ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಮಂದಿ ದುರ್ಮರಣ

ನವದೆಹಲಿ: ಮಹಾಕುಂಭ ಮೇಳಕ್ಕೆ ಹೋಗಲು ದೆಹಲಿ ರೈಲು ನಿಲ್ದಾಣದಲ್ಲಿ ಅತಿಯಾಗಿ ಜನ ಸೇರಿದ್ದರಿಂದ ಕಾಲ್ತುಳಿತ ಉಂಟಾಗಿ‌ 18 ಕ್ಕೂ ಹೆಚ್ಚು ಮಂದಿ ಮೃತಪಟ್ಟ ದಾರುಣ ಘಟನೆ ಶನಿ ರಾತ್ರಿ ಸಂಭವಿಸಿದೆ.

ದೆಹಲಿ ರೈಲು ನಿಲ್ದಾಣದಲ್ಲಿ ಮಹಾ ಕುಂಭಮೇಳಕ್ಕೆ ಎರಡು ರೈಲುಗಳು ಹೋಗಬೇಕಾಗಿತ್ತು,ಆದರೆ ರೈಲುಗಳು ಬರುವುದು ವಿಳಂಬವಾಗಿದ್ದರಿಂದ ಜನದಟ್ಟಣೆ ಉಂಟಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ,ರಾಷ್ಟ್ರಪತಿ ದ್ರೌಪದಿ ಮುರ್ಮು,ಸಚಿವರಾದ ವಿ.ಸೋಮಣ್ಣ,ಅಶ್ವಿನಿ ವೈಷ್ಣವ್,ರಾಜನಥ್ ಸಿಂಗ್ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ವಾರಾಂತ್ಯವಾಗಿದ್ದರಿಂದ ರೈಲು ನಿಲ್ದಾಣದಲ್ಲಿ ಕುಂಭ ಮೇಳಕ್ಕೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗಿದೆ,ಪ್ರಯಾಗ್‌ರಾಜ್ ಮೂಲಕ ಹಾದುಹೋಗುವ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ರೈಲುಗಳು ನಿಲ್ದಾಣಕ್ಕೆ ಬರುವುದು ವಿಳಂಬವಾದೆ. ಈ ರೈಲುಗಳ ಪ್ರಯಾಣಿಕರು 12, 13 ಮತ್ತು 14, 15ನೇ ಪ್ಲಾಟ್‌ಫಾರ್ಮ್‌ಗಳಲ್ಲಿ ನಿಂತಿದ್ದರು.

ಆಗ ತಡವಾಗಿ ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 14ಕ್ಕೆ ಬಂದಾಗ ಜನರು ಅದರಲ್ಲಿ ಹತ್ತಲು ಒಮ್ಮೆಗೆ ನುಗ್ಗಿದ್ದಾರೆ,ಈ‌ ವೇಳೆ ನೂಕುನುಗ್ಗಲಾಗಿ ಈ ಘೋರ ದುರ್ಘಟನೆ ನಡೆದು ಹೋಗಿದೆ.

ಕೇಂದ್ರ ಸರ್ಕಾರ ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ
10 ಲಕ್ಷ,ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ‌.

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಮಂದಿ ದುರ್ಮರಣ Read More

ಕನೌಜ್ ರೈಲ್ವೆ ನಿಲ್ದಾಣದಲ್ಲಿ ಕಟ್ಟಡ ಕುಸಿತ:23 ಕಾರ್ಮಿಕರ ರಕ್ಷಣೆ

ಲಖನೌ: ಉತ್ತರ ಪ್ರದೇಶದ ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಛಾವಣಿ ಕುಸಿದು ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ನಡೆದಿದೆ.

ರಾಜ್ಯ ವಿಪತ್ತು ನಿರ್ವಹಣಾ ತಂಡ, ಪೊಲೀಸರು, ರಕ್ಷಣಾ ಸಿಬ್ಬಂದಿ ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. 23 ಕಾರ್ಮಿಕರನ್ನು ರಕ್ಷಿಸಲಾಗಿದೆ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಸಧ್ಯಕ್ಕೆ ಯಾವುದೇ ಸಾವು ಸಂಭವಿಸಿಲ್ಲ,ಕೆಲವರು ಇನ್ನೂ ಅವಶೇಷಗಳಡಿ ಸಿಲುಕಿದ್ದು ರಕ್ಷಣಾ ಕಾರ್ಯ ಮುಂದುವರಿದಿದೆ.

ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಕನೌಜ್ ರೈಲ್ವೆ ನಿಲ್ದಾಣದಲ್ಲಿ ಹೊಸ ಟರ್ಮಿನಲ್‌ಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಮೇಲ್ಛಾವಣಿ ಕುಸಿದಿದೆ. ಅವಶೇಷಗಳಡಿಯಿಂದ 23 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ. 20 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ, 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಚಿವ ಅಸಿಮ್ ಅರುಣ್ ಮಾಹಿತಿ ನೀಡಿದ್ದಾರೆ.

ಕನೌಜ್ ರೈಲ್ವೆ ನಿಲ್ದಾಣದಲ್ಲಿ ಕಟ್ಟಡ ಕುಸಿತ:23 ಕಾರ್ಮಿಕರ ರಕ್ಷಣೆ Read More