ಬಿಹಾರದ ಸೋಲು-ರಾಹುಲ್ ಗಾಂಧಿ ವಿರುದ್ದ ಅಶೋಕ್ ಲೇವಡಿ

ಬೆಂಗಳೂರು: ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ಪ್ರತಿಪಕ್ಷ ನಾಯಕ‌ ಆರ್.ಅಶೋಕ್ ಗೇಲಿ ಮಾಡಿದ್ದಾರೆ.

ಆಕಾಶದಲ್ಲಿರುವ ನಕ್ಷತ್ರಗಳನ್ನು ಎಣಿಸಿ ಬಿಡಬಹುದೇನೋ ಆದರೆ ಅವರು ಕಾಂಗ್ರೆಸ್ ಪಕ್ಷವನ್ನ ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೆ ಎನ್ನುವುದನ್ನು ಲೆಕ್ಕ ಮಾಡುವುದು ಕಷ್ಟ ಎಂದು ಟ್ವೀಟ್ ಮಾಡಿ ಲೇವಡಿ ಮಾಡಿದ್ದಾರೆ.

ಸುಶಾಸನ, ಭ್ರಷ್ಟಾಚಾರ ಮುಕ್ತ ಆಡಳಿತ, ಅಭಿವೃದ್ಧಿ ರಾಜಕಾರಣದಿಂದಾಗಿ ಜನಮನ್ನಣೆ ಗಳಿಸಿರುವ ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಸರ್ಕಾರದ ಮುಂದೆ ಜಂಗಲ್ ರಾಜ್ ಕುಖ್ಯಾತಿಯ ಆರ್ ಜೆ ಡಿ – ಕಾಂಗ್ರೆಸ್ ಮಹಾಘಟಬಂಧನ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಪಕ್ಕಕ್ಕೆ ಚೆನ್ನಾಗಿ ಗೊತ್ತಿತ್ತು. ಆದ್ದರಿಂದಲೇ ರಾಹುಲ್ ಗಾಂಧಿ ಅವರು ಮುಖಭಂಗ ತಪ್ಪಿಸಿಕೊಳ್ಳಲು ವೋಟ್ ಚೋರಿ ಎಂಬ ಕಟ್ಟುಕಥೆ ಮೂಲಕ ಜನರನ್ನ ದಿಕ್ಕು ತಪ್ಪಿಸಲು ಹೊರಟಿದ್ದು ಎಂದು ಟೀಕಿಸಿದ್ದಾರೆ.

ಆದರೆ ಬಿಹಾರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ ವೋಟ್ ಚೋರಿ ಪ್ರಹಸನವನ್ನ ಸಾರಾಸಗಟಾಗಿ ತಿರಸ್ಕರಿಸಿ ಪ್ರಧಾನಿ ಮೋದಿ ಹಾಗು ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಸ್ಪಷ್ಟ ಜನಾದೇಶ ನೀಡಿದ್ದಾರೆ‌ ಎಂದು ಹೇಳಿದ್ದಾರೆ.

ಹರಿಯಾಣ, ಮಹಾರಾಷ್ಟ್ರ, ಬಿಹಾರದಲ್ಲಿ ಬಂದಿರುವ ಸ್ಥಿತಿಯೇ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲೂ ಬರುವ ದಿನ ಬಹಳ ದೂರವಿಲ್ಲ. ಈಗಾಗಲೇ ಜನಮನ್ನಣೆ ಕಳೆದುಕೊಂಡಿರುವ ಕಾಂಗ್ರೆಸ್‌ ಪಕ್ಷ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನೂರಕ್ಕೆ ನೂರು ಗ್ಯಾರೆಂಟಿ ಎಂದು ಅಶೋಕ್ ಭವಿಷ್ಯ ನುಡಿದಿದ್ದಾರೆ.

ಎನ್ ಡಿ ಎ ಗೆಲುವಿಗೆ ಕಾರಣೀಭೂತರಾದ ಜನತೆ ಹಾಗೂ‌ ಮೈತ್ರಿಕೂಟದ ಎಲ್ಲ ನಾಯಕರು, ಕಾರ್ಯಕರ್ತರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಬಿಹಾರದ ಸೋಲು-ರಾಹುಲ್ ಗಾಂಧಿ ವಿರುದ್ದ ಅಶೋಕ್ ಲೇವಡಿ Read More

ರಾಹುಲ್ ಗಾಂಧಿ ಅವರು ಸಮಯ ಕೊಟ್ಟರೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ:ಸಿಎಂ

ಮೈಸೂರು: ರಾಹುಲ್ ಗಾಂಧಿ ಅವರು ಸಮಯ ಕೊಟ್ಟರೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡುತ್ತೇನೆ ಇಲ್ಲದಿದ್ದರೆ ಇಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ರಾಹುಲ್ ಗಾಂಧಿಯವರ ಸಮಯ ಕೇಳಿದ್ದೇನೆ
ಸಮಯ ಕೊಟ್ಟರೆ ಅಲ್ಲೇ ಉಳಿದುಕೊಂಡು ಚರ್ಚೆ ಮಾಡಿ ಬರುತ್ತೇನೆ ಎಂದು ಹೇಳಿದರು.

ರಾಜ್ಯದೆಲ್ಲೆಡೆ ನವೆಂಬರ್ ಕ್ರಾಂತಿ ಸದ್ದು ಮಾಡುತ್ತಿರುವ ಹೊತ್ತಲ್ಲೇ ಸಿದ್ದರಾಮಯ್ಯ ಅವರು ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ.ಆದರೆ ಅವರಿಗೆ ಇನ್ನೂ ಹೈಕಮಾಂಡ್ ಭೇಟಿ ಸಮಯ ಸಿಕ್ಕಿಲ್ಲ.ಇದೀಗ ಇದು‌ ಚರ್ಚೆಗೂ‌ ಗ್ರಾಸ ಒದಗಿಸಿದೆ.

ನವೆಂಬರ್‌ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ,
ಕಪಿಲ್ ಸಿಬಲ್ ಅವರ ಕಾರ್ಯಕ್ರಮ ಇದೆ
ಹಾಗಾಗಿ ದೆಹಲಿಗೆ ಹೋಗುತ್ತಿದ್ದೇನೆ,
ಅವತ್ತೆ ಹೋಗಿ ಅವತ್ತೆ ವಾಪಸ್ ಬರುವ ಪ್ಲ್ಯಾನ್ ಇದೆ. ಆದರೆ ರಾಹುಲ್ ಗಾಂಧಿ ಅವರ ಸಮಯ ಕೇಳಿದ್ದೇನೆ ಅವರು
ಸಮಯ ಕೊಟ್ಟರೆ ಅಲ್ಲೇ ಉಳಿದುಕೊಂಡು ಅವರನ್ನು ಮಾತನಾಡಿಸಿಯೇ ಬರುತ್ತೇನೆ ಇಲ್ಲದಿದ್ದರೆ ವಾಪಸುಬರುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ರಾಹುಲ್ ಗಾಂಧಿ ಅವರು ಸಮಯ ಕೊಟ್ಟರೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ:ಸಿಎಂ Read More

ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ, ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಮಾತನಾಡಿದರು.

ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ
ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶವನ್ನು ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದು ತಿಳಿಸಿದರು.

ಚುನಾವಣಾ ಆಯೋಗ ಸಂವಿಧನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು, ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೊಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎಂಬುದು ಈಗ ಗೊತ್ತಾಗಿದೆ ಎಂದು ಸಿಎಂ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 14 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಕಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. ಇವಿಎಂ ಬಂದ ಮೇಲೆ ಇವನ್ನು ದುರುಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಂತಾಗಿದೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭಿಸಿದ್ದಾರೆ, ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ Read More

ರಾಹುಲ್ ಗಾಂಧಿ ಹೇಳಿಕೆಗೆ ಹೇಮಾ ನಂದೀಶ್ ಖಂಡನೆ

ಮೈಸೂರು: ಅಮೆರಿಕ ವಿವಿಯಲ್ಲಿ
ಭಾರತದ ಮೀಸಲಾತಿ ಕುರಿತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾನಂದೀಶ್ ಖಂಡಿಸಿದ್ದಾರೆ.

ಸಮಾನತೆ ಸಂದೇಶ ಸಾರುವ ಮೂಲಕ ದಲಿತರು ಹಾಗೂ ಹಿಂದುಳಿದವರ ಅನುಕೂಲಕ್ಕೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಣೆ ಮಾಡಿದ್ದಾರೆ. ಅದನ್ನು ಗೌರವಿಸುವ ಬದಲು ರಾಹುಲ್ ಗಾಂಧಿಯವರು, ಮೀಸಲಾತಿ ತೆಗೆದು ಹಾಕುವ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಕೂಡಲೇ ರಾಹುಲ್ ಗಾಂಧಿ ಯವರು ತಮ್ಮ ಹೇಳಿಕೆ ಹಿಂಪಡೆಯುವ ಜತೆಗೆ ದೇಶದ ಜನತೆಯ ಕ್ಷಮೆಯಾಚಿ ಸಬೇಕು. ಇಲ್ಲದೇ ಹೋದಲ್ಲಿ ರಾಹುಲ್ ಗಾಂಧಿಯವರ ವಿರುದ್ದ ದೇಶಾದ್ಯಂತ ಉಗ್ರ ಹೋರಾಟ ನಡೆಸುವುದು ಅನಿವಾರ್ಯ ಎಂದು‌ ಹೇಮಾನಂದೀಶ್ ಎಚ್ಚರಿಸಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ಹೇಮಾ ನಂದೀಶ್ ಖಂಡನೆ Read More

ರಾಹುಲ್‌ ಹೇಳಿಕೆಗೆ ಅಮಿತ್‌ ಶಾ ಟೀಕೆ

ನವದೆಹಲಿ: ರಾಹುಲ್‌ ಗಾಂಧಿ ಹೇಳಿಕೆಯಿಂದ ಮತ್ತೊಮ್ಮೆ ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದಾರೆ.

ಮೀಸಲಾತಿ ವಿಚಾರದ ಬಗ್ಗೆ ರಾಹುಲ್‌ ಗಾಂಧಿ ಪ್ರಸ್ತಾಪ ಮಾಡಿದ್ದನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಶಾ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶವನ್ನು ವಿಭಜಿಸುವ ಷಡ್ಯಂತ್ರ ರೂಪಿಸುವ ಶಕ್ತಿಗಳೊಂದಿಗೆ ನಿಂತು ದೇಶ ವಿರೋಧಿ ಹೇಳಿಕೆ ನೀಡುವುದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿ ಹೋಗಿದೆ ಎಂದು ಜರಿದಿದ್ದಾರೆ.

ಕಾಶ್ಮೀರದಲ್ಲಿ ದೇಶ ವಿರೋಧಿ ನ್ಯಾಷನಲ್‌ ಕಾನ್ಫರೆನ್ಸ್‌ ಬೆಂಬಲಿಸಿರುವ ಕಾಂಗ್ರೆಸ್‌ ಈಗ ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿದೆ. ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭಾವನೆಗಳನ್ನು ಘಾಸಿಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಉಂಟುಮಾಡುವ ಕಾಂಗ್ರೆಸ್‌ನ ರಾಜಕೀಯವನ್ನು ಬಯಲು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಇರುವವರೆಗೂ ಯಾರೊಬ್ಬರೂ ಮೀಸಲಾತಿಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಅಥವಾ ರಾಷ್ಟ್ರದ ಭದ್ರತೆಯೊಂದಿಗೆ ಯಾರೂ ಗೊಂದಲಕ್ಕೀಡಾಗಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ ಎಂದು ಅಮಿತ್ ಶಾ ಕಟುವಾಗಿ ಹೇಳಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಜಾರ್ಜ್‌ಟೌನ್‌ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗಿನ ಸಂವಾದ ನಡೆಸಿದ್ದಾಗ ಮೀಸಲಾತಿಯು ಎಷ್ಟು ಕಾಲ ಮುಂದುವರಿಯಲಿದೆ ಎಂಬ ಪ್ರಶ್ನೆಗೆ ರಾಹುಲ್‌ ಗಾಂಧಿ, ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದಾಗ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಕಾಂಗ್ರೆಸ್ ಪಕ್ಷವು ಆಲೋಚನೆ ಮಾಡಲಿದೆ. ಈಗ ಸಮಾನತೆಯ ಪರಿಸ್ಥಿತಿ ಇಲ್ಲ ಎಂದು ಉತ್ತರಿಸಿದ್ದನ್ನು ಸ್ಮರಿಸಬಹುದು.

ರಾಹುಲ್‌ ಹೇಳಿಕೆಗೆ ಅಮಿತ್‌ ಶಾ ಟೀಕೆ Read More