ಶಾಲಾ ಬಸ್ ಉರುಳಿ ವಿದ್ಯಾರ್ಥಿ ಸಾವು

ಮೈಸೂರು, ಡಿ.1: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಉರುಳಿದ ಪರಿಣಾಮ ಮೈಸೂರಿನ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಮೈಸೂರಿನ ಪವನ್ (15) ಎಂಬ ವಿದ್ಯಾರ್ಥಿ ಮೃತಪಟ್ಟ ದುರ್ದೈವಿ.ಅಪಘಾತದಲ್ಲಿ 26 ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ, ಕೆಲವರ ಸ್ಥಿತಿ ಗಂಭೀರವಾಗಿದೆ.

ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಸುಳೆ ಮುರ್ಕಿ ಕ್ರಾಸ್ ಬಳಿ ಬಸ್‌ ಚಾಲಕನ ನಿಯಂತ್ರಣ ಕಳೆದುಕೊಂಡು ಉರುಳಿಬಿದ್ದಿದೆ.

ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶಾಲಾ ಬಸ್ ಉರುಳಿ ವಿದ್ಯಾರ್ಥಿ ಸಾವು Read More