ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಶಾ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್‌ ಸದಸ್ಯರು

ಬೆಳಗಾವಿ,ಸುವರ್ಣಸೌಧ: ಗುರುವಾರ ಕೂಡಾ ವಿಧಾನಸಭೆ ಮತ್ತು ಪರಿಷತ್‌ ಕಲಾಪದಲ್ಲಿ ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿದರು.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್‌ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಕಾಂಗ್ರೆಸ್ ಸದಸ್ಯರು ಚರ್ಚೆಗೆ ಆಗ್ರಹಿಸಿ, ನಿರ್ಣಯ ಕೈಗೊಳಲು ಒತ್ತಾಯಿಸಿದರು.

ಸದನದಲ್ಲಿ ಒಟ್ಟಾಗಿ ನಿಂತು ಅಂಬೇಡ್ಕರ್ ಫೊಟೋ ಹಿಡಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಬಿಜೆಪಿಯವರು ಕಾಂಗ್ರೆಸ್‌ನಿಂದಲೇ ಅಂಬೇಡ್ಕರ್‌ ಅವರಿಗೆ ಅನ್ಯಾಯವಾಗಿದೆ ಎಂದು ಹೇಳಿ ಪ್ರತಿಭಟಿಸಿದರು.ಈ ವೇಳೆ ಯಾರೊಬ್ಬರ ಮಾತೂ ಕೇಳದಂತೆ ಗದ್ದಲವಾಯಿತು.

ಈ ವೇಳೆ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರದರ್ಶಿಸಿದ ಅಂಬೇಡ್ಕರ್ ಭಾವಚಿತ್ರವನ್ನೇ ತೆಗೆದುಕೊಂಡು ಕಾಂಗ್ರೆಸ್ ವಿರುದ್ಧವೇ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ‌ ಪ್ರದರ್ಶಿಸಿ ವ್ಯಂಗ್ಯವಾಡಿದರು.

ಗದ್ದಲ ಚದರ ಸತತ ಜೋರಾಗುತ್ತಿದ್ದಂತೆ ಸ್ಪೀಕರ್‌ ಯು.ಟಿ.ಖಾದರ್ ಕೆಲಕಾಲ ಕಲಾಪವನ್ನು ಮುಂದೂಡಿದರು.

ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಶಾ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್‌ ಸದಸ್ಯರು Read More

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ : 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ ಕಲಾಪದಲ್ಲಿ, 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಮಂಡಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆಗಾಗಿ ವಿಧೇಯಕವನ್ನು ರಚನೆ ಮಾಡಲಾಗಿದೆ. ಪ್ರಾಧಿಕಾರಕ್ಕೆ ಹಿರಿಯ ಶ್ರೇಣಿ ಐಎಎಸ್ ಅಧಿಕಾರಿಯನ್ನು ಆಯಕ್ತರನ್ನಾಗಿ ನೇಮಿಸಲು ಅವಕಾಶ ನೀಡಲಾಗಿದೆ.

ಪ್ರಾಧಿಕಾರ ಸದಸ್ಯತ್ವದ ನೇಮಕಕ್ಕೂ ತಿದ್ದುಪಡಿ ತಂದು ಸರ್ಕಾರಕ್ಕೆ ಸದಸ್ಯರ ನೇಮಕ ಮಾಡಲು ಅಧಿಕಾರ ನೀಡಲಾಗಿದೆ.
ಮೈಸರೂ ಪರಾಂಪರಿಕ ಮಹತ್ವ ಕಾಪಾಡಲು ಪ್ರಾಧಿಕಾರದ ಅಡಿ ಪರಾಂಪರಿಕ ಕಟ್ಟಡಗಳ ರಕ್ಷಣಾ ಸಮಿತಿ ರಚನೆ ಮಾಡಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.

ಶಾಸಕರಾದ ತಮ್ಮಣ್ಣ, ಭೈರತಿ ಬಸವರಾಜ ಎಸ್.ಟಿ.ಸೋಮಶೇಖರ್,ಟಿ.ಎಸ್.ಶ್ರೀವತ್ಸ, ಜಿ.ಟಿ.ದೇವೇಗೌಡ, ವಿ.ಸುನಿಲ್ ಕುಮಾರ್, ಹೆಚ್.ಡಿ.ರೇವಣ್ಣ ವಿಧೇಯಕ ಕುರಿತು ಚರ್ಚಿಸಿದರು.

ನಂತರ ವಿಧಾನ ಸಭೆಯಲ್ಲಿ ಧ್ವನಿ ಮತದ ಮೂಲಕ ಕೆಲ ತಿದ್ದಪಡಿಯೊಂದಿಗೆ ವಿಧೇಯಕವನ್ನು ಅಂಗೀಕರಿಸಲಾಯಿತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ Read More