ದಸರಾ ಆನೆ ಬಾಲಣ್ಣನ ಕಿವಿ ಕೊಳೆತ:ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ

ಮೈಸೂರು: ಶಿವಮೊಗ್ಗ ಜಿಲ್ಲೆಯ ಸಕ್ಕರೆ ಬಯಲು ಆನೆ ಶಿಬಿರದಲ್ಲಿನ ವೈದ್ಯರ ಎಡವಟ್ಟಿನಿಂದ ಸಾಕಾನೆ ಬಾಲಣ್ಣನ ಆರೋಗ್ಯ ಗಂಭೀರವಾಗಿವಾದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ನಿರ್ಲಕ್ಷ್ಯ‌ ವಹಿಸಿದ ಅರಣ್ಯ ಇಲಾಖೆಯ‌‌ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಯನ್ನು ಸೇವೆಯಿಂದ ವಜಾಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬಾಲಣ್ಣ ಆನೆಗೆ ಈಗಾಗಲೇ ಕಾಲಿನ ಸಮಸ್ಯೆ ಇದೆ ಎಂದು ತಿಳಿದಿದ್ದರೂ ಸಹ ಅರಣ್ಯ ಅಧಿಕಾರಿಗಳು ಈ ಬಾರಿಯ ಶಿವಮೊಗ್ಗ ದಸರಾ ಉತ್ಸವದಲ್ಲಿ ಅಂಬಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಕರೆತಂದು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂದು ತೇಜಸ್ವಿ ಬೇಸರ‌ ವ್ಯಕ್ತಪಡಿಸಿದ್ದಾರೆ.

ದಸರಾ ಸಮಯದಲ್ಲಿ ಬಾಲಣ್ಣ ನಿಗೆ ಕಾಲುನೋವು ಇದ್ದರು ಸಹ ಯಶಸ್ವಿ ಯಾಗಿ ಕಾರ್ಯ ನಿರ್ವಹಿಸಿತ್ತು, ಸಕ್ಕರೆ ಬಯಲಿಗೆ ಮರಳಿದ ನಂತರ ವಿಪರಿತವಾಗಿ ಕಾಲು ನೋವು ಕಾಡ ತೊಡಗಿತ್ತು ಅದಕ್ಕಾಗಿ ವೈದ್ಯರು ನೋವು ನಿವಾರಕ ಇಂಜೆಕ್ಷನ್ ಕಿವಿಗೆ ನೀಡಿದ್ದರು ಎಂದು ತಿಳಿದು ಬಂದಿದೆ
ಇದು ಆನೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು ಆನೆಯ ಕಿವಿ ಕೊಳೆಯುತ್ತಿದೆ, ಬಾಲಣ್ಣ ಸ್ಥಿತಿ ಚಿಂತಾಜನಕ ವಾಗಿದೆ ಎಂದು ಗೊತ್ತಾಗಿದೆ.

ಈಗಾಗಲೇ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಮಗ್ರ ತನಿಖೆ ನಡೆಸಲು ಆದೇಶ ನೀಡಿದ್ದಾರೆ.

ಆನೆ ಬಾಲಣ್ಣ ಆರೋಗ್ಯ ಸರಿ ಇಲ್ಲದಿರುವುದು ತಿಳಿದಿದ್ದರೂ ಕೂಡ ದಸರಾ ಉತ್ಸವಕ್ಕೆ ಕರೆತಂದ ಅಧಿಕಾರಿಗಳ ಮೇಲೆ ಮತ್ತು ಅವೈಜ್ಞಾನಿಕವಾಗಿ ಚುಚ್ಚುಮದ್ದು ನೀಡಿದ ವೈದ್ಯಾಧಿಕಾರಿಗಳನ್ನು ವಜಾಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.

ದಸರಾ ಆನೆ ಬಾಲಣ್ಣನ ಕಿವಿ ಕೊಳೆತ:ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ Read More

ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸುತ್ತೇನೆ:ವಿಜಯೇಂದ್ರ

ಶಿವಮೊಗ್ಗ: ಒಂದು ವಾರದ ನಂತರ ಎಲ್ಲವೂ ಸರಿಯಾಗಲಿದೆ, ನಾನು ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಈ ವ್ಯವಸ್ಥೆಯಿಲ್ಲ, ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯಾಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಎಲ್ಲವೂ ಕೂಡ ವ್ಯವಸ್ಥಿತವಾಗಿ ನಡೆಯುತ್ತಿವೆ. ಕೇಂದ್ರದ ವರಿಷ್ಠರು ನಿರ್ಧಾರ ಮಾಡಿದಂತೆ ಎಲ್ಲವೂ ನಡೆಯುತ್ತಿದೆ ಎಂದು ಹೇಳಿದರು.

ಯತ್ನಾಳ್ ಬಣ ರೆಬೆಲ್ ಆಗಿದಿಯಲ್ಲ ಎಂಬ ಪ್ರಶ್ನೆಗೆ, ಪ್ರತಿಕ್ರಿಯಿಸಿ, ಯತ್ನಾಳ್ ಅವರ ನೇತೃತ್ವದ ಬಣ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸುವ ತಯಾರಿ ನಡೆಸಿದೆ ಎಂದು ಉತ್ತರಿಸಿದರು.

ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ನಮ್ಮ ಎಲ್ಲಾ ಕಾರ್ಯಕರ್ತರು, ಪಕ್ಷದ ಹಿರಿಯರು ಒಟ್ಟಾಗಿ ಭ್ರಷ್ಟ ಹಾಗೂ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನನ್ನ ಕಳೆದ ಒಂದು ವರ್ಷದ ಅವಧಿಯಲ್ಲಿ, ರಾಜ್ಯಾಧ್ಯಕ್ಷನಾಗಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ರಾಜ್ಯದ ಜನತೆಗೂ ಗೊತ್ತಿದೆ, ನಮ್ಮ ಕಾರ್ಯಕರ್ತರಿಗೂ ಗೊತ್ತಿದೆ. ಪಕ್ಷದ ಹಿರಿಯರು, ಶಾಸಕರಿಗೂ ಕೂಡ ಗೊತ್ತಿದೆ. ಎಲ್ಲರ ಸಹಕಾರದಿಂದ ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ವಿಜಯೇಂದ್ರ ತಿಳಿಸಿದರು.

ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸುತ್ತೇನೆ:ವಿಜಯೇಂದ್ರ Read More