ಪಂಜಾಬ್ ರೀತಿ ರಾಜ್ಯದ ರೈತರಿಗೂ ಪ್ರತಿ ಎಕರೆಗೆ 20 ಸಾವಿರ ಪರಿಹಾರಕ್ಕೆ ಆಪ್ ಆಗ್ರಹ

ಬೆಂಗಳೂರು: ಪಂಜಾಬ್ ರಾಜ್ಯದ ಆಮ್ ಆದ್ಮಿ ಪಕ್ಷದ ಸಿಎಂ ಭಗವಂತ ಮಾನ್ ಸರ್ಕಾರ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರ ಜಮೀನಿಗೆ ಘೋಷಿಸಿರುವಂತೆ ರಾಜ್ಯದ ರೈತರಿಗೂ ಸಹ ಪ್ರತಿ ಎಕರೆಗೆ 20 ಸಾವಿರ ರೂ ಪರಿಹಾರ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ

ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಈ ಕುರಿತು ಮಾತನಾಡಿದ್ದು, ರಾಜ್ಯ ಸರ್ಕಾರವು ಹೆಕ್ಟೇರ್ ಲೆಕ್ಕದಲ್ಲಿ ಘೋಷಿಸಿರುವ 17,000 ಮತ್ತು 25,000 ರೂ.ಗಳು ಅರೆಕಾಸಿನ ಮಜ್ಜಿಗೆಯಂತಿದೆ, ಉತ್ತರ ಕರ್ನಾಟಕದ ರೈತರು ಖಾಸಗಿಯವರಿಂದ ಸಾಲ,ಸೋಲ ಮಾಡಿ ಅತಿವೃಷ್ಟಿಯಿಂದಾದ ಅನಾಹುತಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ಸರ್ಕಾರ ನೀಡುವ ಪರಿಹಾರದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರನ್ನು ಪಾರು ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

ಪಂಜಾಬ್ ಸರ್ಕಾರವು ಕ್ಷಿಪ್ರಗತಿಯಲ್ಲಿ ವೈಜ್ಞಾನಿಕವಾಗಿ ಸಮೀಕ್ಷೆ ಪೂರ್ಣಗೊಳಿಸಿ ದೇಶದಲ್ಲಿಯೇ ಅತಿ ಹೆಚ್ಚಿನ ಪರಿಹಾರ ಧನವನ್ನು ಘೋಷಿಸಿದೆ, ರಾಜ್ಯದಲ್ಲಿ ಇದುವರೆಗೂ ಜಂಟಿ ಸಮೀಕ್ಷೆ ಕಾರ್ಯ ಪೂರ್ಣ ಗೊಂಡಿಲ್ಲ, ಕೃಷಿ ಅಧಿಕಾರಿಗಳ ನಿಧಾನ ಗತಿಯ ಸರ್ವೆ ಕಾರ್ಯಗಳನ್ನು ನೋಡಿದರೆ ಮೂರ್ನಾಲ್ಕು ತಿಂಗಳಾದರೂ ಮುಗಿಯುವುದಿಲ್ಲ. ಆದರೆ ಕೃಷಿ ಸಚಿವರು ಪರಿಹಾರವನ್ನು ಈಗಲೇ ಘೋಷಿಸಿಬಿಟ್ಟಿದ್ದಾರೆ, ಯಾವ ರೀತಿ ರೈತರಿಗೆ ಈ ಅಲ್ಪ ಮೊತ್ತ ತಲುಪಲು ಸಾಧ್ಯ ಎಂಬುದನ್ನು ಕೃಷಿ ಸಚಿವರು ಉತ್ತರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಈ ರೀತಿಯ ಸೋಗಲಾಡಿತನ ವರ್ತನೆಯನ್ನು ಬಿಟ್ಟು ಕೂಡಲೇ ಮುಖ್ಯಮಂತ್ರಿಗಳು ಹಾಗೂ ಕೃಷಿ ಸಚಿವರು ಶೀಘ್ರವೇ ಜಂಟಿ ಸರ್ವೆ ಕಾರ್ಯ ಮುಗಿಸಿ ಪಂಜಾಬ್ ಸರ್ಕಾರದ ಮಾದರಿಯಲ್ಲಿ ಎಕರೆಗಳಲ್ಲಿ ಪರಿಹಾರ ಧನವನ್ನು ಮರು ಘೋಷಿಸಬೇಕೆಂದು ಜಗದೀಶ್ ವಿ. ಸದಂ ಒತ್ತಾಯಿಸಿದ್ದಾರೆ.

ಪಂಜಾಬ್ ರೀತಿ ರಾಜ್ಯದ ರೈತರಿಗೂ ಪ್ರತಿ ಎಕರೆಗೆ 20 ಸಾವಿರ ಪರಿಹಾರಕ್ಕೆ ಆಪ್ ಆಗ್ರಹ Read More

ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು

ಪಂಜಾಬ್: ನವದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿ,ಬೇಹುಗಾರಿಕೆಯಲ್ಲಿ ಪಾಲ್ಗೊಂಡ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮಲೇರ್ಕೋಟ್ಲಾ ಪೊಲೀಸರು ಬಂಧಿಸಿದ್ದಾರೆ.

ಈ‌ ವುಷಯವನ್ನು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ಗೌರವ್ ಯಾದವ್(ಡಿಜಿಪಿ) ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಮೇರೆಗೆ ಕಾರ್ಯನಿರ್ವಹಿಸುತ್ತಾ, ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ಸೋರಿಕೆ ಮಾಡಿದ್ದಕ್ಕಾಗಿ ಒಬ್ಬನನ್ನು ಬಂಧಿಸಲಾಗೆದೆ,ಈತನ ಬಂಧನದಿಂದ ಲಭ್ಯವಾದ ಮಾಹಿತಿಯ ಆಧಾರದಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ರಹಸ್ಯ ಮಾಹಿತಿಯನ್ನು ರವಾನಿಸಿ ಆನ್‌ಲೈನ್ ವಹಿವಾಟಿನ ಮೂಲಕ ಪಾವತಿಗಳನ್ನು ಪಡೆಯುತ್ತಿದ್ದರು ಎಂದು ಡಿಜಿಪಿ ಹೇಳಿದ್ದಾರೆ.

ಆರೋಪಿಗಳಿಬ್ಬರೂ ಹ್ಯಾಂಡ್ಲರ್ ಜೊತೆ ಆಗಾಗ್ಗೆ ಸಂಪರ್ಕದಲ್ಲಿದ್ದರು ಮತ್ತು ಅವರ ಸೂಚನೆಯಂತೆ ಇತರ ಸ್ಥಳೀಯ ಕಾರ್ಯಕರ್ತರಿಗೆ ಹಣ ರವಾನಿಸುವಲ್ಲಿ ಭಾಗಿಯಾಗಿದ್ದರು. ಬಂಧಿತರಿಂದ ಎರಡು ಮೊಬೈಲ್ ಫೋನ್‌‌ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು Read More

ಮಾದಕ ದ್ರವ್ಯ ಹೊಂದಿದ್ದ ಮಹಿಳಾಕಾನ್‌ಸ್ಟೇಬಲ್‌ ಅರೆಸ್ಟ್

ಚಂಡೀಗಢ,ಏ.4: ದುಷ್ಟರಿಗೆ ಶಿಕ್ಷೆ ಕೊಡಬೇಕಾದ ಪೊಲೀಸ್ ಕೆಟ್ಟ ಕೆಲಸ ಮಾಡಿ ಶಿಕ್ಷೆ ಅನುಭವಿಸಬೇಕಾಗಿ ಬಂದ ಪ್ರಕರಣ ಚಂಡೀಗಢ ದಲ್ಲಿ ನಡೆದಿದೆ.

2 ಕೋಟಿ ಮೌಲ್ಯದ ಹೆರಾಯಿನ್‌ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್‌ ಒಬ್ಬರನ್ನು ಬಂಧಿಸಲಾಗಿದೆ.

17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್‌ಸ್ಟೇಬಲ್ ಅಮನ್‌ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಆಕೆಯನ್ನು ಜಿಲ್ಲಾ ನ್ಯಾಯಾಲಯ ಒಂದು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಆಕೆಯ ಆಸ್ತಿಗಳ ತನಿಖೆ ನಡೆಯುತ್ತಿದೆ.

ಆರೋಪಿಯು ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಆಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿ ಪ್ರಧಾನ ಕಚೇರಿಯ ಸುಖ್‌ಚೈನ್ ಸಿಂಗ್ ಗಿಲ್ ತಿಳಿಸಿದ್ದಾರೆ.

ಈ ಹಿಂದೆ ಪೊಲೀಸರು ಕಾನ್‌ಸ್ಟೇಬಲ್ ಮೇಲೆ ಡೋಪ್ ಪರೀಕ್ಷೆ ನಡೆಸಿದ್ದರು. ಆದರೆ ಅದು ನೆಗೆಟಿವ್ ಬಂದಿತ್ತು. ನಗರ ಡಿಎಸ್‌ಪಿ ಹರ್ಬನ್ಸ್ ಸಿಂಗ್ ಧಲಿವಾಲ್, ಗೌಪ್ಯ ಮಾಹಿತಿಯ ಆಧಾರದ ಮೇಲೆ ಪೊಲೀಸರ ತಂಡವು ಲಾಡ್ಲಿ ಧಿ ಚೌಕ್ ಬಳಿಯ ಮೇಲ್ಸೇತುವೆಯ ಕೆಳಗೆ ಚೆಕ್‌ಪಾಯಿಂಟ್ ಅನ್ನು ಸ್ಥಾಪಿಸಿತು.

ಈ ವೇಳೆ, ಅಮನ್‌ದೀಪ್ ಕಾರನ್ನು ತಡೆದು ತಪಾಸಣೆಗೆ ಒಳಪಡಿಸಿದಾಗ ಅದರಲ್ಲಿ 17.71 ಮಿ.ಗ್ರಾಂ ಹೆರಾಯಿನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದಕ ದ್ರವ್ಯ ಹೊಂದಿದ್ದ ಮಹಿಳಾಕಾನ್‌ಸ್ಟೇಬಲ್‌ ಅರೆಸ್ಟ್ Read More

ಪಂಜಾಬ್ ಮಾಜಿ ಡಿಸಿಎಂ ಬಾದಲ್ ಮೇಲೆ ಗುಂಡಿನ ದಾಳಿ

ಚಂಡೀಗಢ: ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್‌ನ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದ ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾರೆ.

ಬಾದಲ್ ಅವರು ಶಿರೋಮಣಿ ಅಕಾಲಿ ದಳದ ನಾಯಕ,ಪಂಜಾಬ್ ಮಾಜಿ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

ಇದೀಗ ಧಾರ್ಮಿಕ ಶಿಕ್ಷೆಯ ಭಾಗವಾಗಿ ಗೋಲ್ಡನ್ ಟೆಂಪಲ್‌ ಪ್ರವೇಶದ್ವಾರದ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಬೆಳಿಗ್ಗೆ ತಪಸ್ಸಿಗೆ ಕುಳಿತಾಗ ದುಷ್ಕರ್ಮಿ ಗುಂಡಿನ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದ.

ಆರೋಪಿಯನ್ನು ಅಮೃತಸರದಿಂದ ಸುಮಾರು 75 ಕಿ.ಮೀ ದೂರದಲ್ಲಿರುವ ಗುರುದಾಸ್‌ಪುರ ಜಿಲ್ಲೆಯ ದಾಲ್ ಖಾಲ್ಸಾದ ನರೇನ್ ಸಿಂಗ್ ಚೋರ್ಹಾ ಎಂದು ಗುರುತಿಸಲಾಗಿದೆ.

ಗುಂಡು ಹಾರಿಸುತ್ತಿದ್ದಾಗಲೇ ಅಲ್ಲಿನ ಜನರು ಆತನ ಮೇಲೆ ಹಲ್ಲೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾದಲ್ ಅವರು 2007 ರಿಂದ 2017 ರವರೆಗೆ ಪಂಜಾಬ್‌ ಉಪಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಪ್ರತಿಷ್ಠೆಗೆ ಧಕ್ಕೆ ತರುವಂತಹ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದರು.

ಆದ್ದರಿಂದ ಬಾದಲ್ ಅವರಿಗೆ ಹಾಗೂ ಅಕಾಲಿದಳದ ಇನ್ನಿತರ ನಾಯಕರಿಗೆ ತಂಖಾ (ಧಾರ್ಮಿಕ ಶಿಕ್ಷೆ) ಘೋಷಿಸಲಾಗಿತ್ತು.

ಸೇವಾದರ್ ಅಡಿಯಲ್ಲಿ ಪಾತ್ರೆ ತೊಳೆಯಲು, ಬೂಟು ಸ್ವಚ್ಛಗೊಳಿಸಲು ತಿಳಿಸಲಾಗಿತ್ತು. ಡಿ.3ರಂದು ಬಾದಲ್ ಗೋಲ್ಡನ್ ಟೆಂಪಲ್‌ನಲ್ಲಿ ತಪಸ್ಸು ಆರಂಭಿಸಿದ್ದರು.

ಕಳೆದ ಎರಡು ದಿನಗಳಿಂದ ಬಾದಲ್ ಒಂದು ಕೈಯಲ್ಲಿ ಈಟಿ ಹಿಡಿದು, ನೀಲಿ `ಸೇವಾದರ್’ ಸಮವಸ್ತ್ರವನ್ನು ಧರಿಸಿ ಗೋಲ್ಡನ್ ಟೆಂಪಲ್‌ನ ಗೇಟ್ ಬಳಿ ವ್ಹೀಲ್ ಚೇರ್‌ನಲ್ಲಿ ಕುಳಿತಿದ್ದರು.

ಸಿಸಿಟಿವಿ ದೃಶ್ಯಗಳಲ್ಲಿ ದಾಳಿಕೋರ ನಿಧಾನವಾಗಿ ಗೇಟ್ ಬಳಿ ಬಂದು ಬಂದೂಕನ್ನು ಹೊರತೆಗೆದು ಬಳಿಕ ಗುಂಡಿನ ದಾಳಿ ನಡೆಸಿರುವುದು ಸೆರೆಯಾಗಿದೆ.

ನರೇನ್ ಸಿಂಗ್ ಖಲಿಸ್ತಾನಿ ಭಯೋತ್ಪಾದಕರ ಗುಂಪು ಬಬ್ಬರ್ ಖಾಲ್ಸಾ ಜೊತೆ ಸಂಪರ್ಕ ಹೊಂದಿದ್ದಾನೆ. 2004ರಲ್ಲಿ 94 ಅಡಿ ಸುರಂಗವನ್ನು ಅಗೆದು ಜೈಲಿನಿಂದ ತಪ್ಪಿಸಿಕೊಂಡಿದ್ದ ಬುರೈಲ್ ಜೈಲ್ ಬ್ರೇಕ್ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಬಬ್ಬರ್ ಖಾಲ್ಸಾ ಜೊತೆ ಸಂಬಂಧವಿದೆ ಎಂದು ಮೂಲಗಳು ತಿಳಿಸಿವೆ.

ಪಂಜಾಬ್ ಮಾಜಿ ಡಿಸಿಎಂ ಬಾದಲ್ ಮೇಲೆ ಗುಂಡಿನ ದಾಳಿ Read More