ಹೈಕೋರ್ಟ್​ ಆದೇಶ ಎತ್ತಿ ಹಿಡಿದ ಸುಪ್ರೀಂ:ಮಾಲೂರು ಮರು ಮತ ಎಣಿಕೆಗೆ ಆದೇಶ

ನವದೆಹಲಿ: ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ವಿಚಾರದಲ್ಲಿ ಹೈಕೋರ್ಟ್​ ಮರುಮತ ಎಣಿಕೆಗೆ ಸೂಚನೆ ನೀಡಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ 2023ರ ವಿಧಾನಸಭೆ ಚುನಾವಣೆಯಲ್ಲಿ ನಡೆದಿರುವ ಕೆಲವು ತಪ್ಪುಗಳನ್ನು ಗಮನಿಸಿ, ರಾಜ್ಯ ಹೈಕೋರ್ಟ್ ಮರು ಮತ ಎಣಿಕೆಗೆ ಆದೇಶ ನೀಡಿತ್ತು.

ಆದರೆ, ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಲಾಗಿತ್ತು, ಇದೀಗ ಸುಪ್ರೀಂ ಕೋರ್ಟ್ ಕೂಡ ರಾಜ್ಯ ಹೈಕೋರ್ಟ್​ ಆದೇಶವನ್ನು ಎತ್ತಿಹಿಡಿದಿದೆ. ಮರು ಮತ ಎಣಿಕೆ ಬಗ್ಗೆ ಕಠಿಣ ಸೂಚನೆ ಹೊರಡಿಸಿದೆ.

ಶಾಸಕ ಕೆ.ವೈ‌ ನಂಜೇಗೌಡ ಮತ್ತು ಮಾಜಿ ಶಾಸಕ ಮಂಜುನಾಥಗೌಡ ಮಧ್ಯೆ ಚುನಾವಣೆ ಪ್ರಾರಂಭವಾದಾಗಿನಿಂದಲೂ ಇರಿಸುಮುರಿಸು ಇತ್ತು,ಫಲಿತಾಂಶ ಬಂದಾಗ ಕೇವಲ 248 ಮತಗಳಿಂದ ಗೆದ್ದಿರುವುದಕ್ಕೆ ಭಾರೀ ಆಕ್ಷೇಪಗಳು ಕೇಳಿಬಂದಿದ್ದವು. ಮರು ಮತಎಣಿಕೆ ಬಗ್ಗೆ ಭಾರೀ ಚರ್ಚೆ ನಡೆದಿತ್ತು, ಇದೀಗ ಸುಪ್ರೀಂ ಕೋರ್ಡ್​ ಕೂಡ ಇದನ್ನೇ ಹೇಳಿದೆ.

ಇಂದಿನಿಂದ ನಾಲ್ಕು ವಾರಗಳ ಒಳಗೆ ಮರು ಎಣಿಕೆ ನಡೆಸುವಂತೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ. ಈ ನಿರ್ಧಾರವು ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡರ ಭವಿಷ್ಯ ಅಡಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ, ಬಿಜೆಪಿಯ ಮಾಜಿ ಶಾಸಕ ಮಂಜುನಾಥಗೌಡ ಬಣ ಗೆಲುವಿನ ನಿರೀಕ್ಷೆಯಲ್ಲಿದೆ.

ಮಾಜಿ ಶಾಸಕರಾಗಿದ್ದ ಮಂಜುನಾಥ್ ಗೌಡರು, ಚುನಾವಣೆಯ ನಂತರ ಮೂರು ದಿನಗಳಲ್ಲಿ ರಾಜ್ಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು,ಮತ ಎಣಿಕೆಯ ಸಮಯದಲ್ಲಿ ದಾಖಲೆಯ ದೋಷಗಳು, ತಪ್ಪು ಎಣಿಕೆ, ಮತ್ತು ಅನಧಿಕೃತ ವ್ಯಕ್ತಿಗಳ ಪ್ರವೇಶ ಇದೆ ಎಂದು ಆರೋಪ ಮಾಡಿದ್ದರು.

ಜೊತೆಗೆ, ಎಣಿಕೆಯ ವೀಡಿಯೋ ದಾಖಲೆಗಳನ್ನು ಚುನಾವಣಾ ಅಧಿಕಾರಿಗಳು ಒದಗಿಸಲಾಗಲಿಲ್ಲ ಎಂದು ಆರೋಪಿಸಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ಪರಿಗಣಿಸಿ, ಚುನಾವಣೆಯನ್ನು ರದ್ದುಗೊಳಿಸಿ ಮರು ಎಣಿಕೆಗೆ ಆದೇಶಿಸಿತು. ಜೊತೆಗೆ, ನಂಜೇಗೌಡರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿ, ನಾಲ್ಕು ವಾರಗಳ ತಡೆಯಾಜ್ಞೆ ನೀಡಿತು.

ಹೈಕೋರ್ಟ್‌ನ ನ್ಯಾಯಾಧೀಶ ಆರ್. ದೇವದಾಸ್ ಅವರ ನೇತೃತ್ವದ ತೀರ್ಪು ವಿಭಾಗವು, ಚುನಾವಣಾ ಸಂಬಂಧಿತ ಕಾನೂನುಗಳನ್ನು ಉಲ್ಲಂಘಿಸಲಾಗಿದೆ ಎಂದು ತೀರ್ಪು ನೀಡಿತು.

ಚುನಾವಣಾ ಆಯುಕ್ತರಿಗೆ ಮತಗಳನ್ನು ಮರು ಎಣಿಕೆ ಮಾಡಿ, ಹೊಸ ಫಲಿತಾಂಶವನ್ನು ಘೋಷಿಸುವಂತೆ ಸೂಚಿಸಿತು. ಆದರೆ, ನಂಜೇಗೌಡರ ವಾದವನ್ನು ಗಮನಿಸಿ, ಈ ಆದೇಶವನ್ನು 30 ದಿನಗಳ ಕಾಲ ನಿಲ್ಲಿಸಿತು. ಈ ಸಮಯದಲ್ಲಿ ನಂಜೇಗೌಡರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಅವಕಾಶ ನೀಡಿತು. ಇದರಿಂದ,ಅವರಿಗೆ ಶಾಸಕ ಸ್ಥಾನವು ತಾತ್ಕಾಲಿಕವಾಗಿ ಉಳಿಸಿಕೊಳ್ಳಲು ಸಾಧ್ಯವಾಗಿತ್ತು.

ಸುಪ್ರೀಂ ಕೋರ್ಟ್ ಇದೀಗ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇಂದಿನಿಂದ ನಾಲ್ಕು ವಾರಗಳ ಒಳಗೆ ಮರು ಮತ ಎಣಿಕೆ ನಡೆಸುವಂತೆ ಚುನಾವಣಾ ಆಯುಕ್ತರಿಗೆ ಸೂಚನೆ ನೀಡಿದೆ. ಜೊತೆಗೆ, ಹೈಕೋರ್ಟ್‌ನ ಅಸಿಂಧು ಆದೇಶದ ತಡೆಯಾಜ್ಞೆಯನ್ನು ಮುಂದುವರೆಸಿದೆ. ಮರು ಎಣಿಕೆಯ ನಂತರ ಮಾತ್ರ ಶಾಸಕ ಸ್ಥಾನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದೂ ಆದೇಶಿಸಿದೆ.

ಎಣಿಕೆಯ ವೀಡಿಯೋ ದಾಖಲೆಗಳ ಕೊರತೆಯಿಂದಾಗಿ ಉಂಟಾದ ಗೊಂದಲವನ್ನು ತಪ್ಪಿಸಲು, ಭವಿಷ್ಯದಲ್ಲಿ ಇಂತಹ ದೋಷಗಳನ್ನು ತಡೆಯುವಂತೆಯೂ ಸೂಚಿಸಿದೆ.

ಹೈಕೋರ್ಟ್​ ಆದೇಶ ಎತ್ತಿ ಹಿಡಿದ ಸುಪ್ರೀಂ:ಮಾಲೂರು ಮರು ಮತ ಎಣಿಕೆಗೆ ಆದೇಶ Read More

ಹೈಕೋರ್ಟ್ ಸಿಜೆಐ ಮೇಲೆ ಶೂ ಎಸೆತ:ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಹೆಚ್.ಡಿ ಕೋಟೆ: ಸುಪ್ರೀಂ ಕೋರ್ಟ್ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾದಿಕಾರಿಗಳು ಹೆಚ್.ಡಿ ಕೋಟೆ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ದಲಿತ ಸಂಘರ್ಷ ಸಮಿತಿ ಹೆಚ್.ಡಿ.ಕೋಟೆ‌ ರಾಜ್ಯಾಧ್ಯಕ್ಷ ಬೆಟ್ಟಪ್ಪ ಮತ್ತು ಸದಸ್ಯರೊಂದಿಗೆ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಮತ್ತಿತರ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ‌ ಅದೂ ಕೋರ್ಟ್ ಹಾಲ್ ನಲ್ಲೇ ಇಂತಹ ಹೀನ ಕೃತ್ಯಕ್ಕೆ ಮುಂದಾಗಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಪ್ರತಿಭಟನಾ ನಿರತರು ಘೋಷಣೆ ಕೂಗಿದರು.

ಮುಖ್ಯ ನ್ಯಾಯಮೂರ್ತಿಗಳಿಗೆ ಹೆಚ್ಚಿನ ರಕ್ಷಣೆ ಕೊಡಬೇಕು,ಸಿಜೆಐ ಮೇಲೆ ಶೂ ಎಸೆಯಲು ಮುಂದಾದ ವಕೀಲರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮತ್ತು ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವದ ಸದಸ್ಯರು ಆಗ್ರಹಿಸಿದ್ದಾರೆ.

ಒಂದು ವೇಳೆ ಕಾನೂನು ಕ್ರಮ ಜರುಗಿಸದೆ ಹೋದಲ್ಲಿ ಮುಂದೆ ದೊಡ್ಡಮಟ್ಟದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಹೈಕೋರ್ಟ್ ಸಿಜೆಐ ಮೇಲೆ ಶೂ ಎಸೆತ:ದಲಿತ ಸಂಘರ್ಷ ಸಮಿತಿ ಪ್ರತಿಭಟನೆ Read More

ಸುಪ್ರೀಂ ಕೋರ್ಟ್ ಆದೇಶ‌ ಸ್ವಾಗತಿಸುವೆ:ರಮ್ಯಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುವುದಾಗಿ ಮೋಹಕ ತಾರೆ ರಮ್ಯಾ ತಿಳಿಸಿದ್ದಾರೆ.

ನಟ ದರ್ಶನ್ ಜಾಮೀನು ರದ್ದಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರಮ್ಯಾ,ಸುಪ್ರೀಂ ಕೋರ್ಟ್ ಆದೇಶಗಳಿಗೆ ಯಾವುದೇ ಕೇಸಾಗಲಿ ಎಲ್ಲರೂ ತಲೆಬಾಗಬೇಕು ಎಂದು ಹೇಳಿದರು.

ದರ್ಶನ್ ಅವರು ಲೈಟ್ ಬಾಯ್‌ ಆಗಿ ಸಿನಿಮಾರಂಗಕ್ಕೆ ಬಂದು ಬಹಳ ಕಷ್ಟಪಟ್ಟು ಮುಂದೆ ಬಂದಿದ್ದಾರೆ‌ ಎಂದು ತಿಳಿಸಿದರು.

ಅವರು ಮನಸು ಮಾಡಿದ್ದರೆ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು,ಆದರೆ ಎಲ್ಲವನ್ನೂ ಹಾಳು ಮಾಡಿಕೊಂಡರು ಎಂದು ಹೇಳಿದರು.

ತಮಗೆ ಬರುತ್ತಿದ್ದ ಅಶ್ಲೀಲ ಸಂದೇಶಗಳು ಕಡಿಮೆಯಾಗಿದೆ ಸಧ್ಯ ನೆಮ್ಮದಿ ಇದೆ,ಕಿರಿಕ್ ತಪ್ಪಿದೆ ಎಂದು ರಮ್ಯಾ ತಿಳಿಸಿದರು.

ಸುಪ್ರೀಂ ಕೋರ್ಟ್ ಆದೇಶ‌ ಸ್ವಾಗತಿಸುವೆ:ರಮ್ಯಾ Read More

ಸುಪ್ರೀಂ ಮಹತ್ವದ ಆದೇಶ:ನಟ ದರ್ಶನ್‌,ಪವಿತ್ರ ಗೌಡ ಜಾಮೀನು ರದ್ದು

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ನೀಡಿದ್ದ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿ ಶಾಕ್ ನೀಡಿದೆ.

ಗುರುವಾರ ಈ ಕೇಸ್‌ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್.ಮಹಾದೇವನ್ ಅವರಿದ್ದ ಪೀಠವು ಈ ಮಹತ್ವದ ಆದೇಶ ನೀಡಿತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಇತರೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ 2024 ಡಿಸೆಂಬರ್‌ನಲ್ಲಿ ಜಾಮೀನು ನೀಡಿತ್ತು.

ಹೈಕೋರ್ಟ್‌ ಆದೇಶವನ್ನು ಪ್ರಶ್ನೆ ಮಾಡಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಈ ಕುರಿತು ಇತ್ತೀಚೆಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಜಾಮೀನು ನೀಡಿದ ನಡೆಯನ್ನು ತರಾಟೆಗೆ ತೆಗೆದುಕೊಂಡಿತ್ತು. ಎಲ್ಲಾ ಪ್ರಕರಣದಲ್ಲಿಯೂ ಇದೇ ರೀತಿ ಕೊಲೆ ಅಪರಾಧಿಗೆ ಜಾಮೀನು ನೀಡಬಹುದೆ ಎಂದು ಕಟುವಾಗಿ ಪ್ರಶ್ನೆ ಮಾಡಿತ್ತು.

ಆರೋಪಿಗಳಾದ ದರ್ಶನ್‌ ತೂಗುದೀಪ,
ಪವಿತ್ರಾ ಗೌಡ,ಆರ್‌ ನಾಗರಾಜು,ಎಂ ಲಕ್ಷ್ಮಣ್,ಅನು ಕುಮಾರ್‌ ಅಲಿಯಾಸ್‌ ಅನು,ಜಗದೀಶ್‌ ಅಲಿಯಾಸ್‌ ಜಗ್ಗ
ಪ್ರದೋಷ್‌ ರಾವ್‌ ಅವರುಗಳು ಮತ್ತೆ ಜೈಲು ಸೇರಬೇಕಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ,ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ಹಿಂಪಡೆಯಲಾಗಿದೆ ಎಂದು ಸುಪ್ರೀಂ ಸ್ಪಷ್ಟವಾಗಿ ತಿಳಿಸಿದೆ.

ಜಾಮೀನು ಮಂಜೂರು ವಿಚಾರಣೆಯ ಮೇಲೆ ಪರಿಣಾಮ ಬೀರುತ್ತದೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು,
ಆರೋಪಿ ಎಷ್ಟೇ ದೊಡ್ಡವರಾಗಿರಲಿ, ಅವರು ಕಾನೂನಿಗಿಂತ ದೊಡ್ಡವರಲ್ಲ, ಯಾರೂ ಕಾನೂನಿಗಿಂತ ಮೇಲಿಲ್ಲ, ಯಾರೂ ಕಾನೂನಿಗಿಂತ ಕೆಳಗಿಲ್ಲ. ನಾವು ಕಾನೂನನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ,ಎಲ್ಲಾ ಸಮಯದಲ್ಲೂ ಕಾನೂನನ್ನು ಕಾಪಾಡುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದೆ.

ನಟ ದರ್ಶನ್ ಗೆ ಐಶಾರಾಮಿ ಟ್ರೀಟ್‌ಮೆಂಟ್‌ ಬಗ್ಗೆಯೂ ಸುಪ್ರೀಂ ಕಿಡಿಕಾರಿದೆ.
ಒಂದು ವೇಳೆ ಆರೋಪಿಗಳಿಗೆ ಜೈಲಿನಲ್ಲೇ‌ ರಾಜಾತೀತ್ಯ ನೀಡಲಾಗುತ್ತಿದೆ ಎಂಬುದು ನಮ್ಮ ಗಮನಕ್ಕೆ ಬಂದರೆ, ನಾವು ತೆಗೆದುಕೊಳ್ಳುವ ಮೊದಲ ಹೆಜ್ಜೆ ಜೈಲಿನ ಅಧೀಕ್ಷಕರು ಮತ್ತು ಸಂಬಂಧಪಟ್ಟ ಇತರ ಎಲ್ಲಾ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರು ಕಠಿಣವಾಗಿ ಎಚ್ಚರಿಸಿದ್ದಾರೆ.

ದರ್ಶನ್ ಸೇರಿ ಇತರ ಆರೋಪಗಳನ್ನು ವಶಕ್ಕೆ ಪಡೆಯುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ,ಜತೆಗೆ ಯಾವ ಜೈಲು ಎಂಬುದನ್ನೂ ನಿರ್ಧರಿಸಿದೆ.ಹಾಗಾಗಿ ಯಾವ ಕ್ಷಣದಲ್ಲಾದರೂ ದರ್ಶನ್,ಪವಿತ್ರ ಗೌಡ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆಯಬಹುದು.

ಸುಪ್ರೀಂ ಮಹತ್ವದ ಆದೇಶ:ನಟ ದರ್ಶನ್‌,ಪವಿತ್ರ ಗೌಡ ಜಾಮೀನು ರದ್ದು Read More

ದೇವರಾಜ ಮಾರುಕಟ್ಟೆ ಕಟ್ಟಡ ಸ್ಥಿತಿಗತಿ ಪರಿಶೀಲಿಸಿದ ಇಂಟಾಚ್ ತಂಡ

ಮೈಸೂರು: ಪಾರಂಪರಿಕ ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣ ಮಾಡುವ ಸಂಬಂಧ ತೀರ್ಮಾನ ಕೈಗೊಳ್ಳಬೇಕಾದ ಕಾರಣ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಇಂಟಾಚ್ ತಂಡ ಮೈಸೂರಿಗೆ ಭೇಟಿ ನೀಡಿತು.

ಭಾರತೀಯ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಪರಂಪರೆ ಟ್ರಸ್ಟ್(ಇಂಟಾಚ್) ತಂಡ ಲ್ಯಾನ್ಸ್‌ಡೌನ್ ಕಟ್ಟಡದ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿತು.

ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಇಂಟಾಚ್ ತಂಡ ಗುರುವಾರ ಮೈಸೂರಿಗೆ ಆಗಮಿಸಿ ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪರಿಶೀಲಿಸಿ ಅಧ್ಯಯನ ನಡೆಸಿತು.

ಇಂಟಾಚ್ ತಂಡದ ರಘುನಾಥ್ ಅವರ ನೇತೃತ್ವದಲ್ಲಿ ಮನೀಷ್, ಸಿದ್ದಾರ್ಥ, ಜೀತಾ, ಅಮೃತಾ ಅವರು ಕಟ್ಟಡವನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರು.

ಮಾರುಕಟ್ಟೆ ಕಟ್ಟಡ ಕುಸಿದು ಬಿದ್ದಿರುವ ಪ್ರದೇಶ, ದುಸ್ಥಿತಿಯಲ್ಲಿರುವ ಮಳಿಗೆಗಳು, ಹಣ್ಣು ಅಂಗಡಿಗಳ ಮಾರ್ಗ, ತರಕಾರಿ ಮಳಿಗೆಗಳ ಮಾರ್ಗ ಇನ್ನಿತರೆ ಮಳಿಗೆಗಳ ವಿಡಿಯೋ ಹಾಗೂ ಫೊಟೋಗಳನ್ನು ತಂಡ ತೆಗೆದುಕೊಂಡಿತು.

ಕಳೆದ ವಾರವೂ ಲ್ಯಾನ್ಸ್‌ಡೌನ್ ಕಟ್ಟಡವನ್ನು ಪರಿಶೀಲಿಸಿ ಅಧ್ಯಯನ ನಡೆಸಿದ್ದ ಇಂಟಾಚ್ ತಂಡ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಿದೆ.

ದೇವರಾಜ ಮಾರುಕಟ್ಟೆ ಕಟ್ಟಡ ಸ್ಥಿತಿಗತಿ ಪರಿಶೀಲಿಸಿದ ಇಂಟಾಚ್ ತಂಡ Read More

ರಾಜಮನೆತನಕ್ಕೆ 3,400 ಕೋಟಿ ಟಿಡಿಆರ್ ನೀಡಲು ಸರ್ಕಾರಕ್ಕೆ ಸುಪ್ರೀಂ ಆದೇಶ

ನವದೆಹಲಿ: ಅರಮನೆ ಮೈದಾನ ಭೂಮಿ ವಿವಾದ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3,400 ಕೋಟಿಯ ಟಿಡಿಆರ್ ಅನ್ನು ಮೈಸೂರು ರಾಜಮನೆತನಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

ನ್ಯಾ. ಅರವಿಂದ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ 3,400 ಕೋಟಿಯ ಟಿಡಿಆರ್ ಅನ್ನು ಈ ಕೂಡಲೇ ನೀಡಬೇಕು ಎಂದು ಸುಪ್ರೀಂ ಸೂಚಿಸಿದೆ.

ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡಬೇಕು ಎಂದು ಈ ಹಿಂದೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್ನಲ್ಲಿ 3,400 ಕೋಟಿಯ ಟಿಡಿಆರ್ ಅನ್ನು ರಾಜ್ಯ ಸರ್ಕಾರ ಠೇವಣಿ ಇಟ್ಟಿತ್ತು. ಅದನ್ನು ರಾಜವಂಶಸ್ಥರಿಗೆ ಹಸ್ತಾಂತರಿಸಬಾರದು ಎಂದು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.

ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್‌ನಲ್ಲಿ ಟಿಡಿಆರ್ ಇಡಲಾಗಿದ್ದು,ಇದನ್ನು ರಾಜಮನೆತನ ಪರ ವಕೀಲರು ವಿರೋಧಿಸಿದ್ದರು. ರಿಜಿಸ್ಟ್ರಾರ್‌ನಲ್ಲಿ ಇರಬೇಕು ಎಂದು ಸರ್ಕಾರ ವಾದಿಸಿತ್ತು, ಅಂತಿಮವಾಗಿ ರಾಜ್ಯ ಮನೆತನಕ್ಕೆ ಟಿಡಿಆರ್ ನೀಡಲು ಆದೇಶಿಸಲಾಗಿದೆ.

ಈ ಭೂಮಿಯ ಮೇಲೆ ರಾಜಮನೆತನದ ಹಕ್ಕಿಲ್ಲ ಎನ್ನುವ ರಾಜ್ಯ ಸರ್ಕಾರದ ಅರ್ಜಿ ಇನ್ನೂ ಬಾಕಿ ಇದೆ.

ರಾಜಮನೆತನಕ್ಕೆ 3,400 ಕೋಟಿ ಟಿಡಿಆರ್ ನೀಡಲು ಸರ್ಕಾರಕ್ಕೆ ಸುಪ್ರೀಂ ಆದೇಶ Read More

ಹನಿಟ್ರ್ಯಾಪ್‌ ಪ್ರಕರಣ:ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

ನವದೆಹಲಿ: ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ಅಲ್ಲದೇ ವಿಚಾರಣೆ ವೇಳೆ ಅರ್ಜಿದಾರ ಬಿನಯ್ ಕುಮಾರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿತು.

ನೀವು ಜಾರ್ಖಂಡ್ ಮೂಲದವರು, ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ, ಪೊಲಿಟಿಕಲ್ ನಾನ್‌ಸೆನ್ಸ್‌ಗಳನ್ನು ವಿಚಾರಣೆ ನಡೆಸಲು ನಾವು ಇಲ್ಲಿ ಕುಳಿತಿಲ್ಲ,ನಮಗೆ ಮಾಡಲು ಬಹಳಷ್ಟು ಕೆಲಸಗಳಿವೆ ಎಂದು ಪೀಠ ಕಡಕ್ಕಾಗಿ ಹೇಳಿತು.

ನ್ಯಾಯಾಧೀಶರು ಯಾಕೆ ಹನಿಟ್ರ‍್ಯಾಪ್‌ಗೆ ಒಳಗಾಗುತ್ತಾರೆ, ಅದನ್ನು ನ್ಯಾಯಾಧೀಶರು ನೋಡಿಕೊಳ್ತಾರೆ. ಇಂತಹ ಅರ್ಜಿ ವಿಚಾರಣೆ ನಡೆಸಿಕೊಂಡು ಕೂರಲು ನಮಗೆ ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ಗೆ ಮಾಡಲು ಸಾಕಷ್ಟು ಕೆಲಸ ಇದೆ ಎಂದು ಬಿನಯ್ ಕುಮಾರ್‌ರನ್ನ ತರಾಟೆಗೆ ತೆಗೆದುಕೊಂಡಿದೆ.

ಕರ್ನಾಟಕದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ‍್ಯಾಪ್ ಪ್ರಕರಣ ನಡೆದಿದೆ. ಈ ಬಗ್ಗೆ ಸಚಿವರೇ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾಗೀ ಈ ಬಗ್ಗೆ ಸಿಬಿಐ ಅಥಾವ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಸುಪ್ರೀಂಗೆ ಮನವಿ ಮಾಡಿದ್ದರು.

ಹನಿಟ್ರ್ಯಾಪ್‌ ಪ್ರಕರಣ:ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ Read More

ಮುಡಾ ಪ್ರಕರಣ; ಸುಪ್ರೀಂ ಕೋರ್ಟ್‌ಗೆ ಹೋಗುವೆ:ಸ್ನೇಹಮಯಿ ಕೃಷ್ಣ

ಮೈಸೂರು: ನಮ್ಮ ಹೋರಾಟಕ್ಕೆ ಅಲ್ಪ ಹಿನ್ನಡೆಯಾಗಿದೆ,ಹಾಗಂತ ಹೋರಾಟದಿಂದ ಹಿಂದೆ ಸರಿಯುವುದಿಲ್ಲ, ಸುಪ್ರೀಂ ಕೋರ್ಟ್‌ಗೆ ಹೋಗುವೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಧಾರವಾಡ ಹೈಕೋರ್ಟ್‌ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದರು.

ನ್ಯಾಯಾಲಯ ಯಾವ ವಿಚಾರವನ್ನಿಟ್ಟುಕೊಂಡು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದೆ ಎಂಬುದು ಗೊತ್ತಾಗಿಲ್ಲ, ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗುತ್ತೇವೆ, ಮುಂದಿನ ವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಪ್ರಕರಣವನ್ನ ಸಿಬಿಐಗೆ ನೀಡುವಂತೆ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಇದುವರೆಗೆ ನಾವು ಗೆದ್ದಿದ್ದೆವು, ಈಗ ಸಣ್ಣ ಹಿನ್ನಡೆಯಾಗಿದೆ, ಇದರಿಂದ ನಾನು ದೃತಿಗೆಡುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್‌ ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

ಮುಡಾ ಪ್ರಕರಣ; ಸುಪ್ರೀಂ ಕೋರ್ಟ್‌ಗೆ ಹೋಗುವೆ:ಸ್ನೇಹಮಯಿ ಕೃಷ್ಣ Read More

ದರ್ಶನ್‌ ಸೇರಿ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌

ನವದೆಹಲಿ: ದರ್ಶನ್‌, ಪವಿತ್ರ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೆ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಈ ವೇಳೆ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

ಮುಂದಿನ ವಿಚಾರಣೆಯಲ್ಲಿ ಆರೋಪಿಗಳ ಪರ ವಕೀಲರು ಜಾಮೀನು ನೀಡಿದ್ದನ್ನು ಸಮರ್ಥಿಸಿಕೊಂಡರೆ, ಪೊಲೀಸರ ಪರ ವಕೀಲರು ಜಾಮೀನು ನೀಡಬಾರದು ಎಂದು ವಾದ ಮಂಡಿಸಲಿದ್ದಾರೆ. ಎರಡೂ ಕಡೆಯ ವಾದವನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್‌ ತನ್ನ ಆದೇಶವನ್ನು ಪ್ರಕಟಿಸಲಿದೆ.

ದರ್ಶನ್‌ ಸೇರಿ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌ Read More

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ವಜಾ

ಬೆಂಗಳೂರು: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಸುಗಮವಾಗಿದೆ.

ಈ ಹಿಂದೆ ಆಂದ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳನ್ನು ಸ್ಮರಿಸಿ ಅರ್ಜಿದಾರರ ವಾದವನ್ನು ತಳ್ಳಿಹಾಕಿದರು.

ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂತಹ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ, ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತು.

ಈ ಎಲ್ಲಾ ಕೋರಿಕೆಗಳನ್ನು ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ವಜಾ Read More