಚ್ ಲಿಬರೇಶನ್ ಆರ್ಮಿ ದಾಳಿ:ಪಾಕ್ ಸೇನಾ ಬೆಂಗಾವಲು ಪಡೆಯ 10 ಮಂದಿ ಸಾವು Read More

ಪಾಕ್ ಜೈಲಿನಲ್ಲಿ ಬಂಧಿಯಾಗಿದ್ದ ಭಾರತೀಯ ಮೀನುಗಾರ ಆತ್ಮಹತ್ಯೆ

ಕರಾಚಿ: ಕರಾಚಿಯ ಮಾಲಿರ್ ಜೈಲಿನಲ್ಲಿ ಭಾರತೀಯ ಮೀನುಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೌರವ್ ರಾಮ್ ಆನಂದ್(52) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ‌ ಮಾಧ್ಯಮವೊಂದು ವರದಿ ಮಾಡಿದೆ.

ಅಕ್ರಮವಾಗಿ ಪಾಕಿಸ್ತಾನದ ಜಲಗಡಿ ಪ್ರವೇಶಿಸಿದ ಆರೋಪದ ಮೇಲೆ ಫೆಬ್ರವರಿ 2022 ರಲ್ಲಿ ಬಂಧಿಸಲ್ಪಟ್ಟಿದ್ದ ಆನಂದ್ ಅವರು ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಮಾಲಿರ್ ಜೈಲಿನ ಸೂಪರಿಂಟೆಂಡೆಂಟ್ ಅರ್ಷದ್ ಹುಸೇನ್ ಅವರು ಈ ಘಟನೆಯನ್ನು ದೃಢಪಡಿಸಿದ್ದು, ಕೈದಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಜೈಲಿನ ಕರ್ತವ್ಯ ನಿರತ ವೈದ್ಯರು ಬೆಳಗಿನ ಜಾವ 2.20 ಕ್ಕೆ ಆನಂದ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್, ಮುಂದಿನ ಕಾನೂನು ಕ್ರಮಗಳು ಮುಗಿಯುವವರೆಗೆ ಅವರ ದೇಹವನ್ನು ಸೊಹ್ರಾಬ್ ಗೋತ್‌ನಲ್ಲಿರುವ ಈಧಿ ಫೌಂಡೇಶನ್‌ನ ಕೋಲ್ಡ್ ಸ್ಟೋರೇಜ್ ಸ್ಥಳಾಂತರಿಸಲು ಆದೇಶಿಸಿದ್ದಾರೆ.

ಪಾಕ್ ಜೈಲಿನಲ್ಲಿ ಬಂಧಿಯಾಗಿದ್ದ ಭಾರತೀಯ ಮೀನುಗಾರ ಆತ್ಮಹತ್ಯೆ Read More

ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ:ಹಲವರಿಗೆ ಗಂಭೀರ ಗಾಯ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ರೈಲು ಹೈಜಾಕ್ ಬೆನ್ನಲ್ಲೇ ಶುಭ ಶುಕ್ರವಾರ ಮಸೀದಿಯಲ್ಲಿ ಪ್ರಬಲ ಬಾಂಬ್ ಸ್ಫೋಟವಾಗಿದೆ.

ರಮ್ಜಾನ್ ನ ಶುಭ ಶುಕ್ರವಾರದಂದೇ ಮಸೀದಿಯಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಲಾಗಿದೆ.

ವಾಯುವ್ಯ ಪಾಕಿಸ್ತಾನದ ಪೆಶಾವರದ ಮಸೀದಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ. ಇದರಲ್ಲಿ ಇಸ್ಲಾಮಿಕ್ ಪಕ್ಷದ ನಾಯಕ ಮತ್ತು ಮಕ್ಕಳು ಸೇರಿದಂತೆ ಇತರ ಹಲವರು ಗಾಯಗೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ:ಹಲವರಿಗೆ ಗಂಭೀರ ಗಾಯ Read More

ಪಾಕಿಸ್ತಾನದಲ್ಲಿ ಐಇಡಿ ಬಾಂಬ್ ಸ್ಫೋಟ:11 ಕಾರ್ಮಿಕರ ದುರ್ಮರಣ

ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಗಣಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್​ ಬಾಂಬ್​ ಸ್ಫೋಟದಿಂದ‌ ಛಿದ್ರಗೊಂಡು 11 ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ.

ರಸ್ತೆ ಬದಿಯಲ್ಲಿ ಇಟ್ಟಿದ್ದ ಬಾಂಬ್​ ಸ್ಫೋಟಿಸಿ 11 ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಟ್ರಕ್​​ನಲ್ಲಿ ಕರೆದೊಯ್ಯುತ್ತಿದ್ದಾಗ ಬಾಂಬ್​ ಸ್ಫೋಟಗೊಂಡಿದೆ. ಐಇಡಿ ಬಾಂಬ್​​ ಅನ್ನು ರಸ್ತೆ ಬದಿಯಲ್ಲಿ ಅಡಗಿಸಿಟ್ಟಿದ್ದರಿಂದ ಅದು ಸ್ಪೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಹರ್ನಾಯಿ ಜಿಲ್ಲಾ ಆಯುಕ್ತ ಹಜರತ್​ ವಾಲಿ ಕಾಕರ್​ ತಿಳಿಸಿದ್ದಾರೆ.

ಘಟನೆಯಲ್ಲಿ 9 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು,ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ, ಗಾಯಗೊಂಡವರನ್ನು ಮಂದಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಲೂಚಿಸ್ತಾನ್​ ಸರ್ಕಾರದ ವಕ್ತಾರ ಶಹೀದ್​, ಇದೊಂದು ದುರಂತ ಘಟನೆ, ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ.

ಬಲೋಚಿಸ್ಥಾನದ ಹರ್ನಾಯಿಯಲ್ಲಿ ಇದೇ ರೀತಿಯ ಬಾಂಬ್​​ ಸ್ಫೋಟದ ಪ್ರಕರಣಗಳು ಇತ್ತೀಚಿಗೆ ವರದಿಯಾಗಿದ್ದವು.

ಪಾಕಿಸ್ತಾನದಲ್ಲಿ ಐಇಡಿ ಬಾಂಬ್ ಸ್ಫೋಟ:11 ಕಾರ್ಮಿಕರ ದುರ್ಮರಣ Read More

ಉಗ್ರ ಮಸೂದ್ ಅಜರ್ ವಿರುದ್ಧ ಕ್ರಮಕೈಗೊಳ್ಳಿ:ಪಾಕ್ ಗೆ ಭಾರತ ಒತ್ತಾಯ

ನವದೆಹಲಿ: ನಿಷೇಧಿತ ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಹಾಗೂ 2011ರ ಸಂಸತ್ ದಾಳಿಯಂತಹ ಭಯೋತ್ಪಾದಕ ಕೃತ್ಯಗಳ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದ ಇಸ್ಲಾಮಿಕ್ ಸೆಮಿನರಿಯಲ್ಲಿ ಅಜರ್ ಸಾರ್ವಜನಿಕ ಭಾಷಣ ಮಾಡಿದ್ದಾನೆ.ಭಾರತದ ಮೇಲೆ ದಾಳಿಯನ್ನು ಮುಂದುವರೆಸಲಾಗುವುದು ಎಂದು ಪ್ರತಿಜ್ಞೆ ಮಾಡಿದ್ದಾನೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಆತನ ಭಾಷಣದ ವರದಿ ಆಧರಿಸಿ ಭಾರತ ಅಜರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ವನ್ನು ಆಗ್ರಹಿಸಿದೆ.

ಅಜರ್‌ನ ಭಾಷಣದ ವರದಿಗಳನ್ನು ಉಲ್ಲೇಖಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಇದು ನಿಜವಾಗಿದ್ದರೆ, ಗಡಿಯಾಚೆಗೆ ತನ್ನ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳು ಮತ್ತು ಭಯೋತ್ಪಾದಕರನ್ನು ಒಳಗೊಂಡಿರುವ ಪಾಕಿಸ್ತಾನದ ದ್ವಂದ್ವ ನಿಲುವನ್ನು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

ಮಸೂದ್ ಅಜರ್ ಭಾರತದಲ್ಲಿನ ಗಡಿಯಾಚೆಗಿನ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾನೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಆದ್ದರಿಂದ ಅವನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಬೇಕು. ಆದರೆ, ಅವನು ಪಾಕಿಸ್ತಾನದಲ್ಲಿ ಇಲ್ಲ ಎಂದು ಆ ದೇಶ ಹೇಳಿದೆ. ಆದರೆ, ವರದಿಗಳನ್ನು ನಂಬುವುದಾದರೆ, ಅದು ಪಾಕಿಸ್ತಾನದ ದ್ವಂದ್ವವನ್ನು ಬಹಿರಂಗಪಡಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯನ್ನು ಹೆಚ್ಚಿಸುವುದಾಗಿಯೂ ಅಜರ್ ಘೋಷಿಸಿದ್ದಾನೆ,ಈತ ಈ ಭಾಷಣವನ್ನು ನವೆಂಬರ್‌ನಲ್ಲಿ ಮಾಡಲಾಗಿದೆ ಎಂದು ವರದಿಯಾಗಿದೆ.

ಉಗ್ರ ಮಸೂದ್ ಅಜರ್ ವಿರುದ್ಧ ಕ್ರಮಕೈಗೊಳ್ಳಿ:ಪಾಕ್ ಗೆ ಭಾರತ ಒತ್ತಾಯ Read More