ರೌಡಿಶೀಟರ್ ಜೊತೆ ಕೇಕ್ ಕಟ್ ಫೋಟೋ ವೈರಲ್: ಪಿಎಸ್ಐ ಅಮಾನತು

ಯಾದಗಿರಿ : ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ ತಪ್ಪಿಗೆ ಪಿಎಸ್‌ಐ ಒಬ್ಬರನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆಯ ಪಿಎಸ್‌ಐ ರಾಜಶೇಖರ್ ರಾಠೋಡ್ ಅವರನ್ನು ಅಮಾನತು ಮಾಡಲಾಗಿದೆ.

ಪಿಎಸ್‌ಐ ಆಗಿ ಹತ್ತು ವರ್ಷ ಪೂರೈಸಿದ್ದಕ್ಕೆ ಠಾಣೆಯಲ್ಲೇ ರಾಜಶೇಖರ್ ಅವರು ರೌಡಿಶೀಟರ್ ನಾಗರಾಜ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು,ಅಲ್ಲದೆ ಠಾಣಾ ಆವರಣದಲ್ಲಿಯೇ ಶೆಟಲ್ ಕಾಕ್ ಆಡಿದ್ದರು.

ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತು ಮಾಜಿ ಸಚಿವ ರಾಜುಗೌಡ ಅವರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

ಈ ಬಗ್ಗೆ ಇಲಾಖೆಯಿಂದ ತನಿಖೆ ನಡೆಸಲಾಗಿತ್ತು.ಕರ್ತವ್ಯಲೋಪ ಹಾಗೂ ಶಿಸ್ತು ಉಲ್ಲಂಘನೆ ಸಾಬೀತಾದ ಹಿನ್ನೆಲೆಯಲ್ಲಿ
ಕೂಡಲೇ ರಾಜಶೇಖರ್ ಅವರನ್ನು ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ರೌಡಿಶೀಟರ್ ಜೊತೆ ಕೇಕ್ ಕಟ್ ಫೋಟೋ ವೈರಲ್: ಪಿಎಸ್ಐ ಅಮಾನತು Read More

ಚ.ನಗರ, ಯಳಂದೂರಲ್ಲಿ ನಡೆದ ಕಳವು:9 ಆರೋಪಿಗಳ ಬಂಧನ

ಚಾಮರಾಜನಗರ: ಚಾ.ನಗರ ಹಾಗೂ ಯಳಂದೂರು ಪಟ್ಟಣದಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ 9 ಆರೋಪಿಗಳನ್ನು ಬಂಧಿಸಿ,17 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನಗಳು ಮತ್ತು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ ಡಾ.ಬಿ.ಟಿ.ಕವಿತಾ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಾ.ನಗರ ಪಟ್ಟಣ ಪೊಲೀಸ್ ಠಾಣೆ ಹಾಗೂ ಯಳಂದೂರು ಪಟ್ಟಣದಲ್ಲಿ ದಾಖಲಾಗಿದ್ದ 6 ಪ್ರಕರಣಗಳ ಸಂಬಂಧ ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಆರೋಪಿಗಳಿಂದ 10 ಬೈಕ್‌ಗಳು, 2 ಕಾರುಗಳು ಹಾಗೂ 70 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚಾ.ನಗರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5 ಕಳ್ಳತನ ಪ್ರಕರಣ ಸಂಬಂಧ 70 ಗ್ರಾಂ ಚಿನ್ನಾಭರಣ, 2 ಕಾರುಗಳು, 2 ಬೈಕ್‌ಗಳು, 1.50 ಲಕ್ಷ ರೂಗಳನ್ನು ವಶಪಡಿಸಿ ಕೊಳ್ಳಲಾಗಿದೆ.

ಚಾ.ನಗರದ ಇಲಿಯಾಜ್‌ನಗರದ ಅರ್ಫಾಜ್ ಖಾನ್, ಮೈಸೂರು ಕೆ.ಜಿ.ಕೊಪ್ಪಲಿನ ಲೀಲಾ, ಚಾ.ನಗರ ತಾಲೂಕಿನ ಚಂದಕವಾಡಿ ಗ್ರಾಮದ ರಾಚಪ್ಪಾಜಿ, ತಮಿಳುನಾಡಿನ ವಿನೋದ್, ಯಳಂದೂರು ಪಟ್ಟಣದ ಹರೀಶ್ ಬಂಧಿತ ಆರೋಪಿಗಳು.

ಯಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್‌ಗಳ ಕಳ್ಳತನ ಸಂಬಂಧ ಬನ್ನೂರು ಹೋಬಳಿಯ ಬಿ.ಬೆಟ್ಟಹಳ್ಳಿಯ ಮದನ್, ಕೆ.ಆ‌ರ್.ನಗರ ತಾಲೂಕಿನ ಗಂಧನಹಳ್ಳಿಯ ಅರ್ಜುನ, ಆಲಗೂಡಿನ ಪ್ರವೀಣ, ಎಡತಲೆಯ ಕಾರ್ತಿಕ್ ಎಂಬು ವವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಶಶಿಧರ್, ಡಿವೈಎಸ್ಪಿಗಳಾದ ಲಕ್ಷ್ಮಯ್ಯ, ಧರ್ಮೇಂದರ್ ಪಟ್ಟಣ ಠಾಣೆಯ ಇನ್ಸ್‌ಪೆಕ್ಟ‌ರ್ ಶ್ರೀಕಾಂತ್, ಸೆನ್‌ ಠಾಣೆಯ ಇನ್ಸ್‌ಪೆಕ್ಟರ್ ಸಾಗರ್ ಉಪಸ್ಥಿತರಿದ್ದರು.

ಚ.ನಗರ, ಯಳಂದೂರಲ್ಲಿ ನಡೆದ ಕಳವು:9 ಆರೋಪಿಗಳ ಬಂಧನ Read More

ರೇವ್ ಪಾರ್ಟಿ ಬಗ್ಗೆ ಪೊಲಿಸರು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಾರೆ:ಸಿದ್ದರಾಮಯ್ಯ

ಮೈಸೂರು: ಮೈಸೂರಿನ ಹೊರವಲಯದಲ್ಲಿ ನಡೆದಿರುವ ರೇವ್ ಪಾರ್ಟಿ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದು,ಪೊಲಿಸರು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ
ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಮುಡಾ ಪ್ರಕರಣ ಕುರಿತು ದೂರುದಾರ ಸ್ನೇಹಮಹಿ ಕೃಷ್ಣ ಯಾರು ಎಂಬುದೇ ನನಗೆ ಗೊತ್ತಿಲ್ಲ ಎಂದು ಇದೇ ವೇಳೆ ಸಿದ್ದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾನು ಇವತ್ತಿನವರೆಗೂ ಸ್ನೇಹಮಯಿ ಕೃಷ್ಣ ಎಂಬುವವರನ್ನು ನೋಡಿಯೇ ಇಲ್ಲ.ಅವರ ಮೇಲೆ ಏನೇನು ಕೇಸ್ ಗಳಿದೆ ಅದೂ ಕೂಡಾ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಅವರು ಕೇಸ್ ಕೊಟ್ಟಿರಬಹುದು
ಹಾಗಾದ ತಕ್ಷಣ ಅದು ತನಿಖೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ,ಅವರು ದೂರು
ಕೊಟ್ಟಿದ್ದಾರೆ ಕೊಡಲಿ ಬಿಡಿ,
ಈಗ ಮುಡಾ ವಿಚಾರ ನ್ಯಾಯಾಲಯದಲ್ಲಿದೆ, ಹಾಗಾಗಿ ಅದರ ಬಗ್ಗೆ ಹೆಚ್ಚು ಕಾಮೆಂಟ್ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಲೋಕಾಯುಕ್ತ ಎಡಿಜಿಪಿ ಮತ್ತು ಕುಮಾರಸ್ವಾಮಿ ನಡುವೆ ಜಟಾಪಟಿ‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ,
ಕುಮಾರಸ್ವಾಮಿಯನ್ನು ಎಡಿಜಿಪಿ ಹಂದಿ ಎಂದು ಕರೆದಿದ್ದಾರಾ,
ಇಲ್ಲಾ ತಾನೇ, ಅವರು ಇಂಗ್ಲೀಷ್ ನ ಬರ್ನಾಡ್ ಶಾರ ವಾಕ್ಯವನ್ನು ಉಲ್ಲೇಖಿಸಿದ್ದಾರೆ ಅಷ್ಟೇ ಎಂದು ಹೇಳಿದರು.

ಕುಮಾರಸ್ವಾಮಿ ಎಡಿಜಿಪಿ ಮೇಲೆ ಕೆಲವೊಂದಿಷ್ಟು ಆರೋಪ ಮಾಡಿದ್ದರು.
ಅದಕ್ಕೆ ಅವರು ಕೂಡಾ ಕೆಲವು ಉತ್ತರಗಳನ್ನ ಕೊಟ್ಟಿದ್ದಾರೆ,ನಾನು ಈ ವಿಚಾರದ ಬಗ್ಗೆ ಹೆಚ್ಚು ವಿವರಣೆ ನೀಡುವುದಿಲ್ಲ,ಅದರಲ್ಲೂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದ್ದೇನೆ,ಅವರು ತಪ್ಪು ಮಾಡಿ ಬಿಟ್ಟಿದ್ದಾರೆ.
ಹೀಗಾಗಿ ಬೇರೆಯವರ ಮೇಲೆ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ತಿಳಿಸಿದರು.

ರೇವ್ ಪಾರ್ಟಿ ಬಗ್ಗೆ ಪೊಲಿಸರು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಾರೆ:ಸಿದ್ದರಾಮಯ್ಯ Read More