ಪ್ರತಿಭಾ ಪುರಸ್ಕಾರ ಸಾಧನೆಗೆ ಸಿಗುವ ಗೌರವ: ಎನ್ ಶರತ್ ಕುಮಾರ್‌

ಮೈಸೂರು: ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಸಾಧನೆಗೆ ನೀಡುವ ಗೌರವ, ಅವರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ಕೆಲಸ ಅಭಿನಂದನಾರ್ಹ ಎಂದು ಚಿನ್ಮಯ ಪಿಯು ಕಾಲೇಜಿನ ಪ್ರಾಂಶುಪಾಲರಾದ ಎಂ ಎನ್ ಶರತ್ ಕುಮಾರ್‌ ಹೇಳಿದರು.

ನಗರದ ಸರಸ್ವತಿಪುರಂನಲ್ಲಿರುವ
ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 83 ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.

ಈ ಪುರಸ್ಕಾರ ಇತರೆ, ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತದೆ,ವಿದ್ಯಾರ್ಥಿಗಳೇ ಸಮಾಜದ ಆಸ್ತಿ, ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಲಿದೆ ಎಂದು ತಿಳಿಸಿದರು

ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿಅವರು ಮಾತನಾಡಿ,
ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷರಾದ ಎನ್ ಗೋಪಾಲಕೃಷ್ಣನ್, ಗೌರವ ಕಾರ್ಯದರ್ಶಿ ಗುರುಪ್ರಸಾದ್, ಪಿ ಎಸ್ ಚಂದ್ರಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್, ಖಜಾಂಜಿ ಎಮ್ ರಾಘವೇಂದ್ರ ರಾವ್, ಶ್ರೀವತ್ಸ, ಮಂಗಳ ಮತ್ತಿತರರು ಭಾಗವಹಿಸಿದ್ದರು.

ಪ್ರತಿಭಾ ಪುರಸ್ಕಾರ ಸಾಧನೆಗೆ ಸಿಗುವ ಗೌರವ: ಎನ್ ಶರತ್ ಕುಮಾರ್‌ Read More

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ:ವಿದ್ವಾನ್ ಚಂದ್ರಶೇಖರ್ ಭಟ್

ಮೈಸೂರು: ಬಾಲ್ಯದಲ್ಲಿಯೇ ಮಕ್ಕಳಿಗೆ ಧಾರ್ಮಿಕತೆಯ ವಿಧಿ ವಿಧಾನಗಳನ್ನು ತಿಳಿಸಿಕೊಟ್ಟು, ಸಂಸ್ಕಾರವಂತರನ್ನಾಗಿಸುವ ಕರ್ತವ್ಯ ಹೆತ್ತವರದ್ದು ಎಂದು ಕಂಚಿ ಕಾಮಕೋಟಿ ಪೀಠದ ವಿದ್ವಾನ್ ಚಂದ್ರಶೇಖರ್ ಭಟ್ ಹೇಳಿದರು.

ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ
ಹಮ್ಮಿಕೊಂಡಿರುವ 15ದಿನದ ಧಾರ್ಮಿಕ ಬೇಸಿಗೆ ಶಿಬಿರದಲ್ಲಿ 7 ರಿಂದ 14 ವರ್ಷದ ಬಾಲಕ ಬಾಲಕಿಯರಿಗೆ ಸಂಧ್ಯಾವಂದನೆ, ದೇವರ ನಾಮ, ಶ್ಲೋಕಗಳು, ಭಜನೆ, ನೀತಿ ಕಥೆ, ಇನ್ನಿತರ ಶಿಬಿರಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವನದಲ್ಲಿ ಧಾರ್ಮಿಕ ಚಿಂತನೆ ಅಗತ್ಯ, ಬಾಲ್ಯದಿಂದಲೇ ದೇವರ ಬಗ್ಗೆ ನಂಬಿಕೆ ಹಾಗೂ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು,
ಎಂದು ಸಲಹೆ‌ ನೀಡಿದರು.

ರಜಾ ದಿನಗಳಲ್ಲಿ ಮಕ್ಕಳು ಮೊಬೈಲ್, ಟಿ.ವಿಯಲ್ಲಿ ಕಳೆದು ಹೋಗುತ್ತಿದ್ದಾರೆ. ಹಾಗಾಗಿ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಸಂಸ್ಕಾರದ ಬೀಜ ಬಿತ್ತಿ, ದೇಶದ ಸುಸಂಸ್ಕೃತ ಪ್ರಜೆಗಳನ್ನಾಗಿಸುವ ಉದ್ದೇಶದಿಂದ ಶಿಬಿರ ಆಯೋಜಿಸಿದ್ದೇವೆ ಎಂದು ‌ತಿಳಿಸಿದರು.

ಈ ಸಂದರ್ಭದಲ್ಲಿ ಪರಮಹಂಸ ಯೋಗ ಅಕಾಡೆಮಿಯ ಅಧ್ಯಕ್ಷ ಶಿವಪ್ರಕಾಶ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ, ಚಂದ್ರಶೇಖರ್, ಶ್ರೀವತ್ಸ, ಶ್ರೀಕಾಂತ್ ಆಚಾರ್, ಸುರೇಶ್ ಆಚಾರ್, ಮಂಗಳ ಮತ್ತಿತರರು ಹಾಜರಿದ್ದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ:ವಿದ್ವಾನ್ ಚಂದ್ರಶೇಖರ್ ಭಟ್ Read More

ವೇದ ಮಂತ್ರಗಳು ವ್ಯಕ್ತಿ ಜೀವನದ ಸಮಗ್ರ ಚಿತ್ರ ನೀಡಬಲ್ಲವು: ರವಿ ಶಾಸ್ತ್ರಿ

ಮೈಸೂರು: ವೇದ, ಮಂತ್ರಗಳು ವ್ಯಕ್ತಿ ಜೀವನದ ಸಮಗ್ರ ಚಿತ್ರಣವನ್ನು ನೀಡಬಲ್ಲವು ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತ್ರಿ ಎಂದು ಹೇಳಿದರು.

ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಬುಧವಾರ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಏರ್ಪಡಿಸಿದ್ದ ಉಚಿತ ಸಾಮೂಹಿಕ ಉಪನಯನದ ವೇಳೆ ಅವರು ಮಾತನಾಡಿದರು.

ವೇದವೆಂದರೆ ಜ್ಞಾನ, ಸಂಸ್ಕೃತಿ, ಪರಂಪರೆಗೆ ಸಾಕ್ಷಿ. ಭಾರತ ಮಾತ್ರವಲ್ಲ; ವಿಶ್ವಮಟ್ಟದಲ್ಲೂ ಮಾನ್ಯತೆ ಗಳಿಸಿದೆ ಎಂದು ತಿಳಿಸಿದರು.

ತ್ರಿಮತಸ್ಥ ವಿಪ್ರ ಸಮುದಾಯದವರ ಅನುಕೂಲಕ್ಕಾಗಿ ಹಲವಾರು ವರ್ಷಗಳಿಂದ ಈ ಉಚಿತ ಉಪನಯನ ನಡೆಸಿಕೊಂಡು ಬರಲಾಗಿದೆ ಎಂದು ರವಿಶಾಸ್ತ್ರಿ ಹೇಳಿದರು.

ಬೆಳಗ್ಗೆ 6 ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ 10.15 ಕ್ಕೆ ಬ್ರಹ್ಮೋಪದೇಶ ಮಾಡಿ ನಂತರ ವಟುಗಳಿಂದ ಶೋಭಾ ಯಾತ್ರೆ ಮತ್ತು ಅಶ್ವತ್ಥ ಪೂಜೆ ನೆರವೇರಿಸಲಾಯಿತು.

ವಿದ್ವಾನ್ ಸುರೇಶ್ ಭಟ್ ಅವರು
ನೂತನ ವಟುಗಳಿಗೆ ಮಾರ್ಗದರ್ಶನ ನೀಡಿ, ಉಪನಯನದ ಮಹತ್ವ ತಿಳಿಸಿಕೊಟ್ಟರು.

ಆನಂತರ ವಟುಗಳಿಗೆ ಮತ್ತು ಪೋಷಕರಿಗೆ ಪ್ರಸಾದ ವಿತರಿಸಲಾಯಿತು.

ಶ್ರೀ ಕೃಷ್ಣ ಟ್ರಸ್ಟ್ ನ ಉಪಾಧ್ಯಕ್ಷರಾದ ರವಿಶಾಸ್ತ್ರಿ,ಪಿ ಎಸ್ ಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್, ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್, ಕಾರ್ಯದರ್ಶಿ ರಾಘವೇಂದ್ರ, ಸುಬ್ರಹ್ಮಣ್ಯ ತಂತ್ರಿ, ವಿಜೇಂದ್ರ, ಕಿರಣ್ ತಂತ್ರಿ, ಪದ್ಮನಾಭ ಭಟ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ಹಾಗೂ ವಟುಗಳ ಪೋಷಕರು ವಿಪ್ರರು ವಟುಗಳನ್ನು ಆಶೀರ್ವದಿಸಿದರು.

ವೇದ ಮಂತ್ರಗಳು ವ್ಯಕ್ತಿ ಜೀವನದ ಸಮಗ್ರ ಚಿತ್ರ ನೀಡಬಲ್ಲವು: ರವಿ ಶಾಸ್ತ್ರಿ Read More