ತುಳಸಿ ಗಿಡ ಅನೇಕ ರೋಗಗಳಿಗೆ ಮದ್ದು:ಕೃಷ್ಣಮೂರ್ತಿ

ಮೈಸೂರು,ನ.2 : ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸ ಹಾಗೂ ತುಳಸಿ ಹಬ್ಬದ ಪ್ರಯುಕ್ತ
ತುಳಸಿ ಕಟ್ಟೆಗೆ ವಿಶೇಷವಾಗಿ ಅಲಂಕರಿಸಿ ಪೂಜೆ ನೆರವೇರಿಸಲಾಯಿತು.

100 ತುಳಸಿ ಗಿಡಗಳನ್ನು ಭಕ್ತಾದಿಗಳಿಗೆ ಉಚಿತವಾಗಿ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ಅವರು, ತುಳಸಿಗಿಡವು
ಹಿಂದೂ ಧರ್ಮದ ಜನರಿಗೆ ಅವಿಭಾಜ್ಯ ಅಂಗ ಮತ್ತು ಇದನ್ನು ಮನೆಯಲ್ಲಿ ಬೆಳೆಸಿ ಬಳಸಿದರೆ ವಿವಿಧ ಕಾಯಿಲೆಗಳು ಬರುವುದಿಲ್ಲ ಎಂದು ತಿಳಿಸಿದರು.

ತುಳಸಿಗಿಡವು ಯಥೇಚ್ಛವಾಗಿ ಆಮ್ಲಜನಕವನ್ನು ಉತ್ಪತ್ತಿ ಮಾಡುತ್ತದೆ ಹಾಗೂ ತಿಳಿಸಿ ಗಿಡದಿಂದ ಅನೇಕ ಉಪಯೋಗಗಳು ಇವೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಜಿ ರಾಘವೇಂದ್ರ, ಎಸ್ ಎನ್ ರಾಜೇಶ್ ಹಾಗೂ ಅನೇಕ ಭಕ್ತರು ಹಾಜರಿದ್ದರು.

ತುಳಸಿ ಗಿಡ ಅನೇಕ ರೋಗಗಳಿಗೆ ಮದ್ದು:ಕೃಷ್ಣಮೂರ್ತಿ Read More

ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆ

ಮೈಸೂರು: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಇರ್ವಿನ್ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆ ನೆರವೇರಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಗೋಪೂಜೆ ನೆರವೇರಿಸಿ, ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಈ ವೇಳೆ ವಿದ್ವಾನ್ ಕೃಷ್ಣಮೂರ್ತಿ ಅವರು ಮಾತನಾಡಿ, ಕಳೆದ 26 ವರ್ಷಗಳಿಂದ ಈ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕ ವೃತ್ತಿಯನ್ನು ಮಾಡಿಕೊಂಡು ಬಂದಿದ್ದೇನೆ ಎಂದು ತಿಳಿಸಿದರು.

ಈ ನಮ್ಮ ದೇವಸ್ಥಾನದಲ್ಲಿ ದೀಪಾವಳಿಯ ಹಬ್ಬದಂದು ಪ್ರತಿ ವರ್ಷವೂ ಗೋಪೂಜೆಯನ್ನು ಮಾಡಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.

ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಕೂಡ ಮುಜರಾಯಿ ದೇವಾಲಯಗಳಲ್ಲಿ ದೀಪಾವಳಿ ಹಬ್ಬದಂದು ಗೋ ಪೂಜೆ ನೆರವೇರಿಸುವಂತೆ ಆದೇಶ ಮಾಡಿದ್ದಾರೆ.ಅದರಂತೆ ಪೂಜೆಯನ್ನು ನೆರವೇರಿಸಿ ನಾಡಿನ ಎಲ್ಲ ಜನತೆಗೆ ದೀಪಾವಳಿ ಹಬ್ಬ ಶುಭವನ್ನು ತರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

ನಾಡಿನ ಸಮಸ್ತ ಜನರಿಗೂ ಆಯಸ್ಸು ಆರೋಗ್ಯ ಕೊಟ್ಟು ಆಂಜನೇಯ ಸ್ವಾಮಿಯು ಸಕಲ ಸನ್ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ನುಡಿದರು.

ಬಲಿಪಾಡ್ಯಮಿ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಅಭಿಷೇಕ, ಅಲಂಕಾರ, ಪೂಜೆಯನ್ನು ನೆರವೇರಿಸಲಾಗಿದೆ. ಶ್ರೀ ಸ್ವಾಮಿಯು ಎಲ್ಲರಿಗೂ ಒಳಿತು ಮಾಡಲಿ ಎಂದು ಕೃಷ್ಣಮೂರ್ತಿ ಅವರು ಹಾರೈಸಿದರು.

ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆ Read More

ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ:ಜಿಲ್ಲಾಧಿಕಾರಿ ಕುಟುಂಬ ಭಾಗಿ

ಮೈಸೂರು: ಯುಗಾದಿ ಹಬ್ಬದ ಅಂಗವಾಗಿ ಇರ್ವಿನ್ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಹೋಮ ಮತ್ತಿತರ ವಿಶೇಷ ಪೂಜಾ ಕಾರ್ಯ ನೆರವೇರಿಸಲಾಯಿತು.

ಶ್ರೀ ಸ್ವಾಮಿಗೆ ತೈಲಾಭಿಷೇಕ, ವಿಶೇಷ ಧ್ರವ್ಯಗಳು ಹಾಗೂ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಪಂಚಾಂಗ ಶ್ರಾವಣ ಪಠಿಸುವ ಮೂಲಕ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿದವು.

ನಂತರ ಭಕ್ತಾದಿಗಳಿಗೆ ಬೇವು-ಬೆಲ್ಲ ಹಾಗೂ ಪ್ರಸಾದ ವಿತರಿಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಕುಟುಂಬ ಸಮೇತ ಪೂಜಾ ಕಾರ್ಯಗಳಲ್ಲಿ ಭಾಗಿಯಾಗಿದ್ದುದು ವಿಶೇಷ.

ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ:ಜಿಲ್ಲಾಧಿಕಾರಿ ಕುಟುಂಬ ಭಾಗಿ Read More

ಹನುಮ ಜಯಂತಿ ಅಂಗವಾಗಿ ಪಂಚಮುಖಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ

ಮೈಸೂರು: ನಗರದ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಪೂಜೆ ಮಾಡಿ ಅಲಂಕಾರ ಮಾಡಲಾಗಿತ್ತು.

ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಹನುಮ ಜಯಂತಿ ಅಂಗವಾಗಿ ಪಂಚಮುಖಿ ಆಂಜನೇಯನಿಗೆ ವಿಶೇಷ ಅಲಂಕಾರ ಹಾಗೂ ಅಭಿಷೇಕ ಪೂಜೆ ಮಾಡಿ ಹನುಮ ಜಯಂತಿ ಮಹೋತ್ಸವವನ್ನು ಸಂಪನ್ನಗೊಳಿಸಲಾಯಿತು.

ಸ್ವಾಮಿಗೆ ಲೋಕಕಲ್ಯಾಣಾರ್ಥವಾಗಿ ಪೂಜೆ ನೆರವೇರಿಸಲಾಗಿದೆ. ಪಂಚಮುಖಿ ಆಂಜನೇಯ ಸ್ವಾಮಿ ಆಯುರ್, ಆರೋಗ್ಯ ಅಭಿವೃದ್ಧಿ ಯಶಸ್ಸು ಕೀರ್ತಿ ಲಾಭಗಳನ್ನು ಸಮಸ್ತ ಪ್ರಜೆಗಳಿಗೆ ಕರುಣಿಸಲಿ,ರಾಷ್ಟ್ರ ರಾಜ್ಯ ಅಭಿವೃದ್ಧಿಯಾಗಿ ರಾಜ್ಯದಲ್ಲಿ ಮಳೆ ಬೆಳೆ ಸಕಾಲಕ್ಕೆ ಆಗಿ ಸಮೃದ್ಧಿ ಗೊಳ್ಳಲೆಂದು ವಿಶೇಷ ಪ್ರಾರ್ಥನೆ ಮಾಡಲಾಗಿದೆ ಎಂದು ಕೃಷ್ಣಮೂರ್ತಿ ತಿಳಿಸಿದ್ದಾರೆ.

ಹನುಮ ಜಯಂತಿ ಅಂಗವಾಗಿ ಪಂಚಮುಖಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ Read More

ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮೈಸೂರು: ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮ ನಡೆಯುತ್ತಿದೆ.

ಇಂದಿನಿಂದ 21 ತಾರೀಕಿನ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ.

ಭಕ್ತಾದಿಗಳ ಶ್ರೇಯಾಭಿವೃದ್ಧಿ ಹಾಗೂ ಲೋಕಕಲ್ಯಾಣಾರ್ಥವಾಗಿ ಪಾಂಚರಾತ್ರ ಆಗಮ ಶಾಸ್ತ್ರ ಪ್ರಕಾರವಾಗಿ ಶ್ರೀ ಸ್ವಾಮಿಯವರ ಮಹಾ ಸಂಕಲ್ಪ ಪುಣ್ಯಾಹ ವಾಚನ ರಕ್ಷಾ ಬಂಧನ ,
ಅಂಕುರಾಪರ್ಣಾ,ಧ್ವಜಾರೋಹಣ, ಕಲಶ ಪ್ರತಿಷ್ಠೆ ,ಹಾಗೂ ವಿಶೇಷವಾಗಿ ಗರುಡ ದೇವರಿಗೆ ಪಂಚಾಮೃತ ಹಾಗೂ ವಿವಿಧ ದ್ರವ್ಯಗಳಿಂದ ವಿಶೇಷವಾಗಿ ಅಭಿಷೇಕ ಇತ್ಯಾದಿ ಪೂಜಾ ಕಾರ್ಯಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಎಸ್ ಕಷ್ಣಮೂರ್ತಿ ನೆರವೇರಿಸಿದರು.

ಅರ್ಚಕರಾದ ದಾಶರತಿ ನೇತೃತ್ವದಲ್ಲಿ ಗರುಡ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Read More