ಒನಕೆ ಓಬವ್ವನ ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ – ರೇಣುಕಾ ರಾಜ್

ಮೈಸೂರು: ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್ ತಿಳಿಸಿದರು.

ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ‌ ಏರ್ಪಡಿಸಿದ್ದ
ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಕಾರ್ಯಕ್ರಮವನ್ನು ಗಿಡ ನೆಟ್ಟು ನೀರು ಹಾಕಿ
ಚಾಲನೆ ನೀಡಿ ಮಾತನಾಡಿದರು.

ಎದುರಾಳಿ ಸೈನಿಕರು ಕೋಟೆಯನ್ನು ಮುತ್ತಿದಾಗ ತನ್ನ ಮನೆಯಲ್ಲಿ ಆಹಾರ ಸಂಸ್ಕೃರಣೆಗೆ ಬಳಸುವಂತಹ ಒನಕೆಯನ್ನೇ ಆಯುಧವಾಗಿ ಬಳಸಿ ನೂರಾರು ಸೈನಿಕರ ರುಂಡಗಳನ್ನು ಚಂಡಾಡಿ, ಕೋಟೆಯನ್ನು ರಕ್ಷಿಸಿದ ಮಹಾಮಾತೆ ನಮ್ಮ ಓಬವ್ವ. ಇಂತಹವರ ಚರಿತ್ರೆಗಳು ನಾಡಿನಾಚೆಗೂ ಪಸರಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರಮೀಳಾ ಭರತ್
ಮಾತನಾಡಿ, ವೀರ ವನಿತೆ ಒನಕೆ ಓಬವ್ವ ನಮಗೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ ಎಂದು ತಿಳಿಸಿದರು.

ಮಹಿಳೆಯರು ಓಬವ್ವನ ಆದರ್ಶಗಳನ್ನು ಪಾಲಿಸುವ ಮೂಲಕ ನಾಡಿನ ಐಕ್ಯತೆಗೆ ಪಣತೊಡಬೇಕು.ಒಬ್ಬ ಕೋಟೆ ಕಾವಲುಗಾರನ ಹೆಂಡತಿಯಾಗಿ, ಕೋಟೆಗೆ ಆಪತ್ತು ಎದುರಾದಾಗ, ಸಮಯ ಪ್ರಜ್ಞೆಯಿಂದ ವೈರಿಗಳ ರುಂಡ ಚಂಡಾಡಿದ ವೀರ ವನಿತೆ ಓಬವ್ವ ಎಲ್ಲರಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.

ಜಗದೀಶ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಶ್ರುತಿ, ಅಪೂರ್ವ ಸುರೇಶ್, ಎಸ್ ಎನ್ ರಾಜೇಶ್, ಚರಣ್, ದಿನೇಶ್, ಸದಾಶಿವ್, ಸುಚೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

ಒನಕೆ ಓಬವ್ವನ ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ – ರೇಣುಕಾ ರಾಜ್ Read More

ಮರಾಠಿ ಪುಂಡರಿಗೆ ಕಠಿಣ ಶಿಕ್ಷೆ ನೀಡಿ:ಪ್ರಜ್ಞಾವಂತ ನಾಗರಿಕ ವೇದಿಕೆಯಿಂದ ಸಿಎಂಗೆಮನವಿ

ಮೈಸೂರು: ಬೆಳಗಾವಿಯಲ್ಲಿ
ಕರ್ತವ್ಯ ನಿರತ ಕೆ ಎಸ್ ಆರ್ ಟಿಸಿ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಮರಾಠಿ ಪುಂಡರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಪ್ರಜ್ಞಾವಂತ ನಾಗರಿಕ ವೇದಿಕೆ ಆಗ್ರಹಿಸಿದೆ‌

ಮರಾಠಿ ಪುಂಡರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಪ್ರಜ್ಞಾವಂತ ನಾಗರಿಕ ವೇದಿಕೆಯ ಪದಾಧಿಕಾರಿಗಳು ಮಂಗಳವಾರ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ರವರಿಗೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ನಗರಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್,
ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯ ಸುಳೇಬಾವಿ ಗ್ರಾಮದ ಹೊರವಲದುದಲ್ಲಿ ವಿಶ್ವ ಮಾತೃ ಭಾಷಾ
ದಿನದಂದೇ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಮರಾಠಿ ಪುಂಡರ ಗುಂಪು ಹಲ್ಲೆ ನಡೆಸಿದೆ ಇದು ಖಂಡನೀಯ ಎಂದು ಹೇಳಿದರು.

ಹಲ್ಲೆಗೆ ಒಳಗಾದವರು
ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನಡೆ ಯುತ್ತಿದ್ದರೂ ಇಲ್ಲಿನ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಇರುವುದು ವಿಷಾದನೀಯ
ಸಂಗತಿ. ಕೂಡಲೇ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಹಲ್ಲೆಕೋರರ ಮೇಲೆ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯುಸಿದರು.

ಎಂ.ಇ.ಎಸ್. ಕಾರ್ಯಕರ್ತರು ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳಿಗೆ ಕಪ್ಪು ಮಸಿ ಬಳಿದು, ನಾಲಿಗೆ ಹರಿಯಬಿಟ್ಟಿದ್ದು, ದಿನೆದಿನೇ ಇವರ ದಬ್ಬಾಳಿಕೆ ಹೆಚ್ಚುತ್ತಿದೆ ಎಂದು ಕಿಡಿಕಾರಿದರು.

ರಾಜ್ಯದ ಗಡಿಯಲ್ಲಿ ಅಶಾಂತಿ ಉಂಟು
ಮಾಡುತ್ತಿರುವ ಎಂ ಇ ಎಸ್ ಅನ್ನು ರದ್ದುಪಡಿಸಬೇಕು,
ಬಸ್ ನಿರ್ವಾಹಕನ ವಿರುದ್ಧದ ಪೋಕ್ಸೋ ಪ್ರಕರಣ ವಾಪಸು ಪಡೆಯಬೇಕು, ಕನ್ನಡ ವಿರೋಧಿ ಕೃತ್ಯಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಒಕ್ಕಲಿಗರ ಸಂಘದ ನಿರ್ದೇಶಕರಾದ ಎ.ರವಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್, ಸುಚಿಂದ್ರ, ಮಹಾನ್ ಶ್ರೇಯಸ್, ಅಜಯ್ ಶಾಸ್ತ್ರಿ ಮತ್ತಿತರರು ಹಾಜರಿದ್ದರು.

ಮರಾಠಿ ಪುಂಡರಿಗೆ ಕಠಿಣ ಶಿಕ್ಷೆ ನೀಡಿ:ಪ್ರಜ್ಞಾವಂತ ನಾಗರಿಕ ವೇದಿಕೆಯಿಂದ ಸಿಎಂಗೆಮನವಿ Read More