ಡಿಸೆಂಬರ್ ನಲ್ಲಿ ಭಾರತಕ್ಕೆ ಪುಟಿನ್ ಭಾರತ ಭೇಟಿ

ನವದೆಹಲಿ: ಡಿಸೆಂಬರ್ ತಿಂಗಳಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಬರಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ,ಅವರು 23 ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 4 ರಂಸು ಭಾರತಕ್ಕೆ ಆಗಮಿಸಲಿದ್ದಾರೆ.

ಭಾರತ ಭೇಟಿಯ ಸಮಯದಲ್ಲಿ ಪುಟಿನ್ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡೂ ದೇಶಗಳ ಮೇಲೆ ಭಾರೀ ಸುಂಕ ವಿಧಿಸಿರುವುದರಿಂದ ಪುಟಿನ್ ಅವರ ಭಾರತ ಭೇಟಿ ಕುತೂಹಲ ಕೆರಳಿಸಿದೆ.

ಡಿಸೆಂಬರ್ ನಲ್ಲಿ ಭಾರತಕ್ಕೆ ಪುಟಿನ್ ಭಾರತ ಭೇಟಿ Read More

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ

ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ರವಿಕುಮಾರ್‌ ರಾಜೀನಾಮೆ ನೀಡಿದ್ದಾರೆ.

ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಅವರು ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ರವಿಕುಮಾರ್‌ ರಾಜೀನಾಮೆ ನೀಡಿದ್ದಾಗಿದೆ.

ಸಿದ್ದರಾಮಯ್ಯ 65 ಕೋಟಿ ರೂ.ಗಳನ್ನು ಭೋವಿ ಸಮಾಜಕ್ಕೆ ಘೋಷಣೆ ಮಾಡಿದ್ದಾರೆ. ಆದರೆ ಕೇವಲ 13 ಕೋಟಿ ರೂ. ಬಿಡುಗಡೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರವಿಕುಮಾರ್‌ ಅವರನ್ನು ನಿಗಮದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ,ಆದರೆ‌ ಅವರು ಭೋವಿ ಸಮಾಜದ ಅಭಿವೃದ್ಧಿಗಾಗಿ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಬೇಕಾಗಿತ್ತು, ಆದರೆ ಅವರೇ ಶೇ.60 ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರೆಂಬ ವಿಡಿಯೋ ಸಿಕ್ಕಿದೆ ಎಂದು ವೆಂಕಟೇಶ್
ದೂರಿದ್ದರು.

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ Read More

ಎ ಐ ಐ ಎಸ್ ಹೆಚ್ ಸಂಸ್ಥೆಗೆ ವರುಣ ಕ್ಷೇತ್ರದಲ್ಲಿ 10 ಎಕರೆ ಜಾಗ-ಸಿ.ಎಂ

ಮೈಸೂರು ಸೆ 1: ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ,ಅದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನಾರ್ಹ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ ಮೈಸೂರು ವತಿಯಿಂದ ಆಯೋಜಿಸಿದ್ದ
ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ
ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.

ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ ವರುಣ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ ಎಂದು ಭರವಸೆ ನೀಡಿದರು.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಏಷ್ಯಾದ ಅತ್ಯುತ್ತಮ ಸಂಸ್ಥೆಗಳಲ್ಲೊಂದಾಗಿರುವುದು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ.
ಧ್ವನಿಯಿಲ್ಲದವರಿಗೆ ಧ್ವನಿಯಾಗಿರುವ, ಕಿವಿ ಕೇಳದೆ ಮೌನವಾಗಿರುವವರಿಗೆ ಮಾತಿನ ಚೈತನ್ಯ ತುಂಬಿರುವ ಇಂಥ ಸಂಸ್ಥೆಯು ಮೈಸೂರಿನಲ್ಲಿರುವುದು ಹಾಗೂ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಖುಷಿ ವ್ಯಕ್ತಪಡಿಸಿದರು.

1966ರಲ್ಲಿ ಮೈಸೂರಿನಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆ, ಚಿಕಿತ್ಸೆ, ಪುನರ್ವಸತಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲೂ ಸೇವೆ ಒದಗಿಸುತ್ತಿರುವ ಮಹತ್ವದ ರಾಷ್ಟ್ರೀಯ ಸಂಸ್ಥೆಯಾಗಿದೆ ಎಂದು ಹೇಳಿದರು.

ನಮ್ಮ ರಾಜ್ಯ ಸರ್ಕಾರದ ಪ್ರಾಯೋಜಿತ ಕಾಕ್ಲಿಯರ್ ಇಂಪ್ಲಾಂಟ್ ಕಾರ್ಯಕ್ರಮವಾದ ‘ಶ್ರವಣ ಸಂಜೀವಿನಿ’ ಯೋಜನೆಗೆ 2024-25ರ ಬಜೆಟ್ಟಿನಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ದುಬಾರಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಒದಗಿಸಲು 32 ಕೋಟಿ ರೂ ಮೀಸಲಿಟ್ಟಿದೆ ಎಂದು ಸಿಎಂ ಮಾಹಿತಿ ನೀಡಿದರು.

ಮಗು ಭ್ರೂಣಾವಸ್ಥೆಯಲ್ಲಿರುವಾಗಲೇ ಅದರ ಸಂವಹನದ ಸಮಸ್ಯೆಗಳನ್ನು ಪತ್ತೆ ಹಚ್ಚುವ ತಂತ್ರಜ್ಞಾನ ಗಳಿಸಲು ನಮಗೆ ಸಾಧ್ಯವಾಗಿರುವುದು ಇಂತಹ ಪ್ರೀಮಿಯರ್ ಸಂಸ್ಥೆಗಳಿಂದಾಗಿ, ಸಮಸ್ಯೆಯನ್ನು ಗುರುತಿಸಿ ಚಿಕಿತ್ಸೆ ನೀಡುವ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ತರ ಕೆಲಸವನ್ನು ಈ ಸಂಸ್ಥೆಯು ಮಾಡುತ್ತಿದೆ. ವಜ್ರ ಮಹೋತ್ಸವದ ಈ ಸಂದರ್ಭದಲ್ಲಿ ಈ ಸಂಸ್ಥೆಯಲ್ಲಿದ್ದುಕೊಂಡು ಸ್ವಸ್ಥ ಸಮಾಜದ ಏಳಿಗೆಗಾಗಿ ದುಡಿದ-ದುಡಿಯುತ್ತಿರುವ ತಜ್ಞರು, ಪ್ರಾಧ್ಯಾಪಕರು, ಸಹಾಯಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರನ್ನೂ ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ಹೇಳಿದರು.

60 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ವಾಕ್ ಮತ್ತು ಶ್ರವಣದೋಷದ ಸಮಸ್ಯೆಗಳು ಶಾಶ್ವತವಾಗಿ ಬಾರದಂತೆ ತಡೆಯಲು ಅಗತ್ಯವಿರುವ ಎಲ್ಲ ಸಂಶೋಧನೆಗಳನ್ನು ಕೈಗೊಂಡು ಜಗತ್ತಿಗೆ ಬೆಳಕು ನೀಡಲಿ ಎಂದು ಸಿದ್ದರಾಮಯ್ಯ ಹಾರೈಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರ್ಯಕ್ರಮ ಉದ್ಘಾಟಿಸಿದರು.
ರಾಜ್ಯಪಾಲ ಥೇವರ್ ಚಂದ್ ಗೆಹ್ಲೋಟ್, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಖಾತೆ ಸಚಿವೆ ಅನುಪ್ರಿಯಾ ಪಟೇಲ್, ರಾಜ್ಯ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉಪಸ್ಥಿತರಿದ್ದರು.

ಎ ಐ ಐ ಎಸ್ ಹೆಚ್ ಸಂಸ್ಥೆಗೆ ವರುಣ ಕ್ಷೇತ್ರದಲ್ಲಿ 10 ಎಕರೆ ಜಾಗ-ಸಿ.ಎಂ Read More

ಸಾಂಸ್ಕೃತಿಕ ನಗರಿಗೆ ಮುರ್ಮು-ಅಗತ್ಯ ಸಿದ್ದತೆಗೆ ಡಿಸಿ ಆದೇಶ

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಮೈಸೂರಿಗೆ ಆಗಮಿಸಲಿದ್ದಾರೆ.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎ ಐ ಐ ಎಸ್ ಹೆಚ್) ಸಿಲ್ವರ್ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿಗೆ ರಾಷ್ಟ್ರಪತಿಗಳು ಆಗಮಿಸಲಿದ್ದಾರೆ.

ಹಾಗಾಗಿ ಯಾವುದೇ ಲೋಪವಾಗದಂತೆ ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮಿ ಕಾಂತ ರೆಡ್ಡಿ ಅವರು ಸೂಚಿಸಿದರು.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರಪತಿಗಳು ಆಗಮನದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರ ವಹಿಸಬೇಕು. ರಾಷ್ಟ್ರಪತಿಗಳು ರಾಡಿಸನ್ ಬ್ಲೂ ನಲ್ಲಿ ವಾಸ್ತವ್ಯ ಮಾಡುವರು.ಆದ್ದರಿಂದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ರಾಷ್ಟ್ರಪತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವ ಜೊತೆಯಲ್ಲಿ ಯಾವುದೇ ಅಸುರಕ್ಷತಾ ಘಟನೆಗಳಿಗೆ ಅವಕಾಶ ನೀಡಬಾರದು. ರಾಷ್ಟ್ರಪತಿಗಳು ಸಂಚರಿಸುವ ರಸ್ತೆ ಸಂಪೂರ್ಣವಾಗಿ ದುರಸ್ತಿಗೊಳಿಸಬೇಕು. ರಿಂಗ್ ರೋಡ್, ಆಯುಷ್ ನಿಂದ ರಾಡಿಷನ್ ಬ್ಲೂ ವರೆಗಿನ ರಸ್ತೆಗಳ ಸ್ವಚ್ಚತೆಗೆ ನಗರಪಾಲಿಕೆ, ಮುಡಾ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದು ಹೆಳಿದರು.

ರಾಷ್ಟ್ರಪತಿಗಳಿಗೆ ಶಿಷ್ಟಾಚಾರದಂತೆ ವೈದ್ಯಕೀಯ ವ್ಯವಸ್ಥೆ ಒದಗಿಸುವುದು ಆರೋಗ್ಯ ಇಲಾಖೆ ಜವಾಬ್ದಾರಿ. ಸೂಕ್ತ ವ್ಯವಸ್ಥೆಯುಳ್ಳ ಆಂಬ್ಯುಲೆನ್ಸ್, ತಜ್ಞ ವೈದ್ಯರು ಹಾಗೂ ಸಿಬ್ಬಂದಿ ನಿಯೋಜಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜ, ಡಿಸಿಪಿ ಸುಂದರ ರಾಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾಂಸ್ಕೃತಿಕ ನಗರಿಗೆ ಮುರ್ಮು-ಅಗತ್ಯ ಸಿದ್ದತೆಗೆ ಡಿಸಿ ಆದೇಶ Read More

ಡಾ.ವಿಷ್ಣು ಸಮಾಧಿ ನೆಲಸಮ:ಸರಿಪಡಿಸಲು ಸರ್ಕಾರಕ್ಕೆ ಕೆ.ಆರ್.ಬಾಲರಾಜ್ ಆಗ್ರಹ

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಲಕ್ಷಾಂತರ ಅಭಿಮಾನಿಗಳ ಆರಾಧ್ಯ ದೈವ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿರುವ ವಿಚಾರದಲ್ಲಿ ನಡೆದಿರುವ ಬೆಳವಣಿಗೆಗಳು ಅತ್ಯಂತ ನೋವಿನ ಸಂಗತಿ ಎಂದು ಡಾ.ವಿಷ್ಣು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಆರ್.ಬಾಲರಾಜ್ ನೊಂದು‌ ನುಡಿದಿದ್ದಾರೆ.

ಸರ್ಕಾರ ತಕ್ಷಣ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಮತ್ತು ಸಮಾಧಿಯನ್ನು ಪುನರ್ ಸ್ಥಾಪಿಸಬೇಕು ಎಂದು ಕೆ.ಆರ್.ಬಾಲರಾಜ್ ಆಗ್ರಹಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ತಮ್ಮ ಜೀವಿತಾವಧಿಯಲ್ಲಿ ಅಪಾರ ಸೇವೆ ಸಲ್ಲಿಸಿ, ಅದಮ್ಯ ಪ್ರತಿಭೆ ಮೂಲಕ ನಾಡಿನ ಪ್ರೀತಿಗಳಿಸಿದ ಮೇರು ನಟನೊಬ್ಬನಿಗೆ ಇಂತಹ ಅಗೌರವ ತೋರಿ ರುವುದು ನಿಜಕ್ಕೂ ಖಂಡನೀಯ ಎಂದು ಹೇಳಿದ್ದಾರೆ.

ಅವರ ವ್ಯಕ್ತಿತ್ವ ಮತ್ತು ಕಲಾಸೇವೆ ಅಜರಾಮರ, ನಟ ವಿಷ್ಣುವರ್ಧನ್‌ ಅವರು ಕನ್ನಡ ನಾಡಿನ ಹೆಮ್ಮೆಯ ಪ್ರತೀಕ. ಅವರ ಸಮಾಧಿಯನ್ನು ಭಂಗಪಡಿಸುವ ಕ್ರಮವು ನಮ್ಮ ಸಂಸ್ಕೃತಿ, ಗೌರವ ಮತ್ತು ಭಕ್ತಿಯ ಮೇಲೆ ಮಾಡಿದ ಅಪಮಾನ. ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುವುದು ಡಾ. ವಿಷ್ಣುವರ್ಧನ್ ಅವರ ಮೇಲಿನ ಅಭಿಮಾನ ಮತ್ತು ಗೌರವಕ್ಕೆ ಧಕ್ಕೆ ತರುವಂತಹದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದು ಕೇವಲ ಸ್ಮಾರಕದ ಪ್ರಶ್ನೆಯಲ್ಲ, ಅವರನ್ನು ಹೃದಯ ಪೂರ್ವಕವಾಗಿ ಆರಾಧಿಸುವ ಪ್ರತಿಯೊಬ್ಬ ಅಭಿಮಾನಿಗೂ ಇದು ಅತೀವ ನೋವುಂಟು ಮಾಡಿದೆ. ನಾಡಿನ ಮೇರು ನಟರೊಬ್ಬರ ವಿಚಾರದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುವುದು ಅವರ ವ್ಯಕ್ತಿತ್ವ ಮತ್ತು ಕಲಾಸೇವೆಗೆ ಆಗೌರವ ತೋರಿದಂತಾಗಿದೆ. ಅಭಿಮಾನಿಗಳ ಭಾವನೆಗಳಿಗೆ ಗೌರವ ನೀಡದೆ ಈ ರೀತಿ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಬೇಸರದ ಸಂಗತಿ ಎಂದು ತಿಳಿಸಿದರು.

ನಾವು ಅವರ ಸ್ಮಾರಕದ ನಿರ್ಮಾಣಕ್ಕೆ ತಕ್ಷಣವೇ ಪರಿಹಾರ ಕಂಡುಕೊಳ್ಳಬೇಕು. ಇದು ಅವರಿಗೆ ನಾವು ನೀಡುವ ಗೌರವ ಮತ್ತು ಕೃತಜ್ಞತೆಯ ಸಂಕೇತವಾಗಿದೆ. ಮತ್ತು ಸ್ಮಾರಕ ವಿಚಾರವಾಗಿ ನಾಯಕ ನಟರಾದ ಸುದೀಪ್ ಅವರು ಜವಾಬ್ದಾರಿ ಮತ್ತು ಹಣಕಾಸಿನ ನೆರವು ನೀಡುತ್ತೇನೆ ಎಂದಿರುವ ಮಾಧ್ಯಮ ಹೇಳಿಕೆಯನ್ನು ಸ್ವಾಗತಿಸುತ್ತೇವೆ ಎಲ್ಲಾ ವಿಷ್ಣು ಅಭಿಮಾನಿಗಳ ಪರವಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.

ನಮ್ಮೆಲ್ಲರ ಪ್ರೀತಿಯ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರದಲ್ಲಿ ನಡೆದಿರುವ ಬೆಳವಣಿಗೆಗಳು ಅತ್ಯಂತ ಬೇಸರ ಮತ್ತು ನೋವಿನ ಸಂಗತಿ. ಇದನ್ನು ಸರ್ಕಾರ ತಕ್ಷಣವೇ ಸರಿಪಡಿಸಬೇಕು,ಎಂದು ಬಾಲರಾಜ್ ಒತ್ತಾಯಿಸಿದರು.

ಡಾ.ವಿಷ್ಣು ಸಮಾಧಿ ನೆಲಸಮ:ಸರಿಪಡಿಸಲು ಸರ್ಕಾರಕ್ಕೆ ಕೆ.ಆರ್.ಬಾಲರಾಜ್ ಆಗ್ರಹ Read More

ಸಮಾಜದ ಅಭಿವೃದ್ಧಿಗೆ ಸಂಘಟನೆ ಅಗತ್ಯ : ರಘುನಾಥ್

ಮೈಸೂರು, ಆ.2: ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ, ಕಟ್ಟಕಡೆಯ ವ್ಯಕ್ತಿಗೂ ಸಹಾಯ ನೀಡಿದಲ್ಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ರಘುನಾಥ್ ತಿಳಿಸಿದರು.

ಈ ನಿಟ್ಟಿನಲ್ಲಿ ಸಂಘಟನೆ ಅವಶ್ಯಕವಾಗಿದೆ, ಪ್ರಸ್ತುತ ದಿನಗಳಲ್ಲಿ ಬ್ರಾಹ್ಮಣ ಸಮಾಜ ಜಾಗೃತಿಯಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಇದೇ ಪ್ರಥಮ ಬಾರಿಗೆ ಮೈಸೂರಿಗೆ ಆಗಮಿಸಿ ಅಗ್ರಹಾರದಲ್ಲಿರುವ ಶಾಸಕ ಟಿ.ಎಸ್ ಶೀವತ್ಸ ಅವರ ಕಚೇರಿಗೆ ಭೇಟಿ ನೀಡಿ ಜಿಲ್ಲೆಯ ಪ್ರಮುಖ ವಿಪ್ರ ಮುಖಂಡರೊಂದಿಗೆ ಉಪಹಾರ ಸೇವಿಸಿ ರಘುನಾಥ್ ಮಾತನಾಡಿದರು.

ಸರ್ವೇ ಜನಃ ಸುಖಿನೋ ಭವಂತು ಎಂಬ ವಾಣಿಯಂತೆ ಬ್ರಾಹ್ಮಣರು ಸಮಸ್ತ ಜನರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು. ಸಂಘಟನೆಯಿಂದ ಯಾವುದೇ ಸಮಾಜದ ಅಭಿವೃದ್ಧಿ ಸಾಧ್ಯ, ಪ್ರಾಮಾಣಿಕವಾಗಿ ಸಂಘಟನೆಯಲ್ಲಿ ಕೆಲಸ ಮಾಡಿದರೆ ಜನ ಎತ್ತರದ ಸ್ಥಾನದಲ್ಲಿ ಕೂರಿಸುತ್ತಾರೆ ಎಂಬುದಕ್ಕೆ ನಾನು ಮತ್ತು ಶ್ರೀವತ್ಸ ಅವರೇ ಉದಾಹರಣೆ. ಇಬ್ಬರೂ ಸಹ ಬಿಜೆಪಿಯಲ್ಲಿ ಸಂಘಟನ ಪ್ರಧಾನ ಕಾರ್ಯದರ್ಶಿಗಳಾಗಿ ಕೆಲಸ ಮಾಡಿದ್ದೆವು ಎಂದು ಹೇಳಿದರು.

ಶಾಸಕ ಟಿ.ಎಸ್. ಶ್ರೀವತ್ಸ ಅವರು ಮಾತನಾಡಿ, ರಘುನಾಥ್ ಅವರ ಬಹು ವರ್ಷಗಳ ಒಡನಾಟದ ಬಗ್ಗೆ ತಿಳಿಸಿ, ಬ್ರಾಹ್ಮಣ ಸಮುದಾಯ ಸರ್ವರಿಗೂ ಶುಭವನ್ನು ಬಯಸುವ ಸಮುದಾಯವಾಗಿದ್ದು ಸಮಾಜದ ಸರ್ವತೋಮಖ ಅಭಿವೃದ್ಧಿಗೆ ಎಲ್ಲರೂ ಒಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಟಿ.ಎಸ್. ಶ್ರೀವತ್ಸರವರು ರಘುನಾಥ್ ಅವರನ್ನು ಅಭಿನಂದಿಸಿದರು.

ಬಿಜೆಪಿ ಮುಖಂಡರಾದ ಮೈ.ವಿ ರವಿಶಂಕರ್, ನಗರಪಾಲಿಕೆ ಮಾಜಿ ಸದಸ್ಯರಾದ ಎಂ.ಡಿ ಪಾರ್ಥಸಾರಥಿ, ಮಾ.ವಿ ರಾಮಪ್ರಸಾದ್,
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರುಗಳಾದ ದಿಲೀಪ್ ರಾಜಶೇಖರ್, ರಥಯಾತ್ರೆ ಸುರೇಶ್, ಜಂಟಿ ಕಾರ್ಯದರ್ಶಿಗಳಾದ ಬಾಲಕೃಷ್ಣ, ಕಲ್ಕೆರೆ ನಾಗರಾಜ್, ಟಿ.ಎಸ್ ಅರುಣ್, ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಸಿಇಒ ಮುರುಳಿ, ವೀರರಾಘವಾಚಾರ್, ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ರಾಕೇಶ್ ಭಟ್, ಎಂ.ಎ ಮೋಹನ್, ಕೆ.ಎಂ. ನಿಶಾಂತ್, ಅಜಯ್ ಶಾಸ್ತ್ರಿ, ಮಂಜುನಾಥ್, ಟಿ.ಪಿ ಮಧುಸೂಧನ್, ಎಲ್ ಎಲ್ ಹೆಗಡೆ, ಸತೀಶ್ ಹಾಗೂ ವಿವಿಧ ಮೈಸೂರು ಜಿಲ್ಲೆಯ ಬ್ರಾಹ್ಮಣ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಮಾಜದ ಅಭಿವೃದ್ಧಿಗೆ ಸಂಘಟನೆ ಅಗತ್ಯ : ರಘುನಾಥ್ Read More

ಜಾನುವಾರು ರಕ್ಷಣೆ ನೆಪದಲ್ಲಿ ಹಣ ವಸೂಲಿ :ಹಿ ರಾ ರ ಪಡೆ ಅಧ್ಯಕ್ಷ ಸೇರಿ 7 ಜನ ಅರೆಸ್ಟ್

ಮೈಸೂರು: ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ಸೇರಿ ಎಂಟು ಮಂದಿಯನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಗಳನ್ನು ಬಂಧಿಸಿ, ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ತಾಲೂಕಿನ ಕಟ್ಟೆಮಳಲವಾಡಿಯಲ್ಲಿ
ಹಿಂದೂ ರಾಷ್ಟ್ರೀಯ ರಕ್ಷಣಾ ವೇದಿಕೆ ಅಧ್ಯಕ್ಷ ಬೆಂಗಳೂರು ಉತ್ತರಹಳ್ಳಿಯ ರಾಮಕೃಷ್ಣ ಮತ್ತು ಬೆಂಗಳೂರಿನ ವಿವಿಧ ಬಡಾವಣೆ ನಿವಾಸಿಗಳಾದ ಶಿವಕುಮಾರ್, ಲಿಂಗರಾಜು, ಕಿಶೋರ್, ಪ್ರೇಮಕುಮಾರ್, ಪುಷ್ಪಲತಾ ಹಾಗೂ ಕೆ.ಆರ್.ಪೇಟೆ ತಾಲೂಕಿನ ಮಾರಗೌಡನಹಳ್ಳಿಯ ಸ್ವಾಮಿ ಎಂಬವರನ್ನು ಬಂಧಿಸಲಾಗಿದೆ.

ತಾಲೂಕಿನ ರತ್ನಪುರಿಯ ಕಿರಣ್ ಎಂಬವರು ಮೊನ್ನೆ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದರು.

ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು, ಕಟ್ಟೆಮಳಲವಾಡಿ ಬಳಿ ವಾಹನ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್‌ನನ್ನು ಬೆದರಿಸಿ 25ಸಾವಿರ ರೂ ನೀಡುವಂತೆ ಧಮ್ಕಿ ಹಾಕಿದ್ದಾರೆ.

ನಾನು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದೇನೆಂದು ಹೇಳಿದರೂ ಕೇಳದೆ ಕೊನೆಗೆ 20 ಸಾವಿರ ಕೊಟ್ಟರೆ ಬಿಡುತ್ತೇವೆ,ಇಲ್ಲದಿದ್ದರೆ ಪೊಲೀಸರಿಗೆ ಮಾಹಿತಿ ನೀಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಈ ವೇಳೆ ಏನೋ ನಡೆಯುತ್ತಿದೆ ಎಂದು ರಸ್ತೆಯಲ್ಲಿ ಹೋಗುತ್ತಿದ್ದ ಜನ ಧಾವಿಸಿ ವಿಚಾರಿಸಿದ್ದಾರೆ.

ವಿಷಯ ತಿಳಿದು ಜನರೆಲ್ಲ ಆರೋಪಿಗಳ ವಿರುದ್ದ ತಿರುಗಿ ಬಿದ್ದು ತರಾಟೆ ತೆಗೆದುಕೊಂಡು 112 ಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಇವರ ಬಣ್ಣ ಬಯಲಾಗಿದೆ.

ಈ ಸಂಬಂಧ ಕಿರಣ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಅಡಿಷನಲ್ ಎಸ್.ಪಿ.ಮಲ್ಲಿಕ್ ಭೇಟಿ ನೀಡಿ ವಿಚಾರಣೆ ನಡೆಸಿದರು. ಡಿವೈಎಸ್‌ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ಮುನಿಯಪ್ಪ ಹಾಜರಿದ್ದರು.

ಜಾನುವಾರು ರಕ್ಷಣೆ ನೆಪದಲ್ಲಿ ಹಣ ವಸೂಲಿ :ಹಿ ರಾ ರ ಪಡೆ ಅಧ್ಯಕ್ಷ ಸೇರಿ 7 ಜನ ಅರೆಸ್ಟ್ Read More

ಸುನಿತಾ ವಿಲಿಯಮ್ಸ್ ಗೆ‌ ಹೆಚ್ಚುವರಿ ವೇತನ-ಟ್ರಂಪ್

ವಾಷಿಂಗ್ಟನ್: 8 ದಿನಗಳ ಅಧ್ಯಯನಕ್ಕಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ ಹೆಚ್ಚುವರಿಯಾಗಿ 278 ದಿನಗಳು ಅಲ್ಲೇ ಉಳಿದಿದ್ದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸ್ವಂತ ಹಣದಿಂದ ಹೆಚ್ಚುವರಿ ವೇತನ ನೀಡುವುದಾಗಿ ತಿಳಿಸಿದ್ದಾರೆ.

ಹೆಚ್ಚುವರಿ ಸಂಬಳದ ಬಗ್ಗೆ ಯಾರೂ ನನ್ನ ಬಳಿ ಬಂದು ಕೇಳಿಕೊಂಡಿಲ್ಲ. ಒಂದು ವೇಳೆ ಅದರ ಅವಶ್ಯಕತೆ ಇದ್ದಲ್ಲಿ ನನ್ನ ಸ್ವಂತ ಹಣದಿಂದಲೇ ಅವರಿಗೆ ಸಂಬಳ ನೀಡುತ್ತೇನೆ ಎಂದು ಹೇಳಿದ್ದಾರೆ ‌

ಬೇರೆ ಖಾಸಗಿ ವಲಯಗಳಂತೆ ನಾಸಾದ ಗಗನಯಾತ್ರಿಗಳಿಗೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚು ಸಂಬಳ ಸಿಗುವುದಿಲ್ಲ,ಬದಲಿಗೆ ಅಮೆರಿಕದ ಫೆಡರಲ್(ಸರ್ಕಾರಿ) ಉದ್ಯೋಗಿಗಳಂತೆ ಅವರಿಗೆ ಸೌಲಭ್ಯಗಳು ದೊರೆಯುತ್ತವೆ.

ಸುನಿತಾ ವಿಲಿಯಮ್ಸ್ ಗೆ‌ ಹೆಚ್ಚುವರಿ ವೇತನ-ಟ್ರಂಪ್ Read More

ಜಾನಪದ ಎಸ್ ಬಾಲಾಜಿ ಅವರನ್ನ ಗೌರವಿಸಿದ ರಾಯ್ ಸಿಂಗ್

ಮಧ್ಯ ಪ್ರದೇಶ,ಮಾ.8: ಮಧ್ಯ ಪ್ರದೇಶ ರಾಜ್ಯದ ಸಿಹೋರ್ ಜಿಲ್ಲೆಯ ಆಷ್ಟ ನಗರಪಾಲಿಕೆ ಅಧ್ಯಕ್ಷರಾದ ರಾಯ್ ಸಿಂಗ್ ಅವರು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾದ ಡಾ ಜಾನಪದ ಎಸ್ ಬಾಲಾಜಿ ಅವರನ್ನು ಅಭಿನಂದಿಸಿ ಗೌರವಿಸಿದರು.

ಈ ವೇಳೆ ರಾಯ್ ಸಿಂಗ್ ಅವರು ಮಾತನಾಡಿ ನಮ್ಮ ನಗರ ಪಾಲಿಕೆ ವತಿಯಿಂದ ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ ಕಲೆ ಹಾಗೂ ಕಾಲಾವಿದರನ್ನು ಪೋಷಿಸಲಾಗುವುದು ಎಂದು ತಿಳಿಸಿದರು.

ನಗರ ಪಾಲಿಕೆ ಸದಸ್ಯ ರವೀಂದ್ರ ವರ್ಮಾ, ಇತರ ನಗರ ಪಾಲಿಕೆ ಸದಸ್ಯರು ಹಾಗೂ ಮಧ್ಯ ಪ್ರದೇಶ ಯುವ ಸಂಘಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ರಾಕೇಶ್ ಶರ್ಮ ಮತ್ತಿತರರು ಹಾಜರಿದ್ದರು.

ಜಾನಪದ ಎಸ್ ಬಾಲಾಜಿ ಅವರನ್ನ ಗೌರವಿಸಿದ ರಾಯ್ ಸಿಂಗ್ Read More

ಸಹಕಾರ ಸಂಘಗಳು ಬೆಳವಣಿಗೆಗೆ ಪರಸ್ಪರ ಸಹಕಾರ ಅತ್ಯಗತ್ಯ:ಎಂ.ನಂಜುಂಡಸ್ವಾಮಿ

(ವರದಿ:ಸಿದ್ದರಾಜು.ಕೊಳ್ಳೇಗಾಲ)

ಕೊಳ್ಳೇಗಾಲ,ಮಾ.5: ಯಾವುದೇ ಸಹಕಾರ ಸಂಘಗಳು ಬೆಳವಣಿಗೆ ಆಗಬೇಕಾದರೆ ಪರಸ್ಪರ ಸಹಕಾರ ಬೇಕು ಎಂದು ಚಾಮುಲ್ ನೂತನ ಅಧ್ಯಕ್ಷ ಎಂ.ನಂಜುಂಡಸ್ವಾಮಿ ತಿಳಿಸಿದರು.

ಕೊಳ್ಳೇಗಾಲ ಮತ್ತು ಹನೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ತಾಲ್ಲೂಕಿನ ಸಿಂಗನಲ್ಲೂರು ಗ್ರಾಮದ ಹಾಲು ಶೀಥಲೀಕರಣ ಕೇಂದ್ರ (ಚಾಮುಲ್ ಉಪಕೇಂದ್ರ) ದ ಆವರಣದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನಾನು ಕೆಎಂಎಫ್ ನಲ್ಲಿ ಐದು ವರ್ಷ ಕೆಲಸ ಮಾಡಿದ್ದೇನೆ ಮುಂದಿನ ದಿನದಲ್ಲಿ ಹೆಚ್ಚಿನ ಕೆಲಸ ಮಾಡಲು ನಿಮ್ಮ ಸಹಕಾರ ಬೇಕು ಎಂದು ಹಾಲು ಉತ್ಪಾದಕರಲ್ಲಿ ನಂಜುಂಡಸ್ವಾಮಿ ಮನವಿ ಮಾಡಿದರು.

ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರುಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಗುಂಡ್ಲುಪೇಟೆಯಲ್ಲಿ ಖಾಸಗಿಯವರ ಹಾವಳಿ ಹೆಚ್ಚಾಗಿದೆ ಇದರಿಂದ ನಮ್ಮ ರೈತರ ಹಾಲು ಖಾಸಿಗಿಯವರ ಪಾಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ದಿವಂಗತ ಹೆಚ್.ಎಸ್. ಮಹದೇವ ಪ್ರಸಾದ್ ರವರು 2017ರಲ್ಲಿ ಕೆಎಂಎಫ್ ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ಚಾಮುಲ್ ಸ್ಥಾಪನೆಗೆ ಕಾರಣಿಭೂತರಾಗಿದ್ದಾರೆ. ಅವರ ಈ ಕೊಡುಗೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ನೂತನ ಅಧ್ಯಕ್ಷರು ಹೇಳಿದರು.

ಮಳೆಗಾಲದಲ್ಲಿ 3.15 ಲಕ್ಷದವರೆಗೆ ಇಳುವರಿ ಬಂದಿದೆ ಆದರೆ ಈಗ ಬೇಸಿಗೆ ಆಗಿರುವುದರಿಂದ 20.15 ರಿಂದ 20.20 ಲಕ್ಷ ಇಳುವರಿ ಬರುತ್ತಿದೆ. ನೀವು ಗುಣಮಟ್ಟದ ಹಾಲು ನೀಡುತ್ತಿದ್ದಿರಾ, ಆ ಹಾಲಿಗೆ ತಕ್ಕ ದರ ನಾವು ನೀಡಬೇಕು ಈಗ ನೀಡುತ್ತಿರುವ ದರ ಯಾವುದಕ್ಕೂ ಸಾಕಾಗುವುದಿಲ್ಲ ಎಂಬುದು ಆಡಳಿತ ಮಂಡಳಿಗೆ ಗೊತ್ತಿದೆ. 30 ರೂ ಇದ್ದ ಹಾಲಿನ ದರವನ್ನು ನಾನು ಫೆ.10 ರಂದು ಚಾಮುಲ್ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ನಂತರಧ ಮಾರನೆಯ ದಿನದಿಂದಲೇ ಒಂದು ರೂ. ಹೆಚ್ಚಳ ಮಾಡಲಾಗಿದೆ. ಇದು ಸಾಲುವುದಿಲ್ಲ ಎಂಬ ಕುರಿತು ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಮನವಿ ಮಾಡಿಕೊಳ್ಳಲಾಗಿದೆ ಎಂದು ನಂಜುಂಡಸ್ವಾಮಿ ತಿಳಿಸಿದರು.

ಈ ಹಿಂದೆ ಚಾಮುಲ್ ಗೆ ಸರ್ಕಾರ 83 ಕೋಟಿ ರೂ. ಅನುದಾನ ಮಂಜೂರು ಮಾಡಿತ್ತು. ಅದರಲ್ಲಿ 30 ಕೋಟಿ ರೂ.ಬಂದಿದ್ದು ಉಳಿದ 53 ಕೋಟಿ ರೂ. ಅನುದಾನ ಬರಬೇಕಾಗಿದೆ. ಅದಕ್ಕಾಗಿ ಆಡಳಿತ ಮಂಡಳಿ ಸರ್ಕಾರವನ್ನು ನಿರಂತರವಾಗಿ ಒತ್ತಾಯ ಮಾಡುತ್ತಿದೆ. ಆ ಹಣ ಬಂದರೆ ನಿಮಗೂ ಹೆಚ್ಚಿನ ದರವನ್ನು ಕೊಡಲು ಸಾಧ್ಯವಾಗುತ್ತದೆ.

ಮುಂದಿನ ದಿನಗಳಲ್ಲಿ ನಾವು ಐಸ್ ಕ್ರೀಮ್ ಫ್ಯಾಕ್ಟರಿ,ಮೈಸೂರು ಪಾಕ್ ತಯಾರಿಕೆ ಹಾಗೂ ನೀರಿನ ಪ್ಯಾಕಿಂಗ್ ಸೇರಿದಂತೆ ಇನ್ನಿತರ ಘಟಕಗಳನ್ನು ಸ್ಥಾಪಿಸಿ ಅದರಿಂದ ಬಂದ ಲಾಭದಿಂದ ರೈತರಿಗೆ ಹೆಚ್ಚಿನ ದರ ಕೊಡಬೇಕೆಂಬ ಉದ್ದೇಶ ಇಟ್ಟು ಕೊಂಡಿದ್ದೇವೆ. ಈಗಲೂ ಸಹ ಸರ್ಕಾರ ಮುಂದಿನ ತಿಂಗಳಲ್ಲಿ 5. ರೂ.ಗಳನ್ನು ಹೆಚ್ಚಳ ಮಾಡಬೇಕೆಂದಿದ್ದು ಅದರಲ್ಲಿ 2. ರೂ.ಗಳನ್ನು ಒಕ್ಕೂಟಕ್ಕೆ ಹಾಗೂ 3.ರೂಗಳನ್ನು ರೈತರಿಗೆ ಕೊಡಬೇಕೆಂಬ ಚಿಂತನೆ ನಡೆಸುತ್ತಿದೆ,ಒಟ್ಟಾರೆ ರೈತರಿಗೆ 40 ಆದರೂ ತಲುಪಿದರೆ ರೈತ ಸ್ವಲ್ಪ ಚೇತರಿಸಿಕೊಳ್ಳುತ್ತಾನೆ ಎಂದು ಅಭಿಪ್ರಾಯ ಪಟ್ಟರು.

ನೀವೇ ಇಲ್ಲ ಎಂದ ಮೇಲೆ ಕೆಎಂಎಫ್, ಚಾಮುಲ್ ಇವೆಲ್ಲಾ ಎಲ್ಲಿಂದ ಬರಬೇಕು. ಆದ್ದರಿಂದ ನೀವೆಲ್ಲ ಸಹಕಾರ ನೀಡಿ. ಕೇವಲ 4 – 5 ರೂ. ಆಸೆಗೆ ಖಾಸಗಿ ಅವರಿಗೆ ಹಾಲನ್ನು ಕೊಡಬೇಡಿ. ವಿಮೆ ಪ್ರೋತ್ಸಾಹ ಧನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸರ್ಕಾರ ಮುಂದಿನ ದಿನಗಳಲ್ಲಿ ನಿಮಗೆ ಕಲ್ಪಿಸಿಕೊಡಲಿದೆ. ಸಹಕಾರ ಸಂಘಗಳಿಂದ ನೀವು ಪೆಟ್ರೋಲ್ ಬಂಕ್, ಗೊಬ್ಬರದ ಅಂಗಡಿ ಹಾಗೂ ಮೆಡಿಕಲ್ ಶಾಪ್ ಸೇರಿದಂತೆ ಇನ್ನಿತರ ಉದ್ದಿಮೆಗಳನ್ನು ತೆರೆದು ಅದರಿಂದ ಬಂದ ಲಾಭದಿಂದ ನಿಮ್ಮ ಪ್ರಾಥಮಿಕ ಸಂಘಗಳನ್ನು ಸದೃಢ ಮಾಡಬಹುದು ಸರ್ಕಾರ ಪ್ರಾಥಮಿಕ ಸಹಕಾರ ಸಂಘಗಳನ್ನು ಕಡೆಗಣಿಸುವ ಮಾತಿಲ್ಲ ಆದ್ದರಿಂದ ಸಂಘವನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬನ್ನಿ ಎಂದು ಹಾಲು ಉತ್ಪಾದಕರು ಹಾಗೂ ರೈತರಿಗೆ ಕರೆ ನೀಡಿದರು‌.

ಮಾಜಿ ಅಧ್ಯಕ್ಷ ನಂಜುಂಡ ಪ್ರಸಾದ್ ಮಾತನಾಡಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವುದು ಸಂತೋಷದ ಸಂಗತಿ, ಆದರೆ ನಿಭಾಯಿಸುವುದು ಅತ್ಯಂತ ಕ್ಲಿಷ್ಟಕರ ಆದರೆ ನಂಜುಂಡಸ್ವಾಮಿರವರಿಗೆ ಈ ಹಿಂದೆ ಮೈಸೂರು ಆಡಳಿತ ಮಂಡಳಿಯಲ್ಲೂ ಕೆಲಸ ಮಾಡಿರುವ ಅನುಭವಿದೆ. ಆದ್ದರಿಂದ ಎಲ್ಲರೂ ಸಹ ಅವರ ಜೊತೆ ಕೈಜೋಡಿಸಬೇಕಾಗಿದೆ ಎಂದು ಹೇಳಿದರು.

ಗುಂಡ್ಲುಪೇಟೆಯಲ್ಲಿ ಹದಿನೈದು ಕಿಲೋಮೀಟರ್ ಹೋದರೆ ಆ ಕಡೆ ಕೇರಳ ಈ ಕಡೆ ತಮಿಳುನಾಡು ಸಿಗುತ್ತದೆ. ಹಾಲೆಲ್ಲಾ ಈಗ ಆ ಕಡೆ ಹೋಗುತ್ತಿದೆ. ಬೇರೆ ಬೇರೆ ಖಾಸಗಿ ಕಂಪನಿಗಳು ಬಂದು ಹಾಲು ಖರೀದಿ ಮಾಡಲು ಪ್ರಾರಂಭಿಸಿಬಿಟ್ಟಿವೆ. ಅಲ್ಲಿ 1.20 ಲಕ್ಷ  ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ ಆದರೆ ನಮ್ಮ ಒಕ್ಕೂಟಕ್ಕೆ ಬರುತ್ತಿರುವುದು 60 ರಿಂದ 70, ಸಾವಿರ ಲೀಟರ್ ಮಾತ್ರ. ಉಳಿದ 40 ರಿಂದ 45 ಸಾವಿರ ಲೀಟರ್ ಹಾಲು ಖಾಸಗಿಯವರಿಗೆ ಹೋಗುತ್ತಿದೆ. ಕಾರಣ ಅವರು ಹಾಲಿನ ದರವನ್ನು  ಮೂರು ನಾಲ್ಕು ರೂ. ಹೆಚ್ಚಾಗಿ ಕೊಡುವುದರಿಂದ ನಮ್ಮ ರೈತರಿಗೆ ನಾವು ಹೇಳುವುದಕ್ಕೆ ಆಗುವುದಿಲ್ಲ. ಸರ್ 40 ರೂ. ಮಾಡಿ ನಾವು ನಿಮಗೆ ಹಾಲು ಹಾಕುತ್ತೇವೆ ಎಂದು ಹೇಳುತ್ತಾರೆ. ನಾವು ಅವರಿಗೆ ಹೆಚ್ಚು ಒತ್ತಡ ಮಾಡಿ ನಮ್ಮ ಸಹಕಾರ ಸಂಘಗಳಿಗೆ ಹಾಲು ಹಾಕಿಸಲು ಆಗುವುದಿಲ್ಲ. ಆದರೆ ನಮ್ಮಲ್ಲಿರುವ ಸೌಲಭ್ಯಗಳನ್ನು ಅವರು ಕೊಡಲು ಆಗುವುದಿಲ್ಲ. ಈಗ ನಮ್ಮಲ್ಲಿ ಆರ್ ಕೆ ಟಿ ಸೌಲಭ್ಯವಿದೆ 15,000 ಕೊಡುವಂತಹದ್ದು. ಜನಶ್ರೀ ಯೋಜನೆಯಿದೆ. ನಂತರ ಜೀವವಿಮೆ ಸೌಲಭ್ಯ ಇದೆ. ಜೊತೆಗೆ 24 ಗಂಟೆಯೊಳಗೆ ಯಾವ ಸಂದರ್ಭದಲ್ಲಿ ಕರೆದರೂ ಜಾನುವಾರುಗಳಿಗೆ ಚಿಕಿತ್ಸೆ ನೀಡುವಂತಹ ವೈದ್ಯರ ಸೌಲಭ್ಯವಿದೆ ಸಹಕಾರ ಸಂಘಕ್ಕೆ ಕಟ್ಟಡಗಳನ್ನು ಕಟ್ಟಿಸಿ ಕೊಡುತ್ತಾರೆ. ಸಹಕಾರ ಇಲಾಖೆ ಅಧೀನದಲ್ಲಿರುವ ಸಹಕಾರಿ ಸಂಘಗಳು ಇಂದು ಎಲ್ಲ ರೀತಿಯ ವ್ಯವಸ್ಥೆ ಇರುವ ಸಂಸ್ಥೆಯಾಗಿದೆ. ಅಲ್ಲಿ ಎಲ್ಲಾ ರೀತಿಯ ಕಟ್ಟುಪಾಡುಗಳು ಇರುತ್ತವೆ, ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕೆ ಹೊರತು ನಮ್ಮ ನಮ್ಮ ವೈಶಮ್ಯಕ್ಕೆ ಇಂದು ರಾಜಕೀಯ ಮಾಡಿಕೊಂಡು ಯಾರೋ ಖಾಸಗಿಯವರನ್ನು ತಂದು ಕೆಲವು ಕಡೆ ನಡೆಸುತ್ತಿದ್ದಾರೆ. ಅದಕ್ಕೆಲ್ಲ ಆದ್ಯತೆ ಕೊಡುವಂತ ಕೆಲಸ ಆಗಬಾರದೆಂದು ಮನವಿ ಮಾಡಿದರು.

ಮಾಜಿ ಅಧ್ಯಕ್ಷ ವೈ.ಸಿ.ನಾಗೇಂದ್ರ, ನಿರ್ದೇಶಕರಾದ ಎಂ.ಟಿ. ಸುನಿಲ್, ಸಾಹಿಲ್ ಅಹಮದ್, ಎಸ್. ಮಹದೇವಸ್ವಾಮಿ, ಸದಾಶಿವಮೂರ್ತಿ, ಹೆಚ್.ಎಸ್.ಬಸವರಾಜು, ಕೆ.ಕೆ. ರೇವಣ್ಣ, ವ್ಯವಸ್ಥಾಪಕ ನಿರ್ದೇಶಕ ರಾಜ್ ಕುಮಾರ್ ಸಿಬ್ಬಂದಿಗಳಾದ ಶರತ್ ಕುಮಾರ್, ವೆಂಕಟೇಶ್ ಪ್ರಸಾದ್, ಶರತ್, ದೀಪು ಮತ್ತಿತರರು ಉಪಸ್ಥಿತರಿದ್ದರು.

ಸಹಕಾರ ಸಂಘಗಳು ಬೆಳವಣಿಗೆಗೆ ಪರಸ್ಪರ ಸಹಕಾರ ಅತ್ಯಗತ್ಯ:ಎಂ.ನಂಜುಂಡಸ್ವಾಮಿ Read More