ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಪೋಟ7 ಮಂದಿ ಸಾವು
ಪೇಶಾವರ: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಬಾಂಬ್ ಸ್ಫೋಟಗೊಂಡ ಪರಿಣಾಮ ಏಳಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು,ಹಲವಾರು ಮಂದಿ ಗಾಯಗೊಂಡಿದ್ದಾರೆ.
ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಧಾನ ಕಚೇರಿ ವಾನಾದಲ್ಲಿರುವ ಸ್ಥಳೀಯ ಶಾಂತಿ ಸಮಿತಿ ಕಚೇರಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದ ನಂತರ 16 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ
ಇಲ್ಲಿಯವರೆಗೆ, ಯಾವುದೇ ಉಗ್ರ ಸಂಘಟನೆ ಸ್ಫೋಟದ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ.
ಸ್ಫೋಟದ ತೀವ್ರತೆಗೆ ಶಾಂತಿ ಸಮಿತಿಯ ಕಚೇರಿಯ ಕಟ್ಟಡ ಸಂಪೂರ್ಣ ಧ್ವಂಸಗೊಂಡಿದೆ ಮತ್ತು ಹಲವಾರು ಜನ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು ಸಾವು,ನೋವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಪಡೆದ ನಂತರ ರಕ್ಷಣಾ ತಂಡಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದಾವಿಸಿ ಗಾಯಾಳುಗಳನ್ನು ಅವಶೇಷಗಳಿಂದ ಹೊರತೆಗೆಯುವ ಕಾರ್ಯದಲ್ಲಿ ತೊಡಗಿದರು
ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಪೋಟ7 ಮಂದಿ ಸಾವು Read More