ಪರಪ್ಪನ ಅಗ್ರಹಾರ ಜೈಲಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣ- ಎನ್‌ಐಎ ತನಿಖೆಗೆ ಅಶೋಕ ಆಗ್ರಹ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆದ ಘಟನೆ ಭಯೋತ್ಪಾದನಾ ಕೃತ್ಯ ಎಂಬ ಅನುಮಾನವಿದೆ. ಇದೇ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಬ್ಬ ಭಯೋತ್ಪಾದಕ ಮೊಬೈಲ್‌ ಬಳಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚು ತನಿಖೆ ಮಾಡಿದರೆ ಹೊಸ ವಿಚಾರಗಳು ಗೊತ್ತಾಗುತ್ತದೆ. ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಡಾಕ್ಟರ್‌ಗಳು ಸೇರಿದಂತೆ ಹೆಚ್ಚು ಶಿಕ್ಷಣ ಪಡೆದ ಮುಸ್ಲಿಮರೇ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಈ ಬಗ್ಗೆ ಹೆಚ್ಚು ಎಚ್ಚರ ವಹಿಸಬೇಕಿದೆ, ಅಧಿಕಾರಕ್ಕೆ ಬರಲು ಓಲೈಕೆ ಮಾಡುವುದರಿಂದ ಹೀಗೆಲ್ಲ ಆಗುತ್ತಿದೆ ಎಂದು ಟೀಕಿಸಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲೂ ಕಾಂಗ್ರೆಸ್‌ ತಪ್ಪಿನಿಂದಲೇ ಉಗ್ರವಾದಿಗಳು ಮೊಬೈಲ್‌ ಬಳಸುವಂತಾಗಿದೆ. ಇಂತಹ ವಿಫಲತೆಯನ್ನು ಒಪ್ಪಿಕೊಂಡು ಕಾಂಗ್ರೆಸ್‌ ನಾಯಕರು ರಾಜೀನಾಮೆ ನೀಡಬೇಕು ಎಂದು ಅಶೋಕ್ ಒತ್ತಾಯಿಸಿದರು.

ಇದು ಮನಮೋಹನ್‌ ಸಿಂಗ್‌ ಸರ್ಕಾರವಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಭಯೋತ್ಪಾದಕರಿಗೆ ಯಾವುದೇ ವಿನಾಯಿತಿ ನೀಡುವುದಿಲ್ಲ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಈ ಘಟನೆಯ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮ ವಹಿಸಲಿದೆ. ಕಾಂಗ್ರೆಸ್‌ ಇದ್ದಾಗ ನಕ್ಸಲ್‌ ಚಟುವಟಿಕೆ ಅಧಿಕವಾಗಿತ್ತು. ಅದನ್ನು ಗೃಹ ಸಚಿವ ಅಮಿತ್‌ ಶಾ ಬಹುತೇಕ ನಿರ್ಮೂಲನೆ ಮಾಡಿದ್ದಾರೆ. ಅದೇ ರೀತಿ ಭಯೋತ್ಪಾದನೆ ಕೂಡ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಕೇವಲ ಸುತ್ತೋಲೆ ಹೊರಡಿಸಿದರೆ ಸಾಲದು. ಗೃಹಸಚಿವರು ಹಾಗೂ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಜನರಲ್ಲಿ ವಿಶ್ವಾಸ ತುಂಬಬೇಕು. ಸಾಧ್ಯವಾದಷ್ಟು ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಮೇಲೆ ಜನರಿಗೆ ನಂಬಿಕೆ ಇಲ್ಲ. ಪಾಕಿಸ್ತಾನವನ್ನು ಕಾಂಗ್ರೆಸ್‌ ಪ್ರೀತಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ವ್ಯಂಗ್ಯ ಚಾಟಿ ಬೀಸಿದರು.

ಬಿಜೆಪಿಯಿಂದ ಜಿಬಿಎ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೀಗ ವಿಧಾನಸಭಾ ಚುನಾವಣೆ ನಡೆಯುವ ಸ್ಥಿತಿ ಬಂದಿದೆ. ಯಾವ ಚುನಾವಣೆ ಮೊದಲು ಬರಲಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಅಶೋಕ್ ಮಾರ್ಮಿಕವಾಗಿ ನುಡಿದರು.

ಪರಪ್ಪನ ಅಗ್ರಹಾರ ಜೈಲಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣ- ಎನ್‌ಐಎ ತನಿಖೆಗೆ ಅಶೋಕ ಆಗ್ರಹ Read More

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿತ್ಯ;ಗಂಭೀರ ಕ್ರಮ-ಸಿಎಂ

ದಾವಣಗೆರೆ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು ನೀಡಿರುವ ಬಗ್ಗೆ ಸೋಮವಾರ ಗೃಹ ಸಚಿವರು ಸಭೆ ಕರೆದಿದ್ದಾರೆ, ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ
ಮಾಧ್ಯಮದವರೊಂದಿಗೆ ಮಾತನಾಡಿದ‌ ಸಿಎಂ, ಇನ್ನು ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂಬ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಆರ್.ಎಸ್.ಎಸ್ ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಹೇಳಿದೆ, ಅವರು ಹಾಗೆ ಭಾವಿಸಿಕೊಂಡಿದ್ದಾರೆ,ಆದರೆ ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದು ಗರಂ ಆಗಿ ನುಡಿದರು.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ,ನ್ಯಾಯಾಲಯ ಯಾವಾಗ ಮಾಡಬೇಕೆಂದು ಸೂಚಿಸುತ್ತದೊ ಆಗ ಚುನಾವಣೆ ನಡೆಸಲಾಗುವುದು ಎಂದು ಉತ್ತರಿಸಿದರು.

ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರದ ತೀರ್ಮಾನದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರಲ್ಲಾ ಎಂದು ಕೇಳಿದ್ದಕ್ಕೆ ಅವರ ಸಮ್ಮುಖದಲ್ಲಿಯೇ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.

ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಪರೋಕ್ಷವಾಗಿ ಬಸವನ ಗೌಡ ಪಾಟೀಲ್ ಯತ್ನಾಳ್ ಗೆ ತಿರುಗೇಟು ನೀಡಿದರು.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿತ್ಯ;ಗಂಭೀರ ಕ್ರಮ-ಸಿಎಂ Read More

ಜೈಲಿನಲ್ಲಿ ದರ್ಶನ್​ಗೆ ವಾಕಿಂಗ್​ ಹೊರತು ಎಲ್ಲ ನಿಯಮ ಪಾಲನೆ

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್​ಗೆ ಬಿಸಿಲಿನಲ್ಲಿ ವಾಕ್ ಮಾಡಲು ಅವಕಾಶ ಹೊರತುಪಡಿಸಿ ಜೈಲಿನ ಎಲ್ಲಾ ನಿಯಮಗಳ ಪಾಲನೆಯಾಗಿದೆ ಎಂದು ಕಾನೂನು ಸೇವಾ ಪ್ರಾಧಿಕಾರ ಕೋರ್ಟ್​ಗೆ ನೀಡಿದ ವರದಿಯಲ್ಲಿ ತಿಳಿಸಲಾಗಿದೆ.

ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್​​ ಗೆ ಮೂಲಸೌಕರ್ಯ ಒದಗಿಸದ ಆರೋಪ ಸಂಬಂಧ ಖುದ್ದು ತೆರಳಿ ಪರಿಶೀಲಿಸುವಂತೆ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ,
ಕಾನೂನು ಸೇವಾ ಪ್ರಾಧಿಕಾರವು
ಸ್ಥಳ ಪರಿಶೀಲನೆ ನಡೆಸಿತು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಆರೋಗ್ಯ ದೃಷ್ಠಿಯಿಂದ ಬಿಸಿಲಿನಲ್ಲಿ ವಾಕ್ ಮಾಡಲು ಅವಕಾಶ ಕಲ್ಪಿಸಬೇಕು ಅದು ಬಿಟ್ಟರೆ, ಜೈಲಿನ ಕೈಪಿಡಿ ಅನುಸಾರ ಎಲ್ಲ ನಿಯಮ ಪಾಲನೆಯಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ದರ್ಶನ್​​ಗೆ ಕನಿಷ್ಠ ಮೂಲಸೌಕರ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ನಗರದ 57ನೇ ಸಿಸಿಹೆಚ್ ನ್ಯಾಯಾಲಯದ ಗಮನಕ್ಕೆ ತರಲಾಗಿತ್ತು.

ಜೈಲಿನ ಕೈಪಿಡಿ ಅನುಸಾರ ಸೌಲಭ್ಯ ಒದಗಿಸಬೇಕೆಂದು ಕೋರ್ಟ್ ಹೇಳಿತ್ತು. ಆದರೂ ಜೈಲಾಧಿಕಾರಿಗಳು ನ್ಯಾಯಾಲಯ ಆದೇಶವನ್ನ ಧಿಕ್ಕರಿಸಿದ್ಧಾರೆ ಎಂದು ದರ್ಶನ್ ಪರ ವಕೀಲರು ಆರೋಪಿಸಿದ್ದರು.

ಈ ಬಗ್ಗೆ ಖುದ್ದು ಜೈಲಿಗೆ ಬಂದು ಪರಿಶೀಲಿಸುವಂತೆ ದರ್ಶನ್ ಪರ ವಕೀಲರು ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ್ದ ನ್ಯಾಯಾಲಯವು ಕಾನೂನು ಸೇವಾ ಪ್ರಾಧಿಕಾರಕ್ಕೆ ಜೈಲಿಗೆ ಭೇಟಿ ನೀಡಿ ಅ.18ರೊಳಗೆ ವರದಿ ನೀಡುವಂತೆ ಸೂಚಿಸಿತ್ತು.

ಅದರಂತೆ ಬೆಂಗಳೂರು ನಗರ ಜಿಲ್ಲಾ ವಿಭಾಗದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಬಿ.ವರದರಾಜು ಅವರು ಕಳೆದ ಮಂಗಳವಾರ ತೆರಳಿ ಪರಿಶೀಲಿಸಿ, ಕೋರ್ಟ್​​ಗೆ ವರದಿ ನೀಡಿದ್ಧಾರೆ.

ನ್ಯಾಯಾಲಯದ ಆದೇಶದ ಅನುಸಾರ ಕಳೆದ ಮಂಗಳವಾರ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿದ್ದ ವರದರಾಜು ಅವರು ದರ್ಶನ್ ಆರೋಗ್ಯ ವಿಚಾರಿಸಿ,ನಂತರ ಅವರು ಇರುವ ಬ್ಯಾರಕ್​ನ್ನು ಪರಿಶೀಲಿಸಿದ್ದರು. ಅಲ್ಲದೇ, ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳ ಬಗ್ಗೆ ತಕರಾರು ಎತ್ತಿರುವ ಅಂಶಗಳ ಬಗ್ಗೆ ದರ್ಶನ್ ಜೊತೆ ಖುದ್ದು ಚರ್ಚಿಸಿದ್ದರು.

ದರ್ಶನ್ ಇರುವ ಬ್ಯಾರಕ್​​ನಲ್ಲಿ ಇಂಡಿಯನ್ ಹಾಗೂ ವೆಸ್ಟರ್ನ್ ಶೈಲಿಯ ಎರಡು ಶೌಚಾಲಯಗಳಿವೆ. ಹಾಸಿಗೆ, ದಿಂಬು ಕೊಟ್ಟಿಲ್ಲವೆಂಬ ಆರೋಪ ಸಂಬಂಧ ವಿಚಾರಣಾಧೀನ ಕೈದಿಗೆ ಹಾಸಿಗೆ, ದಿಂಬಿಗೆ ಅವಕಾಶವಿಲ್ಲ. ಇತರೆ ಕೈದಿಗಳಂತೆ ಬಿಸಿಲಿನಲ್ಲಿ ದರ್ಶನ್ ನಡೆದಾಡಲು ಬಿಟ್ಟಿಲ್ಲವೆಂಬ ತಕರಾರಿಗೆ ನಿಯಮದಂತೆ 1 ಗಂಟೆ ವಾಕಿಂಗ್ ಹಾಗೂ ಆಟವಾಡಲು ಅವಕಾಶ ನೀಡಬಹುದು. ಆದರೆ, ದರ್ಶನ್ ಸೆಲೆಬ್ರಿಟಿ ಆಗಿರುವುದರಿಂದ ಓಡಾಡಿದರೆ ಇತರ ಬ್ಯಾರಕ್​ನವರು ಕಿರುಚುತ್ತಾರೆ. ಅಕ್ಕಪಕ್ಕದ ಅಪಾರ್ಟ್​​​​​ ಮೆಂಟ್​​ಗಳಿಂದ ಫೋಟೋ ತೆಗೆಯುತ್ತಾರೆಂದು ಜೈಲಾಧಿಕಾರಿಗಳು ಆಕ್ಷೇಪಿಸಿದ್ದಾರೆ. ಜೈಲಿನ ಶಿಸ್ತುಪಾಲನೆ ಹಾಗೂ ನಿರ್ವಹಣೆ ಹೊರತುಪಡಿಸಿ, ವಾಕಿಂಗ್ ಮಾಡಲು ಹಾಗೂ ಆಟಕ್ಕೆ ‌ಅವಕಾಶ ನೀಡಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.

ಟಿ.ವಿ ನೀಡಿಲ್ಲವೆಂದು ದರ್ಶನ್ ತಕರಾರು ಸಂಬಂಧ. ಕೈದಿಗಳಿಗೆ ಟಿ.ವಿ ನೋಡಲು ಅವಕಾಶ ನೀಡಬಹುದು. ಆದರೆ, ಪ್ರತಿ ಬ್ಯಾರಕ್​ಗೆ ಟಿ.ವಿ ನೀಡಬೇಕು ಎಂಬ ನಿಯಮವಿಲ್ಲ. ಫೋನ್​ನಲ್ಲಿ ಮಾತನಾಡುವಾಗ ಸ್ಪೀಕರ್ ಆನ್ ಮಾಡಿಸುತ್ತಾರೆ ಎಂದು ದರ್ಶನ್ ಆಪಾದನೆಗೆ ಆರೋಪಿಗಳ ಮೇಲೆ ನಿಗಾ ಇಡುವ ದೃಷ್ಡಿಯಿಂದ ಕಾನೂನಿನಲ್ಲಿ ಅವಕಾಶವಿದೆ. ಆರೋಪಿಗಳಿಗೆ ತಿಳಿಸಿ ಫೋನ್ ಕಾಲ್ ರೆಕಾರ್ಡ್​​ಗೆ ನಿಯಮದಲ್ಲಿ ಅವಕಾಶವಿದೆ. ಈ ಬಗ್ಗೆ ಜೈಲಧಿಕಾರಿಗಳು ನಿಯಮ ರೂಪಿಸಿದ್ದಾರೆ ಎಂದು ವರದರಾಜು ಅವರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

ಸೂರ್ಯನ ಬೆಳಕಿಲ್ಲದೇ ಕಾಲಿಗೆ ಫಂಗಸ್ ಬಂದಿದೆ ಎಂಬ ದರ್ಶನ್ ಹೇಳಿದ್ದರು. ಪರಿಶೀಲನೆ ವೇಳೆ ಕಾಲಿನಲ್ಲಿ ಫಂಗಸ್ ಬಂದಿಲ್ಲ, ಹಿಮ್ಮಡಿಯಲ್ಲಿ ಬಿರುಕಿದೆ. ಈ ಬಗ್ಗೆ ಚರ್ಮರೋಗ ತಜ್ಞರು ಪರಿಶೀಲಿಸಿದ್ದಾರೆ. ಜೈಲಿನ ವೈದ್ಯಾಧಿಕಾರಿಗಳು ಎರಡು ದಿನಕ್ಕೊಮ್ಮೆ ಬ್ಯಾರಕ್​​ಗೆ ಭೇಟಿ ನೀಡುತ್ತಿದ್ದಾರೆ. ದರ್ಶನ್​ಗೆ ಫಿಸಿಯೋಥೆರಪಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಸೊಳ್ಳೆ ಬತ್ತಿ, ಕನ್ನಡಿ, ಬಾಚಣಿಗೆ ನೀಡಿಲ್ಲವೆಂಬ ಆಪಾದನೆಗೆ, ಸಜಾ ಬಂಧಿಗಳಿಗೆ ಮಾತ್ರ ಇವುಗಳನ್ನು ಕೊಡಬಹುದು. ವಿಚಾರಣಾಧೀನ ಕೈದಿಗೆ ಕೊಡಲು ಜೈಲು ನಿಯಮದಲ್ಲಿ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.ಹೀಗೆ ದರ್ಶನ್ ಗೆ ಸೌಲಭ್ಯಗಳನ್ನು ಹೆಚ್ಚುಕಡಿಮೆ ನಿರಾಕರಿಸಿ,ನಿರಾಸೆ ಉಂಟಾಗುವಂತಾಗಿದೆ.

ಜೈಲಿನಲ್ಲಿ ದರ್ಶನ್​ಗೆ ವಾಕಿಂಗ್​ ಹೊರತು ಎಲ್ಲ ನಿಯಮ ಪಾಲನೆ Read More

ದರ್ಶನ್ ಗೆ ರಿಲೀಫ್ ನೀಡಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ.

ವಿಚಾರಣೆ ವೇಳೆ‌ ನನಗೆ ಸ್ವಲ್ಪ ವಿಷ ಕೊಡಿ ನನಗೆ ಈ ನರಕ ಸಾಕಾಗಿದೆ ಎಂದಿದ್ದ ದರ್ಶನ್ ಗೆ ಕೆಲ ಬೇಡಿಕೆಗಳನ್ನು ಈಡೇರಿಸಲು ಕೋರ್ಟ್ ಸಮ್ಮತಿ ನೀಡಿದೆ.

ದರ್ಶನ್ ಅವರನ್ನು ಮತ್ತೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಅನುಮತಿ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 64ನೇ ಸೆಷನ್ಸ್ ಕೋರ್ಟ್​, ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ತಿಳಿಸಿದೆ.

ವಿಚಾರಣೆ ವೇಳೆ ದರ್ಶನ್, ಬಿಸಿಲು ನೋಡದೆ ಒಂದು ತಿಂಗಳಾಗಿದೆ. ಕೈಗೆ ಫಂಗಸ್ ಬಂದಿದೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡರು.

ಅದಕ್ಕೆ ನ್ಯಾಯಾಧೀಶರು ಹಾಗೆಲ್ಲಾ ನೀವು ಕೇಳುವಂತಿಲ್ಲ. ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ ಎಂದು ಹೇಳಿ, ಜೈಲಿನ ಆವರಣದಲ್ಲಿ ಓಡಾಡಲು ಅನುಮತಿ ನೀಡಿದ್ದಾರೆ.ಜತೆಗೆ
ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​, ಹಾಸಿಗೆ ನೀಡಲು ಆದೇಶಿಸಿದೆ.

ದರ್ಶನ್ ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದು ಕೂಡಾ ನ್ಯಾಯಾಲಯ ತಿಳಿಸಿದೆ.

ದರ್ಶನ್ ಗೆ ರಿಲೀಫ್ ನೀಡಿದ ಕೋರ್ಟ್ Read More