ಕಾಶಿ ಬಳಿ ಅಪಘಾತ:ಬೀದರ್ ನ ಐದು ಮಂದಿ ದುರ್ಮರಣ
ಲಕ್ನೋ: ರಸ್ತೆ ಅಪಘಾತ ಸಂಭವಿಸಿ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.
ಲಾರಿ ಮತ್ತು ಕ್ರೂಸರ್ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿ 5 ಮಂದಿ ಸ್ಥಳದಲ್ಲೇ ಮೃತಪಟ್ಟರೆ 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್ (43) ನೀಲಮ್ಮ (60) ಅನಿತಾ ಮೃತಪಟ್ಟ ನತದೃಷ್ಟರು.
ಒಂದೇ ಗಾಡಿಯಲ್ಲಿ ಒಟ್ಟು 14 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು.
ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ ಮೀಟರ್ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ.
ಕಾಶಿ ಬಳಿ ಅಪಘಾತ:ಬೀದರ್ ನ ಐದು ಮಂದಿ ದುರ್ಮರಣ Read More