ಅವಳ ಹೆಜ್ಜೆ ಕಿರುಚಿತ್ರೋತ್ಸವದ ಮಹಿಳಾ ನಿರ್ದೇಶಿತ 8 ಕಿರುಚಿತ್ರಗಳ ಮರು ಪ್ರದರ್ಶನ

ಮೈಸೂರು: ಗುಬ್ಬಿವಾಣಿ ಟ್ರಸ್ಟ್ ಆಯೋಜನೆಯಲ್ಲಿ ನಡೆದ ಈ ವರ್ಷದ ಅವಳ ಹೆಜ್ಜೆ ಕಿರುಚಿತ್ರೋತ್ಸವಕ್ಕೆ ಅಗಾಧ ಪ್ರತಿಕ್ರಿಯೆ ಮತ್ತು ಪ್ರೋತ್ಸಾಹ ಸಿಕ್ಕಿದ್ದು, ಮೂರನೇ ಪ್ರದರ್ಶನಕ್ಕೆ ಸಿದ್ದವಾಗಿದೆ.

ಬೆಂಗಳೂರಿನ ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಸೆಪ್ಟೆಂಬರ್ 21 ರಂದು ಬೆಳಿಗ್ಗೆ ಪ್ರದರ್ಶನ ಏರ್ಪಡಿಸಲಾಗಿದೆ.

ಈ ಚಿತ್ರಗಳು ಪ್ರತ್ಯೇಕವಾಗಿ ಮಹಿಳೆಯರಿಗೆಂದೇ ಏರ್ಪಡಿಸಿದ್ದ ಅವಳ ಹೆಜ್ಜೆ ಕಿರುಚಿತ್ರೋತ್ಸವ ಸ್ಪರ್ಧೆಯಲ್ಲಿ ಆಯ್ಧ ಚಿತ್ರಗಳಾಗಿದ್ದು, ವಿಭಿನ್ನ ಅಭಿವ್ಯಕ್ತಿ, ದೃಷ್ಟಿಕೋನಗಳನ್ನು ನಿರೂಪಿಸುತ್ತವೆ.

ಸೆ.21: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ, 6, 9ನೇ ಮುಖ್ಯ ರಸ್ತೆ, ಬನಶಂಕರಿ ಎರಡನೇ ಹಂತ, ಬೆಂಗಳೂರು.
ಪ್ರವೇಶ ಉಚಿತವಿದ್ದು ಈ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು. https://forms.gle/cnaqyXPrMemTBuk27

ಹೆಚ್ಚಿನ ಮಾಹಿತಿಗಾಗಿ: 88677 47236 ಅಥವಾ www.avalahejje.net ಸಂಪರ್ಕಿಸಬಹುದು.

ಬೆಳಿಗ್ಗೆ 10 ಕ್ಕೆ ಶಾಂತಲಾ ದಾಮ್ಲೆ ಅವರು ಉದ್ಘಾಟಿಸಲಿದ್ದಾರೆ.
10:15 ಕ್ಕೆ ಸತ್ಯ ಪ್ರಮೋದ ಎಂ.ಎಸ್ ನಿರ್ದೇಶನದ ಆನ್ ಲೈನ್(2025)
10:35 ಕ್ಕೆ ಮಾನಸ ಯು ಶರ್ಮ ನಿರ್ದೇಶನದ ಸೊಲೋ ಟ್ರಾವೆಲ್ಲರ್ (2023)
10:45 ಕ್ಕೆ ತೃಪ್ತಿ ಕುಲಕರ್ಣಿ ನಿರ್ದೇಶನದ ಹೌ ಆರ್ ಯು?(2023)
11:05 ಕ್ಕೆ ಮಂದಾರ ಬಟ್ಟಲಹಳ್ಳಿ ನಿರ್ದೇಶನದ ದಿ ಲಾಸ್ಟ್ ಹ್ಯಾಪಿ ಕಸ್ಟಮರ್ (2024)
11:25 ಕ್ಕೆ ಚಂದನಾ ನಾಗ್ ನಿರ್ದೇಶನದ ಉಭಯ (2024)
11:35 ಕ್ಕೆ ಕ್ಷಮಾ ಅಂಬೆಕಲ್ಲು ನಿರ್ದೇಶನದ ಪುಷ್ಪ(2024)
11:55 ಕ್ಕೆ ಕವಿತಾ ಬಿ ನಾಯಕ್ ನಿರ್ದೇಶನದ ಗ್ಲೀ (2023)
ಮಧ್ಯಾಹ್ನ 12:05 ಕ್ಕೆ ಸಿಂಚನಾ ಶೈಲೇಶ್ ನಿರ್ದೇಶನದ ಕೇಕ್ ವಾಕ್(2025)
12:20 ಪ್ರಶ್ನೋತ್ತರ, ಪ್ರೇಕ್ಷಕರ ಪ್ರತಿಕ್ರಿಯೆ ಇರಲಿದೆ ಎಂದು ಪ್ರಕಟಣೆಯಲ್ಲಿ ಕಿರು ಚಿತ್ರೋತ್ಸವದ ನಿರ್ದೇಶಕಿ ಶಾಂತಲಾ‌ ದಾಮ್ಲೆ ತಿಳಿಸಿದ್ದಾರೆ.

ಅವಳ ಹೆಜ್ಜೆ ಕಿರುಚಿತ್ರೋತ್ಸವದ ಮಹಿಳಾ ನಿರ್ದೇಶಿತ 8 ಕಿರುಚಿತ್ರಗಳ ಮರು ಪ್ರದರ್ಶನ Read More

ಫೆ.1,2 ರಂದು ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ, ಸಾಕ್ಷ್ಯಚಿತ್ರೋತ್ಸವ

ಮೈಸೂರು: ಮೈಸೂರು ಸಿನಿಮಾ ಸೊಸೈಟಿ ಮತ್ತು ಭಾರತೀಯ ಚಿತ್ರ ಸಾಧನದ ಸಹಯೋಗದೊಂದಿಗೆ ಫೆಬ್ರವರಿ 1 ಮತ್ತು 2 ರಂದು ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ, ಸಾಕ್ಷ್ಯಚಿತ್ರೋತ್ಸವ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಮುಕ್ತ ವಿಶ್ವವಿದ್ಯಾಲದ ಆವರಣದಲ್ಲಿರುವ ಕಾವೇರಿ ಮತ್ತು ನಳ ಸಭಾಂಗಣದಲ್ಲಿ ಈ ಸಮಾರಂಭ ನಡೆಯಲಿದೆ.

ಖ್ಯಾತ ನಟ,ನಿರ್ದೇಶಕ ಪ್ರಕಾಶ್ ಬೆಳವಾಡಿ, ಬರಹಗಾರ ಮನೇಕ್ ಪ್ರೇಮಚಂದ್ ಮತ್ತು ಕೆಎಸ್ಒಯು ಉಪಕುಲಪತಿ ಶರಣಪ್ಪ ಹಲಸೆ ಅವರು ಉದ್ಘಾಟಿಸಲಿದ್ದಾರೆ.

ಪರಿದೃಶ್ಯ ಚಿತ್ರೋತ್ಸವಕ್ಕೆ ಪ್ರಪಂಚದಾದ್ಯಂತ 109 ದೇಶಗಳಿಂದ 3123 ಕಿರು ಮತ್ತು ಸಾಕ್ಷ್ಯಚಿತ್ರಗಳು ಬಂದಿವೆ.

ಈ ಚಿತ್ರಗಳಲ್ಲಿ ಆಯ್ಕೆಯಾದ ಸಿನಿಮಾಗಳಿಗೆ 26 ವರ್ಗಗಳ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಭಾರತದಿಂದ 985 , ಇರಾನ್ ಇಂದ 413, ಸ್ಪೇನ್ ಇಂದ 138, ಫ್ರಾನ್ಸ್ 137, ಬ್ರೆಜಿಲ್ 108,ಚೀನಾ 99,ಇಂಡೋನೇಷಿಯಾ 91, ಟರ್ಕಿ 88, USA 82 , ಇಟಲಿ 81 ಮುಂತಾದ ದೇಶಗಳಿಂದ 3123 ಸಿನಿಮಾಗಳು ಬಂದಿವೆ. ಕನ್ನಡದ ಒಟ್ಟು 73 ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರಗಳು ಸೇರಿವೆ.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಡಾ.ಎಲ್.ಮುರುಗನ್ ಅವರು ಉಪಸ್ಥಿತರಿರುವರು.

ಫೆ.1,2 ರಂದು ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ, ಸಾಕ್ಷ್ಯಚಿತ್ರೋತ್ಸವ Read More