ವಿದ್ಯಾರ್ಥಿ ನಿಲಯಗಳಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಭೇಟಿ

ಮೈಸೂರು,ಮಾ.1: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಅವರು ಮೈಸೂರಿನ ವಿವಿಧ ವಿದ್ಯಾರ್ಥಿನಿಲಯಗಳಿಗೆ ಭೇಟಿನೀಡಿದರು.

ವಿದ್ಯಾರ್ಥಿನಿಲಯಗಳಲ್ಲಿನ ಸ್ವಚ್ಚತೆ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಿದರು.

ಜಿಲ್ಲಾ ಪಂಚಾಯತ್ ಬಳಿಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಚಾಮುಂಡೇಶ್ವರಿ ನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ನಿಲಯ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಟಿ. ಶ್ಯಾಮ ಭಟ್ ಹಾಗೂ ಸದಸ್ಯರಾದ ಎಸ್. ಕೆ. ವಂಟಿಗೋಡಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಡುಗೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಸಿದ್ಧಪಡಿಸಿದ್ದ ಉಪಹಾರದ ಬಗ್ಗೆ ಮಾಹಿತಿ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಶುಚಿ ಹಾಗೂ ರುಚಿಯಾದ ಆಹಾರ ನೀಡಬೇಕು ಎಂದು ವಾರ್ಡನ್ ಗೆ ಸೂಚಿಸಿದರು.

ವಿದ್ಯಾರ್ಥಿಗಳ ಬಳಿ ಮೆಸ್ ಸಮಿತಿ ರಚನೆಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಮೆಸ್ ಸಮಿತಿಯು ಪ್ರತಿ ದಿನ ಆಹಾರ ಸಾಮಗ್ರಿಗಳನ್ನು ಅಡುಗೆ ಮಾಡುವ ಸಿಬ್ಬಂದಿಗಳಿಗೆ ನೀಡುವಾಗ ಪರಿಶೀಲನೆ ನಡೆಸಬೇಕು. ಯಾವುದೇ ತೊಂದರೆ ಇದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದರು.

ಅಡುಗೆ ತಯಾರಿಸುವ ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿಗಳ ಜೊತೆ ಮಾತನಾಡಿ ಪ್ರತಿ ಮಾಹೆ ಸಂಬಳ ದೊರಕುತ್ತಿರುವ ಬಗ್ಗೆ ಖಾತ್ರಿ ಪಡೆಸಿಕೊಂಡ ಶ್ಯಾ‍ಮ್ ಭಟ್ ಅವರು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಆದೇಶಿಸಿದರು.

ವಿದ್ಯಾರ್ಥಿಗಳ ಕೊಠಡಿಗೆ ತೆರಳಿ ಅಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದರು.ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳು ಹಾಗೂ ಚಳಿಗಾಲದಲ್ಲಿ ಗೀಸರ್ ಅವಶ್ಯಕತೆ ಇದ್ದು, ಈ ಕುರಿತು ಜಿಲ್ಲಾ ಪಂಚಾಯತ್ ಅಥವಾ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಇಂಜಿನಿಯರಿಂಗ್ ಹಾಗೂ ವೃತ್ತಿಪರ ಕೋರ್ಸ್ ಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ದಾಖಲಾತಿ ಎರಡು ಹಾಸ್ಟೆಲ್ ಗಳಲ್ಲಿ ಹೆಚ್ಚಿದ್ದು, ಶೌಚಾಲಯಗಳ ಅವಶ್ಯಕತೆ ಇರುವ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಹಾಜರಾತಿ ಹಾಗೂ ಸ್ಟಾಕ್ ರಿಜಿಸ್ಟರ್ ಗಳನ್ನು ಸಹ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜರ್, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು ಹಾಜರಿದ್ದರು.

ವಿದ್ಯಾರ್ಥಿ ನಿಲಯಗಳಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಭೇಟಿ Read More

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ವಾಶಿಂಗ್ಟನ್: ಡೊನಾಲ್ಡ್ ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವೆಸ್ಟ್ ಲಾನ್‌ನಲ್ಲಿರುವ ಬೃಹತ್ ವೇದಿಕೆಯಲ್ಲಿ ನೂತನ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಜೆಡಿ ವ್ಯಾನ್ಸ್ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಚುನಾವಣಾ ಪ್ರಚಾರದ ವೇಳೆ ಡೊನಾಲ್ಡ್ ಟ್ರಂಪ್ ಗುಂಡಿನ ದಾಳಿಯಿಂದ ಅದೃಷ್ಟವಶಾತ್ ಪಾರಾಗಿದ್ದರು. ಇದು ಅಮೆರಿಕ ರಾಜಕೀಯದ ಚಿತ್ರಣವನ್ನೇ ಬದಲಾಯಿಸಿತು. ಕಮಲಾ ಹ್ಯಾರಿಸ್‌ರನ್ನು ಮಣಿಸಿದ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷಾರಿ ಆಯ್ಕೆಯಾದರು.

ಯುಎಸ್‌ನಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಗಡೀಪಾರು ಮಾಡುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ.

ರಾಜಕೀಯ ಶತ್ರುಗಳ ವಿರುದ್ಧ ಪ್ರತಿಕಾರ ತೀರಿಸುವ ಮತ್ತು ಜಗತ್ತಿನಲ್ಲಿ ಮತ್ತೆ ಅಮೆರಿಕದ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತೇನೆ ಎಂಬ ಭರವಸೆ ನೀಡಿದ್ದ ಟ್ರಂಪ್, ಸೋಮವಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ, ಇದೀಗ ಇಡೀ ವಿಶ್ವವೇ ಅಮೆರಿಕದತ್ತ ನೋಡುತ್ತಿದೆ.

ಅಮೆರಿಕ ಅಧ್ಯಕ್ಷರಾಗಿ 78 ವರ್ಷದ ಡೊನಾಲ್ಡ್‌ ಟ್ರಂಪ್‌ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾರತದಿಂದ ಸಚಿವ ಎಸ್‌. ಜೈಶಂಕರ್, ಉದ್ಯಮಿಗಳಾದ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಕೂಡ ಭಾಗಿಯಾಗಿದ್ದಾರೆ. ವಿಶ್ವದ ಮೂವರು ಶ್ರೀಮಂತ ವ್ಯಕ್ತಿಗಳಾದ ಎಲಾನ್ ಮಸ್ಕ್, ಜೆಫ್ ಬೆಜೋಸ್ ಮತ್ತು ಮಾರ್ಕ್ ಜುಕರ್‌ಬರ್ಗ್ ಕೂಡ ಟ್ರಂಪ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ Read More

ಕೆ ಎಸ್ ಡಿ ಎಂ ಎ ಅಧ್ಯಕ್ಷರಾಗಿ ಬಸವರಾಜು ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷರಾಗಿ ಚಾನಲ್ ಗ್ರೀನ್ ಮುಖ್ಯಸ್ಥರಾದ
ಬಸವರಾಜು ಸಿ ಅವರನ್ನು ಆಯ್ಕೆ ಮಾಡಲಾಗಿದೆ.

ಬಸವರಾಜು ಅವರು ಈಗಾಗಲೇ ಹಲವಾರು ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಕೆ ಎಸ್ ಡಿ ಎಂ ಎ ಅಧ್ಯಕ್ಷರಾಗಿ ಬಸವರಾಜು ಆಯ್ಕೆ Read More

ಪುರಭವನಕ್ಕೆ ಬಂದ ರಾಷ್ಟ್ರಪತಿಗಳು!

ಮೈಸೂರು: ನಗರದ ಪುರಭವನಕ್ಕೆ ರಾಷ್ಟ್ರಪತಿ, ಸಚಿವರು ಪೊಲೀಸ್ ಭಾಜಾ ಬಜಂತ್ರಿ ಜತೆ ಬಂದದ್ದು ಕಂಡು ಜನ ಒಮ್ಮೆಗೆ ದಂಗಾದರು.

ಇದು ನಿಜ ಆದರೆ ಬಂದದ್ದು ರಷ್ಟ್ರಪತಿ ಹಾಗೂ ಸಚಿವರೇ ಆದರೂ ಅವರೆಲ್ಲ ಅಸಲಿಯಲ್ಲ.

ಪೊಲೀಸ್ ಗಸ್ತಿನೊಂದಿಗೆ, ಬ್ಯಾಂಡ್‌ಸೆಟ್ ಮೆರವಣಿಗೆ ಮೂಲಕ ರಾಷ್ಟ್ರಪತಿ, ಸಚಿವರು ಮತ್ತು ಶಾಸಕರರು ಪುರಭವನ ಪ್ರವೇಶಿಸಿದ್ದನ್ನು ಕಂಡು ಸಾರ್ವಜನಿಕರು ಕೂಡಾ ಕುತೂಹಲದಿಂದ ಧಾವಿಸಿದರು.

ಇದೆಲ್ಲ ಆದದ್ದು ಭಾನುವಾರ ಸಂಜೆ. ಪುರಭವನದಲ್ಲಿ ಮೈಸೂರು ತಾಲ್ಲೂಕು ವರುಣಾ ಹೋಬಳಿ ಹಡಜನ, ಚೋರನಹಳ್ಳಿ ಮತ್ತಿತರ ಗ್ರಾಮದ ಯುವಕರು ಅಭಿನಯಿಸಿದ ರತ್ನ ಮಾಂಗಲ್ಯ ಅಥವಾ ಮರಳಿ ಬಂದ ಮಾಂಗಲ್ಯ ಸಾಮಾಜಿಕ ನಾಟಕದ ಪರಿ.

ಇದನ್ನು ವೀಕ್ಷಿಸಲು ಅಸಲಿ ಪೊಲೀಸರು, ಗಣ್ಯರ ವೇಷತೊಟ್ಟ ಎರಡೂ ಗ್ರಾಮದ ಕೆಲವು ಮುಖಂಡರು ಮೆರವಣಿಗೆ ಮೂಲಕ ಪುರಭವನ ಪ್ರವೇಶಿಸಿ ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದರು.

ರಾಷ್ಟ್ರಪತಿಯಾಗಿ ಗುರುಸ್ವಾಮಿ, ರಾಷ್ಟ್ರಪತಿ ಅಂಗರಕ್ಷಕರಾಗಿ ಯಶವಂತ್ ಮತ್ತು ವಿಜಯ್, ಶಾಸಕರಾಗಿ ಅಂಬಳೆ ಶಿವಣ್ಣ, ಮಂಜು ನಟಿಸಿ ಜನರು ನಂಬುವಂತೆ ಮಾಡಿದ್ದು ವಿಶೇಷ.

ಪುರಭವನಕ್ಕೆ ಬಂದ ರಾಷ್ಟ್ರಪತಿಗಳು! Read More