ಇನ್ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ತಂದೆ,ಮಗ ಪ್ರಾಣಾಪಾಯದಿಂದ ಪಾರು

ಮೈಸೂರು: ಸತತ ಮಳೆಯಿಂದ ಕಾವೇರಿ ತುಂಬಿ ಹರಿಯುತ್ತಿದ್ದಾಳೆ, ಕೆಆರ್ ಎಸ್ ಡ್ಯಾಮ್ ಗೆ ಒಳ ಹರಿವು‌ ಜಾಸ್ತಿಯಾಗಿದೆ,,ಜಲಾಶಯದಿಂದ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತದೆ ನದಿಪಾತ್ರಕ್ಕೆ ಜನ ಬರಬಾರದು ಎಂದು ಎಚ್ಚರಿಕೆ ನೀಡಿದ್ದರೂ ಜನ ಬಂದು ತೊಂದರೆಗೆ ಸಿಲುಕುತ್ತಿದ್ದಾರೆ.

ಏನೋ ಅದೃಷ್ಟವಶಾತ್ ಪೊಲೀಸ್ ಇನ್ಸ್ಪೆಕ್ಟರ್ ಅವರ ಸಮಯಪ್ರಜ್ಞೆಯಿಂದ ತಂದೆ,ಮಗ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.

ನದಿಯಲ್ಲಿ ಸಿಲುಕಿದ್ದವರ ರಕ್ಷಣೆಗೆ ಬನ್ನೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಧಾವಿಸಿದ್ದರಿಂದ ತಂದೆ ಮಗ ಬದುಕುಳಿದಿದ್ದಾರೆ.

ಬನ್ನೂರಿನ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದ್ದು,ಬನ್ನೂರಿನ ಕೃಷ್ಣೆಗೌಡ ಹಾಗೂ ಅವರ ಪುತ್ರ ಪ್ರವೀಣ್ ಅವರನ್ನು ರಕ್ಷಿಸಲಾಗಿದೆ.

ಹಸು ಮೇಯಿಸಲು ತೆರಳಿದ್ದ ತಂದೆ ಮಗ ನದಿಯಲ್ಲಿ ಸಿಲುಕಿದ್ದಾರೆ, ಈ ವೇಳೆ ಕೆಆರ್ ಎಸ್ ಡ್ಯಾಮ್ ನಿಂದ ನದಿಗೆ ನೀರು ಬಿಟ್ಟ ಪರಿಣಾಮ ನೀರಿನ ಸೆಳೆತಕ್ಕೆ ಸಿಲುಕಿ ತಂದೆ ಮಗ ತೊಂದರೆಗೊಳಗಾದರು.

ಇದನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಮನೋಜ್ ಕುಮಾರ್‌ ಅವರು ತೆಪ್ಪ ನಡೆಸುವವರ ಸಹಾಯದಿಂದ ನದಿಯಲ್ಲಿ ಸಿಲುಕಿದ್ದ ಅಪ್ಪ ಮಗನನ್ನು ರಕ್ಷಣೆ ಮಾಡಿದ್ದಾರೆ.

ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಸಮಯಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ತಂದೆ,ಮಗ ಪ್ರಾಣಾಪಾಯದಿಂದ ಪಾರು Read More

ಹಿರಿಯ ಪುತ್ರನನ್ನು ಪಕ್ಷ-ಕುಟುಂಬದಿಂದ ಹೊರಹಾಕಿದ ಲಾಲೂ

ಪಾಟ್ನಾ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರು, ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಅವರನ್ನು ಹೊರಹಾಕುವ ಮೂಲಕ ಭಾರೀ ಚರ್ಚೆ ಹುಟ್ಟುಹಾಕಿದ್ದಾರೆ.

ಲಾಲೂ ಪ್ರಸಾದ್ ಅವರು ತಮ್ಮ ಮಗನನ್ನು ಪಕ್ಷ ಮತ್ತು ಕುಟುಂಬದಿಂದಲೂ ಹೊರಹಾಕಿದ್ದಾರೆ.

ನೈತಿಕ ಮೌಲ್ಯಗಳ ಕೊರತೆ ಆರೋಪದ ಮೇಲೆ, ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಅವರನ್ನು ಪಕ್ಷ ಮತ್ತು ಕುಟುಂಬದಿಂದ ಹೊರಹಾಕಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಲಾಲೂ ಕಿರಿಯ ಪುತ್ರ ತೇಜಸ್ವಿ ಯಾದವ್‌ ಅವರು, ಪಕ್ಷ ಯಾವುದೇ ಕಾರಣಕ್ಕೂ ಅಶಿಸ್ತನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನಮ್ಮ ತಂದೆ ರವಾನಿಸಿದ್ದಾರೆ ಎಂದು ತಿಳಿಸಿದ್ದಾರೆ.

ಲಾಲೂ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದ್ದಾರೆ.ಅಷ್ಟೇ ಅಲ್ಲಾ ಅವರನ್ನು ಕುಟುಂಬದಿಂದಲೂ ಹೊರಹಾಕಲಾಗಿದೆ.

ಆರ್‌ಜೆಡಿ ಪಕ್ಷ ಬಿಹಾರದ ಜನರಿಗೆ ಸಮರ್ಪಿತವಾಗಿದೆ. ನನ್ನ ಅಣ್ಣನ ರಾಜಕೀಯ ಜೀವನ ಮತ್ತು ವೈಯಕ್ತಿಕ ಜೀವನವು ವಿಭಿನ್ನವಾಗಿದೆ. ಅವರು ತಮ್ಮ ವೈಯಕ್ತಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದ್ದಾರೆ. ಅವರು ವಯಸ್ಕರಾಗಿದ್ದು,
ನಿರ್ಧಾರಗಳನ್ನು ತೆಗೆದುಕೊಳ್ಳಲು ಸ್ವತಂತ್ರರಾಗಿದ್ದಾರೆ ಎಂದು ತೇಜಸ್ವಿ ಯಾದವ್‌ ತಿಳಿಸಿದ್ದಾರೆ.

ನಮ್ಮ ಅಣ್ಣ ತಮ್ಮ ವೈಯಕ್ತಿಕ ಜೀವನದಲ್ಲಿ ಏನು ಮಾಡುತ್ತಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಅವರು ಕುಟುಂಬದಲ್ಲಿ ಯಾರನ್ನೂ ತಮ್ಮವರೆಂದು ಪರಿಗಣಿಸುವುದಿಲ್ಲ. ಹೀಗಾಗಿ ಅವರನ್ನು ಕುಟುಂಬದಿಂದಲೂ ಹೊರಹಾಕುವ ನಿರ್ಧಾರವನ್ನು ನಮ್ಮ ತಂದೆ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತೇಜ್ ಪ್ರತಾಪ್ ಅವರ ಸಾಮಾಜಿಕ ಜಾಲತಾಣದ ಪೋಸ್ಟ್‌ ವಿವಾದಕ್ಕೆ ಕಾರಣವಾಗಿತ್ತು.ಇದರಿಂದ ಆಗಿಯೇ ಲಾಲೂ ತಮ್ಮ ಹಿರಿಯ ಪುತ್ರನನ್ನು ಪಕ್ಷದಿಂದ ಉಚ್ಚಾಟಿಸುವ ನಿರ್ಧಾರ ಮಾಡಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಈ ಸಂದರ್ಭದಲ್ಲಿ ತೇಜ್‌ ಪ್ರತಾಪ್‌‌ ಯಾದವ್ ಅವರ ನಡವಳಿಕೆ ಪಕ್ಷಕ್ಕೆ ಹಾನಿಯಾದರೆ ಕಷ್ಟ ಎಂದು ಲಾಲೂ ಪ್ರಸಾದ್‌ ಯಾದವ್‌ ಈ ಕ್ರಮ ಕೈಗೊಂಡಿದ್ದಾರೆಂದು ಪಕ್ಷದ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಹಿರಿಯ ಪುತ್ರನನ್ನು ಪಕ್ಷ-ಕುಟುಂಬದಿಂದ ಹೊರಹಾಕಿದ ಲಾಲೂ Read More

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು
ಗುಂಡಿನ ದಾಳಿ ನಡೆಸಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಶೂಟೌಟ್ ನಡೆಸಲಾಗಿದ್ದು,ರಿಕ್ಕಿ‌ ರೈ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಮುಂಭಾಗ ಕಾಂಪೌಂಡ್ ಬಳಿ ಶುಕ್ರವಾರ ತಡ ರಾತ್ರಿ 12.50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ.

ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ಈ ವೇಳೆ ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಈ ದಾಳಿ ನಡೆದಿದೆ.

ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದ ಕಾರಣ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ರಿಕ್ಕಿ ಪಾರಾಗಿದ್ದಾರೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಫ್ಐಆರ್:
ರಾಮನಗರ ಜಿಲ್ಲೆಯ ಬಿಡದಿಯಲ್ಲಿ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣ ಸಂಬಂಧ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಪ್ರಕರಣ ದಾಖಲಾಗಿದಗದು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ Read More