ಗ್ರೇಡೆಡ್ ನಕ್ಸಲ್‌ ವಿಕ್ರಂ ಗೌಡ ಎನ್ ಕೌಂಟರ್:ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ಪೊಲೀಸರು ಸೋಮವಾರ ಸಂಜೆ ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ವಿಕ್ರಂ ಗೌಡನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಸೋಮವಾರ ಸಂಜೆ ವಿಕ್ರಂ ಗೌಡನ ಎನ್‌ಕೌಂಟರ್ ಆಗಿದೆ ಎಂದು ತಿಳಿಸಿದರು.

ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ.ಆಗ‌ ಪೊಲೀಸರು ಪ್ರತಿದಾಳಿ ನಡೆಸಿ ಎನ್‌ಕೌಂಟರ್ ಮಾಡಿದ್ದಾರೆ.ಈ‌ ವೇಳೆ ವಿಕ್ರಂ ಜೊತೆಯಲ್ಲಿದ್ದ ಕೆಲವರು ಓಡಿ ಹೋಗಿದ್ದಾರೆ, ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ ಎಂದು ಮಾಹಿತಿ ನೀಡಿದರು.

ವಿಕ್ರಂ ಗೌಡನ ಮೇಲೆ ತೀವ್ರ ನಿಗಾ ಇಟ್ಟಿದ್ದ ಪೊಲೀಸರು,ನಿನ್ನೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಮಾಡಿದ್ದಾರೆ ಎಂದು ಹೇಳಿದರು.

ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದಾರೆ. ಅವರಿಬ್ಬರೂ ತಪ್ಪಿಸಿಕೊಂಡು ಹೋಗಿದ್ದು ಕೂಂಬಿಂಗ್ ನಡೆಸಲಾಯಿತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದಂತೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿದೆ, ಆ ಸಂದರ್ಭದಲ್ಲಿ ಪೊಲೀಸರಿಗೆ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡುವುದು ಅನಿವಾರ್ಯವಾಯಿತು ಎಂದು ಪರಮೇಶ್ವರ್ ತಿಳಿಸಿದರು.

ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರ ಜತೆ ಮಾತುಕತೆ ನಡೆಸಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ‌‌ ಎಂದು ತಿಳಿಸಿದರು.

ಗ್ರೇಡೆಡ್ ನಕ್ಸಲ್‌ ವಿಕ್ರಂ ಗೌಡ ಎನ್ ಕೌಂಟರ್:ಪರಮೇಶ್ವರ್ ಸ್ಪಷ್ಟನೆ Read More

ಮುಡಾ ವಿಚಾರದಲ್ಲಿ ಸಿದ್ದರಾಮಯ್ಯಗೆ ಯಾವುದೇ ಆತಂಕ ಇಲ್ಲ:ಪರಮೇಶ್ವರ್

ಬೆಂಗಳೂರು: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಆತಂಕ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂಗೆ ಯಾವುದೇ ಆತಂಕ ಇಲ್ಲ, ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ ಎಂದು ತಿಳಿಸಿದರು.

ಇದರಲ್ಲಿ ಸಿದ್ದರಾಮಯ್ಯ ಅವರ ತಪ್ಪು ಏನೂ ಇಲ್ಲ, ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ, ತಾವು ಕಾನೂನು ಬಾಹಿರ ತಪ್ಪು ಮಾಡಿಲ್ಲ ಅಂತ ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅಂತಾ ಅವರು ಹೇಳ್ತಾನೇ ಇದ್ದಾರೆ ಎಂದು ಪರಂ ಸಿದ್ದು ಪರ ಬ್ಯಾಟಿಂಗ್ ಮಾಡಿದರು.

ಸಿಎಂ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ಇತ್ತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಹೇಳಿದ ಕೆಲವು ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿದೆವು. ಇಲ್ಲಿನ ವಿದ್ಯಮಾನ, ಕೋರ್ಟ್ ನಡೆ ನೋಡಿಕೊಂಡು ನಂತರ ರಾಷ್ಟ್ರಪತಿಗಳ ಭೇಟಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಮುಡಾ ವಿಚಾರದಲ್ಲಿ ಸಿದ್ದರಾಮಯ್ಯಗೆ ಯಾವುದೇ ಆತಂಕ ಇಲ್ಲ:ಪರಮೇಶ್ವರ್ Read More