ರೇವ್ ಪಾರ್ಟಿ: ಇನ್ಸ್ ಪೆಕ್ಟರ್ ಅಮಾನತು

ಮೈಸೂರು: ಮೈಸೂರು ಹೊರವಲಯದಲ್ಲಿ ಅನುಮತಿ ಇಲ್ಲದೆ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ್ದ ಸಬ್ ಇನ್ಸ್ಪೆಕ್ಟರ್ ಅಮಾನತುಗೊಂಡಿದ್ದಾರೆ.

ದಾಳಿ ವೇಳೆ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಮೇಲೆ ಹಲ್ಲೆ ನಡೆಸಿ ಕೆಲ ಯುವಕರು ಪರಾರಿಯಾಗಿದ್ದರು.

ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಇನ್ಸ್ಪ್ಪೆಕ್ಟರ್ ಮುಂಜುನಾಥ್ ನಾಯಕ್ ಅವರನ್ನು ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತು ಮಾಡಿ ಎಸ್ಪಿ ವಿಷ್ಣುವರ್ಧನ್ ಆದೇಶ ಹೊರಡಿಸಿದ್ದಾರೆ.

ಮೈಸೂರಿನ ಮೀನಾಕ್ಷಿಪುರ ಸಮೀಪ ಕೆ ಆರ್ ಎಸ್ ಹಿನ್ನೀರಿನಲ್ಲಿ ಶನಿವಾರ ರಾತ್ರಿ ರೇವ್ ಪಾರ್ಟಿ ನಡೆದಿತ್ತು.ಎಎಸ್ಪಿ ನಾಗೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಯುವಕ ಯುವತಿಯರನ್ನ ವಶಕ್ಕೆ ಪಡೆಯಲಾಗಿತ್ತು.

ಒಟ್ಟು 64 ಜನರ ಮೇಲೆ ಎಫ್ಐಆರ್ ದಾಖಲಾಗಿದ್ದು, ಐದು ಆಯೋಜಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ, ಉಳಿದವರಿಗೆ ನೋಟಿಸ್ ನೀಡಲಾಗಿದೆ.

ರೇವ್ ಪಾರ್ಟಿ: ಇನ್ಸ್ ಪೆಕ್ಟರ್ ಅಮಾನತು Read More

ಮೈಸೂರಿನಲ್ಲಿ ರೇವ್‌ ಪಾರ್ಟಿ: ಸೂಕ್ತ ಕ್ರಮ ಕೈಗೊಳ್ಳುವಂತೆ ತೇಜಸ್ವಿ ಆಗ್ರಹ

ಮೈಸೂರು: ಮೈಸೂರು ತಾಲೂಕು ಮೀನಾಕ್ಷಿಪುರದ ಖಾಸಗಿ ಜಮೀನಿನಲ್ಲಿ ರೇವ್‌ ಪಾರ್ಟಿ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಚುಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ‌ ಒತ್ತಾಯಿಸಿದ್ದಾರೆ.

ರೇವ್‌ ಪಾರ್ಟಿ ನಡೆಸಿದವರ ಮೇಲೆ ಪೊಲೀಸರು ದಾಳಿ ನಡೆಸಿ ಬಂಧಿಸಿರುವುದಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮತ್ತು ಇಲವಾಲ ಪಿಎಸ್ಐ ಮಂಜುನಾಥ್ ಹಾಗೂ ಸಿಬ್ಬಂದಿ ವರ್ಗಕ್ಕೆ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಉದ್ಯಮಿಗಳ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಈ ರೀತಿಯ ಬೆಳವಣಿಗೆ ನಡೆದಿರುವುದು ನಿಜಕ್ಕೂ ದುರಂತ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಜಮೀನಿನ ಮಾಲೀಕ, ಪಾರ್ಟಿ ಆಯೋಜಕರು ಮತ್ತು ಭಾಗವಹಿಸಿದ್ದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ರೇವ್‌ ಪಾರ್ಟಿ: ಸೂಕ್ತ ಕ್ರಮ ಕೈಗೊಳ್ಳುವಂತೆ ತೇಜಸ್ವಿ ಆಗ್ರಹ Read More

ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ:ಯುವತಿಯರು ಸೇರಿ ಹಲವರು ಅರೆಸ್ಟ್

ಮೈಸೂರು:‌ ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜಿಸಿದ್ದ ಸ್ಥಳದ ಮೇಲೆ ಇಲವಾಲ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಯುವತಿಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿಯನ್ನ ಬಂಧಿಸಿ,
30ಕ್ಕೂ ಹೆಚ್ಚು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೆ.ಆರ್.ಎಸ್.ಬ್ಯಾಕ್ ವಾಟರ್ ಬಳಿ ಇರುವ ಖಾಸಗಿ ಜಮೀನಿನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಇದನ್ನ ವ್ಯಕ್ತಿಯೊಬ್ಬ ಪ್ರಚಾರ ಮಾಡಿದ್ದರು, ಹಾಗಾಗಿ ಸುಮಾರು 25 ಕ್ಕೂ ಹೆಚ್ಚು ಜೋಡಿಗಳು ಪಾರ್ಟಿಗೆ ಹೆಸರು ನೊಂದಾಯಿಸಿ ಕೊಂಡಿದ್ದರು.ಈ ಪಾರ್ಟಿಗೆ ತಲಾ 2 ಸಾವಿರ ರೂ ಸಂಗ್ರಹಿಸಲಾಗಿತ್ತು ಎಂದು ಹೇಳಲಾಗಿದೆ.

ನಿನ್ನೆ ತಡರಾತ್ರಿ ಪಾರ್ಟಿ ಆರಂಭವಾಗಿತ್ತು. ಡಿಜೆ ಅಬ್ಬರದ ಸಂಗೀತವೂ ನಡೆದಿತ್ತೆಂದು ಸ್ಥಳೀಯರು ತಿಳಿಸಿದ್ದಾರೆ.

ಯಾರೊ‌ ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣ ಎಸ್ಪಿ ವಿಷ್ಣುವರ್ಧನ್ ಅವರ ನೇತೃತ್ವದಲ್ಲಿ ಅಡಿಷನಲ್ ಎಸ್ಪಿ ನಾಗೇಶ್ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಬಂಧಿಸಲಾದ ಯುವಕ ಯುವತಿಯರನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಪಾರ್ಟಿ ವೇಳೆ ಆಯೋಜಿಸಿದ್ದ ಸಂಗೀತ ಉಪಕರಣಗಳನ್ನೂ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಯಾವುದೇ ಮಾದಕ ವಸ್ತು, ಗಾಂಜಾ ದೊರತಿಲ್ಲವೆಂದು ಎಸ್ ಪಿ ವಿಷ್ಣುವರ್ಧನ್ ಅವರು ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ:ಯುವತಿಯರು ಸೇರಿ ಹಲವರು ಅರೆಸ್ಟ್ Read More