ಹೊನ್ನಿಕುಪ್ಪೆ ಗ್ರಾಮದಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು: ಹುಣಸೂರು ತಾಲೂಕು ಹೊನ್ನಿಕುಪ್ಪೆ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಗ್ರಾಮದ ಅಂಗನವಾಡಿ ಶಾಲೆಯಲ್ಲಿ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಐದು ವರ್ಷದ ಒಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೊ ಲಸಿಕೆಯನ್ನು ತಪ್ಪದೇ ಹಾಕಿಸಬೇಕೆಂದು ಈ ವೇಳೆ ಅಧಿಕಾರಿಗಳು ತಾಯಂದಿರಲ್ಲಿ ಮನವಿ ಮಾಡಿದರು.
ಅಂಗನವಾಡಿ ಕಾರ್ಯಕರ್ತರು,ಆಶಾ ಕಾರ್ಯಕರ್ತರು ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.