ಹುಲಿ ದಾಳಿಗೆ ಮೈಸೂರಿನಲ್ಲಿ ಮೂರನೇ ಬಲಿ: ಅಧಿಕಾರಿಗಳ ವಿರುದ್ಧ ತೇಜಸ್ವಿ ಆಕ್ರೋಶ

ಮೈಸೂರು, ನವೆಂಬರ್. ೧: ಮೈಸೂರು ಜಿಲ್ಲೆಯಲ್ಲಿ ಮಾನವ ಪ್ರಾಣಿ ಸಂಘರ್ಷ ಮುಂದುವರೆದಿದ್ದುಒಂದೇ ತಿಂಗಳಲ್ಲಿ ಹುಲಿ ದಾಳಿಗೆ ಮೂರನೆ ಬಲಿಯಾಗಿರುವುದು ಅತ್ಯಂತ ದುರದೃಷ್ಟಕರ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೂಡಲೇ ರಾಜ್ಯ ಸರ್ಕಾರ ಮೃತ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸರಗೂರು ತಾಲೂಕಿನ ಕೂಡಗಿ ಗ್ರಾಮದ
ಹೆಡಿಯಾಲ ಅರಣ್ಯ ಇಲಾಖೆಯ ಮೊಳೆಯೂರು ವಿಭಾಗದಲ್ಲಿ ದೊಡ್ಡನಿಂಗಯ್ಯ(53) ಎಂಬವರು ಹುಲಿ ದಾಳಿಗೆ ಬಲಿಯಾಗಿದ್ದಾರೆ.

ದೊಡ್ಡನಿಂಗಯ್ಯ ಪ್ರತಿದಿನದಂತೆ ಜಮೀನಿನ ಬಳಿ ಆಡು-ಕುರಿ ಮೇಯಿಸುತ್ತಿದ್ದ ವೇಳೆ
ಏಕಾಏಕಿ ದಾಳಿ ಮಾಡಿದ ಹುಲಿ ಕಾಡಿನೊಳಗೆ ಎಳೆದೊಯ್ದಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಸಂಪೂರ್ಣ ನಿರ್ಲಕ್ಷ್ಯದಿಂದಾಗಿಯೇ ಒಂದೇ ತಿಂಗಳಲ್ಲಿ ಈ ರೀತಿಯ ಘಟನೆ ಮರುಕಳಿಸಲು ಕಾರಣ ವಾಗಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಲಕ್ಷ್ಯ ವಯಿಸಿದ ಎಲ್ಲಾ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸೇವೆ ಇಂದ ವಜಾ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ

ಕೂಡಲೇ ರಾಜ್ಯ ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮೃತ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡುವಂತೆ. ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿ

ಹುಲಿ ದಾಳಿಗೆ ಮೈಸೂರಿನಲ್ಲಿ ಮೂರನೇ ಬಲಿ: ಅಧಿಕಾರಿಗಳ ವಿರುದ್ಧ ತೇಜಸ್ವಿ ಆಕ್ರೋಶ Read More

ಹುಲಿ ದಾಳಿಗೆ ಒಳಗಾದ ರೈತನಿಗೆ 50 ಲಕ್ಷ ಪರಿಹಾರಕ್ಕೆ ತೇಜಸ್ವಿ ಆಗ್ರಹ

ಮೈಸೂರು: ಸರಗೂರಿನ ಬಡಗಲಪುರದಲ್ಲಿ ಗ ಹುಲಿ ಸೆರೆ ಕಾರ್ಯಾಚರಣೆ ವೇಳೆ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ವ್ಯಗ್ರನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ 50 ಲಕ್ಷ ಪರಿಹಾರ ನೀಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.

ಮಹದೇವ್‌ ಎಂಬ ರೈತನ ಮೇಲೆ ಹುಲಿ ಭಿಕಾರವಾಗಿ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿರುವ ರೈತ ಮಹಾದೇವ್ ಅವರಿಗೆ ಕೂಡಲೇ ಸರ್ಕಾರ 50 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಮುಖ, ಕೈ, ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕುಸಿದು ಬಿದ್ದಿರುವ ವಿಡಿಯೋ ತುಣುಕುಗಳನ್ನು ನೋಡಿ ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಕೂಂಬಿಂಗ್ ನಡೆಯುತ್ತಿದೆ ಎಂದು ಅರಣ್ಯ ಇಲಾಖೆಯ‌ ಅಧಿಕಾರಿಗಳು ಸ್ಥಳೀಯರಿಗೆ ಮಾಹಿತಿ ನೀಡಿ ಎಚ್ಚರಿಸ ಬೇಕಿತ್ತು. ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ. ಒಂದು ವೇಳೆ ಕೂಂಬಿಂಗ್ ಮಾಹಿತಿ ನೀಡಿಲ್ಲ ಎಂದರೆ ಸಂಬಂಧಿಸಿದ ಅರಣ್ಯ ಇಲಾಖೆಯ‌ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ಕಿಡಿಕಾರಿದ್ದಾರೆ

ಹುಲಿ ದಾಳಿಗೆ ಒಳಗಾದ ರೈತನಿಗೆ 50 ಲಕ್ಷ ಪರಿಹಾರಕ್ಕೆ ತೇಜಸ್ವಿ ಆಗ್ರಹ Read More

ರೈತನ ಗಾಯಗೊಳಿಸಿದ್ದ ಹುಲಿಯ ಸೆರೆ

ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯುವಲ್ಲಿ
ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದು,ಗ್ರಾಮದ ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಶನಿವಾರ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದಿದ್ದಾರೆ.

ಆನೆಗಳ ಹುಲಿಯನ್ನು ಸುತ್ತುವರಿದ ವೇಳೆ ಅರವಳಿಕೆ ಮದ್ದು ನೀಡಿ ವ್ಯಾಘ್ರನನ್ನು ಸೆರೆಹಿಡಿಯಲಾಗಿದೆ.

ಈ ಹುಲಿ ಕಳೆದ ಮೂರು ದಿನಗಳ ಹಿಂದೆ ರೈತನ ಮೇಲೆ ದಾಳಿ ಮಾಡಿದ್ದು,ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಾಗಾಗಿ ಗ್ರಾಮಸ್ಥರ ಆಗ್ರಹದ ಮೇರೆಗೆ ನಿನ್ನೆಯಿಂದ ಅರಣ್ಯ ಇಲಾಖೆ ತಂಡವು ನಿರಂತರವಾಗಿ ಸೆರೆ ಕಾರ್ಯಾಚರಣೆ ನಡೆಸುತ್ತಿತ್ತು,ಕಡೆಗೂ* ಯಶಸ್ವಿಯಾಗಿದ್ದು, ಗ್ರಾಮಸ್ಥರು ಸಧ್ಯ ಬದುಕಿದೆವು ಎಂದು ನಿಟ್ಟುಸಿರು ಬಿಟ್ಟು ಅರಣ್ಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.

ರೈತನ ಗಾಯಗೊಳಿಸಿದ್ದ ಹುಲಿಯ ಸೆರೆ Read More

ಅರಣ್ಯ ಪ್ರದೇಶದ‌ ಸಿಬ್ಬಂದಿ ನಿರ್ಲಕ್ಷ್ಯ: ಜೆಸಿಬಿ ಯಂತ್ರ ಭಸ್ಮ

ಮೈಸೂರು: ಅರಣ್ಯ ಪ್ರದೇಶದ ಸಿಬ್ಬಂದಿಗಳ ನಿರ್ಲಕ್ಷ್ಯ ದಿಂದ ಜೆಸಿಬಿ ಯಂತ್ರ ಸುಟ್ಟು ಭಸ್ಮವಾದ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹೆಡಿಯಾಲ ಸಮೀಪದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದ ಚೈನ್ ಗೇಟ್ ಬಳಿ
ಐತಿಹಾಸಿಕ ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ಆನೆಕಂದಕ ಕಾಮಗಾರಿ ನಡೆಸಲು ಜೆಸಿಬಿ ಯಂತ್ರ ಬಳಸಲಾಗುತ್ತಿತ್ತು.ಅನಾರೋಗ್ಯದ ನಿಮಿತ್ತ ಜೆಸಿಬಿ ಚಾಲಕ ಆಸ್ಪತ್ರೆಗೆ ತೆರಳಿದ್ದರೆ, ಈ ವೇಳೆ ಕುರುಚಲು ಸಸ್ಯಗಳ ನಿರ್ಮೂಲನೆಗೆ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ಹಚ್ಚಿದ್ದರೆ.

ಕುರುಚಲು ಸಸ್ಯಗಳಿಂದ ಪಸರಿಸಿದ ಬೆಂಕಿ ಸಮೀಪದಲ್ಲಿದ್ದ ಜೆಸಿಬಿ ಯಂತ್ರಕ್ಕೂ ತಗುಲಿ ಸುಟ್ಟು ಕರುಕಲಾಗಿದೆ.

ಅರಣ್ಯ ಪ್ರದೇಶ ಪ್ರವೇಶಕ್ಕೆ ನಿರ್ಭಂದ ಹೇರಿರುವ ಕಾರಣ ಸ್ಥಳಕ್ಕೆ ತುರ್ತು ಅಗ್ನಿಶಾಮಕ ವಾಹನ ತಲುಪಲು ಸಾಧ್ಯವಾಗಿಲ್ಲ,ಒಟ್ಟಾರೆ ಅರಣ್ಯ ಇಲಾಖೆ ಸಿಬ್ಬಂದಿಗಳ ನಿರ್ಲಕ್ಷ್ಯ ಕ್ಕೆ ಜೆಸಿಬಿ ಯಂತ್ರ ಸುಟ್ಟು ಹೋಗಿದೆ.

ಅರಣ್ಯ ಪ್ರದೇಶದ‌ ಸಿಬ್ಬಂದಿ ನಿರ್ಲಕ್ಷ್ಯ: ಜೆಸಿಬಿ ಯಂತ್ರ ಭಸ್ಮ Read More

ತನ್ನದೆ ಕುಟುಂಬದ ನಾಲ್ವರನ್ನು ಕೋಂದಿದ್ದ ಪಾಪಿ ಅಪರಾಧಿಗೆ ಮರಣದಂಡನೆ

ಮೈಸೂರು: ಹೆಂಡತಿ ಮಕ್ಕಳು ಮತ್ತು ತಾಯಿಯನ್ನೂ ಕೊಲೆ ಮಾಡಿದ ಅಪರಾಧಿಗೆ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ.

ಸರಗೂರು ತಾಲ್ಲೂಕು ಚಾಮೇಗೌಡನಹುಂಡಿ ಗ್ರಾಮದ ನಿವಾಸಿ ಮಣಿಕಂಠಸ್ವಾಮಿ ಅಲಿಯಾಸ್ ಕುಂಟ ಎಂಬ ವ್ಯಕ್ತಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿ ತೀರ್ಪು ನೀಡಿದೆ.

ಮಣಿಕಂಠ ವಿಶಿಷ್ಟ ಚೇತನನಾಗಿದ್ದು, 2014 ಮಾರ್ಚ್ ತಿಂಗಳಲ್ಲಿ ಗಂಗೆ ಎಂಬಾಕೆಯನ್ನು ವಿವಾಹವಾಗಿದ್ದ. ಆತನಿಗೆ 4 ವರ್ಷದ ಸಾಮ್ರಾಟ್ ಮತ್ತು ಒಂದುವರೆ ವರ್ಷದ ರೋಹಿತ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

ಅಲ್ಲದೆ ಆತನ ಪತ್ನಿ 9 ತಿಂಗಳ ಗರ್ಭಿಣಿಯಾಗಿದ್ದು ಆಕೆಯ ಮೇಲೆ ಅನುಮಾನಪಟ್ಟು ಪದೇ ಪದೇ ಜಗಳವಾಡುತ್ತಿದ್ದ,ಆಗ ಆತನ ತಾಯಿ ಕೆಂಪಾಜಮ್ಮ ಸಮಾಧಾನ ಮಾಡಿದಾಗೆಲ್ಲಾ ಆಕೆಯೊಂದಿಗೂ ಜಗಳವಾಡುತ್ತಿದ್ದ.

28.04.2021 ರಂದು ಸಂಜೆ 6 ಗಂಟೆ ಸಮಯದಲ್ಲಿ ಆರೋಪಿ ಮಣಿಕಂಠಸ್ವಾಮಿ ತನ್ನ ಪತ್ನಿಯ ಶೀಲವನ್ನು ಶಂಕಿಸಿ ಆಕೆಯೊಂದಿಗೆ ಮತ್ತು ತನ್ನ ತಾಯಿ ಕೆಂಪಾಜಮ್ಮನೊಂದಿಗೆ ಜೋರು ಗಲಾಟೆ ಮಾಡಿದ್ದ.

ನಂತರ ಅದೇ ದಿನ ರಾತ್ರಿ 9 ಗಂಟೆಗೆ ಮನೆಗೆ ಬಂದು ಮಧ್ಯರಾತ್ರಿ 12 ಗಂಟೆ ತನಕ ಟಿವಿ ನೋಡಿ ಬೆಳಗಿನ ಜಾವ 4 ಗಂಟೆಯಲ್ಲಿ ಎಲ್ಲರೂ ಮಲಗಿದ್ದಾಗ ತಾನು ನಡೆದಾಡಲು ಬಳಸುತ್ತಿದ್ದ ಕಬ್ಬಿಣದ ಊರುಗೋಲಿನಿಂದ ಗರ್ಭಣಿ ಪತ್ನಿ ಮತ್ತು ತಾಯಿ ಕೆಂಪಾಜಮ್ಮ ಹಾಗೂ ನಾಲ್ಕು ವರ್ಷದ ಮಗ ಸಾಮ್ರಾಟ್ ತಲೆ, ಮುಖಕ್ಕೆ ಬಲವಾಗಿ ಹೊಡೆದು ಕೊಂದು ನಂತರ ಇನ್ನೊಬ್ಬ ಒಂದುವರೆ ವರ್ಷದ ಮಗ ರೋಹಿತ್ ನನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಸಾಯಿಸಿದ್ದ.

ಜೊತೆಗೆ ತನ್ನ ಪತ್ನಿಯ ಗರ್ಭದಲ್ಲಿದ್ದ ಮಗುವಿನ ಸಾವಿಗೂ ಕಾರಣವಾಗಿದ್ದ.

ಈ‌ ಸಂಬಂಧ ಸರಗೂರು ಪೊಲೀಸರು ಎಫ್ ಐ ಆರ್ ತಯಾರಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಐದನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಲವರ್ ಅವರು
ಅಭಿಯೋಜಕರು ಆರೋಪಿಯ ವಿರುದ್ಧ ಆಪಾದಿಸಲಾದ ಆರೋಪವನ್ನು ನಿಸ್ಸಂದೇಹವಾಗಿ ಸಾಬೀತುಪಡಿಸಿದ್ದಾರೆಂದು‌ ತೀರ್ಪು ನೀಡಿ ಅಪರಾಧಿ ಮಣಿಕಂಠ ಸ್ವಾಮಿಗೆ ಮರಣದಂಡನೆ ವಿಧಿಸಿ ಆದೇಶ ನೀಡಿದ್ದಾರೆ.

ತನ್ನದೆ ಕುಟುಂಬದ ನಾಲ್ವರನ್ನು ಕೋಂದಿದ್ದ ಪಾಪಿ ಅಪರಾಧಿಗೆ ಮರಣದಂಡನೆ Read More