ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ನೇತಾಜಿ ಒಬ್ಬರು:ನಜರ್ ಬಾದ್ ನಟರಾಜ್
ಬೆಂಗಳೂರು: ನೇತಾಜಿ ಎಂದೇ ಪ್ರಸಿದ್ಧರಾದ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು ಎಂದು ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಬಣ್ಣಿಸಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನದ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ವೇಳೆ ಅವರು ಮಾತನಾಡಿದರು.

ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿಸಲು ಮಹಾತ್ಮ ಗಾಂಧಿಯವರ ಶಾಂತಿ ಮತ್ತು ಅಹಿಂಸೆ ಮಾರ್ಗದಲ್ಲಿ ನಡೆದರೆ ಸುಭಾಷ್ ಚಂದ್ರ ಬೋಸ್ ಅವರು ಇಂಡಿಯನ್ ನ್ಯಾಷನಲ್ ಆರ್ಮಿಯನ್ನು ಸ್ಥಾಪಿಸಿ ಮುನ್ನಡೆಸಿದ ವೀರ ಸೇನಾನಿ ಎಂದು ನುಡಿದರು.
ಹಿಂದುಳಿದ ವರ್ಗದ ಉಪಾಧ್ಯಕ್ಷ ರಮೇಶ ರಾಮಪ್ಪ ಮಾತನಾಡಿ, ಸುಭಾಷ್ ಚಂದ್ರ ಬೋಸ್ ಅವರು ಭಾರತೀಯರಲ್ಲಿ ಸ್ವಾತಂತ್ಯ್ರದ ಕಿಚ್ಚು ಹಚ್ಚಿದ ಮಹಾನ್ ನಾಯಕ ಎಂದು ಹೇಳಿದರು.
‘ನೇತಾಜಿ’ ಎಂದೇ ಗೌರವದಿಂದ ಇಂದು ಭಾರತೀಯರು ಅವರನ್ನು ನೆನಪಿಸಿಕೊಳ್ಳುತ್ತೇವೆ,ಹಲವು ಕಾರಣಗಳಿಂದ ನೇತಾಜಿ ಇಂದಿಗೂ ಭಾರತೀಯರ ಮನಸ್ಸಿನಲ್ಲಿ ಬೇರೂರಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಬಳಗದ ಕಾರ್ಯದರ್ಶಿ ಮಂಜುನಾಥ್ ಮರಾಟಿ ಕ್ಯಾತನಹಳ್ಳಿ ಮತ್ತು ಲೋಕೇಶ್ ಉಪಸ್ಥಿತರಿದ್ದರು..