ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ ಭಯೋತ್ಪಾದಕರಿಗೆ ಮತ್ತು ಸಂಚು ರೂಪಿಸಿದವರಿಗೆ ಅವರ ಕಲ್ಪನೆಗೂ ಮೀರಿದ ಶಿಕ್ಷೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಮೋದಿ ಈ ರೀತಿ ಉಗ್ರರಿಗೆ ಎಚ್ಚರಿಕೆ ನೀಡಿದರು.
ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಮಾತು ಆರಂಭಿಸಿ ಉಗ್ರರಿಗೆ ಸರಿಯಾದ ಶಿಕ್ಷೆಯಾಗಲಿದೆ ಎಂದು ಹೇಳಿದರು.
ಮೈಸೂರು: ಬೆಳಗಾವಿಯಲ್ಲಿ ಕರ್ತವ್ಯ ನಿರತ ಕೆ ಎಸ್ ಆರ್ ಟಿಸಿ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಮರಾಠಿ ಪುಂಡರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಪ್ರಜ್ಞಾವಂತ ನಾಗರಿಕ ವೇದಿಕೆ ಆಗ್ರಹಿಸಿದೆ
ಮರಾಠಿ ಪುಂಡರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಪ್ರಜ್ಞಾವಂತ ನಾಗರಿಕ ವೇದಿಕೆಯ ಪದಾಧಿಕಾರಿಗಳು ಮಂಗಳವಾರ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ರವರಿಗೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ನಗರಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್, ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯ ಸುಳೇಬಾವಿ ಗ್ರಾಮದ ಹೊರವಲದುದಲ್ಲಿ ವಿಶ್ವ ಮಾತೃ ಭಾಷಾ ದಿನದಂದೇ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಮರಾಠಿ ಪುಂಡರ ಗುಂಪು ಹಲ್ಲೆ ನಡೆಸಿದೆ ಇದು ಖಂಡನೀಯ ಎಂದು ಹೇಳಿದರು.
ಹಲ್ಲೆಗೆ ಒಳಗಾದವರು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನಡೆ ಯುತ್ತಿದ್ದರೂ ಇಲ್ಲಿನ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಇರುವುದು ವಿಷಾದನೀಯ ಸಂಗತಿ. ಕೂಡಲೇ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಹಲ್ಲೆಕೋರರ ಮೇಲೆ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯುಸಿದರು.
ಎಂ.ಇ.ಎಸ್. ಕಾರ್ಯಕರ್ತರು ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳಿಗೆ ಕಪ್ಪು ಮಸಿ ಬಳಿದು, ನಾಲಿಗೆ ಹರಿಯಬಿಟ್ಟಿದ್ದು, ದಿನೆದಿನೇ ಇವರ ದಬ್ಬಾಳಿಕೆ ಹೆಚ್ಚುತ್ತಿದೆ ಎಂದು ಕಿಡಿಕಾರಿದರು.
ರಾಜ್ಯದ ಗಡಿಯಲ್ಲಿ ಅಶಾಂತಿ ಉಂಟು ಮಾಡುತ್ತಿರುವ ಎಂ ಇ ಎಸ್ ಅನ್ನು ರದ್ದುಪಡಿಸಬೇಕು, ಬಸ್ ನಿರ್ವಾಹಕನ ವಿರುದ್ಧದ ಪೋಕ್ಸೋ ಪ್ರಕರಣ ವಾಪಸು ಪಡೆಯಬೇಕು, ಕನ್ನಡ ವಿರೋಧಿ ಕೃತ್ಯಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಒಕ್ಕಲಿಗರ ಸಂಘದ ನಿರ್ದೇಶಕರಾದ ಎ.ರವಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್, ಸುಚಿಂದ್ರ, ಮಹಾನ್ ಶ್ರೇಯಸ್, ಅಜಯ್ ಶಾಸ್ತ್ರಿ ಮತ್ತಿತರರು ಹಾಜರಿದ್ದರು.