ಶ್ರೀ ರಾಮಕೃಷ್ಣ ಪರಮಹಂಸ ಪ್ರತಿಷ್ಠಾನದಿಂದ ತಿಮ್ಮಕ್ಕನಿಗೆ ಶ್ರದ್ಧಾಂಜಲಿ

ಮೈಸೂರು: ಮೈಸೂರಿನ ರಾಮಕೃಷ್ಣನಗರದ ‘ಹೆಚ್’ ಬ್ಲಾಕ್ ನ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಶ್ರೀ ರಾಮಕೃಷ್ಣ ಪರಮಹಂಸ ಪ್ರತಿಷ್ಠಾನದ ವತಿಯಿಂದ ಸಾಲುಮರದ ತಿಮ್ಮಕ್ಕನಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ‌ ವೇಳೆ ಶ್ರೀರಾಮ್ ರವರು ಮಾತನಾಡಿ ಸಾಲುಮರದ ತಿಮ್ಮಕ್ಕನಿಗೆ ಅನೇಕ ಪ್ರಶಸ್ತಿಗಳು ಮುಡಿಗೇರಿವೆ, ಮಕ್ಕಳಿಲ್ಲದ ಅವರು ಮರಗಳನ್ನು ಮಕ್ಕಳಾಗಿ ಸಾಕಿ ಇಂದಿನ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಅವರು ನಮ್ಮನ್ನು ಅಗಲಿಲ್ಲ ಅವರು ಬೆಳೆಸಿರುವ ಮರ-ಗಿಡಗಳಲ್ಲಿ ಅವರನ್ನು ನಾವು ಕಾಣಬಹುದು. ಅವರಂತೆ ನಾವೆಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ಅವರ ಹೆಸರನ್ನು ಉಳಿಸಿ ಬೆಳೆಸೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ಪರಮಹಂಸ ಪ್ರತಿಷ್ಠಾನದ ಅಧ್ಯಕ್ಷರಾದ ಎನ್. ಶ್ರೀನಿವಾಸ್ ಪ್ರಸಾದ್, ಶಿವಣ್ಣ, ಮಹೇಶ್, ಸೂರಾಪುರ ಕೃಷ್ಣ, ಹೊನ್ನ ಗಂಗಪ್ಪ,ರಾಮಕೃಷ್ಣ, ಪ್ರಸನ್ನ(ಪಾಪು) ಸಿದ್ದಲಿಂಗಸ್ವಾಮಿ.ಎಸ್ ವಿಜಯ ಮಂಜುನಾಥ್, ಪೂರ್ಣಿಮಾ ಮತ್ತಿತರರು ಹಾಜರಿದ್ದರು.

ಶ್ರೀ ರಾಮಕೃಷ್ಣ ಪರಮಹಂಸ ಪ್ರತಿಷ್ಠಾನದಿಂದ ತಿಮ್ಮಕ್ಕನಿಗೆ ಶ್ರದ್ಧಾಂಜಲಿ Read More

ಸಾಲುಮರದ ತಿಮ್ಮಕ್ಕ ಅವರಿಗೆ ಸಂತಾಪ ಸಲ್ಲಿಸಿದ ಪರಿಸರ ಪ್ರೇಮಿಗಳು

ಮೈಸೂರು: ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಮೈಸೂರಿನಲ್ಲಿ ಪರಿಸರ ಪ್ರೇಮಿಗಳು ಸಂತಾಪ ಸಲ್ಲಿಸಿದರು.

ಜಯನಗರದಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನ ಮುಂಭಾಗ ಪರಿಸರ ಪ್ರೇಮಿಗಳು ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರ ಹಿಡಿದು ಅವರಿಗೆ ಸಂತಾಪ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಖ್ಯಾತ ವೈದ್ಯರಾದ ಡಾ ಎಸ್ ಪಿ ಯೋಗಣ್ಣ ಅವರು,
ಮರಗಳನ್ನು ತನ್ನ ಹೆತ್ತ ಮಕ್ಕಳಂತೆ ಸಲುಹಿದ ಆ ಮಹಾತಾಯಿಯ ಪರಿಸರ ಪ್ರೇಮ, ಕಾಳಜಿ, ಇಡೀ ವಿಶ್ವಕ್ಕೆ ಮಾದರಿಯಾಗಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದರೆ ಅದೇ ನಾವು ಅವರಿಗೆ ಸಲ್ಲಿಸಬಹುದಾದ ನಿಜವಾದ ಶ್ರದ್ಧಾಂಜಲಿ ಎಂದು ಹೇಳಿದರು.

ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ ಬಿ ಲಿಂಗರಾಜು ಅವರು ಮಾತನಾಡಿ,ಇದುವರೆಗೂ 8000ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸಿದ ಕೀರ್ತಿ ತಿಮ್ಮಕ್ಕ ಅವರಿಗೆ ಸಲ್ಲುತ್ತದೆ ಎಂದು ನುಡಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ಕನ್ನಡ ವಿಶ್ವ ವಿದ್ಯಾಲಯದ ನಾಡೋಜ ಪ್ರಶಸ್ತಿ, ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಸಂಘ – ಸಂಸ್ಥೆಗಳ ಪ್ರಶಸ್ತಿಗೆ ಭಾಜನರಾಗಿದ್ದ ಸಾಲುಮರದ ತಿಮ್ಮಕ್ಕ ಅವರ ಸಾಧನೆ ಇಂದಿನ ಯುವ ಪೀಳಿಗೆಗೆ ಪ್ರೇರಣೆ ನೀಡಲಿ ಎಂದು ಆಶಿಸಿದರು.

ಅವರ ಸಾವು ಕನ್ನಡ ನಾಡಿಗೆ ತುಂಬಲಾರದ ನಷ್ಟ.ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ , ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ದಯ ಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ವರದೇ ಗೌಡ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಕಡಕೋಳ ಜಗದೀಶ್, ಅಪೂರ್ವ ಸುರೇಶ್, ಲೋಕೇಶ್,ಜತ್ತಿ ಪ್ರಸಾದ್, ಸುಚೇಂದ್ರ‌ ಮತ್ತಿತರರು ಭಾಗಿಯಾಗಿದ್ದರು.

ಸಾಲುಮರದ ತಿಮ್ಮಕ್ಕ ಅವರಿಗೆ ಸಂತಾಪ ಸಲ್ಲಿಸಿದ ಪರಿಸರ ಪ್ರೇಮಿಗಳು Read More