ಅಂಗಡಿಗಳಿಗೆ ಪ್ಲಾಸ್ಟಿಕ್ ಕವರ್ ಸಾಗಿಸುತ್ತಿದ್ದ‌ ವ್ಯಕ್ತಿಗೆ 5 ಸಾವಿರ ರೂ ದಂಡ

ಮೈಸೂರು: ಅಂಗಡಿಗಳಿಗೆ ಪ್ಲಾಸ್ಟಿಕ್ ಕವರ್ ವಿತರಣೆ ಮಾಡಲು ಹೋಗುತ್ತಿದ್ದ ವ್ಯಕ್ತಿಗೆ ನಗರಸಭೆ ಅಧಿಕಾರಿಗಳು‌‌ ಚಳಿ ಬಿಡಿಸಿದ್ದಾರೆ.

ಹೂಟಗಳ್ಳಿ ನಗರಸಭೆ ವ್ಯಾಪ್ತಿಯ ಬೆಳವಾಡಿ ಗ್ರಾಮದ ಅಂಗಡಿಗಳಿಗೆ ಪ್ಲಾಸ್ಟಿಕ್ ಕವರ್ ವಿತರಣೆ ಮಾಡಲು ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು‌ ದಂಡ ಹಾಕಿ ಕಠಿಣ ಎಚ್ಚರಿಕೆ ನೀಡಲಾಗಿದೆ.

ಆ ವ್ಯಕ್ತಿ ಸಾಗಿಸುತ್ತಿದ್ದ ಪ್ಲಾಸ್ಟಿಕ್ ಕವರ್ ಸೀಸ್ ಮಾಡಿ 5000 ರೂ ದಂಡ ವಿಧಿಸಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆಯ ಆರೋಗ್ಯಾಧಿಕಾರಿಗಳಾದ ನೇತ್ರಾವತಿ, ಶಂಕರ್ ಲಿಂಗೇಗೌಡ, ಶಿವಪ್ರಸಾದ್, ಪಂಚಾಯತ್ ಗ್ರಾಮ ಅಭಿವೃದ್ಧಿ ಸಂಸ್ಥೆಯ ಎನ್ ಜಿ ಒ ಅಧ್ಯಕ್ಷ ಯಾದವ್ ಹರೀಶ್ ಹಾಗೂ ನಗರ ಸಭೆಯ ಸಮುದಾಯ ಸಂಚಾಲಕರು ಹಾಜರಿದ್ದರು.

ಅಂಗಡಿಗಳಿಗೆ ಪ್ಲಾಸ್ಟಿಕ್ ಕವರ್ ಸಾಗಿಸುತ್ತಿದ್ದ‌ ವ್ಯಕ್ತಿಗೆ 5 ಸಾವಿರ ರೂ ದಂಡ Read More

ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿದರೆ ಕಠಿಣ ಕ್ರಮ:ಅರ್ಪಿತಾ

ಮೈಸೂರು, ಜು.1: ನಿಷೇಧಿತ ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಹಾನಿಕಾರಕ ಹಾಗಾಗಿ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಸಹಾಯಕ ಪರಿಸರ ಅಧಿಕಾರಿ ಅರ್ಪಿತಾ ಅಂಗಡಿ ಮಾಲೀಕರಿಗೆ ಸೂಚನೆ ನೀಡಿದರು.

ಕಡಕೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಬಂಡಿಪಾಳ್ಯ ಗ್ರಾಮದ ಎಪಿಎಂಸಿ ಆವರಣದಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ಇಂದು ನಿಷೇಧಿತ ಪ್ಲಾಸ್ಟಿಕ್ ರೈಡ್ ಹಮ್ಮಿಕೊಳ್ಳಲಾಯಿತು.

ಈ ಸಂಬಂಧ 1337 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಾಯಕ ಪರಿಸರ ಅಧಿಕಾರಿ ಅರ್ಪಿತಾ ಅವರು‌ ಅಂಗಡಿ,ಮಳಿಗೆಗಳವರಿಗೆ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಕಠಿಣ ಎಚ್ಚರಿಕೆ ನೀಡಿದರು.

ಈ ವೇಳೆ ಪಟ್ಟಣ ಪಂಚಾಯತಿ ಆರೋಗ್ಯ ನಿರೀಕ್ಷಕರಾದ ಮಂಜುನಾಥ್,ಪವನ್, ರಾಜಶೇಖರ್, ಅಕ್ಷತಾ, ಸುನಿಲ್, ಆನಂದ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿದರೆ ಕಠಿಣ ಕ್ರಮ:ಅರ್ಪಿತಾ Read More

ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ:ದಿನೇಶ್ ಗುಂಡೂರಾವ್

ಬೆಂಗಳೂರು: ಹಲವು ಹೊಟೇಲ್ ಗಳು, ಉಪಾಹಾರ ಕೇಂದ್ರಗಳು, ಬೀದಿಬದಿ ತಿನಿಸು ಕೇಂದ್ರಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಗಳನ್ನು ಬಳಸುವುದನ್ನು‌ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ.

ಈ ಪ್ಲಾಸ್ಟಿಕ್ ಬಳಕೆಯಿಂದ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಮಾದರಿ ಪರೀಕ್ಷೆಗಳಿಂದ ದೃಢಪಟ್ಟಿದೆ.

ವಿವಿಧ ತಿನಿಸು ಕೇಂದ್ರಗಳಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು ಶೇಕಡಾ 50ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು ಇನ್ನು ಮುಂದೆ ಬಳಸುವಂತಿಲ್ಲ. ಆಹಾರ ತಯಾರಿಕೆ, ವಿತರಣೆ ವೇಳೆ ಕೂಡ ಪ್ಲಾಸ್ಟಿಕ್ ಬಳಸಬಾರದು. ಆಹಾರದ ಬಿಸಿಗೆ ಪ್ಲಾಸ್ಟಿಕ್ ನಿಂದ ಹೊರಸೂಸುವ ಪದಾರ್ಥಗಳು ವಿಷಕಾರಿಯಾಗುತ್ತಿದ್ದು ಕ್ಯಾನ್ಸರ್ ಕಾರಕ ಅಂಶಗಳನ್ನು ಸಹ ಹೊರಸೂಸುತ್ತದೆ ಎಂದು ವರದಿಯಿಂದ ದೃಢಪಟ್ಟಿದೆ, ಈ ಹಿನ್ನೆಲೆಯಲ್ಲಿ ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬದಲಿಗೆ ಬಟ್ಟೆಯನ್ನೇ ಬಳಸಬೇಕು ಎಂದು ಕಡ್ಡಾಯವಾಗಿ ನಿಯಮ ಹೊರಡಿಸಲಾಗುವುದು ಎಂದು ತಿಳಿಸಿದರು.

ಹೊಟೇಲ್, ಉಪಹಾರ ಕೇಂದ್ರಗಳು ಸೇರಿದಂತೆ ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಪ್ಲಾಸ್ಟಿಕ್ ನಲ್ಲಿ ಬಿಸಿ ಮಾಡಿದ ಆಹಾರಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಪ್ಲಾಸ್ಟಿಕ್​ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಎಂದು ಹೇಳಿದರು.

ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ:ದಿನೇಶ್ ಗುಂಡೂರಾವ್ Read More