ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನವಾಗಿ ಮಾತಾಡಿದ್ದಾರೆ,ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ,ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿ ವಿರುದ್ಧ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು, ಆದರೂ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್‌ ಸೂಚಿಸಿದೆ. ಈ ಸಮಸ್ಯೆಗಳನ್ನು ಮರೆಮಾಚಲು ರವಿಕುಮಾರ್‌ ಹೇಳಿಕೆಯನ್ನು ವಿವಾದ ಮಾಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿಯವರು ಮಾಡಿದರೆ ಎಫ್‌ಐಆರ್‌ ದಾಖಲಿಸುತ್ತಾರೆ. ಕಾಂಗ್ರೆಸ್‌ನವರು ಮಾಡಿದರೆ ಯಾವುದೇ ದೂರು ದಾಖಲಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಕರೆಯುತ್ತಾರೆ. ರಾಷ್ಟ್ರಪತಿಗಳಿಗೆ ಗೌರವ ಕೊಡದೆ ಏಕವಚನದಲ್ಲೇ ಮಾತಾಡುತ್ತಾರೆ. ಅಂದರೆ ಕಾಂಗ್ರೆಸ್‌ಗೆ ಬೇರೆಯೇ ರೀತಿಯ ಕಾನೂನು ಇದೆ ಎಂದಾಯಿತು. ರವಿಕುಮಾರ್‌ ಯಾವ ರೀತಿಯ ಅಶ್ಲೀಲ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

ಹಾಸನದಲ್ಲಿ ಸರಣಿ ಹೃದಯಾಘಾತ ಪ್ರಕರಣ ಕಂಡುಬಂದರೂ ಜಿಲ್ಲಾ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ. ಕೋವಿಡ್‌ ಲಸಿಕೆಯಿಂದ ಹೀಗಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋವಿಡ್‌ ಲಸಿಕೆಯನ್ನು ಇಡೀ ದೇಶದ ಜನರಿಗೆ ನೀಡಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದೆ ಲಸಿಕೆ ಬಗ್ಗೆ ಆರೋಪ ಮಾಡಲಾಗುತ್ತಿದೆ ಎಂದು ದೂರಿದರು.

ಚಿಕ್ಕಮಗಳೂರು, ಕೊಡಗು, ಸಕಲೇಶಪುರದಲ್ಲಿ ಕಾಫಿ ಬೆಳೆ ಹಾನಿಯಾಗಿದ್ದರೂ, ತೋಟಗಾರಿಕೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ರೈತರನ್ನು ಭೇಟಿ ಮಾಡಿಲ್ಲ. ನಾನು ಹಾಸನಕ್ಕೆ ಭೇಟಿ ನೀಡಿ, ಹೃದಯಾಘಾತ ಹಾಗೂ ಕಾಫಿ ಬೆಳೆ ನಾಶದ ಬಗ್ಗೆ ವಿಚಾರಿಸುತ್ತೇನೆ. ಸರ್ಕಾರ ಕೂಡ ಈ ಕೆಲಸವನ್ನು ಕೂಡಲೇ ಮಾಡಬೇಕು ಎಂದು ಅಶೋಕ್ ಆಗ್ರಹಿಸಿದರು.

ಆರ್‌ಎಸ್‌ಎಸ್‌ಗೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ. ಇಂದಿರಾಗಾಂಧಿ ಹಾಗೂ ರಾಜೀವ್‌ಗಾಂಧಿಗೆ, ಆರ್‌ಎಸ್‌ಎಸ್‌ಗೆ ಏನೂ ಮಾಡಲು ಸಾಧ್ಯವಾಗಿಲ್ಲ. ಅಂದಿನ ಪ್ರಧಾನಿ ನೆಹರೂ ಯೋಧರಿಗೆ ರಕ್ತ ನೀಡಲು ಆರ್‌ಎಸ್‌ಎಸ್‌ನ ಸಹಾಯ ಪಡೆದಿದ್ದರು. ಅಧಿಕಾರವಿದ್ದಾಗಲೇ ಕಾಂಗ್ರೆಸ್‌ಗೆ ಆರ್‌ಎಸ್‌ಎಸ್‌ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಅಧಿಕಾರಕ್ಕೆ ಬರುವ ಅವಕಾಶವೂ ಇಲ್ಲ. ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದರು.

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ದೇವಾಲಯಗಳಿಗೆ ಹೋಗಿ ಪೂಜೆ ಮಾಡಿಸುತ್ತಿರುವುದು ಅದರ ಲಕ್ಷಣ. ಬಿಜೆಪಿಗೆ ಮದ್ದು ಅರೆಯುವ ಮೊದಲು ಕಾಂಗ್ರೆಸ್‌ಗೆ ಕಾಂಗ್ರೆಸ್ಸೇ ಮದ್ದು ಅರೆಯಲಿ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ Read More

ಅಕ್ಟೋಬರ್‌, ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಅಶೋಕ

ಬೆಂಗಳೂರು: ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆಯಾಗುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದರು.

ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದೆ, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯ ವಾಡಿದರು.

ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು, ಆದರೆ ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೆ ಹೇಳುತ್ತಿದ್ದಾರೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್‌ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ ಎಂದು ‌ಬಾಂಬ್ ಸಿಡಿಸಿದರು.

ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಿಗೆ ಈ ಸರ್ಕಾರದ ಮೇಲೆ ವಿಶ್ವಾಸ ಹೊರಟುಹೋಗಿದೆ ಎಂದು ಟೀಕಿಸಿದರು.

2028 ರವರೆಗೆ ಸಿದ್ದರಾಮಯ್ಯನವರೇ ಸಿಎಂ ಎಂದು ಡಿ.ಕೆ.ಶಿವಕುಮಾರ್‌ ಹೇಳಲಿ. ಅದನ್ನು ಆರನೇ ಗ್ಯಾರಂಟಿ ಎಂದು ಅಂದುಕೊಂಡು ಸುಮ್ಮನಾಗುತ್ತೇವೆ ಎಂದು ಅಶೋಕ್ ಸವಾಲು ಹಾಕಿದರು.

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ ಎಂದು ಹೇಳಿದ ಅಶೋಕ್, ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ವಿವಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು ಎಂದು ಹೇಳಿದರು.

ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ ಎಂದರು.

ವಾಲ್ಮೀಕಿ ನಿಗಮದ ಹಗರಣವನ್ನು ಸಿಬಿಐಗೆ ನೀಡಿರುವುದರಿಂದ ಬಿಜೆಪಿ ಹೋರಾಟಕ್ಕೆ ಜಯ ಸಿಕ್ಕಿದೆ. ಕೋರ್ಟ್‌ ನಮಗೆ ನಿಜವಾದ ನ್ಯಾಯ ನೀಡಿದೆ ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ನಿಷೇಧ ಮಾಡಿದರೆ, ಮತ್ತೆ ಸಂಘಟನೆ ಪುಟಿದೇಳುತ್ತದೆ. ನಾನು, ಪ್ರಧಾನಿ ನರೇಂದ್ರ ಮೋದಿ, ಅನೇಕ ರಾಜ್ಯಗಳ ರಾಜ್ಯಪಾಲರು, ಹಲವಾರು ಸಂಸದರು, ಶಾಸಕರು ಆರ್‌ಎಸ್‌ಎಸ್‌ನಲ್ಲಿದ್ದಾರೆ. ಸಂಘಟನೆಯಲ್ಲಿ ಶಿಸ್ತನ್ನು ಕಲಿಸಲಾಗುತ್ತದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದು ಮಾತನಾಡಬೇಕು. ಅದು ದೇಶಭಕ್ತ ಸಂಘಟನೆಯಾಗಿದ್ದು, ಅದರ ಬಗ್ಗೆ ಮಾತನಾಡುವಾಗ ಸ್ವಲ್ಪ ಅರಿವು ಇರಬೇಕು. ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ, ಸಮಾಜವಾದ ಪದ ಇಲ್ಲ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಉತ್ತರಿಸಲಿ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿದೆ. ಇವೆರಡೂ ಪದಗಳು ಸಂವಿಧಾನದ ಪುಸ್ತಕಕ್ಕೆ ಸೇರ್ಪಡೆಯಾಗುವಾಗ ಕೂಡ ಸಂಸತ್ತಿನಲ್ಲಿ ಚರ್ಚೆಯಾಗಿಲ್ಲ ಎಂದು ಆರ್.ಅಶೋಕ್ ಹೇಳಿದರು.

ಅಕ್ಟೋಬರ್‌, ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಅಶೋಕ Read More

ಕಾಂಗ್ರೆಸ್ ಸರ್ಕಾರದಿಂದ ಗಂಧದಗುಡಿ ಕಸಾಯಿಖಾನೆ ಆಗುತ್ತಿದೆ:ಅಶೋಕ್

ಬೆಂಗಳೂರು: ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ ಎಂದು ‌ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆತಂಕ ವ್ಯಕ್ತಪಡಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಂತಾಗಿದೆ ಎಂದು ಅವರು ಬೇಸರ‌ ವ್ಯಕ್ತಪಡಿಸಿದ್ದಾರೆ.

ಮಲೈ ಮಹದೇಶ್ವರ ಕಾಡು ಹುಲಿ ಸಂತತಿ ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಆದರೆ ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರ ನಮ್ಮ ವನ್ಯ ಸಂಪತ್ತನ್ನು ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಪರಿಸ್ಥಿತಿ ಹೀಗೇ ಮುಂದುವರೆದರೆ,
ಸರ್ಕಾರ ಅರಣ್ಯ ಇಲಾಖೆಯಲ್ಲಿ ಆಡಳಿತ ಬಿಗಿಗೊಳಿಸದಿದ್ದರೆ ಇಡೀ ಅರಣ್ಯವೇ ಸರ್ವನಾಶ ಆಗುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ ಅಶೋಕ್.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಮುಲಾಜಿಲ್ಲದೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಗಂಧದಗುಡಿ ಕಸಾಯಿಖಾನೆ ಆಗುತ್ತಿದೆ:ಅಶೋಕ್ Read More

ನಾಲಾಯಕ್ ಕಾಂಗ್ರೆಸ್ ಸರ್ಕಾರ :ಅಶೋಕ್ ಕಿಡಿ

ಬೆಂಗಳೂರು: ಒಂದು ನೇಮಕಾತಿ ಪರೀಕ್ಷೆಯನ್ನೆ ನೆಟ್ಟಗೆ ನಡೆಸಲು ‘ಕೈ’ಲಾಗದಿರುವ ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ.

ಈಗ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆ ಎರಡು ದಿನಗಳ ಮುಂಚೆಯೇ ಸೋರಿಕೆ ಆಗಿತ್ತು ಎನ್ನುವ ಸುದ್ದಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಮರ್ಮಾಘಾತ ನೀಡಿದೆ ಎಂದು ಟ್ವೀಟ್ ಮಾಡಿ ಆತಂಕ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರೇ ಒಂದು ಸ್ಪರ್ಧಾತ್ಮಕ ಪರೀಕ್ಷೆಯನ್ನ ನೆಟ್ಟಗೆ ನಡೆಸಲಾಗದ ತಾವು ಯಾವ ಸೀಮೆ ಮುಖ್ಯಮಂತ್ರಿ ಸ್ವಾಮಿ ಎಂದು ಜರಿದಿದ್ದಾರೆ.

ತಮ್ಮ ಕೈಯಲ್ಲಿ ಆಡಳಿತ ನಡೆಸುವುದು ಸಾಧ್ಯವಿಲ್ಲ ಎನ್ನುವುದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಈ ರೀತಿ ಪದೇ ಪದೇ ಯಾಕೆ ತೊಂದರೆ ಕೊಡುತ್ತೀರಿ ಎಂದು ಅಶೋಕ್ ಕಿಡಿಕಾರಿದ್ದಾರೆ.

ನಾಲಾಯಕ್ ಕಾಂಗ್ರೆಸ್ ಸರ್ಕಾರ :ಅಶೋಕ್ ಕಿಡಿ Read More

ಜಾತಿ ಜನಗಣತಿ ವರದಿ:ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ:ಅಶೋಕ್

ಬೆಂಗಳೂರು: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಾರೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಟೀಕಿಸಿದ್ದಾರೆ.

ಇತೀಚೆಗೆ ನಡೆದ ಎಐಸಿಸಿ ಅಧಿವೇಶನದ ಸಂದರ್ಭದಲ್ಲಿ, ದೆಹಲಿ ಪ್ರವಾಸದ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಭಾರಿ ಹಿನ್ನೆಡೆ ಆಗಿದೆ. ಹನಿಟ್ರಾಪ್ ಸೇರಿದಂತೆ ಸರ್ಕಾರದ ಸಾಲು ಸಾಲು ವೈಫಲ್ಯಗಳ ಬಗ್ಗೆ, ಎಡವಟ್ಟುಗಳ ವಿಚಾರವಾಗಿ ಹೈಕಮಾಂಡ್ ಸಿದ್ದರಾಮಯ್ಯನವರ ಬಣದ ಕಿವಿ ಹಿಂಡಿದೆ ಎಂದು ಟ್ವೀಟ್ ಮಾಡಿ‌ ವ್ಯಂಗ್ಯವಾಡಿದ್ದಾರೆ.

ನಾನು ಈಗಾಗಲೇ ಹಲವಾರು ಬಾರಿ ಹೇಳಿರುವಂತೆ ನಮ್ಮ ಸಮಾಜದಲ್ಲಿರುವ ತಳಸಮುದಾಯಗಳ ಅಭ್ಯುದಯಕ್ಕೆ ಯಾವುದೇ ಸಕಾರಾತ್ಮಕ ಹೆಜ್ಜೆ ಇಟ್ಟರೂ ಅದಕ್ಕೆ ನಮ್ಮ ಪಕ್ಷದ ಬೆಂಬಲವಿದೆ. ಆದರೆ ರಾಜಕೀಯ ಹಾವು ಏಣಿ ಆಟದಲ್ಲಿ ಕೆಳಗೆ ಬಿದ್ದಾಗಲೆಲ್ಲ, ಅಧಿಕಾರದ ಚದುರಂಗದಾಟದಲ್ಲಿ ಮುಗ್ಗರಿಸಿದಾಗಲೆಲ್ಲ ಮೇಲೇಳುವುದಕ್ಕೆ ತಳಸಮುದಾಯಗಳನ್ನ ದಾಳವಾಗಿ ಬಳಸುವುದಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದ್ದಾರೆ.

ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ, ಅವಾಸ್ತವಿಕ ಹಾಗು ಅಪ್ರಸ್ತುತ ಎನ್ನುವುದು ಬಹುತೇಕರ ಅಭಿಪ್ರಾಯ. ಇದಕ್ಕೆ ಅನೇಕ ಕಾರಣಗಳೂ ಇವೆ. ಈ ಹಿನ್ನಲೆಯಲ್ಲಿ ರಾಜ್ಯದ ಜನತೆಯ ಪರವಾಗಿ ಸಿಎಂ ಸಿದ್ದರಾಮಯ್ಯನವರ ಮುಂದೆ ಕೆಲವು ಗಂಭೀರವಾದ ಪ್ರಶ್ನೆಗಳನ್ನು ಇಡುತ್ತಿದ್ದೇನೆ ಎಂದು ತಿಳಿಸಿದ್ದಾರೆ‌

ಜಾತಿ ಜನಗಣತಿ ವರದಿಗೆ ಆಯೋಗದ ಕಾರ್ಯದರ್ಶಿ ಸಹಿ ಮಾಡಿಲ್ಲ ಎನ್ನುವ ಅನುಮಾನವಿದೆ. ಇದು ನಿಜವೇ ಒಂದು ವೇಳೆ ಸಹಿ ಮಾಡಿಲ್ಲವಾದರೆ ಯಾಕೆ ಮಾಡಿಲ್ಲ

ಸೀಲ್ಡ್ ಬಾಕ್ಸ್ನಲ್ಲಿದ್ದ ಮೂಲ ಪ್ರತಿ ಅಥವಾ ಹಸ್ತಪ್ರತಿ ಲಭ್ಯವಿಲ್ಲವೆಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರು ಹೇಳಿದ್ದರು. ಇದರ ಸತ್ಯಾಸತ್ಯತೆ ಏನು?

ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ

ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ.

ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಉಪಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿಬಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 22 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ‌ ಈ ಪ್ರಶ್ನೆಗಳಿಗೆ‌ ಉತ್ತರ ಕೊಡಿ ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಜಾತಿ ಜನಗಣತಿ ವರದಿ:ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ:ಅಶೋಕ್ Read More

ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಿ: ಅಶೋಕ್

ಬೆಂಗಳೂರು: ಜಾತಿ ಗಣತಿ ವರದಿ ಹಿಂಪಡೆದು ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ,ಇದು ಸರಿಯಲ್ಲ, ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು. ಆದರೆ ಈಗ ಮುಸ್ಲಿಮರು ಅತಿ ದೊಡ್ಡ ಜಾತಿ ಎನ್ನಲಾಗಿದೆ. ಮುಸ್ಲಿಮರಲ್ಲೇ ವಿವಿಧ ಜಾತಿಗಳಿದ್ದು, ಅದನ್ನು ಬೇರೆ ಮಾಡಿಲ್ಲ. ಒಕ್ಕಲಿಗರಲ್ಲೇ ಕೆಲವು ಜಾತಿಗಳನ್ನು ವಿಂಗಡಣೆ ಮಾಡಿದ್ದಾರೆ. ಕಾಂಗ್ರೆಸ್ ಗೆ ಹೆಚ್ಚು ಮತ ನೀಡುವವರ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲಾಗಿದೆ,ಒಕ್ಕಲಿಗರಿಗೆ, ಲಿಂಗಾಯತರಿಗೆ, ದಲಿತರಿಗೆ ನಾಮ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಸಿಎಂ ಸಿದ್ದರಾಮಯ್ಯ ಪಕ್ಷ, ಜಾತಿ, ಧರ್ಮ ಒಡೆಯುವುದರಲ್ಲಿ ನಂ.1 ಆಗಿದ್ದಾರೆ. ಸಿದ್ದರಾಮಯ್ಯ ಪ್ರಾಯೋಜಿತವಾದ ಈ ವರದಿ ಅವೈಜ್ಞಾನಿಕ. ಲಕ್ಷಾಂತರ ಜನರ ಮನೆಗೆ ಹೋಗದೆ ವರದಿ ಬರೆಯಲಾಗಿದೆ. ಕರ್ನಾಟಕ ತಂತ್ರಜ್ಞಾನದಲ್ಲೇ ನಂ.1 ಆಗಿದೆ. ಇದನ್ನು ಬಳಸಿಕೊಂಡು ವರದಿ ಮಾಡಬಹುದಿತ್ತು. ಆದರೂ ತಮಗೆ ಬೇಕಾದಂತೆ ವರದಿ ಬರೆಸಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು ‌

ಬ್ರಿಟಿಷರ ವಿರುದ್ದ ಹೋರಾಟ ಮಾಡಿದ್ದು ಹಳೆ ಕಾಂಗ್ರೆಸ್. ಈಗಿನ ಕಾಂಗ್ರೆಸ್ ನಲ್ಲಿ ಹಳಬರು ಇಲ್ಲ‌. ಈ ಕಾಂಗ್ರೆಸ್ ಒಕ್ಕಲಿಗರು, ಲಿಂಗಾಯತರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ‌. ಈಗಲೂ ಸಮಯವಿದೆ. ಆರು ತಿಂಗಳು ತಡವಾದರೂ ಪರವಾಗಿಲ್ಲ‌‌. ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವರದಿಯನ್ನು ಮತ್ತೆ ರೂಪಿಸಲಿ ಎಂದು ಆಗ್ರಹಿಸಿದರು.

ಈ ವರದಿಗೆ 150 ಕೋಟಿ ರೂ. ಖರ್ಚಾಗಿದೆ ಎನ್ನಲಾಗಿದೆ. ಅಧಿಕಾರಿ ಕಾಂತರಾಜು ಅವರನ್ನು ಮನೆಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಡಿಕ್ಟೇಶನ್ ಮಾಡಿಸಿ ವರದಿ ಬರೆಸಿದ್ದಾರೆ. ಬಳಿಕ ಕಾಂತರಾಜು ಸಹಿ ಹಾಕದೆ ಓಡಿದ್ದಾರೆ. ಈ ಹಣವನ್ನು ಯಾರು ತಿಂದಿದ್ದಾರೆ ಎಂದು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ಹಳ್ಳಿಕಾರ್, ಕುಂಚಿಟಿಗರನ್ನು ಬೇರೆ ಮಾಡಲಾಗಿದೆ, ರೆಡ್ಡಿ ಲಿಂಗಾಯತರನ್ನು ಪ್ರತ್ಯೇಕ ಮಾಡಲಾಗಿದೆ. ಇಂತಹ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅದನ್ನು ಸಚಿವರು ಒಪ್ಪಿದರೆ ಆಯಾ ಸಮುದಾಯದ ಜನರು ಅವರನ್ನು ಒಪ್ಪುವುದಿಲ್ಲ. ಈ ವರದಿಯಿಂದಾಗಿ ಕಾಂಗ್ರೆಸ್ ನಲ್ಲೇ ದಂಗೆ ಆರಂಭವಾಗಲಿದೆ,
ಸಮುದಾಯಗಳ ಜನರು ಮುಂದಿನ ಚುನಾವಣೆಯಲ್ಲಿ ಇವರನ್ನು ಹತ್ತಿರ ಸೇರಿಸುವುದಿಲ್ಲ. ಒಕ್ಕಲಿಗ ಸ್ವಾಮೀಜಿಯವರು ಸಭೆ ಕರೆದು ಈ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇದೇ ರೀತಿ ಬೇರೆ ಸಮುದಾಯದವರೂ ಸಭೆ ಮಾಡಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಅಶೋಕ್ ಹೇಳಿದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ವಾತಂತ್ರ್ಯ ಹೋರಾಟಗಾರರು ಸ್ಥಾಪಿಸಿದ್ದರು‌. ಆದರೆ ಬಳಿಕ ಇಟಲಿ ಮೂಲದ ಸೋನಿಯಾ ಗಾಂಧಿ ಹಾಗೂ ಮಕ್ಕಳು 5 ಸಾವಿರ ಕೋಟಿ ಆಸ್ತಿ ಲೂಟಿ ಮಾಡಿದ್ದಾರೆ. ಅದು ದೇಶದ ಆಸ್ತಿಯೇ ಹೊರತು, ಇಟಲಿಯ ಆಸ್ತಿಯಲ್ಲ. ಈ ನಿಟ್ಟಿನಲ್ಲಿ ಇಡಿ ಉತ್ತಮ ಕೆಲಸ ಮಾಡಿದೆ ಎಂದು ಶಹಬಾಶ್ ಕೊಟ್ಟರು.

ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ದಲಿತರಿಗೆ ಮೀಸಲಾತಿ ನೀಡಿದ್ದಾರೆ. ಆದರೆ ಮುಸ್ಲಿಮರಿಗೆ ಮೀಸಲಾತಿ ನೀಡಲು ರಾಜ್ಯಕ್ಕೆ ಅಧಿಕಾರವಿಲ್ಲ‌. ಜೊತೆಗೆ ಒಟ್ಟು ಮೀಸಲಾತಿ 50% ಗಿಂತ ಹೆಚ್ಚು ಮಾಡಲು ಸಾಧ್ಯವಿಲ್ಲ. ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡಿದೆ. ಹೆಚ್ಚಿನ ಮೀಸಲಾತಿಯನ್ನು ಯಾವ ಕಾನೂನಿನಡಿ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಲಿ ಎಂದು ಆಗ್ರಹಿಸಿದರು.

ಬಿಜೆಪಿ-ಜೆಡಿಎಸ್ ಪ್ರತಿಭಟನೆಗೆ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅಶೋಕ ಉತ್ತರಿಸಿದರು.

ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಿ: ಅಶೋಕ್ Read More

ಕೆಆರ್ ಐಡಿಎಲ್ ನಲ್ಲಿ ಭ್ರಷ್ಟಾಚಾರ ಆರೋಪ:ಸಿಬಿಐ ತನಿಖೆಗೆ ಅಶೋಕ್ ಆಗ್ರಹ

ಬೆಂಗಳೂರು: ಕರ್ನಾಟಕ ಮೂಲಸೌಕರ್ಯ ಅಭಿವದ್ಧಿ ನಿಗಮದ ಕೊಪ್ಪಳ ವಿಭಾಗದಲ್ಲಿ 93ಕ್ಕೂ ಹೆಚ್ಚು ಕಾಮಗಾರಿಗಳ ಹೆಸರಿನಲ್ಲಿ ಬೋಗಸ್ ಬಿಲ್ ಸೃಷ್ಟಿಸಿ 62 ಕೋಟಿ ರೂಪಾಯಿ ಗೋಲ್ಮಾಲ್ ನಡೆದಿರುವ ಹಗರಣ ಬೆಳಕಿಗೆ ಬಂದಿದ್ದು ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲಿಗೆ ಬಂದಿದೆ ಎಂದು ಆರ್.ಅಶೋಕ್ ದೂರಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಿಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ, ಅಕ್ರಮ, ಲೂಟಿ, ಅವ್ಯವಹಾರ ನಡೆಯದ ಒಂದಾದರೂ ಇಲಾಖೆ, ನಿಗಮ, ಮಂಡಳಿ ಇದೆಯೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾರವಾಗಿ ಪ್ರಶ್ನಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಆಯ್ತು ಮೂಡಾ ಆಯ್ತು, ಈಗ ಕೆಆರ್ ಐಡಿಎಲ್ ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ನಿಮ್ಮ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ಅವರು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ‌

ಕೆಆರ್ ಐಡಿಎಲ್ ನಲ್ಲಿ ಭ್ರಷ್ಟಾಚಾರ ಆರೋಪ:ಸಿಬಿಐ ತನಿಖೆಗೆ ಅಶೋಕ್ ಆಗ್ರಹ Read More

ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರ ಕುಸಿತ:ಜನಾಕ್ರೋಶವೇ ಸಾಕ್ಷಿ-ಅಶೋಕ್

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರ ಕುಸಿದುಬಿದ್ದಿದ್ದು, ಭ್ರಷ್ಟಾಚಾರ ಮೇರೆ ಮೀರಿರುವುದಕ್ಕೆ ರಾಜ್ಯಾದ್ಯಂತ ವ್ಯಕ್ತವಾಗುತ್ತಿರುವ ಜನಾಕ್ರೋಶ ವೇ ಸಾಕ್ಷಿ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ನೀಡಿರುವ ಸರ್ಟಿಫಿಕೇಟ್ ಮತ್ತು 20 ತಿಂಗಳ ಬಳಿಕ ಸರ್ಕಾರ ಟೇಕಾಫ್ ಆಗುತ್ತಿದೆ ಎಂದು ಸಚಿವ ಡಿ.ಸುಧಾಕರ್ ನೀಡಿರುವ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿವೆ ಎಂದು ಟೀಕಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಸರ್ಕಾರದ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ನಮ್ಮ ಪಕ್ಷದ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲ ಮತ್ತು ಭೇಟಿ ನೀಡುತ್ತಿರುವ ಜಿಲ್ಲೆಗಳಲ್ಲಿ ಜನರು ವ್ಯಕ್ತಪಡಿಸುತ್ತಿರುವ ಅನಿಸಿಕೆಗಳು ಇದಕ್ಕೆ ಪೂರಕವಾಗಿವೆ ಎಂದು ಹೇಳಿದ್ದಾರೆ.

ಇದೊಂದು ವಂಚಕ ಸರ್ಕಾರ,ಕೆಟ್ಟ ಆಡಳಿತ ನೀಡುತ್ತಿದೆ. ಅದನ್ನು ಮರೆಮಾಚಲು ನಡೆಸಿದ ಕಸರತ್ತು ವಿಫಲವಾಗಿವೆ. 20 ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ಬಣ್ಣ ಬಯಲಾಗಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿಯಿಂದ ಬೊಕ್ಕಸ ಬರಿದಾಗಿ, ಸರ್ಕಾರ ದಿವಾಳಿಯಾಗಿದೆ. ಒಂದೇ ಒಂದು ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಸಿಎಂ ಮತ್ತು ಸಚಿವರು ಎಲ್ಲಿಯೂ ಪ್ರವಾಸ ಮಾಡುತ್ತಿಲ್ಲ,ಭೇಟಿ ನೀಡಿದ ಕಡೆ ಜನರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಬೆಂಗಳೂರಿನಲ್ಲಿ ಕುಳಿತು ಕಾಲಾಹರಣ ಮಾಡುತ್ತಿದ್ದಾರೆ, ಯಾವ ಕಚೇರಿಗೆ ಹೋದರು ಲಂಚದ ಹಾವಳಿಯಿಂದ ಜನ ಹೈರಾಣಾ ಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ವಾಸ್ತವ ಸಂಗತಿಯನ್ನು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರೇ ಹಾದಿ ಬೀದಿಗಳಲ್ಲಿ ಟೀಕಿಸುತ್ತಿದ್ದಾರೆ. ಹೆಚ್ಚು ದಿನ ಸುಳ್ಳು ಹೇಳಿ ಕಾಲಾಹರಣ ಮಾಡಲು ಆಗುವುದಿಲ್ಲ. ಹೀಗಾಗಿ ಆ ಸತ್ಯವನ್ನು ರಾಯರೆಡ್ಡಿ ಮತ್ತು ಸಚಿವ ಡಿ. ಸುಧಾಕರ್ ಬಹಿರಂಗವಾಗಿ ಹೇಳಿದ್ದಾರೆ. ಇದಕ್ಕಿಂತ ಈ ಸರ್ಕಾರಕ್ಕೆ ದೊಡ್ಡ ಸರ್ಟಿಫಿಕೇಟ್ ಬೇಕೆ ಎಂದು ಅಶೋಕ್ ಲೇವಡಿ ಮಾಡಿದ್ದಾರೆ.

ಕೆಲ ತಿಂಗಳ ಹಿಂದೆ ವಿಧಾನಸೌಧದ ಮುಂದೆ ದಿನವಿಡೀ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದ ಸಿದ್ದರಾಮಯ್ಯನವರು, ಇನ್ನು ಮುಂದೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳು ಕಡ್ಡಾಯವಾಗಿ ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ಮಾಡಬೇಕು ಎಂದು ಸೂಚನೆ ನೀಡಿದ್ದರು. ಸಿಎಂ ಮಾತಿಗೆ ಯಾವ ಸಚಿವರು ಕಿವಿಗಿಡಲಿಲ್ಲ. ಎಲ್ಲಿಯೂ ಜನತಾ ದರ್ಶನ ನಡೆಯಲಿಲ್ಲ. ಇದು ಸರ್ಕಾರದ ಕಾರ್ಯವೈಖರಿಗೆ ಒಂದು ಸಣ್ಣ ಉದಾಹರಣೆ ಎಂದು ಅಶೋಕ್ ಟೀಕಿಸಿದ್ದಾರೆ.

ಸಿದ್ದರಾಮಯ್ಯನವರು ಇನ್ನೆಷ್ಟು ದಿನ ಇರುತ್ತಾರೆ,ಬದಲಾಗುತ್ತಾರೆ ಎಂಬ ಉಡಾಫೆ ಸಚಿವರಲ್ಲಿದೆ. ಇದರಿಂದ ಜನರ ಅಹವಾಲು ಕೇಳುವವರು ದಿಕ್ಕಿಲ್ಲದಂತಾಗಿದೆ. ಅಧಿಕಾರಿಗಳು ಕೂಡ ಮಾತು ಕೇಳುತ್ತಿಲ್ಲ, ಕಚೇರಿಗೂ ಬರುತ್ತಿಲ್ಲ. ಹೀಗಾಗಿ ಆಡಳಿತ ಹಳಿ ತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗ ವಿಧಾನಸೌಧದ ಆಡಳಿತ ಕೇರಳದ ವಯನಾಡಿಗೆ ಶಿಫ್ಟ್ ಆಗಿದೆ. ಅಲ್ಲಿಂದ ಬರುವ ಸೂಚನೆಯನ್ನು ಇಲ್ಲಿ ಪಾಲಿಸಲಾಗುತ್ತಿದೆ. ಹುಲಿ ಯೋಜನೆ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಪ್ರದೇಶದಲ್ಲಿ ಮಲಯಾಳಂ ಚಲನಚಿತ್ರ ಚಿತ್ರೀಕರಣ ಮಾಡಲು ಅವಕಾಶ ನೀಡಿರುವುದೇ ಇದಕ್ಕೆ ಸಾಕ್ಷಿ. ನಿರ್ಬಂಧಿತ ಪ್ರದೇಶದಲ್ಲಿ ಶೂಟಿಂಗ್ ಮಾಡಲು ಸ್ಥಳೀಯ ಅಧಿಕಾರಿಗಳು ಅವಕಾಶ ನೀಡಿಲ್ಲ,ಸರ್ಕಾರದ ಮಟ್ಟದಲ್ಲೇ ಶೂಟಿಂಗ್ ನಡೆಸಲು ಅವಕಾಶ ನೀಡಲಾಗಿದೆ ಎಂದು ಸ್ಥಳೀಯ ಎಸಿಎಫ್ ಹೇಳಿಕೆ ನೀಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಅಂದರೆ ಯಾರು, ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕಿದೆ ಎಂದು ಅಶೋಕ್ ಒತ್ತಾಯಿಸಿದ್ದಾರೆ‌.

ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರ ಕುಸಿತ:ಜನಾಕ್ರೋಶವೇ ಸಾಕ್ಷಿ-ಅಶೋಕ್ Read More

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್ ಆಕ್ರೋಶ

ಬೆಂಗಳೂರು,ಏ.4: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ನಮಗೆ ಬಹಳ ನೋವು ತಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಆತ್ಮಹತ್ಯೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಆಗಬೇಕು.ಕೊಡಗು ಎಸ್ಪಿ ಅಮಾನತು ಮಾಡಬೇಕು ಎಂದು ಅಶೋಕ್ ಒತ್ತಾಯಿಸಿದರು.

ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಪಡೆಯುತ್ತೇವೆ ಎಂದು ಹೇಳಿದ ಪ್ರತಿಪಕ್ಷ ನಾಯಕರು ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ತಿಳಿಸಿದರು.

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್ ಆಕ್ರೋಶ Read More

ಹಾಲಿನ ದರ ಮೂರು ಬಾರಿ ಏರಿಕೆ ಜನರನ್ನು ಲೂಟಿ ಮಾಡಿದ ಸರ್ಕಾರ:ಅಶೋಕ್ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ.

ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್‌ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್‌ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ, ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು, ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್‌ ನಂತರ ಎಲ್ಲ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.

ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಕೊಡುವ 2,000 ರೂಪಾಯಿಗಾಗಿ ಜನರು ಬವಣೆ ಅನುಭವಿಸಬೇಕಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ವೇಸ್ಟ್‌ ಬಾಡಿಯಾಗಿದೆ, ಅದರ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನವಶ್ಯಕವಾಗಿ 150 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಸಮಿತಿ ರದ್ದು ಮಾಡಿದ್ದರೆ ಇಷ್ಟು ಹಣ ಉಳಿಸಬಹುದಿತ್ತು. ಒಂದು ಕಡೆ ಪಕ್ಷಕ್ಕಾಗಿ ತೆರಿಗೆ ಹಣ ಬಳಸಲಾಗುತ್ತಿದೆ, ಮತ್ತೊಂದು ಕಡೆ ಜನರಿಗೆ ಹೊರೆ ಹಾಕಲಾಗುತ್ತಿದೆ ಎಂದು ಅಶೋಕ ದೂರಿದರು.

ಯುಗಾದಿ ಹೊಸ ವರ್ಷ ಬರುವ ಸಮಯದಲ್ಲೇ ತೆರಿಗೆ ಹಾಕಲಾಗಿದೆ. ಹಬ್ಬಕ್ಕೆ ಬಳಸುವ ಹಾಲಿಗೂ ದರ ಏರಿಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಸಚಿವ ರಾಜಣ್ಣ ಅವರು ಉಡಾಫೆ ಮಾತಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣೆಗೆ ಮೊದಲು ಎಲ್ಲವೂ ಫ್ರೀ ಎಂದು ಹೇಳಿ, ನಂತರ ಎಲ್ಲ ದರ ಏರಿಕೆ ಮಾಡಿದ್ದಾರೆ. ಈ 20 ತಿಂಗಳಲ್ಲಿ ಯಾವುದೇ ಜಲಾಶಯದ ಕಟ್ಟೆ ಎತ್ತರಿಸಿಲ್ಲ. ಮೇಕೆದಾಟು ಯೋಜನೆ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಕಸದ ಮೇಲೆ ಹಸಿರು ಸೆಸ್‌ ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿಯಾಗಿದೆ ಎಂದು ಟೀಕಿಸಿದರು.

ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಯುಗಾದಿ ಹಬ್ಬ ಕಳೆದ ನಂತರ ಹೋರಾಟದ ದಿನಾಂಕ ನಿಗದಿ ಮಾಡಲಾಗುವುದು ಎಂದು ಇದೇ ವೇಳೆ ಅಶೋಕ್ ತಿಳಿಸಿದರು

ಹಾಲಿನ ದರ ಮೂರು ಬಾರಿ ಏರಿಕೆ ಜನರನ್ನು ಲೂಟಿ ಮಾಡಿದ ಸರ್ಕಾರ:ಅಶೋಕ್ ಟೀಕೆ Read More