ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು

ಬೆಂಗಳೂರು: ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಬಿಜೆಪಿಯಲ್ಲಿ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಸಿ.ಪಿ.ಯೋಗೇಶ್ವರ್ ಭಾರೀ ಗೆಲುವು ಸಾಧಿಸಿದ್ದಾರೆ.

ಯೋಗೇಶ್ವರ್ ಅವರು 25,515 ಮತಗಳ ಅಂತರದಿಂದ ಗೆಲುವು ದಾಖಲಿಸುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಗೆ ತಿರುಗೇಟು ಕೊಟ್ಟಿದ್ದಾರೆ.

ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದಲ್ಲಿ
ಮಾಜಿ ಮುಖ್ಯ ಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ.ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವಿನ ನಗೆ ಬೀರಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್​ ನ ಯಾಸೀರ್​ ಪಠಾಣ್​ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ.

ಗಣಿ ಜಿಲ್ಲೆ ಬಳ್ಳಾರಿಯ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಂಸದ ಇ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಬಂಗಾರು ಹನುಮಂತು ಸೋಲನುಭವಿಸಿದ್ದಾರೆ.

ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು Read More

ಭರತ್ ಬೊಮ್ಮಾಯಿ ಪರಬಿರುಸಿನ ಮತಯಾಚನೆ

ಶಿಗ್ಗಾವಿ: ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಏರತೊಡಗಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಚಾರದಲ್ಲಿ ತೊಡಗಿದರು.

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರ ಪರವಾಗಿ ಶಿಗ್ಗಾವಿ- ಸವಣೂರು ಕ್ಷೇತ್ರದ ಮಣ್ಣೂರ , ಫಕೀರ ನಂದಿಹಳ್ಳಿ, ಮಾವೂರ ಹಾಗೂ ಚಳ್ಯಾಳ ಗ್ರಾಮಗಳಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಲಾಯಿತು.

ಪ್ರಚಾರದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್,ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀ ವತ್ಸ ಸಾಥ್ ನೀಡಿ ಮತಯಾಚನೆ ಮಾಡಿದರು.

ಈ ವೇಳೆ ಶ್ರೀವತ್ಸ ಅವರು ಭರತ್ ಬೊಮ್ಮಾಯಿ ಅವರೊಂದಿಗೆ ಚುನಾವಣೆ ಕುರಿತು ಸಮಾಲೋಚನೆ ನಡೆಸಿದರು

ಭರತ್ ಬೊಮ್ಮಾಯಿ ಪರಬಿರುಸಿನ ಮತಯಾಚನೆ Read More

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಹುಮತ: ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು: ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ,ಉಪಚುನಾವಣೆಗೆ ಸನ್ನದ್ಧವಾಗಿದ್ದು ಮೂರು ಕ್ಷೇತ್ರಗಳಿಗೆ ಸಮರ್ಥರಾದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿಯವರ ಭಾವನಾತ್ಮಕ ಚುನಾವಣಾ ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಭಾವನಾತ್ಮಕ ಭಾಷಣ, ಕಣ್ಣೀರುಗಳಿಗೆ ಜನರು ಮಾರುಹೋಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಿಂದ ಅವರಿಗೇ ಈ ಬಾರಿ ಅವಕಾಶ ನೀಡಲಾಗಿದೆ. ಇದೇ ಪ್ರದೇಶದ ಸೈಯದ್ ಅಜೀಂಪೀರ್ ಖಾದ್ರಿಯವರು ಸಮರ್ಥ ನಾಯಕರಿದ್ದು, ಅವರು ಸಲ್ಲಿಸಿರುವ ನಾಮಪತ್ರವನ್ನು ವಾಪಸ್ಸು ಪಡೆಯುವಂತೆ ಮನವೊಲಿಸಲಾಗುವುದು ಎಂದು ಸಿಎಂ ಹೇಳಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಪ್ರತಿಸ್ಪರ್ಧಿ, ವ್ಯಕ್ತಿ ಅಲ್ಲ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದು, ಪಠಾನ್ ಅವರು ಎದುರಾಳಿಯಾಗಿಲ್ಲದಿದ್ದಲ್ಲಿ ಕಳೆದ ಚುನಾವಣೆಯಲ್ಲಿ 60 ಸಾವಿರ ಮತಗಳನ್ನು ಪಡೆಯುತ್ತಿದ್ದರೇ? ಕಳೆದ ಬಾರಿ ಶಿಗ್ಗಾಂವಿಯಲ್ಲಿ ಬಿಜೆಪಿ ಜಯ ಸಾಧಿಸಿದ್ದರೂ, ಕಾಂಗ್ರೆಸ್ ಒಳ್ಳೆಯ ಸ್ಪರ್ಧೆಯನ್ನು ನೀಡಿತ್ತು ಎಂದು ಹೇಳಿದರು.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಹುಮತ: ಸಿದ್ದರಾಮಯ್ಯ ವಿಶ್ವಾಸ Read More