ವಿಷ್ಣು ಪುಣ್ಯಭೂಮಿ ದ್ವಂಸ: ಮೈಸೂರಿನಲ್ಲಿಪೌರಕಾರ್ಮಿಕರ ಪ್ರತಿಭಟನೆ

ಮೈಸೂರು: ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿ ದ್ವಂಸ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪೌರಕಾರ್ಮಿಕರು ಪ್ರತಿಭಟಿಸಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿರುವ ಡಾಕ್ಟರ್ ವಿಷ್ಣುವರ್ಧನ್ ಉದ್ಯಾನವನ ಮುಂಭಾಗ ಪೌರಕಾರ್ಮಿಕರು ಪ್ರತಿಭಟಿಸಿದರು.

ಈ ವೇಳೆ ಮಾತನಾಡಿದ ಪೌರಕಾರ್ಮಿಕ ಮಹದೇವ್,ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ಸರಿಪಡಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ವಿಷ್ಣು ಸಮಾಧಿ ಸರಿಪಡಿಸದಿದ್ದರೆ ಸ್ವಚ್ಛತಾ ಕೆಲಸ ಬಿಟ್ಟು ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ಮಾಜಿನಗರ ಪಾಲಿಕೆ ಮಾಜಿ ಸದಸ್ಯ ಎಂ ಡಿ ಪಾರ್ಥಸಾರಥಿ ಮಾತನಾಡಿ,
ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ದ್ವಂಸ ಮಾಡಿರುವುದು ಲಕ್ಷಾಂತರ ಅಭಿಮಾನಿಗಳಿಗೆ ನೋವು ತಂದಿದೆ ಎಂದು ತಿಳಿಸಿದರು.

ಸರ್ಕಾರ ಕೂಡಲೇ ವಿಷ್ಣು ಅವರ ಸಮಾಧಿ ಸ್ಥಳವನ್ನು ಕನ್ನಡ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಅಭಿವೃದ್ಧಿಪಡಿಸಬೇಕು,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಭೂಮಿಯನ್ನು ತಕ್ಷಣ ಸ್ವಾಧೀನ ಪಡಿಸಿಕೊಂಡು ಮಾಲೀಕರಿಗೆ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂತೋಷ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್,
ಪೌರಕಾರ್ಮಿಕರಾದ ಮುರುಗೇಶ್, ಪ್ಯಾಲೆಸ್ ಮಹದೇವ್,ಗೋಪಾಲ್, ಪಳನಿ, ಎಂ. ಪಿ ಮುರುಗೇಶ್,ಮಹದೇವ, ವಿಜಯ್ ಸೇರಿದಂತೆ ಅನೇಕ ಪೌರಕಾರ್ಮಿಕರು ಪಾಲ್ಗೊಂಡಿದ್ದರು.

ವಿಷ್ಣು ಪುಣ್ಯಭೂಮಿ ದ್ವಂಸ: ಮೈಸೂರಿನಲ್ಲಿಪೌರಕಾರ್ಮಿಕರ ಪ್ರತಿಭಟನೆ Read More

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ

ಮೈಸೂರು: ಶ್ರೀಮನ್ಮಹಾರಾಜ ರಾಜಋಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಭುಗಳಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂ‌ ಎಲ್‌ ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ವಿರೋಧಿಸಿ ಹಳೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಸೇನಾಪಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಾಲ್ವಡಿಯವರ ಇತಿಹಾಸ ತಿಳಿಯದ ಡಾ. ಯತೀಂದ್ರ ಅವರ ಮಾತು ಕೇಳಿದರೆ ನಗು ಬರುತ್ತದೆ. ನಾಲ್ವಡಿ ಅವರಿಗಿಂತ ಮೈಸೂರಿಗೆ ತಮ್ಮಪ್ಪನದೇ ಜಾಸ್ತಿ ಕೊಡುಗೆ ಎಂದು ಹೇಳಿರುವುದು ಖಂಡನೀಯ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಯತೀಂದ್ರ ಅವರಿಗೆ ಬಹುಶಃ ನಾಲ್ವಡಿ ಅವರು ನಮ್ಮ ರಾಜ್ಯಕ್ಕೆ ನೀಡಿರುವ ನೂರಾರು ಕೊಡುಗೆಗಳು ತಿಳಿದಿಲ್ಲ. ಶಿಕ್ಷಣ, ನೀರಾವರಿ, ಕೈಗಾರಿಕೆ, ಕಾರ್ಖಾನೆಗಳು, ಪ್ರಜೆಗಳಿಗೆ ಸಾಮಾಜಿಕ ನ್ಯಾಯ ನೀಡಿ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಾಲ್ವಡಿರವರು ರಾಜ್ಯಕ್ಕೆ ನೀಡದ ಕೊಡುಗೆಗಳಿಲ್ಲ ಇದನ್ನೆಲ್ಲ ತಿಳಿದುಕೊಂಡು ಮಾತನಾಡಲಿ ಎಂದು ತಾಕೀತು ಮಾಡಿದರು.

ನೂರಾರು ಜನ್ಮ ಎತ್ತಿದರೂ, ಯಾರೂ ನಾಲ್ವಡಿಯವರ ಕಾಲಿನ ಧೂಳಿಗೂ ಸಮನಾಗುವುದಿಲ್ಲ. ಅಂದು ದೂರ ದೃಷ್ಟಿಯ ಆಡಳಿತದಿಂದ ಅಕ್ಷರಶಃ ಸುವರ್ಣ ಯುಗವನ್ನು ಸೃಷ್ಟಿಸಿದ್ದರು. ನಾಲ್ವಡಿ ಭೂಪ- ಮನೆಮನೆ ದೀಪ ಎಂದು ಇಂದಿಗೂ ಕನ್ನಡಿಗರು ನೆನೆದುಕೊಳ್ಳುವ ಅಭಿವೃದ್ಧಿಯ ಹರಿಕಾರರಾದ ನಾಲ್ವಡಿ ಮಹಾರಾಜರೆಲ್ಲಿ, ಪ್ರತಿ ಕನ್ನಡಿಗರ ಮೇಲೆ ಸಾಲದ ಹೊರೆ ಹೊರೆಸಿರುವ ಹಾಗೂ ಎಲ್ಲಾ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸಿದ್ದರಾಮಯ್ಯರವರೆಲ್ಲಿ ಎಂದು ಕರ್ನಾಟಕ ಸೇನಾಪಡೆಯ ಸದಸ್ಯರು ಪ್ರಶ್ನಿಸಿದರು.

ಸಿದ್ದರಾಮಯ್ಯನವರು ರಾಜಕೀಯದಲ್ಲಿ ಹಲವಾರು ಏಳು ಬೀಳುಗಳನ್ನು ಕಂಡು, ಪಕ್ಷಗಳನ್ನು ಬದಲಾವಣೆ ಮಾಡಿ, ರಾಜ್ಯದ ಜನರ ತೆರಿಗೆ ಹಣದಲ್ಲಿ ಐಷಾರಾಮಿ ಜೀವನ ನಡೆಸಿ, ಜನರ ಹಣದಲ್ಲಿ ಜನರಿಗೆ ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆಯೇ ಹೊರತು ಅವರ ಮನೆಯಿಂದ ಹಣ ತಂದು ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿಲ್ಲ, ಮಹಾರಾಜರು ಕಟ್ಟಿಸಿದ ಮೈಸೂರು ಮೆಡಿಕಲ್ ಕಾಲೇಜು, ಕೆ ಆರ್ ಆಸ್ಪತ್ರೆಗೆ ಸುಣ್ಣ ಬಣ್ಣವನ್ನು ಹೊಡಿಸಲು ಆಗಿಲ್ಲ ಎಂದು ಟೀಕಾಪ್ರಹಾರ ನಡೆಸಿದರು.

ನಾಲ್ವಡಿ ಅವರು ರಾಜ್ಯದಲ್ಲಿ ಇನ್ನೆಂದು ಜನಿಸಲು ಅಥವಾ ಹೋಲಿಸಲು ಸಾಧ್ಯವಾಗದ ಒಂದು ದೈತ್ಯ ಹೆಸರು. ಯತೀಂದ್ರ ರ ಈ ಹೇಳಿಕೆಯನ್ನು ರಾಜ್ಯದ ಒಬ್ಬನೇ ಒಬ್ಬ ನಾಗರಿಕ, ಬುದ್ಧಿಜೀವಿಗಳು, ಯಾರು ಖಂಡಿತವಾಗಿ ಒಪ್ಪುವುದಿಲ್ಲ.

ಇದುವರೆಗೂ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸರಿಗೆ ಹೋಲಿಸಿಕೊಳ್ಳುತ್ತಿದ್ದವರು, ಇದೀಗ ಪದೋನ್ನತಿ ಪಡೆದುಕೊಂಡು ನಾಲ್ವಡಿ ಮಹಾರಾಜರೊಂದಿಗೆ ಹೋಲಿಸಿಕೊಳ್ಳುತ್ತಿರುವುದು ಅತ್ಯಂತ ಖಂಡನೀಯ,ಇದು ದುರಹಂಕಾರದ ಪರಮಾವಧಿ ಎಂದು ಕಿಡಿಕಾರಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಕೊಡುಗೆ ನಮ್ಮ ಜಿಲ್ಲೆಗೆ ನಿಜವಾಗಿ ಹೇಳಬೇಕೆಂದರೆ ಶೂನ್ಯ. ಶಿವಮೊಗ್ಗವನ್ನು ಯಡಿಯೂರಪ್ಪ , ಹಾಸನವನ್ನು ದೇವೇಗೌಡರು ಅಭಿವೃದ್ಧಿ ಮಾಡಿದಂತೆ ಸಿದ್ದರಾಮಯ್ಯರವರು ಮೈಸೂರನ್ನು ಏನು ಅಭಿವೃದ್ಧಿ ಮಾಡಿಲ್ಲ. ಕಳೆದ 3-4 ವರ್ಷಗಳಿಂದ ನಾವು ಮೈಸೂರಿನಲ್ಲಿ ಒಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಿ ಎಂದು ಮನವಿಗಳನ್ನು ನೀಡುತ್ತಿದ್ದರೂ, ಇನ್ನೂ ನೀಡಿಲ್ಲ. ಒಂದು ಕಾಲೇಜನ್ನೇ ನೀಡದವರು, ಮೈಸೂರಿಗೆ ಏನು ಕೊಡುಗೆ ನೀಡಿದ್ದಾರೆ ಎಂದು ಕಾರವಾಗಿ ಪ್ರಶ್ನಿಸಿದರು.

ಕೇವಲ ತಮ್ಮ ರಾಜಕೀಯ ಪ್ರಚಾರಕ್ಕಾಗಿ, ಮನಬಂದಂತೆ ಹುಚ್ಚು ಹೇಳಿಕೆ ನೀಡುತ್ತಿರುವ ಎಂಎಲ್ಸಿ ಡಾ. ಯತೀಂದ್ರ ಅವರು ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಕರ್ನಾಟಕ ಸೇನಾಪಡೆಯ ಸದಸ್ಯರು ಹಾಗೂ ಸಾಮಾಜಿಕ ಹೋರಾಟಗಾರರು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು. ವಿಕ್ರಂ ಅಯ್ಯಂಗಾರ್, ಗೋಲ್ಡನ್ ಸುರೇಶ್, ಪ್ರಜೀಶ್, ಸಿಂದುವಳ್ಳಿ ಶಿವಕುಮಾರ್, ವರಕೂಡುಕೃಷ್ಣೇಗೌಡ, ಬೋಗಾದಿ ಸಿದ್ದೇಗೌಡ, ನೇಹಾ, ಆನಂದ್ ಗೌಡ, ಡಾ. ಶಾಂತರಾಜೇ ಅರಸ್, ಭಾಗ್ಯಮ್ಮ, ನಂದಕುಮಾರ್, ಹೊನ್ನೇಗೌಡ, ತಾಯೂರು ಗಣೇಶ್, ರಾಧಾಕೃಷ್ಣ, ಎಳನೀರು ರಾಮಣ್ಣ, ಶಿವ ನಾಯ್ಕ, ರಘು ಅರಸ್, ಪ್ರಭಾಕರ್, ದರ್ಶನ್ ಗೌಡ, ಚಂದ್ರಶೇಖರ್, ಕುಮಾರ್, ಸ್ವಾಮಿ ಗೌಡ, ಮೂರ್ತಿ ಲಿಂಗಯ್ಯ, ರವೀಶ್, ವಿಷ್ಣು ಸೇರಿದಂತೆ ‌ಹಲವಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ Read More

ಸಣ್ಣ ವ್ಯಾಪಾರಿಗಳಿಗೆ ಜಿ ಎಸ್ ಟಿ:ಸರ್ಕಾರದ ವಿರುದ್ಧ ‌ಕರ್ನಾಟಕ ಸೇನಾಪಡೆ ಪ್ರತಿಭಟನೆ

ಮೈಸೂರು: ಜಿ.ಎಸ್.ಟಿ. ವ್ಯಾಪ್ತಿಗೆ ಒಳಪಡದಿರುವ ಸಣ್ಣ ವ್ಯಾಪಾರಿಗಳ ನೆಮ್ಮದಿ ಕೆಡಿಸುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ಸದಸ್ಯರು ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಣ್ಣ ವ್ಯಾಪಾರಿಗಳಿಗೆ ರಾತ್ರೋರಾತ್ರಿ ಲಕ್ಷಾಂತರ ರೂ. ಜಿ ಎಸ್ ಟಿ ಪಾವತಿಸುವಂತೆ ರಾಜ್ಯ ಸರ್ಕಾರ ನೋಟಿಸ್ ನೀಡಿರುವುದನ್ನು ಪ್ರತಿಭಟನಾ ನಿರತರು ಖಂಡಿಸಿದರು.

ಜಿಎಸ್‌ಟಿ ಹೆಸರಿನಲ್ಲಿ ಹೆಚ್ಚು ತೆರಿಗೆ ವಿಧಿಸುವ ಮೂಲಕ ಸಣ್ಣ ವ್ಯಾಪಾರಿಗಳನ್ನು ಸರ್ಕಾರ ಸಂಕಷ್ಟಕ್ಕೆ ತಳ್ಳುತ್ತಿದೆ. ಹಾಲು, ಹೂ, ಹಣ್ಣು, ತರಕಾರಿ ವ್ಯಾಪಾರಿಗಳು ಇಂದು ಬಂಡವಾಳ ಹಾಕಿದರೆ ನಾಳೆ 500-1000 ರೂ ಲಾಭ ಬರುತ್ತದೆ. ಮೊದಲು ಟ್ಯಾಕ್ಸ್ ಎಂಬುದು ಶ್ರೀಮಂತರ ಮೇಲಿತ್ತು. ಈಗ ದಿನಗೂಲಿ ವ್ಯಾಪಾರಿಗಳ ಮೇಲೂ ಜಿ ಎಸ್ ಟಿ ಹೊರೆ ಹೊರಿಸುತ್ತಿರುವುದರಿಂದ ಸಣ್ಣ ವ್ಯಾಪಾರಿಗಳು ಜೀವನ ನಡೆಸುವುದೇ ಕಷ್ಟಕರವಾಗಿದೆ ಎಂದು ಕಿಡಿಕಾರಿದರು.

ಯುಪಿಐ ಆಧಾರಿತ ವಹಿವಾಟುಗಳ ಮೇಲೆ ಜಿಎಸ್‌ಟಿ ವಿಧಿಸುವ ವಿಚಾರ ರಾಜ್ಯದಲ್ಲಿ ಗೊಂದಲದ ಗೂಡಾಗಿದೆ. ಈ ವಿಚಾರವಾಗಿ ವಿರೋಧ ವ್ಯಕ್ತಪಡಿಸಿರುವ ಸಣ್ಣ ವ್ಯಾಪಾರಿಗಳು ಜುಲೈ 23ರಿಂದ 25ರ ವರೆಗೆ ವ್ಯಾಪಾರ ವಹಿವಾಟು ಬಂದ್ ಗೆ ಕರೆ ನೀಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಈ ವೇಳೆ ಕರ್ನಾಟಕ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ತಿಳಿಸಿದರು.

ಇದರಿಂದ ಸಣ್ಣ ವ್ಯಾಪಾರಿಗಳು ಯುಪಿಐ ವಹಿವಾಟಿನ ಸ್ಕ್ಯಾನರ್ ತೆಗೆದು ಹರಿದು ಹಾಕಿ, ನಗದು ಪಾವತಿಗೆ ಆದ್ಯತೆ ನೀಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಎಲ್ಲಾ ವಹಿವಾಟು ನಗದಿನಲ್ಲೇ ನಡೆಸಿದರೆ ನಾವು ಮತ್ತೆ 5 ವರ್ಷ ಹಿಂದೆ ಹೋಗುತ್ತೇವೆ. ಇದರಿಂದ ಕಪ್ಪು ಹಣ ಹೆಚ್ಚಾಗುವ ಸಾಧ್ಯತೆ ಇದೆ ಮತ್ತು ಚಿಲ್ಲರೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಚಿಕ್ಕಪುಟ್ಟ ಪೆಟ್ಟಿಗೆ ಅಂಗಡಿಗಳು ತರಕಾರಿ, ಹೂ ಮಾರಾಟಗಾರರಲ್ಲೂ ಸಹ ಈಗ ಯುಪಿಐ ಸ್ಕ್ಯಾನರ್ ಇದೆ. ಹೀಗಿರುವಾಗ ಶೇಕಡ 1% ಜಿಎಸ್ಟಿ ಗೋಸ್ಕರ ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳ ರಕ್ತ ಹೀರಲು ಹೋಗಬಾರದು. ರಾಜ್ಯ ಸರ್ಕಾರ ಈಗಾಗಲೇ ಬಿಟ್ಟಿ ಭಾಗ್ಯಗಳಿಗಾಗಿ ಎಲ್ಲಾ ವಸ್ತುಗಳ ಬೆಲೆ ಮತ್ತು ತೆರಿಗೆಗಳನ್ನು ಏರಿಸಿ, ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿ ಈಗ ಸಣ್ಣ ವ್ಯಾಪಾರಿಗಳ ಮೇಲೂ ಕಣ್ಣಿಟ್ಟಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆಯು, ಊಟಕ್ಕೂ ಪರದಾಡುವ ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೀಡಿರುವುದು ಸರಿಯಲ್ಲ. ಕೂಡಲೇ ಈ ಆದೇಶವನ್ನು ಮುಖ್ಯಮಂತ್ರಿಗಳು ಹಿಂಪಡೆದು ಸಣ್ಣ ವ್ಯಾಪಾರಿಗಳಿಗೆ ರಕ್ಷಣೆ ನೀಡಬೇಕು ಮತ್ತೆ ಯುಪಿಐ ವಹಿವಾಟುಗಳು ಸರಾಗವಾಗಿ ನಡೆಯುವಂತೆ ಸಹಕರಿಸಬೇಕೆಂದು ಪ್ರತಿಭಟನಾ ನಿರತರು ಒತ್ತಾಯಿಸಿದರು

ಪ್ರತಿಭಟನೆಯಲ್ಲಿ ಪ್ರಭುಶಂಕರ, ಗೋಲ್ಡನ್ ಸುರೇಶ್, ಸಿಂದುವಳ್ಳಿ ಶಿವಕುಮಾರ್, ಸುಬ್ಬೇಗೌಡ, ಬಸವರಾಜು, ಹೊನ್ನೇಗೌಡ, ಕೃಷ್ಣೇಗೌಡ, ಬೋಗಾದಿ ಸಿದ್ದೇಗೌಡ, ನೇಹಾ, ಡಾ. ಶಾಂತರಾಜೇ ಅರಸ್, ಆನಂದ್ ಗೌಡ, ಭಾಗ್ಯಮ್ಮ ಹನುಮಂತಯ್ಯ, ತಾಯೂರು ಗಣೇಶ್, ಪ್ರದೀಪ್, ಪದ್ಮ, ರಾಧಾಕೃಷ್ಣ, ಎಳನೀರು ರಾಮಣ್ಣ, ರಘು ಅರಸ್, ದರ್ಶನ್ ಗೌಡ, ಚಂದ್ರಶೇಖರ್, ಕುಮಾರ್, ಸ್ವಾಮಿ ಗೌಡ, ಮೂರ್ತಿ ಲಿಂಗಯ್ಯ, ಗಣೇಶ್ ಪ್ರಸಾದ್, ರವೀಶ್, ವಿಷ್ಣು ಮುಂತಾದವರು ಪಾಲ್ಗೊಂಡಿದ್ದರು.

ಸಣ್ಣ ವ್ಯಾಪಾರಿಗಳಿಗೆ ಜಿ ಎಸ್ ಟಿ:ಸರ್ಕಾರದ ವಿರುದ್ಧ ‌ಕರ್ನಾಟಕ ಸೇನಾಪಡೆ ಪ್ರತಿಭಟನೆ Read More

ಮುಷ್ಕರಕ್ಕೆ ಮುಂದಾಗಿದ್ದಸಾರಿಗೆ ನೌಕರರಿಗೆ ಶಾಕ್:ಎಸ್ಮಾ‌ಜಾರಿ

ಬೆಂಗಳೂರು: ಸಾರಿಗೆ ಬಂದ್‌ ಮಾಡಿ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರ‌ ಸಂಘಟನೆಗಳಿಗೆ ಸರ್ಕಾರ ಶಾಕ್‌ ನೀಡಿದೆ, ಪ್ರತಿಭಟನೆ ನಿಷೇಧಿಸಿ ಕಾರ್ಮಿಕ ಇಲಾಖೆ ಎಸ್ಮಾ ಜಾರಿ ಮಾಡಿದೆ.

ಮುಷ್ಕರ ನಡೆಸದಂತೆ ಸಾರಿಗೆ ನೌಕರರಿಗೆ ವಾರ್ನ್ ಮಾಡಲಾಗಿದೆ.

ಆ.5 ರಂದು ಬಸ್ ನಿಲ್ಲಿಸಿ ಮುಷ್ಕರ ನಡೆಸಲು ಸಾರಿಗೆ ಸಂಘಟನೆಗಳು ಮುಂದಾಗಿದ್ದವು. ಜನಸಾಮಾನ್ಯರಿಗೆ ಸಾರಿಗೆ ಸೇವೆ ಓದಗಿಸುವುದು ಅಗತ್ಯವಾಗಿದೆ, ಈ ಹಿನ್ನೆಲೆಯಲ್ಲಿ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ರಡಿ ಎಸ್ಮಾ ಜಾರಿ ಮಾಡಲಾಗಿದೆ.

ಇಂದಿನಿಂದ 6 ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ.

ಜು.1 ರಿಂದ ಡಿ.31ರ ವರೆಗೆ ನಿಗಮದಲ್ಲಿ‌ ಮುಷ್ಕರ ನಿರ್ಬಂಧಿಸಿ ಕೆಎಸ್‌ಆರ್‌ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಲಾಗಿದೆ.

ಸರ್ಕಾರದ ಅಧಿಸೂಚನೆಯ ಪ್ರತಿಯನ್ನು ಎಲ್ಲಾ ಘಟಕ, ಕಾರ್ಯಾಗಾರ, ಕಚೇರಿ ಮತ್ತು ಬಸ್‌ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸುವ ಮೂಲಕ ಈ ವಿಚಾರವನ್ನು ಎಲ್ಲಾ ನೌಕರರ ಗಮನಕ್ಕೆ ತರಲಾಗುವುದು ಎಂದು ಇಲಾಖೆ ತಿಳಿಸಿದೆ.

ಮುಷ್ಕರಕ್ಕೆ ಮುಂದಾಗಿದ್ದಸಾರಿಗೆ ನೌಕರರಿಗೆ ಶಾಕ್:ಎಸ್ಮಾ‌ಜಾರಿ Read More

ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಕ ಸೇ ಪಡೆ ಪ್ರತಿಭಟನೆ

ಮೈಸೂರು, ಜು.1: ಆಷಾಢ ದಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆಯವರು ಪ್ರತಿಭಟನೆ ನಡೆಸಿದರು.

ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ವಿಫಲವಾಗಿರುವ ಶ್ರೀ ಚಾಮುಂಡೇಶ್ವರಿ ಬೆಟ್ಟ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ಸದಸ್ಯರು ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ, ಕಳೆದ ವಾರ ಸುದ್ದಿಗೋಷ್ಠಿಯಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತಾದಿಗಳಿಗೆ ಡ್ರೈ ಫ್ರೂಟ್ಸ್ ,ಬಾದಾಮಿ ಹಾಲು ನೀಡಿ ಅರ್ಧ ಗಂಟೆ ಒಳಗಡೆ ದರ್ಶನ ಮಾಡಿಸುತ್ತೇವೆ ಎಂದು ಹೇಳಿತ್ತು,ಆದರೆ ಇಲ್ಲಿ ಯಾವುದೂ ಇಲ್ಲ. ಜಿಲ್ಲಾಡಳಿತ ಮೆಟ್ಟಿಲು ಹತ್ತಿ ಬಂದವರನ್ನು ಕುರಿ ದೊಂಬಿಗೆ ತುಂಬುವ ಹಾಗೆ ತುಂಬುತ್ತಿದ್ದು ಇದು ಅತ್ಯಂತ ಖಂಡನೀಯ ಎಂದು ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಆಕ್ರೋಶ‌ ವ್ಯಕ್ತಪಡಿಸಿದರು.

ಇಲ್ಲಿ ಯಾವ ವ್ಯವಸ್ಥೆಯೂ ಸರಿಯಾಗಿ ಇಲ್ಲ. 5-6 ಗಂಟೆಗಳ ಕಾಲ ಕ್ಯೂ ನಲ್ಲಿ ನಿಂತಿದ್ದರೂ, ಕುಡಿಯಲು ಒಂಚೂರು ನೀರು ಇಲ್ಲ ಹಾಗೂ ಮೆಟ್ಟಿಲು ಹತ್ತಿ ಬರುವರಿಗೆ ಶೌಚಾಲಯಗಳಂತೂ ಇಲ್ಲವೇ ಇಲ್ಲ ಎಂದು ಆರೋಪಿಸಿದರು.

ಜೊತೆಗೆ ಪ್ರತಿವರ್ಷ ಇರುತ್ತಿದ್ದ ದಾಸೋಹ, ಊಟದ ವ್ಯವಸ್ಥೆಯು ಸಹ ಮೊದಲಿದ್ದ ಸ್ಥಳದಲ್ಲಿ ಇಲ್ಲ. ಸಮರ್ಪಕವಾಗಿಲ್ಲ, ಹಿಂದಿನ ವರ್ಷಗಳಲ್ಲಿ ವಾರಕ್ಕೊಬ್ಬ ಭಕ್ತಾದಿಗಳು ಬಹಳ ಅಚ್ಚುಕಟ್ಟಾಗಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದರು. ಈ ಬಾರಿ ಬೆಟ್ಟದ ಪ್ರಾಧಿಕಾರ ದುಡ್ಡು ಹೊಡೆಯಲು ತಾನೇ ಮಾಡಿದೆ. ಜೊತೆಗೆ ಡ್ರೈ ಫ್ರೂಟ್ಸ್ ಹೆಸರಿನಲ್ಲೂ ಹಣ ಲೂಟಿ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಭಕ್ತಾದಿಗಳೇ 2000 ರೂ. ಇದ್ದರೆ ಬೆಟ್ಟಕ್ಕೆ ಬನ್ನಿ. ಇಲ್ಲವಾದರೆ ಮನೆಯಿಂದಲೇ ತಾಯಿಗೆ ಕೈ ಮುಗಿದು ಬಿಡಿ, ಎನ್ನುವಂತಿತ್ತು ಜಿಲ್ಲಾಡಳಿತದ ವ್ಯವಸ್ಥೆ ಎಂದು ಟೀಕಿಸಿದರು.

ಉಳ್ಳ ಭಕ್ತಾದಿಗಳ, ಭಕ್ತ ಪರಾಕಾಷ್ಠೆಯ ಹೆಸರಲ್ಲಿ ವಿಶೇಷ ದರ್ಶನದಿಂದ ಸರ್ಕಾರ 2000 ರೂ ಲೂಟಿ ಮಾಡುತ್ತಿದೆ. ಈ ವಿಶೇಷ ದರ್ಶನದಿಂದಾಗಿ ಸರ್ಕಾರ ಉಳಿದ ಭಕ್ತಾದಿಗಳನ್ನು ಕಡೆಗಣಿಸುತ್ತಿದೆ.

ಬರೀ ಆಷಾಡ ಶುಕ್ರವಾರಕ್ಕೆ ಮಾತ್ರ ಸೀಮಿತವಾಗಿದ್ದ, ( ಖಾಸಾಗಿ ವಾಹನಗಳಿಗೆ ಪ್ರವೇಶ ನಿಶಿದ್ಧವಾಗಿದ್ದ ) ಈ ವ್ಯವಸ್ಥೆಯನ್ನು ಈ ವರ್ಷ 2000 ರೂ. ವಿಶೇಷ ದರ್ಶನದಿಂದಾಗಿ ಶನಿವಾರ ಭಾನುವಾರಗಳಿಗೂ ವಿಸ್ತರಿಸಿದೆ, ಸ್ಥಳೀಯ ಅಂಗಡಿ ವ್ಯಾಪಾರಿಗಳನ್ನು ತನ್ನ ಸ್ವಾರ್ಥಕ್ಕೊಸ್ಕರ ಈ 3 ದಿನಗಳು ಮುಚ್ಚಿಸಿ, ಅವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

ನಾಡದೇವಿ ತಾಯಿ ಚಾಮುಂಡೇಶ್ವರಿ ಮಹಾರಾಜರ ಹಾಗೂ ಸಾರ್ವಜನಿಕ ಭಕ್ತಾದಿಗಳ ಸ್ವತ್ತು. ಸರ್ಕಾರ ಈ ರೀತಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಇಷ್ಟೆಲ್ಲಾ ಅನಾನುಕೂಲ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.

ಕೂಡಲೇ ಚಾಮುಂಡೇಶ್ವರಿ ಬೆಟ್ಟ ಪ್ರಾಧಿಕಾರ ಹಾಗೂ ಸರ್ಕಾರ ಉಚಿತ ದರ್ಶನಕ್ಕೆ ಹಾಗೂ ಮೆಟ್ಟಿಲು ಹತ್ತಿ ಬರುವ ಭಕ್ತಾದಿಗಳಿಗೆ ಸಮರ್ಪಕವಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ ಹಾಗೂ ಬೇಗ ದರ್ಶನ ಮಾಡಿಸುವ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು. ಗೋಲ್ಡನ್ ಸುರೇಶ್, ಪ್ರಭುಶಂಕರ್, ಪ್ರಜೀಶ್, ಸಿಂದುವಳ್ಳಿ ಶಿವಕುಮಾರ್, ಮಧುವನ ಚಂದ್ರು, ಬೋಗಾದಿ ಸಿದ್ದೇಗೌಡ, ಶಿವಲಿಂಗಯ್ಯ, ನೇಹಾ , ಭಾಗ್ಯಮ್ಮ, ಪದ್ಮ, ಕೃಷ್ಣೇಗೌಡ, ಗಿರೀಶ್, ನಾಗರಾಜು, ಹನುಮಂತಯ್ಯ, ತಾಯೂರು ಗಣೇಶ್, ಕುಮಾರ್ ಗೌಡ, ನಾರಾಯಣ ಗೌಡ, ಆನಂದ್ ಗೌಡ, ಬಸವರಾಜು, ಗೀತಾ ಗೌಡ, ಪ್ರಭಾಕರ್, ಮೂರ್ತಿ ಲಿಂಗಯ್ಯ, ರಘು ಅರಸ್, ರಘು ಆಚಾರ್, ನಿತ್ಯಾನಂದ, ದರ್ಶನ್ ಗೌಡ, ಸ್ವಾಮಿ ಗೌಡ, ಗಣೇಶ್ ಪ್ರಸಾದ್, ಪರಿಸರ ಚಂದ್ರು, ಚಂದ್ರಶೇಖರ್, ವಿಷ್ಣು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಕ ಸೇ ಪಡೆ ಪ್ರತಿಭಟನೆ Read More

ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಸೀತಾರಾಮ್ ಗುಂಡಪ್ಪ ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ಅಮಾಯಕ 11 ಜನ ಅಭಿಮಾನಿಗಳ ಮರಣದ ಹೊಣೆ ಹೊತ್ತು ಸಿಎಂ,ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ವನದಲ್ಲಿ
ಆಮ್ ಆದ್ಮಿ ಪಕ್ಷದಿಂದ‌ ಸರ್ಕಾರದ ‌ವಿರುದ್ಧ ಪ್ರತಿಭಟನೆ ನಡೆಸಿ ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ‌ ಒತ್ತಾಯಿಸಲಾಯಿತು.

ಈ ವೇಳೆ‌ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಅವರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ನಾಚಿಕೆಗೇಡಿನ, ಬಂಡತನದ ನಡೆಯಿಂದಾಗಿ 11 ಮಂದಿ ಅಮಾಯಕ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ನಿಸ್ಸಹಾಯಕ ಪೊಲೀಸ್ ಅಧಿಕಾರಿಗಳು ಹಾಗೂ ಕೆಲ ಕಂಪನಿಯ ನೌಕರರುಗಳನ್ನು ಬಂಧಿಸಿ ಪ್ರಕರಣವನ್ನು ಮುಚ್ಚಿ ಹಾಕುವ ಕುತಂತ್ರ ನಡೆಸುತ್ತಿದೆ,ಅಮಾಯಕರ ಈ ಸಾವು ಸರ್ಕಾರಿ ಪ್ರಾಯೋಜಿತ ಕಗ್ಗೊಲೆ ಎಂಬಂತೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಹೇಳಿದರು.

ಕೂಡಲೇ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಿ ತೊಲಗಬೇಕೆಂದು ಸೀತಾರಾಮ್ ಗುಂಡಪ್ಪ ಆಗ್ರಹಿಸಿದರು.

ಈಗಾಗಲೇ ಆಮ್ ಆದ್ಮಿ ಪಕ್ಷದ ಕಾನೂನು ಘಟಕವು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿದ ಪರಿಣಾಮವಾಗಿ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಲು ಹಾಗೂ ಪ್ರಕರಣದಿಂದ ನುಣಿಚಿಕೊಳ್ಳಲು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಅಂದಾಜುಂದಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ‌ಟೀಕಿಸಿದರು.

ಜನರು ಸೂಕ್ಷ್ಮ ಕಣ್ಣುಗಳಿಂದ ಎಲ್ಲವನ್ನು ಗಮನಿಸುತ್ತಿದ್ದಾರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಸೀತಾರಾಮ್ ಗುಂಡಪ್ಪ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಮಾತನಾಡಿ ನಮ್ಮ ಪಕ್ಷ ತಪ್ಪಿತಸ್ಥರಾಗಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ತನಕ ಸುದೀರ್ಘ ಹೋರಾಟವನ್ನು ನಡೆಸಲಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಮುಖಂಡರುಗಳಾದ ಜಗದೀಶ್ ಚಂದ್ರ, ಗೋಪಾಲ್, ಡಾ.ಯಲ್ಲಪ್ಪ, ಅನಿಲ್ ನಾಚಪ್ಪ ,ಶಶಿಧರ್ ಆರಾಧ್ಯ ,ಸರವಣನ್,ಬಸವರಾಜ್ ಮೋಹನ್ ರಾಜ್, ಅಶೋಕ್ ಮೃತ್ಯುಂಜಯ ,ಜಗದೀಶ್ ಬಾಬು,
ಭಾನು ಪ್ರಿಯಾ ,ಪುಷ್ಪಾ ಕೇಶವ್,
ಶರಣ್ಯ ,ಎಡ್ವರ್ಡ್,ಅನಿಲ್ ಕುಮಾರ್ ,ನವೀನ್ ಅಯ್ಯರ್,
ಅಣ್ಣಾ ನಾಯಕ್,ಪುಟ್ಟಣ್ಣ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಸೀತಾರಾಮ್ ಗುಂಡಪ್ಪ ಆಗ್ರಹ Read More

ಕಮಲ್ ಹಸನ್ ಕ್ಷಮೆ‌ಯಾಚನೆಗೆ ವಾಟಾಳ್ ನಾಗರಾಜ್ ಆಗ್ರಹ

ಮೈಸೂರು, ಜೂ.2: ಮೈಸೂರಿನ ಆರ್ ಗೇಟ್ ಸರ್ಕಲ್ ಬಳಿ ಕನ್ನಡ ಚಳವಳಿಗಳ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕಮಲ್ ಹಸನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ‌ ವಾಟಾಳ್, ಈ ಕೂಡಲೇ ತಮಿಳು ನಟ ಹಾಸನ್ ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಕ್ಷಮೆ ಕೇಳಬೇಕು‌ ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಕಮಲ್ ಹಸನ್ ಮೇಲೆ ಕೇಸು ದಾಖಲಿಸಿ ಅವರನ್ನು ತಮಿಳುನಾಡಿನಿಂದ ಕರೆತಂದು ಕರ್ನಾಟಕದ ಜೈಲಿಗೆ ಹಾಕಬೇಕು ಎಂದು ಒತ್ತಾಯಿಸಿದರು.

ಕಮಲ್ ರ ಸಿನಿಮಾವನ್ನ ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಸರ್ಕಾರ ಅವಕಾಶ ನೀಡಬಾರದು ಎಂದು ವಾಟಾಳ್ ನಾಗರಸಜ್ ಎಚ್ವರಿಸಿದರು.

ಪ್ರತಿಭಟನೆಯಲ್ಲಿ ಪಾರ್ಥಸಾರಥಿ, ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಶಿವಶಂಕರ್, ತಾಯೂರು ಗಣೇಶ್, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ, ವರಕೂಡು ಕೃಷ್ಣೇಗೌಡ, ಚಂದ್ರು , ಪ್ರಭುಶಂಕರ, ಮಧುವನ ಚಂದ್ರು, ಹನುಮಂತಯ್ಯ, ಪ್ರಭಾಕರ್, ರಾಜೂಗೌಡ, ಭಾಗ್ಯಮ್ಮ, ರಘು ಅರಸ್, ಗಣೇಶ್ ಪ್ರಸಾದ್, ಗುರು ಮಲ್ಲಪ್ಪ , ಸುಬ್ಬೇಗೌಡ, ಕೃಷ್ಣಪ್ಪ , ರವೀಶ್, ನೇಹಾ , ವಿಷ್ಣು ಮತ್ತಿತರರು ಪಾಲ್ಗೊಂಡಿದ್ದರು.

ಕಮಲ್ ಹಸನ್ ಕ್ಷಮೆ‌ಯಾಚನೆಗೆ ವಾಟಾಳ್ ನಾಗರಾಜ್ ಆಗ್ರಹ Read More

ಬಲವಂತದ ಮತಾಂತರ ಆರೋಪ:ಶ್ರೀರಂಗಪಟ್ಟಣದಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಬಲವಂತದ ಮತಾಂತರದ ಆರೋಪ ಕೇಳಿಬಂದಿದ್ದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮಿಷನರಿಗಳು ಹಣದ ಆಮಿಷವೊಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಬಲವಂತದ ಮತಾಂತರದ ವಿರುದ್ಧ ಶ್ರೀರಂಗಪಟ್ಟಣ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.

ಶ್ರೀರಂಗಪಟ್ಟಣ ಬಸ್ ನಿಲ್ದಾಣದಿಂದ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿವರೆಗೆ ಮೆರವಣಿಗೆ ಹೊರಟಿತು.

ಈ ವೇಳೆ ಬಾಲರಾಜ್ ಮತ್ತಿತರ ಮುಖಂಡರು ಮಾತನಾಡಿ, ಬಲವಂತದ ಮತಾಂತರವನ್ನು ಖಂಡಿಸಿದರು.ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.

ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಘಟನೆಯೊಂದರಲ್ಲಿ, ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆಯ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣವೂ ಹಿಂದೂ ಸಂಘಟನೆಗಳ ಆಕ್ರೋಶ, ಹೋರಾಟಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಇಂತಹ ಘಟನೆಗಳು ಹೆಚ್ಚಾಗುತ್ತವೆ ಎಂದು ಕಿಡಿಕಾರಿದರು.

ಬಲವಂತದ ಮತಾಂತರದ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಬೃಹತ್ ಜನಾಂದೋಲನಕ್ಕೆ ಕರೆ ನೀಡಿದ್ದೇವೆ ಎಂದು ಮುಖಂಡರು ತಿಳಿಸಿದರು.

ಬಲವಂತದ ಮತಾಂತರ ಆರೋಪ:ಶ್ರೀರಂಗಪಟ್ಟಣದಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ Read More

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಮಾ.5: ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಜಾರಿಗೊಳಿಸಿರುವ ಎಸ್ ಸಿ ಎಸ್ ಪಿ / ಟಿ ಎಸ್ ಪಿ ಯೋಜನೆಯ ಅನುದಾನ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ಹಾಗೂ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , ವಿಧಾನಪರಿಷತ್ ವಿಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಬೆಂಗಳೂರಿನ ಸಂಸದರು ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ Read More

ನಾಳೆ ಮೈಸೂರಿನಲ್ಲಿ ಜೆಡಿಎಸ್ ಪ್ರತಿಭಟನೆ

ಮೈಸೂರು, ಮಾ.5: ಜೆಡಿಎಸ್ ವತಿಯಿಂದ ಮಾ.6ರ ಬೆಳಿಗ್ಗೆ 10 ಗಂಟೆಗೆ ಮೈಸೂರು ಗಾಂಧಿ ವೃತ್ತ ದ ಸಮೀಪ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅನೀತಿ ತಾರತಮ್ಯ,ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬ ಖಂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಘಟಕದ ಸೂಚನೆ ಮೇರೆಗೆ ಜಿಲ್ಲಾ ಜೆಡಿಎಸ್ ಹಮ್ಮಿಕೊಂಡಿರುವ
ಈ ಪ್ರತಿಭಟನೆಗೆ ಮಾಜಿ ಸಚಿವರು ಹಾಲಿ ಮಾಜಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು,ಮೈಸೂರ್ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು,ಮಾಜಿ ಸದಸ್ಯರು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಹಾಲಿ ಮಾಜಿ ಅಧ್ಯಕ್ಷರು ಸದಸ್ಯರು ಮತ್ತು ಪಕ್ಷದ ಎಲ್ಲಾ ವಿಭಾಗದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು‌ ಭಾಗವಹಿಸಲಿದ್ದಾರೆ.

ನಾಳೆ ಮೈಸೂರಿನಲ್ಲಿ ಜೆಡಿಎಸ್ ಪ್ರತಿಭಟನೆ Read More