ಅನಧಿಕೃತವಾಗಿ ಡ್ರೋನ್ ವಿಡಿಯೋ ಚಿತ್ರೀಕರಣ: ಕಠಿಣ ಕ್ರಮ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆಸ್ಕ್ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಡ್ರೋನ್ ಪ್ರದರ್ಶನವು ಸೆ.28, 29 ಹಾಗೂ ಅ.1 ಮತ್ತು 2ರಂದು ನಡೆಯಲಿದೆ.

ಆದರೆ ಡ್ರೋನ್ ಪ್ರದರ್ಶನ ನಡೆಯುವ ವೇಳೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ತಮ್ಮ ಡ್ರೋನ್‌ಗಳನ್ನು ಹಾರಿಸಿ ಸೆಸ್ಕ್‌ ವತಿಯಿಂದ ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುವುದು ಹಾಗೂ ಡ್ರೋನ್‌ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುವುದಕ್ಕೆ ನಿರ್ಬಂಧ ಹೇರಲಾಗಿದೆ.

ಒಂದು ವೇಳೆ ಡ್ರೋನ್ ಪ್ರದರ್ಶನದ ದೃಶ್ಯಗಳನ್ನು ಡ್ರೋನ್‌ಗಳ ಮೂಲಕ ಚಿತ್ರೀಕರಿಸಿ, ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡುವುದು ಕಂಡುಬಂದಲ್ಲಿ ಅವರುಗಳ ವಿರುದ್ಧ ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಲಾಗಯವುದು ಎಂದು ಸೆಸ್ಕ್ ‌ಅಧಿಕಾರಿಗಳು ಎಚ್ಚರಿಸಿದ್ದಾರೆ.

ಸಂಸ್ಥೆಗಳು ಸೆಸ್ಕ್ ವತಿಯಿಂದ ನಡೆಸಲಾಗುತ್ತಿರುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಡ್ರೋನ್‌ಗಳ ಮೂಲಕ ಅನಧಿಕೃತವಾಗಿ ಚಿತ್ರೀಕರಣ ಮಾಡದಂತೆ ಎಚ್ಚರಿಸಲಾಗಿದೆ.

ಅನಧಿಕೃತವಾಗಿ ಡ್ರೋನ್ ವಿಡಿಯೋ ಚಿತ್ರೀಕರಣ: ಕಠಿಣ ಕ್ರಮ Read More

ಸ್ವೀಡನ್‌ ಶಾಲೆಯಲ್ಲಿ ಗುಂಡಿನ ದಾಳಿ ಐದು ಮಂದಿಗೆ ಗಂಭೀರ ಗಾಯ

ಸ್ವೀಡನ್: ಸ್ವೀಡಿಷ್ ನಗರದ ಓರೆಬ್ರೊದಲ್ಲಿರುವ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು ಮಕ್ಕಳು,ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಶಾಲೆಯಲ್ಲಿ ನಡೆದ ಈ ಆಘಾತಕಾರಿ ಗುಂಡಿನ ದಾಳಿ ಇಡೀ ಪ್ರದೇಶದಲ್ಲಿ ಕಳವಳ ಹುಟ್ಟುಹಾಕಿದೆ.

ಮಂಗಳವಾರ ಮಧ್ಯಾಹ್ನ ಸುಮಾರು 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಗುಂಡಿನ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ, ಆದರೆ ಅವರ ಸ್ಥಿತಿ ಹೇಗಿದೆ ಎಂಬುದು ಗೊತ್ತಾಗಿಲ್ಲ ಎಂದು ತಿಳಿಸಿದ್ದಾರೆ.

ಈ ಗುಂಡಿನ ದಾಳಿಯ ನಂತರ ಪೊಲೀಸರು ಮತ್ತು ಭದ್ರತಾ ಅಧಿಕಾರಿಗಳು ಶಾಲೆಯ ಸುತ್ತ ಅತಿ ಹೆಚ್ವು ಭದ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ತನಿಖೆ ಮತ್ತು ಭದ್ರತಾ ಕಾರ್ಯಾಚರಣೆಗಳಿಗೆ ತೊಂದರೆಯಾಗದಂತೆ ಸ್ಥಳೀಯ ಜನರು ಶಾಲೆಯ ಬಳಿ ಹೋಗದಂತೆ ಮನವಿ ಮಾಡಲಾಗಿದೆ. ಸಾಮಾನ್ಯವಾಗಿ ಶಾಂತ ಮತ್ತು ಸುರಕ್ಷಿತ ಪ್ರದೇಶವೆಂದು ಪರಿಗಣಿಸಲಾದ ಒರೆಬ್ರೊದಲ್ಲಿ ದಾಳಿ ಜನರಲ್ಲಿ ಆತಂಕ‌ ಸೃಷ್ಟಿಸಿದೆ.

ಐವರಿಗೆ ಗುಂಡು ಬಿದ್ದಿರುವ ಬಗ್ಗೆ ದೃಢಪಟ್ಟಿದೆ ಎಂದು ಒರೆಬ್ರೊ ನಗರ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣವನ್ನು ಪ್ರಸ್ತುತ “ಕೊಲೆ ಯತ್ನ, ಗಂಭೀರ ಶಸ್ತ್ರಾಸ್ತ್ರ ಅಪರಾಧ” ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಒರೆಬ್ರೊದಲ್ಲಿ ಹಿಂಸಾಚಾರದ ವರದಿಗಳು ಅತ್ಯಂತ ಗಂಭೀರವಾಗಿವೆ. ಪೊಲೀಸರು ಸ್ಥಳದಲ್ಲಿದ್ದು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರವು ಕಾನೂನು ಜಾರಿ ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕದಲ್ಲಿದೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ” ಎಂದು ಸ್ವೀಡನ್‌ನ ಕಾನೂನು ಸಚಿವ ಗುನ್ನಾರ್ ಸ್ಟ್ರೋಮರ್ ಸ್ವೀಡಿಷ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಶಾಲೆಯಲ್ಲಿದ್ದಾಗ ಈ ಘಟನೆ ಸಂಭವಿಸಿದೆ ಪೊಲೀಸರು ತನಿಖೆ ನಡೆಸುತ್ತಿದ್ದು, ದಾಳಿಗೆ ಕಾರಣಗಳನ್ನು ಹುಡುಕುತ್ತಿದ್ದಾರೆ.

ಸ್ವೀಡನ್‌ ಶಾಲೆಯಲ್ಲಿ ಗುಂಡಿನ ದಾಳಿ ಐದು ಮಂದಿಗೆ ಗಂಭೀರ ಗಾಯ Read More

ಶೂಟಿಂಗ್ ಸ್ಪರ್ಧೆ:ಮೈಸೂರಿಗೆ ಕೀರ್ತಿ ತಂದ ಎಂ. ಎಲ್ ಚೈತ್ರ‌

ಮೈಸೂರು: ಶೂಟಿಂಗ್ ಸ್ಪರ್ಧೆಯಲ್ಲಿ ಮೈಸೂರಿನ ಪ್ರತಿಭೆ ಎಂ. ಎಲ್ ಚೈತ್ರ‌ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಾಂಸ್ಕೃತಿಕ ನಗರಿಗೆ ಕೀರ್ತಿ ತಂದಿದ್ದಾರೆ.

ಮೈಸೂರಿನ ಎಂ. ಕೆ. ಲಿಂಗರಾಜು- ಎಸ್. ಜಿ. ಕುಸುಮ ಅವರ ಪುತ್ರಿ ಎಂ. ಎಲ್. ಚೈತ್ರ ಏರ್ ಪಿಸ್ತೂಲ್ ಶೂಟಿಂಗ್ ನಲ್ಲಿ ಮಿಂಚಿದ ಪ್ರತಿಭೆ.

ಬೆಂಗಳೂರಿನಲ್ಲಿ ರಾಜ್ಯ ರೈಫಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಚೈತ್ರ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಚೆನ್ನೈನಲ್ಲಿ ನಡೆದ ದಕ್ಷಿಣ ವಲಯದ ರಾಷ್ಟ್ರಮಟ್ಟದ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅಖಿಲ ಭಾರತ ರೈಫಲ್ ಅಸೋಸಿಯೇಷನ್ ಆಯೋಜಿಸಿದ್ದ ಆರು ರಾಜ್ಯಗಳ ನಡುವಿನ ಸ್ಪರ್ಧೆಯಲ್ಲಿ ಚೈತ್ರ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಸೀನಿಯರ್ ವಿಭಾಗದಲ್ಲಿ ನಾಲ್ಕನೆ ಸ್ಥಾನ ಗಳಿಸಿದ್ದಾರೆ.

ಇದಲ್ಲದೆ ದಕ್ಷಿಣ ವಲಯದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಚೈತ್ರ ಪ್ರಥಮ ಸ್ಥಾನ ಹಾಗೂ ರಾಜ್ಯಮಟ್ಟದಲ್ಲಿನ ಏರ್ ಪಿಸ್ತೂಲ್ ಶೂಟಿಂಗ್ ನಲ್ಲಿ ಎರಡನೇ ಸ್ಥಾನವನ್ನು ಗಳಿಸಿ ಮೈಸೂರಿಗೆ ಕೀರ್ತಿ ತಂದಿದ್ದಾರೆ.

ಶೂಟಿಂಗ್ ಸ್ಪರ್ಧೆ:ಮೈಸೂರಿಗೆ ಕೀರ್ತಿ ತಂದ ಎಂ. ಎಲ್ ಚೈತ್ರ‌ Read More