ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ‌ ಇಡುತ್ತೇವೆ:ಅಶೋಕ್

ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ ಬಗ್ಗೆ ಜನರೇ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.

ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವೀಲ್‌ ಚೇರ್‌ನಲ್ಲಿದ್ದರೆ, ಸರ್ಕಾರ ಇನ್ನೂ ತೆವಳುತ್ತಿದೆ,18 ಶಾಸಕರನ್ನು ಸ್ಪೀಕರ್‌ ಯು.ಟಿ.ಖಾದರ್‌ ಅಮಾನತು ಮಾಡಿದ್ದಾರೆ. ಮಾನಗೇಡಿ ಕಾಂಗ್ರೆಸ್‌ನವರು ವಿಧಾನಪರಿಷತ್‌ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಎಸ್‌.ಎಲ್‌.ಧರ್ಮೇಗೌಡ ಅವರನ್ನು ಎಳೆದು ಅಪಮಾನ ಮಾಡಿದ್ದರು. ಆದರೂ ಬಿಜೆಪಿ ಧರಣಿ ಮಾಡಿದ್ದೇ ತಪ್ಪು ಎನ್ನುತ್ತಿದ್ದಾರೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಕ್ಕೆ ಬಿಜೆಪಿ ಪ್ರತಿಭಟಿಸಿದೆ. ಕಾಂಗ್ರೆಸ್‌ ಚಿತಾವಣೆಯಿಂದ ಸ್ಪೀಕರ್‌ ಯು.ಟಿ.ಖಾದರ್‌ ಅಮಾನತು ಮಾಡಿದ್ದಾರೆ. ಹಿಂದಿನ ಯಾವುದೇ ಸ್ಪೀಕರ್‌ ಈ ರೀತಿ ದೀರ್ಘಾವಧಿಯ ಅಮಾನತು ಮಾಡಿಲ್ಲ ಎಂದು ಕಿಡಿಕಾರಿದರು.

ಸಂವಿಧಾನ ರಚನಾ ಸಭೆಯಲ್ಲಿ ಮುಸ್ಲಿಮ್‌ ಮೀಸಲಾತಿಗೆ ವಿರೋಧ ಕೇಳಿಬಂದಿತ್ತು. ತಜ್ಮುಲ್ಲಾ ಹುಸೇನ್‌ ಎಂಬ ನಾಯಕರು ಮುಸ್ಲಿಮ್‌ ಮೀಸಲಾತಿಯನ್ನು ವಿರೋಧಿಸಿದ್ದರು. ಈಗ ಕಾಂಗ್ರೆಸ್‌ ವೋಟ್‌ಬ್ಯಾಂಕ್‌ಗಾಗಿ ಮೀಸಲಾತಿ ನೀಡಿದೆ. ಹಿಂದೂ-ಮುಸ್ಲಿಂ ನಡುವೆ ಒಡಕು ತಂದು ಬ್ರಿಟಿಷರ ಕೆಲಸವನ್ನು ಕಾಂಗ್ರೆಸ್‌ ಮುಂದುವರಿಸುತ್ತಿದೆ. ಗುತ್ತಿಗೆಯಲ್ಲಿನ ಮೀಸಲಾತಿಯಿಂದಾಗಿ ಹಿಂದೂಗಳಿಗೆ ಅವಕಾಶ ಕಡಿಮೆಯಾಗಿದೆ. ಈಗಾಗಲೇ ಗುತ್ತಿಗೆದಾರರಲ್ಲಿ ಮುಸ್ಲಿಮರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಧರ್ಮಾಧಾರಿತ ಮೀಸಲಾತಿಯನ್ನು ಅಂಬೇಡ್ಕರ್‌ ವಿರೋಧಿಸಿದ್ದರು. ಇದನ್ನು ಕೂಡ ಕಾಂಗ್ರೆಸ್ ಹೇಳಬೇಕು ಎಂದು ಅಶೋಕ್ ಒತ್ತಾಯಿಸಿದರು.

ಸಚಿವ ರಾಜಣ್ಣ ಹಾಗೂ ಅವರ ಮಗ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮತಿ ಪಡೆದು ಹನಿಟ್ರ್ಯಾಪ್‌ ಬಗ್ಗೆ ಮಾತಾಡಿದ್ದಾರೆ. ಈ ಮೂಲಕ ಇದರ ಸೂತ್ರದಾರರು ಯಾರೆಂದು ತಿಳಿದುಬಂದಿದೆ. ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆಯವರೇ ಬಂದು ಚರ್ಚೆ ನಡೆಸುವ ಸ್ಥಿತಿ ಬಂದಿದೆ. ಇಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ ಎಂದು ಛೇಡಿಸಿದರು.

ಸರ್ಕಾರ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯಬೇಕೆಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ‌ ಇಡುತ್ತೇವೆ:ಅಶೋಕ್ Read More

ಸಚಿವರ ಹನಿಟ್ರ್ಯಾಪ್‌, ನ್ಯಾಯಾಂಗ ತನಿಖೆ – ಸಿಬಿಐಗೆ ವಹಿಸಿ: ಆರ್‌.ಅಶೋಕ ಒತ್ತಾಯ

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್‌.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್‌ ಬಗ್ಗೆ ಹೇಳಿದ್ದಾರೆ. ಇದರಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೀಗೆ ಹೇಳಿ ಎಂದು ರಾಜಣ್ಣ ಅವರಿಗೆ ಸೂಚನೆ ನೀಡಿ ಕಳಿಸಿದ್ದಾರೆ ಎಂದು ಗೊತ್ತಾಗಿದೆ. ಇಷ್ಟೆಲ್ಲ ಆದ ಮೇಲೂ ಇದನ್ನು ತನಿಖೆ ಮಾಡದೆ ಸುಮ್ಮನೆ ಬಿಡಬಾರದು ಎಂದು ಹೇಳಿದರು.

ರಾಜಣ್ಣ ಅವರು ಪರಿಶಿಷ್ಟ ವರ್ಗಕ್ಕೆ ಸೇರಿದವರು, ಒಂದು ಕಡೆ ಕಾಂಗ್ರೆಸ್‌ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ದುರ್ಬಳಕೆ ಮಾಡುತ್ತಿದೆ. ಮತ್ತೊಂದು ಕಡೆ ಪರಿಶಿಷ್ಟ ವರ್ಗದವರ ಅಹವಾಲುಗಳನ್ನು ಆಲಿಸುತ್ತಿಲ್ಲ, ಕೂಡಲೇ ಸರ್ಕಾರ ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಸಚಿವ ಕೆ.ಎನ್‌.ರಾಜಣ್ಣ ಸದನದಲ್ಲೇ ಮಾತಾಡಿರುವುದರಿಂದ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರ ಹೇಳಿಕೆ ಈಗ ಸದನದ ಆಸ್ತಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್‌ ನಡೆಯುತ್ತಿದೆ ಎಂದು ಛೇಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಹಲಾಲ್‌ ಬಜೆಟ್‌ ಮಂಡಿಸಿದ್ದಾರೆ. ಹಿಂದುಳಿದ ಜನರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಅಶೋಕ್ ತಿಳಿಸಿದರು.

ಸಚಿವರ ಹನಿಟ್ರ್ಯಾಪ್‌, ನ್ಯಾಯಾಂಗ ತನಿಖೆ – ಸಿಬಿಐಗೆ ವಹಿಸಿ: ಆರ್‌.ಅಶೋಕ ಒತ್ತಾಯ Read More

ಕಾಂಗ್ರೆಸ್ ಸರ್ಕಾರದಲ್ಲಿ ಹನಿ ಟ್ರ್ಯಾಪ್ ಸದ್ದು ಜೋರು:ಅಶೋಕ್ ಟೀಕೆ

ಬೆಂಗಳೂರು: ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,
ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ ರಾಜಣ್ಣ ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣನವರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಮಹದೇವಪ್ಪ ಅವರು ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ ಏನಪ್ಪಾ ಅಂದರೆ, ಹನಿಟ್ರ್ಯಾಪ್ ಜಾಲದ ಬಗ್ಗೆ ಬಹಿರಂಗವಾಗಿ ದನಿ ಎತ್ತಿರುವ ಸಚಿವರೆಲ್ಲರೂ ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಗುರಿತಿಸಿಕೊಂಡಿರುವವರು ಎನ್ನುವುದು ಕಾಕತಾಳೀಯವೋ ಅಥವಾ ಇದರ ಹಿಂದೆ ರಾಜಕೀಯ ಷಡ್ಯಂತ್ರವೇನಾದರೂ ಇದೆಯೋ ಎಂದು ಅಶೋಕ್ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಕಾಲವೇ ಎಲ್ಲದಕ್ಕೂ ಉತ್ತರಿಸಲಿದೆ ಎಂದೂ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಹನಿ ಟ್ರ್ಯಾಪ್ ಸದ್ದು ಜೋರು:ಅಶೋಕ್ ಟೀಕೆ Read More

ಅಭಿವೃದ್ಧಿ ಶೂನ್ಯ,ಬೋಗಸ್ ಬಜೆಟ್:ಅಶೋಕ್ ಟೀಕೆ

ಬೆಂಗಳೂರು, ಮಾ.7: ಮುಖ್ಯಮಂತ್ರಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ,ಬೋಗಸ್ ಬಜೆಟ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಸಿದ್ದರಾಮಯ್ಯನವರು ಔಟ್ ಗೋಯಿಂಗ್ ಸಿಎಂ ಎಂದು ಜನಸಾಮಾನ್ಯರ ಮನಸ್ಸಿನಲ್ಲಿ ಗಟ್ಟಿಯಾದ ಅಭಿಪ್ರಾಯ ಮೂಡಿದೆ,ಈ ಬಜೆಟ್ ನಿಂದ ಕನ್ನಡಿಗರಿಗೆ ಹೆಚ್ಚಿನ ನಿರೀಕ್ಷೆಗಳೇನೂ ಇರಲಿಲ್ಲ. ಆದರೂ ತಮ್ಮ ಕಡೆಯ ಬಜೆಟ್ ನಲ್ಲಿ ಒಂದಿಷ್ಟಾದರೂ ಜನಪರ ಯೋಜನೆಗಳನ್ನ ಘೋಷಿಸುತ್ತಾರೆ ಎಂದು ಎದುರು ನೋಡುತ್ತಿದ್ದರು,ಆದರೆ ಈ ಬಜೆಟ್ ಸಂಪೂರ್ಣ ನಿರಾಸೆ ಮೂಡಿಸಿದೆ. ಇದು‌‌ ಕೇವಲ ‘ಬೊಗಳೆರಾಮಯ್ಯ ಬಜೆಟ್’ ಎಂದು ವ್ಯಂಗ್ಯವಾಡಿದರು.

ಸಾಧನೆಯ ಬಲದಿಂದಾಗಲಿ, ದಿಟ್ಟ ನಾಯಕತ್ವದಿಂದಾಗಲಿ, ಅಹಿಂದ ನಾಮ ಜಪದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು.

ಈ ಗ್ಯಾರೆಂಟಿಗಳು ಬಡವರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಜನರನ್ನ ದಿಕ್ಕು ತಪ್ಪಿಸಿ, ಮತಗಳಿಸಿ ಅಧಿಕಾರಕ್ಕೆ ಏರುವುದು ಮಾತ್ರ ಆಗಿತ್ತು ಎಂದು ಜರಿದಿದ್ದಾರೆ.

ಆದರೆ ಅಧಿಕಾರಕ್ಕೆ ಬಂದ ಮೇಲೆ ಬಿಸಿ ತುಪ್ಪದಂತಾಗಿರುವ ಗ್ಯಾರೆಂಟಿಗಳನ್ನು ಮುಂದುವರೆಸಲು ಆಗದೆ ನಿಲ್ಲಿಸಲೂ ಆಗದೆ ಕಾಂಗ್ರೆಸ್ ಸರ್ಕಾರ ಅಡಕತ್ತರಿಯಲ್ಲಿ ಸಿಕ್ಕಿಹಾಕಿಕೊಂಡಿದೆ.

ಕೆಡಿಪಿ ಅಂಕಿ-ಅಂಶದ ಪ್ರಕಾರ, ಕಳೆದ ವರ್ಷದ ಅಂದರೆ 2024-25 ನೇ ಬಜೆಟ್ ವರ್ಷದ 10 ತಿಂಗಳಲ್ಲಿ ಶೇ.62 ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಕಳೆದ ವರ್ಷದ ಅನುದಾನವೇ ಖರ್ಚಾಗದೆ ಇರುವಾಗ ಈಗ ಇನ್ನೊಂದು ಬಜೆಟ್ ಮಂಡಿಸಿದರೆ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.

ಇದು ಕೇವಲ ನಾಮಕಾವಸ್ತೆ ಬಜೆಟ್, ಪಾಪರ್ ಸರ್ಕಾರದ ಪಾಪರ್ ಬಜೆಟ್, ನಿವೃತ್ತಿ ಆಗುತ್ತಿರುವ ಮುಖ್ಯಮಂತ್ರಿಗಳ ನಿರ್ಗಮನದ ಬಜೆಟ್, ಇದರಿಂದ ಕರ್ನಾಟಕಕ್ಕೆ, ಕನ್ನಡಿಗರಿಗೆ ನಯಾಪೈಸೆ ಉಪಯೋಗವಿಲ್ಲ ಇದು
ಬೊಗಳೆರಾಮಯ್ಯ ಬಜೆಟ್ ಎಂದು ಅಶೋಕ್ ಲೇವಡಿ ಮಾಡಿದ್ದಾರೆ.

ಅಭಿವೃದ್ಧಿ ಶೂನ್ಯ,ಬೋಗಸ್ ಬಜೆಟ್:ಅಶೋಕ್ ಟೀಕೆ Read More

ಸರ್ಕಾರಕ್ಕೆ ಮೊದಲು ನೆಟ್‌ ಬೋಲ್ಟ್‌ ಟೈಟ್‌ ಮಾಡಬೇಕಿದೆ:ಅಶೋಕ್

ಬೆಂಗಳೂರು,ಮಾ.6: ರಾಜ್ಯ ಸರ್ಕಾರ ರಾಜ್ಯಪಾಲರ ಎಲ್ಲ ಅಧಿಕಾರಗಳನ್ನು ಕಿತ್ತುಕೊಂಡು ಅವರನ್ನೇ ಬಳಸಿಕೊಂಡು ಸರ್ಕಾರವನ್ನು ಶ್ಲಾಘಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಲಂಗು ಲಗಾಮು ಇಲ್ಲದ ಈ ಸರ್ಕಾರಕ್ಕೇ ಮೊದಲು ನಟ್ಟು ಬೋಲ್ಟು ಟೈಟ್ ಮಾಡಬೇಕಿದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇವ ನಮ್ಮವʼ ಎಂಬ ಬಸವಣ್ಣನವರ ವಚನ ಹೇಳುತ್ತಾರೆ. ಆದರೆ ರಾಜ್ಯಪಾಲರ ವಿಚಾರ ಬಂದಾಗ ಮಾತ್ರ ಇವರು ನಮ್ಮವರಲ್ಲ ಎಂದು ಭೇದ ತೋರುತ್ತಾರೆ. ರಾಜ್ಯಪಾಲರು ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ ಕಾನೂನು ತಿದ್ದುಪಡಿಯನ್ನು ವಾಪಸ್‌ ಕಳುಹಿಸಿದ್ದರು. ಅದನ್ನು ವಿವೇಚನೆ ಮಾಡದೆ ಸರ್ಕಾರದಿಂದ ದ್ವೇಷ ಸಾಧಿಸಲಾಗುತ್ತಿದೆ. ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ ಅವರು ಬಾಂಗ್ಲಾ ಪ್ರಧಾನಿ ಗತಿಯೇ ಬರಲಿದೆ ಎಂದು ಬೆದರಿಕೆ ಹಾಕಿದ್ದರು. ರಾಜ್ಯಪಾಲರಿಗೆ ತಿಳಿವಳಿಕೆ ಇಲ್ಲವೆಂದು ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದರು ಎಂದು ದೂರಿದರು.

ಆಡಳಿತದಲ್ಲಿ ಪಾರದರ್ಶಕತೆ ತಂದಿದ್ದರೆ, ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹೇಗೆ ಲೂಟಿಯಾಯಿತು, ಪಿಎಸ್‌ಐ ಪರಶುರಾಮ್‌ ಹೇಗೆ ಸತ್ತರು, ಅಬಕಾರಿ ಇಲಾಖೆಯಲ್ಲಿ ಹಗರಣ ಹೇಗೆ ನಡೆಯಿತು, ಆಕ್ಸ್‌ಫರ್ಡ್‌ ಬ್ಲಾಗ್‌ನಲ್ಲಿ ಆರ್ಥಿಕ ತಜ್ಞರೊಬ್ಬರು ಸರ್ಕಾರವನ್ನು ಶ್ಲಾಘಿಸಿ ಶೈನಿಂಗ್‌ ಲೈಟ್‌ ಇನ್‌ ದಿ ಡಾರ್ಕ್‌ನೆಸ್‌ ಎಂದು ಬರೆದಿದ್ದಾರೆ ಎಂದು ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಇದು ಯಾರೆಂದು ಹುಡುಕಿದರೆ, ಇವರು ಮುಖ್ಯಮಂತ್ರಿ ಸಚಿವಾಲಯದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿ ಎಂದು ತಿಳಿಯಿತು.

ಕಾಂಗ್ರೆಸ್‌ ನಾಯಕರ ಕಚೇರಿಯಲ್ಲೇ ಸಂಬಳಕ್ಕಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಬರೆದಿರುವುದನ್ನು ಬಜೆಟ್‌ ಭಾಷಣದಲ್ಲಿ ಏಕೆ ಉಲ್ಲೇಖಿಸಬೇಕು, ಇದನ್ನು ಬಿರುದು ಎಂದು ಪರಿಗಣಿಸಬೇಕೆ ಇದನ್ನು ರಾಜ್ಯಪಾಲರ ಬಾಯಿಂದ ಹೇಳಿಸಬೇಕಿತ್ತೇ, ರಾಷ್ಟ್ರಪತಿಯವರಿಂದ ಬಿರುದು ಪಡೆಯಬೇಕೆ ಹೊರತು, ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರಿಂದ ಬಿರುದು ಪಡೆಯಬಾರದು ಎಂದು ಚಾಟಿ ಬೀಸಿದರು.

9 ವಿಶ್ವವಿದ್ಯಾಲಯಗಳನ್ನು ರದ್ದು ಮಾಡಲು ಡಿ.ಕೆ.ಶಿವಕುಮಾರ್‌ ನೇತೃತ್ವದ ಸಮಿತಿ ನಿರ್ಧರಿಸಿದೆ. ಬಿಜೆಪಿ ಸರ್ಕಾರ ಸುಮ್ಮಸುಮ್ಮನೆ ವಿವಿಗಳನ್ನು ಮಂಜೂರು ಮಾಡಿಲ್ಲ. ದಕ್ಷಿಣ ಕನ್ನಡದಲ್ಲಿ ಶೇ. 65.58 ಬಾಗಲಕೋಟೆಯಲ್ಲಿ 25%, ಚಾಮರಾಜನಗರದಲ್ಲಿ 10%, ಮಂಡ್ಯದಲ್ಲಿ 20%, ಕೊಡಗಿನಲ್ಲಿ 16%, ಹಾಸನದಲ್ಲಿ 15%, ಹಾವೇರಿಯಲ್ಲಿ 45%, ಕೊಪ್ಪಳದಲ್ಲಿ 16% ಸಾಕ್ಷರತೆ ಇದೆ. ಕಡಿಮೆ ಸಾಕ್ಷರತೆ ಇರುವ ಜಿಲ್ಲೆಗಳಲ್ಲಿ ಅವಕಾಶ ವಂಚಿತರಿಗೆ ಅವಕಾಶ ನೀಡಲು ವಿವಿಗಳನ್ನು ನೀಡಲಾಗಿತ್ತು. ವಿವಿಗಳಿಗೆ ಒಟ್ಟಾರೆಯಾಗಿ 450 ಕೋಟಿ ರೂ. ಬೇಕು ಎಂದು ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ಕಂಡುಬರುತ್ತಿದೆ. ರಾಜಧಾನಿಯ ಪ್ರಗತಿಗೆ ಅನುದಾನವೇ ಇಲ್ಲ. ಎರಡು ವರ್ಷದಿಂದ ಅಭಿವೃದ್ಧಿ ನಡೆದಿಲ್ಲ. ನನ್ನ ಕ್ಷೇತ್ರಕ್ಕೆ ಕೇವಲ 10 ಕೋಟಿ ರೂ. ನೀಡಲಾಗಿದೆ. ಬಿಜೆಪಿ ಸರ್ಕಾರವಿದ್ದಾಗ ಭೈರತಿ ಸುರೇಶ್‌ ಕ್ಷೇತ್ರಕ್ಕೆ ಒಂದು ವರ್ಷಕ್ಕೆ 100 ಕೋಟಿ ರೂ. ನೀಡಲಾಗಿತ್ತು. ಆದರೆ ಈಗಿನ ಸರ್ಕಾರದಿಂದ ಹಣ ಬರುತ್ತಿಲ್ಲ. ಮಳೆಗಾಲ ಬರುವ ಮುನ್ನ ಡಾಂಬರೀಕರಣ ಮಾಡಬೇಕಿತ್ತು. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ಬ್ಯಾಡ್‌ ಬೆಂಗಳೂರು ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಿಜೆಪಿ 431 ಕೋಟಿ ರೂ. ನೀಡಿದರೆ, ಈಗ 265 ಕೋಟಿ ರೂ. ನೀಡಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂ. ಅನ್ನು 10 ಕೋಟಿ ರೂ. ಇಳಿಸಲಾಗಿದೆ. ಸಾಂಸ್ಕೃತಿಕ ಸಂಘಗಳ ಸಹಾಯಧನ 29 ಕೋಟಿ ರೂ. ನಿಂದ 10 ಕೋಟಿ ರೂ.ಗೆ ಇಳಿದಿದೆ. ರಂಗಮಂದಿರಗಳಿಗೆ ಸಹಾಯಧನ ನೀಡಿಲ್ಲ. ಕಲಾವಿದರ ಪಿಂಚಣಿಗೆ ಅರ್ಜಿ ಆಹ್ವಾನಿಸಿಲ್ಲ. ಕಲಾ ತಂಡಗಳಿಗೆ ಹಣ ಕೊರತೆ ಉಂಟಾಗಿದೆ ಎಂದು ‌ಟೀಕಾ ಪ್ರಹಾರ ನಡೆಸಿದರು.

ಪೆಟ್ರೋಲ್‌, ಆಲ್ಕೋಹಾಲ್‌, ಮೆಟ್ರೋ, ಬಸ್‌ ಟಿಕೆಟ್‌, ಮದ್ಯ, ದತ್ತು ಸ್ವೀಕಾರ, ಮದುವೆ ಪ್ರಮಾಣಪತ್ರ, ಹಾಲು, ಮಾರ್ಗಸೂಚಿ ದರ ಎಲ್ಲಕ್ಕೂ ದರ ಏರಿಕೆ ಮಾಡಲಾಗಿದೆ. ಏರಿಕೆ ನಂತರವೂ ಜನಪರ ಸರ್ಕಾರ ಎಂದು ಯಾವ ಬಾಯಲ್ಲಿ ಹೇಳುತ್ತಾರೆ ಎಂದು ಅಶೋಕ್ ಗುಡುಗಿದರು.

ಸರ್ಕಾರಕ್ಕೆ ಮೊದಲು ನೆಟ್‌ ಬೋಲ್ಟ್‌ ಟೈಟ್‌ ಮಾಡಬೇಕಿದೆ:ಅಶೋಕ್ Read More

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌: ಆರ್‌.ಅಶೋಕ ಆರೋಪ

ಬೆಂಗಳೂರು,ಮಾ.4: ಕೆಪಿ ಎಸ್ ಸಿ ಯಲ್ಲಿ ಪ್ರತಿಯೊಂದಕ್ಕೂ ರೇಟ್‌ ಕಾರ್ಡ್ ಫಿಕ್ಸ್‌ ಮಾಡಲಾಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವಿಧಾನ ಸಭೆಯಲ್ಲಿ ಗಮನ ಸೆಳೆದರು.

ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಿದ ಅಶೋಕ್, ಕೆಪಿಎಸ್‌ಸಿಯಲ್ಲಿ 14 ಸದಸ್ಯರಿದ್ದಾರೆ, ಒಬ್ಬರಿಗೆ ಎರಡೂವರೆ ಲಕ್ಷ ವೇತನವಿದೆ. ಉಳಿದ ಸೌಲಭ್ಯಗಳು ಸೇರಿ 4 ಲಕ್ಷ ರೂ. ಆಗುತ್ತದೆ. ಕರ್ನಾಟಕದಲ್ಲಿ ಆರೂವರೆ ಕೋಟಿ ಜನರಿದ್ದಾರೆ. 20 ಕೋಟಿ ಜನರಿರುವ ಉತ್ತರ ಪ್ರದೇಶದ ಆಯೋಗದಲ್ಲಿ 8 ಸದಸ್ಯರಿದ್ದಾರೆ. ಇದರಲ್ಲೂ ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ. ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ಹಾಗೂ ಸಂದರ್ಶನದ ಮೂಲಕ 40 ಲಕ್ಷ ರೂ. ನಿಗದಿ ಮಾಡಲಾಗಿದೆ. ಈ ರೀತಿ ರೇಟ್‌ ಫಿಕ್ಸ್‌ ಮಾಡಲಾಗಿದೆ. ಎಸಿಗೆ 2 ಕೋಟಿ ರೂ., ಡಿವೈಎಸ್‌ಪಿಗೆ 2 ಕೋಟಿ ರೂ., ವಾಣಿಜ್ಯ ತೆರಿಗೆ 1.50 ಕೋಟಿ ರೂ., ಪಂಚಾಯತ್‌ ಅಧಿಕಾರಿಗೆ ಒಂದೂವರೆ ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಆರೋಪಿಸಿದರು.

ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ 2-1-2025 ರಲ್ಲಿ ಪೊಲೀಸರೇ ದೂರು ದಾಖಲಿಸಿದ್ದಾರೆ. ಗಾಂಧಿನಗರದ ಸಜ್ಜನ್‌ ಲಾಡ್ಜ್‌ನಲ್ಲಿ ಒಬ್ಬ ವ್ಯಕ್ತಿ ಕೊಠಡಿ ಮಾಡಿಕೊಂಡು, ಸ್ಪರ್ಧಾತ್ಮಕ ಪರೀಕ್ಷೆ ಪಾಸು ಮಾಡಲು ಪಿತೂರಿ ಮಾಡಿ ಹಣ ಸಂಪಾದಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೇ ರೀತಿ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಇಲ್ಲಿ ಕೂಡ ಮಧ್ಯವರ್ತಿ ಮೂಲಕ ಪರೀಕ್ಷೆಯಲ್ಲಿ ಪಾಸು ಮಾಡಿಸಲು ಹಣ ಸಂಪಾದಿಸುತ್ತಿದ್ದಾನೆ ಎಂದು ಉಲ್ಲೇಖಿಸಲಾಗಿದೆ. ಆ ವ್ಯಕ್ತಿಗೆ ಅಧಿಕಾರಿಗಳ ಪರಿಚಯವಿದ್ದು, ಹುದ್ದೆ ಕೊಡಿಸುವುದಾಗಿ ಹೇಳಿ ನಂಬಿಸುತ್ತಿದ್ದ ಎಂದು ದೂರಿನಲ್ಲಿ ಬರೆಯಲಾಗಿದೆ ಎಂದು ತಿಳಿಸಿದರು.

ಓಎಂಆರ್‌ ಶೀಟ್‌ನಲ್ಲಿ 16 ಅಥವಾ 10 ಪ್ರಶ್ನೆಗಳಿಗೆ ಮಾತ್ರ ಟಿಕ್‌ ಮಾಡು ಎಂದು ಮಧ್ಯವರ್ತಿ ಹೇಳುತ್ತಾನೆ. ಅದರಂತೆಯೇ ಅಭ್ಯರ್ಥಿ ಮಾಡುತ್ತಾನೆ. ಓಎಂಆರ್‌ ಶೀಟ್‌ ಹೋಗುವ ಎರಡು ಕೊಠಡಿಗಳಲ್ಲಿ ಸಿಸಿಟಿವಿ ಇರುವುದಿಲ್ಲ. ಅಲ್ಲಿಯೇ ಉಳಿದ ಪ್ರಶ್ನೆಗಳಿಗೆ ಉತ್ತರವನ್ನು ಟಿಕ್‌ ಮಾಡಲಾಗುತ್ತದೆ. ಇದರಲ್ಲಿ ಲೋಕಸೇವಾ ಆಯೋಗದ ಅಧಿಕಾರಿಗಳು ಕೂಡ ಶಾಮೀಲಾಗಿರುತ್ತಾರೆ ಎಂದು ಹೇಳಿದರು.

ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಈ ಕುರಿತು ಪರೀಕ್ಷೆ ನಡೆಸಲಾಗಿದೆ. ಅಭ್ಯರ್ಥಿ ಮತ್ತು ಮಧ್ಯವರ್ತಿ ಬಳಸಿರುವ ಪೆನ್‌ಗಳಲ್ಲಿ ವ್ಯತ್ಯಾಸ ಇರುವುದರ ಬಗ್ಗೆ ಪತ್ತೆ ಮಾಡಲಾಗಿದೆ. ಲೋಕಸೇವಾ ಆಯೋಗದ ಅಧಿಕಾರಿ-ನೌಕರರ ಸಹಾಯವಿಲ್ಲದೆ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ವಿಧಿ ವಿಜ್ಞಾನ ವರದಿಯಲ್ಲಿ ತಿಳಿಸಲಾಗಿದೆ ಇದನ್ನು ಸರ್ಕಾರವೇ ಒಪ್ಪಿಕೊಂಡಿದೆ ಎಂದು ತಿಳಿಸಿದರು.

384 ಗ್ರೂಪ್‌ ಎ ಮತ್ತು ಬಿ ಹುದ್ದೆಗಳಿಗೆ ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ ಇಂಗ್ಲಿಷ್‌-ಕನ್ನಡ ಭಾಷಾಂತರದಲ್ಲಿ 59 ಪ್ರಶ್ನೆಗಳಲ್ಲಿ ತಪ್ಪುಗಳಾಗಿವೆ. ಲೋಕಸೇವಾ ಆಯೋಗದ ಕಳ್ಳರು ಮೊದಲಿಗೆ ಇಂಗ್ಲಿಷ್‌ನಲ್ಲಿ ಬರೆದು, ನಂತರ ಕನ್ನಡಕ್ಕೆ ಭಾಷಾಂತರ ಮಾಡಿದ್ದಾರೆ. ಮೊದಲು ಕನ್ನಡದಲ್ಲೇ ಪ್ರಶ್ನೆ ತಯಾರಿಸಬೇಕೆಂಬ ನಿಯಮವೇ ಇದೆ. ಇದಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದರು. ಬಳಿಕ ಐಎಎಸ್‌ ಗಂಗಾಧರ್‌ ಈ ಕುರಿತು ಟ್ವೀಟ್‌ ಮಾಡಿದ್ದು, ಇದನ್ನು ಎಂಜಾಯ್‌ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅಪಮಾನ. ಕನ್ನಡಕ್ಕೆ ದ್ರೋಹ ಮಾಡಿದ ಈ ಅಧಿಕಾರಿಯ ನಾಲಿಗೆ ಸೀಳಿ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪರೀಕ್ಷೆ ನಡೆಸಲು 15 ಕೋಟಿ ರೂ. ನೀಡಲಾಗಿದೆ. ಮರು ಪರೀಕ್ಷೆಗೆ ಮತ್ತೆ ಅಷ್ಟೇ ಹಣ ನೀಡಲಾಗಿದೆ. ಮರು ಪರೀಕ್ಷೆಯಲ್ಲಿ ಮತ್ತೆ 79 ತಪ್ಪುಗಳಾಗಿವೆ. ಈ ಪ್ರಶ್ನೆಪತ್ರಿಕೆಗಳಲ್ಲಿ ಕನ್ನಡವನ್ನು ಎರಡನೇ ದರ್ಜೆಯಾಗಿ ನೋಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು. ಅವರು ವ್ಯಾಕರಣದ ಬಗ್ಗೆ ಮಾತನಾಡುತ್ತಾರೆ. ಸುಮಾರು 2 ಲಕ್ಷ ಯುವಜನರು ನಿರುದ್ಯೋಗಿಗಳಾಗಿದ್ದು, ಪರೀಕ್ಷೆಗಾಗಿ ಓದುತ್ತಿದ್ದಾರೆ. ಅವರ ಭಾವನೆಗಳನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು

ಪರೀಕ್ಷೆಯಲ್ಲಿ 30 ಕೋಟಿ ರೂ. ಹಣ ಹಾಳು ಮಾಡಿದ ಅಧಿಕಾರಿಯನ್ನು ಅಮಾನತು ಮಾಡಬೇಕು,ಮರು ಪರೀಕ್ಷೆ ನಡೆಸಬೇಕು, ಅಭ್ಯರ್ಥಿಗಳ ವಯೋಮಿತಿಗೆ ವಿನಾಯಿತಿ ನೀಡಬೇಕು,ಅಕ್ರಮದ ವಿರುದ್ಧ ತನಿಖೆ ಮಾಡಬೇಕು ಎಂದು ಆರ್‌.ಅಶೋಕ್ ಒತ್ತಾಯಿಸಿದರು.

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌: ಆರ್‌.ಅಶೋಕ ಆರೋಪ Read More

ಡಿ.ಕೆ.ಶಿವಕುಮಾರ್ ಬಗ್ಗೆ ಅಶೋಕ್ ಟೀಕೆ

ಬೆಂಗಳೂರು: ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಟ್ವೀಟ್ ಮಾಡಿ ಅಶೋಕ್ ಹೇಳಿದ್ದಾರೆ.

ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎಂಬ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ ಎಂದು ಸಲಹೆ ನೀಡಿದ್ದಾರೆ.

ಕಲಾವಿದರು ಯಾರ ಸ್ವತ್ತೂ ಅಲ್ಲ, ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯವಿದೆ, ಹಕ್ಕಿದೆ ಎಂದಿದ್ದಾರೆ.

ಕಲಾವಿದರು ನಿಮ್ಮ ಕಾಂಗ್ರೆಸ್
ಪಕ್ಷದ ಕಾರ್ಯಕರ್ತರಲ್ಲ, ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಳ್ಳುವಂತೆ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಅಶೋಕ್ ಚಾಟಿ ಬೀಸಿದ್ದಾರೆ.

ಡಿ.ಕೆ.ಶಿವಕುಮಾರ್ ಬಗ್ಗೆ ಅಶೋಕ್ ಟೀಕೆ Read More

ಕಾಂಗ್ರೆಸ್ ವಿರುದ್ಧ ಅಶೋಕ್ ವ್ಯಂಗ್ಯ

ಬೆಂಗಳೂರು: ಸ್ವಾರ್ಥಕ್ಕಾಗಿ ಅಂಗೈನಲ್ಲಿ ಆಕಾಶ ತೋರಿಸಿ, ಜನರ ಕಣ್ಣಿಗೆ ಮಂಕುಬೂದಿ ಎರಚಿ ಅಧಿಕಾರ ಹಿಡಿದ ಹಿಮಾಚಲ ಸರ್ಕಾರ ದಿವಾಳಿಯತ್ತ ಸಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಶಾಸಕರು, ಸಚಿವರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲದೆ ದೇವರ ಹುಂಡಿಗೆ ಕೈ ಹಾಕುವ ಪಾಪದ ಕೆಲಸ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲೂ ಆರ್ಥಿಕ ಸ್ಥಿತಿ ಬಿಗಾಡಾಯಿಸಿದ್ದು, ಸರ್ಕಾರ ಐಸಿಯುನಲ್ಲಿದೆ! ಎಂದು ಟೀಕಿಸಿದ್ದಾರೆ

ಅವೈಜ್ಞಾನಿಕ ಗ್ಯಾರಂಟಿಗಳಿಂದ ಹಿಮಾಚಲ ಪ್ರದೇಶವನ್ನು ದಿವಾಳಿಯಂಚಿಗೆ ತಳ್ಳಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತಿರುವಾಗ ಅದೇ ಹಾದಿಯಲ್ಲಿ ಸಾಗುತ್ತಿರುವ ಸಿಎಂ ಸಿದ್ದರಸಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನ ಅಧೋಗತಿಗೆ ತಳ್ಳುತ್ತಿದ್ದು, ಕರ್ನಾಟಕವೂ ಶೀಘ್ರದಲ್ಲೇ ದಿವಾಳಿ ಆಗಲಿದೆ ಎಂದು ಅಶೋಕ್ ಟ್ವೀಟ್ ಮಾಡಿ ಗೇಲಿ ಮಾಡಿದ್ದಾರೆ.

ಕಾಂಗ್ರೆಸ್ ವಿರುದ್ಧ ಅಶೋಕ್ ವ್ಯಂಗ್ಯ Read More

ಕೆ.ಜೆ.ಜಾರ್ಜ್ ವಿರುದ್ಧ ಅಶೋಕ್ ಟೀಕೆ

ಬೆಂಗಳೂರು: ಸ್ವಾಮಿ ಸಚಿವ ಕೆ.ಜೆ.ಜಾರ್ಜ್ ಅವರೇ,ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ‌

ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ ಮತಾದರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ ಎಂದು ಟ್ವೀಟ್ ಮಾಡಿ ಹೇಳಿದ್ದಾರೆ.

ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ ಎಂದು ಕಾರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರೆಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ.ಆಗದಿದ್ದರೆ ಬಿಟ್ಟುಬಿಡಿ. ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ ಎಂದು ಅಶೋಕ್ ಕುಟುಕಿದ್ದಾರೆ.

ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರೆಂಟಿ ಎಂದು ಎಚ್ಚರಿಸಿದ್ದಾರೆ.

ಕೆ.ಜೆ.ಜಾರ್ಜ್ ವಿರುದ್ಧ ಅಶೋಕ್ ಟೀಕೆ Read More

ಸಿಎಂ ಸಿದ್ದರಾಮಯ್ಯ‌ ವಿರುದ್ಧ ಅಶೋಕ್ ವ್ಯಂಗ್ಯ

ಬೆಂಗಳೂರು: ಮೂಡಾ ಹಗರಣದಿಂದ ಬಚಾವಾಗಲು, ಅಧಿಕಾರ ಹಂಚಿಕೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ರಣತಂತ್ರ ಹಣೆಯುವಲ್ಲಿ ಬಿಸಿ ಆಗಿರುವ ಸಿಎಂಗೆ‌ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಪಾವತಿ ಆಗದುರುವುದು ಗೊತ್ತಿಲ್ಲವಂತೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಈ ಕಯರಿತು ಟ್ವೀಟ್ ಮಾಡುರುವ ಅಶೋಕ್ ಔಟ್ ಗೋಯಿಂಗ್ ಸುಎಂ ಸಿದ್ದರಾಮಯ್ಯನವರೇ,ತಮಗೆ ಗೊತ್ತಿಲ್ಲದೆ ತಮ್ಮ ಸರ್ಕಾರದಲ್ಲಿ ಇನ್ನೂ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು ಎಂದು ಕಾಲೆಳೆದಿದ್ದಾರೆ.

ತಮಗೆ ಗೊತ್ತಿಲ್ಲದೆ ಯಾವ್ಯಾವ ಮಂತ್ರಿಗಳು, ಯಾವ್ಯಾವ ಶಾಸಕರು ಅದೆಷ್ಟು ಲೂಟಿ ಹೊಡೆಯುತ್ತಿದ್ದಾರೋ ಆ ದೇವರೇ ಬಲ್ಲ.

ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವುದಕ್ಕಿಂತ ಈಗಲಾದರೂ ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ. ತಾವು ಕುರ್ಚಿಗೆ ಅಂಟಿಕೊಂಡು ಕೂತಷ್ಟೂ ತಮ್ಮ ಗೌರವ, ವರ್ಚಸ್ಸು ಮತ್ತಷ್ಟು ಕಡಿಮೆ ಆಗುವುದಂತೂ ಗ್ಯಾರೆಂಟಿ‌ ಎಂದು ಅಶೋಕ್ ಎಚ್ಚರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ‌ ವಿರುದ್ಧ ಅಶೋಕ್ ವ್ಯಂಗ್ಯ Read More