ಉದಯಗಿರಿ ಠಾಣೆ ಸಬ್ ಇನ್ಸ್‌ಪೆಕ್ಟರ್ ರೂಪೇಶ್ ದಿಢೀರ್ ವರ್ಗಾವಣೆ
ಮೈಸೂರು: ಉದಯಗಿರಿ ಕಲ್ಲು ತೂರಾಟ ಪ್ರಕಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಸಬ್ ಇನ್ಸ್‌ಪೆಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ನಗರ ಪೊಲೀಸ್ ಆಯುಕ್ತರ ಕಚೇರಿಯ ಆಟೋಮೇಷನ್ ಸೆಂಟರ್‌ಗೆ ರೂಪೇಶ್ ಅವರನ್ನು ವರ್ಗಾವಣೆ ಮಾಡಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ಗಲಾಟೆ ತಡೆಯಲು ಅವಕಾಶ ಇದ್ದರೂ ಕೂಡ ನಿರ್ಲಕ್ಷ್ಯ ವಹಿಸಿದ್ದರಿಂದ ಗಲಭೆ ನಡೆದಿದೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಪೋಟೋ ವೈರಲ್ ಆದ ನಂತರ ಸ್ಟೇಟಸ್ ಹಾಕಿದ್ದ ಆರೋಪಿ ಸತೀಶ್ ಆಲಿಯಾಸ್ ಪಾಂಡುರಂಗನನ್ನ ರೂಪೇಶ್ ಠಾಣೆಗೆ ಕರೆತಂದಿದ್ದರು.
ಬೆಳಿಗ್ಗೆಯಿಂದ ಸಂಜೆಯವರೆಗೂ ಸತೀಶ್ ಮೇಲೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದಕ್ಕೆ ಠಾಣೆ ಮುಂದೆ ಮುಸ್ಲಿಂ ಯುವಕರ ಗುಂಪು ಜಮಾಯಿಸಿ ಗಲಾಟೆ ನಡೆಸಿತ್ತು.
ಉದಯಗಿರಿ ಠಾಣೆ ಸಬ್ ಇನ್ಸ್‌ಪೆಕ್ಟರ್ ರೂಪೇಶ್ ದಿಢೀರ್ ವರ್ಗಾವಣೆ Read More