ದೆಹಲಿ ಸ್ಪೋಟ:ಮೈಸೂರಿನಲ್ಲಿ ಹೈ ಅಲರ್ಟ್

ಮೈಸೂರು: ದೆಹಲಿಯಲ್ಲಿ ಸ್ಪೋಟ ನಡೆದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

ಡಿಜಿ-ಐಜಿ ಡಾ.ಸಲೀಂ‌ ಅವರ ಸೂಚನೆ ಮೇರೆಗೆ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾತ್ರಿ ಮೈಸೂರು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ವಿವಿಧ ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಡಿಸಿಪಿಗಳು ಎಸಿಪಿಗಳು, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಗಳು, ಪೊಲೀಸರು ಎಲ್ಲೆಡೆ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ.

ರೈಲು ನಿಲ್ದಾಣದ ಫ್ಲ್ಯಾಟ್‌ಫಾರಂ ಸೇರಿ ಹಲವು ಕಡೆ ತಪಾಸಣೆ ಮಾಡಲಾಗಿದೆ. ಪ್ರಯಾಣಿಕರ ಲಗೇಜು‌ ಒಳಗೊಂಡಂತೆ ಸಂಪೂರ್ಣ ತಪಾಸಣೆ ಮಾಡಲಾಗಿದೆ.

ತಪಾಸಣೆ ಮತ್ತಷ್ಟು ಚುರುಕುಗೊಳಿಸಲಾಗುತ್ತದೆ, ಮೈಸೂರು ಅರಮನೆ ಸೇರಿದಂತೆ ಪ್ರವಾಸಿ ತಾಣಗಳು, ಮಾಲ್, ಪಾರ್ಕಿಂಗ್ ಸ್ಥಳಗಳು, ಹೋಟೆಲ್, ಲಾಡ್ಜ್‌ಗಳು, ದೇವಸ್ಥಾನಗಳು ಸೇರಿದಂತೆ ಎಲ್ಲಾ ಕಡೆ ಸಂಪೂರ್ಣ ಪರಿಶೀಲನೆ ನಡೆಸಲಾಗುತ್ತದೆ.

ಮೈಸೂರು ನಗರದಲ್ಲಿ ಶಾಂತಿ, ಸುರಕ್ಷತೆ ನಮ್ಮ ಆದ್ಯತೆಯಾಗಿದ್ದು ಸಾರ್ವಜನಿಕರು ಕೂಡಾ ಪೊಲೀಸರಿಗೆ ಸಹಕಾರ ನೀಡುವಂತೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮನವಿ ಮಾಡಿದ್ದಾರೆ.

ಎಲ್ಲಾದರೂ ಅನುಮಾನಾಸ್ಪದ ವಸ್ತುಗಳು, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿಯನ್ನು ನೀಡುವ ಮೂಲಕ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಲು ಸಹಕರಿಸಬೇಕೆಂದು ಕಮಿಷನರ್ ಕೋರಿದ್ದಾರೆ.

ದೆಹಲಿ ಸ್ಪೋಟ:ಮೈಸೂರಿನಲ್ಲಿ ಹೈ ಅಲರ್ಟ್ Read More

ಜಂಬೂಸವಾರಿ,ಪಂಜಿನ ಕವಾಯತು:ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ

ಮೈಸೂರು: ಈ‌ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಹಲವು‌ ನಿಯಮಗಳನ್ನು ಜಾರಿ‌ ಮಾಡಿದೆ.

ಈ‌ ಬಾರಿ ಕಡ್ಡಾಯವಾಗಿ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ನಿಗದಿತ ಪಾಸ್ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು, ಪಾಸ್ ಇಲ್ಲದವರಿಗೆ ಖಂಡಿತಾ ಪ್ರವೇಶ ಇರುವುದಿಲ್ಲ ಎಂದು‌ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಬರುವವರು ನಿಗದಿತ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕ್ ಮಾಡಬೇಕು, ಜಂಬೂ ಸವಾರಿ ಸಾಗುವ ರಸ್ತೆಯಲ್ಲಿ ಹಲವು ಶಿಥಿಲಗೊಂಡ ಕಟ್ಟಡಗಳಿದ್ದು ಈ ಬಾರಿ ಆ ಕಟ್ಟಡಗಳ ಮೇಲೆ ಕುಳಿತು ಮೆರವಣಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಕಮಿಷನರ್ ಪ್ರಕಟಣೆ ಹೊರಡಿಸಿದ್ದಾರೆ‌

ಭದ್ರತೆಗೆ ನಿಯೋಜನೆಗೊಂಡ ಪೊಲೀಸರು ನೀಡುವ ಸಲಹೆ ಸೂಚನೆಯನ್ನು ತಪ್ಪದೆ ಪಾಲಿಸಬೇಕು. ಇದು ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ದುರ್ಘಟನೆ ಹಾಗೂ ನಟ ವಿಜಯ್ ರ‌್ಯಾಲಿಯಲ್ಲಿ ನಡೆದ ಅವಘಡಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಸಾರ್ವಜನಿಕರ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಸೀಮಾ ಲಾಟ್ಕರ್ ಅವರು ನಾಡಿನ ಜನರಿಗೆ ಆಯುಧಪೂಜೆ ಹಾಗೂ ನಾಡಹಬ್ಬದ ಜಂಬೂಸವಾರಿ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಜಂಬೂಸವಾರಿ,ಪಂಜಿನ ಕವಾಯತು:ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ Read More