ಜಂಬೂ ಸವಾರಿಯಲ್ಲಿ ಗಮನ ಸೆಳೆದ ಸ್ತಬ್ಧಚಿತ್ರಗಳು,ಜಾನಪದ ಕಲೆ

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಿಬಂದ ಸ್ತಬ್ಧಚಿತ್ರಗಳು,ಜಾನಪದ ಕಲಾತಂಡಗಳು ಈ ಬಾರಿ ಅತಿ ಹೆಚ್ಚು ಆಕರ್ಶಣೆಯಿಂದ ಕೂಡಿದ್ದವು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ- ಶಕ್ತಿ ಯೋಜನೆಯ ಯಶೋಗಾಥೆ, ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ ವಿಜಯದ ರನ್ ವೇ ಭಾರತದ ಆಕಾಶಕ್ಕೆ ಎಚ್‌ಎಎಲ್‌ನ ಶಕ್ತಿ ಸ್ತಬ್ಧಚಿತ್ರ…..
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಿಂದ ಆತ್ಮನಿರ್ಭರ ಭಾರತವನ್ನು ಮುನ್ನಡೆಸುತ್ತಿದೆ ರಕ್ಷಣಾ ಚಲನಶೀಲತೆಯಲ್ಲಿ, ಭಾರತೀಯ ರೈಲ್ವೆ ಇಲಾಖೆಯಿಂದ ಚಿನಾಬ್ ಸೇತು ಹಾಗೂ ಪಂಬನ್ ಸೇತು, ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಭೋವಿ ಸಮುದಾಯದವರನ್ನು ಆರ್ಥಿಕವಾಗಿ ಸ್ವಾವಲಂಭಿಗಳಾಗಿ ಮಾಡಲು ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳು, ಮಂಡ್ಯ ಜಿಲ್ಲೆಯಿಂದ ಸ್ವಾತಂತ್ರ‍್ಯ ಹೋರಾಟದ ದೀಪ-ಶಿವಪುರದ ಧ್ವಜ ಸತ್ಯಾಗ್ರಹ, ಚಿಕ್ಕಬಳ್ಳಾಪುರ ಜಿಲ್ಲೆಯ ಜ್ಞಾನಿ -ವಿಜ್ಞಾನಿಗಳ ನಾಡು, ನಗರಾಭಿವೃದ್ಧಿ ಇಲಾಖೆಯಿಂದ ಸ್ಮಾರ್ಟ್, ಶುದ್ದ ಕಾಳಜಿಯ ನಗರಗಳು, ಮೈಸೂರು ಮಹಾನಗರ ಪಾಲಿಕೆಯಿಂದ ಸ್ವಾಸ್ಥ್ಯ ಮತ್ತು ಸುಸ್ಥಿರ ಮೈಸೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ಕುರಿತು ಮೆರವಣಿಗೆಯಲ್ಲಿ ಕಲಾ ತಂಡಗಳೊಂದಿಗೆ ಒಂದರ ಹಿಂದೆ ಒಂದರಂತೆ ಸಾಗಿ ಎಲ್ಲರ ಗಮನ ಸೆಳೆದವು.

ಧಾರವಾಡ ಜಿಲ್ಲೆಯಿಂದ ರಾಷ್ಟ್ರದ ತಯಾರಿಕಾ ಕೇಂದ್ರ ಗರಗ ಕಲಘಟಗಿ ಬಣ್ಣದ ತೊಟ್ಟಿಲು ಮತ್ತು ನವಲಗುಂದ ಜಮಖಾನ, ಉತ್ತರ ಕನ್ನಡ ಜಿಲ್ಲೆಯಿಂದ ರಾಣಿ ಚೆನ್ನಭೈರಾದೇವಿ, ಮಸಾಲೆ ರಾಣೆ ಬಾಗಲಕೋಟೆ ಜಿಲ್ಲೆಯಿಂದ ಕೂಡಲಸಂಗಮ ಮತ್ತು ಶಿಲ್ಪಕಲೆಗಳ ನಾಡು, ಕೊಪ್ಪಳ ಜಿಲ್ಲೆಯಿಂದ ಕಿನ್ನಾಳ ಕಲೆ, ಶಿವಮೊಗ್ಗ ಜಿಲ್ಲೆಯಿಂದ ಕೇದಾರೇಶ್ವರ ದೇವಸ್ಥಾನ, ಬಳ್ಳಿಗಾವಿ, ಬಳ್ಳಾರಿ ಜಿಲ್ಲೆಯಿಂದ ಸೆಪ್ಟೆಂಬರ್ ನಲ್ಲಿ ಸಂಡೂರು ನೋಡು, ವಿಜಯಪುರ ಜಿಲ್ಲೆಯಿಂದ ಶಿವನ ಪ್ರತಿಮೆ ಶಿವಗಿರಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲೆ ದೈವಾರಾಧನೆ ಹಾಗೂ ಸಾಂಪ್ರದಾಯಿಕ ಕ್ರೀಡೆ, ಕಲಬುರಗಿ ಜಿಲ್ಲೆಯಿಂದ ಶರಣಬಸವೇಶ್ವರ ಸಂಸ್ಥಾನ. ಮಾಹಾದಾಸೋಹಿ ಪೀಠ ಮತ್ತು ಬಹುಮನಿ ಸುಲ್ತಾನ ಸಾಮ್ರಾಜ್ಯ, ತುಮಕೂರು ಜಿಲ್ಲೆಯಿಂದ “ನವ್ಯ ಮತ್ತು ಪ್ರಾಚೀನ ಶಿಲ್ಪ ಕಲಾ ಸಂಕೀರ್ಣ ನಮ್ಮ ತುಮಕೂರು ಜಿಲ್ಲೆ”, ಉಡುಪಿ ಜಿಲ್ಲೆಯಿಂದ ಸ್ವಚ್ಛ ಉಡುಪಿ, ಕೊಡಗು ಜಿಲ್ಲೆಯಿಂದ ಕೊಡಗಿನ ಚಾರಣ ಪಥಗಳು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ಅಭೂತಪೂರ್ವ ಸಾಧನ,
ಹಾವೇರಿ ಜಿಲ್ಲೆಯಿಂದ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮೈಲಾರ ಮಹದೇವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಘಾಟಿ ಸುಬ್ರಮಣ್ಯ ದೇವಸ್ಥಾನ, ದೇವನಹಳ್ಳಿ ಕೋಟೆ ಮತ್ತು ಕೆಂಪೇಗೌಡರ ವಿಗ್ರಹ, ಚಿಕ್ಕಮಗಳೂರು ಜಿಲ್ಲೆಯಿಂದ ಭದ್ರಬಾಲ್ಯ ಯೋಜನೆ ಚಿಕ್ಕಮಗಳೂರು ಜಿಲ್ಲೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ -ಕರ್ನಾಟಕದಿಂದ ಡ್ರಗ್ಸ್ ಮುಕ್ತ ಕ್ಯಾಂಪಸ್ ಅಭಿಯಾನ, ಚನ್ನಪಟ್ಟಣ ಗೊಂಬೆ, ಮೈಸೂರು ಜಿಲ್ಲೆಯಿಂದ ಬದನವಾಳು ನೂಲುವ ಪ್ರಾಂತ್ಯ, ಬೆಂಗಳೂರು ನಗರ ಜಿಲ್ಲೆಯಿಂದ ಬ್ರಾಂಡ್ ಬೆಂಗಳೂರಿನತ್ತ ದಿಟ್ಟ ಹೆಜ್ಜೆ,ಚಾಮರಾಜನಗರ ಜಿಲ್ಲೆಯಿಂದ ಪ್ರಕೃತಿಯ ಸೌರ್ಹದತೆಯೊಂದಿಗೆ ಪ್ರಗತಿಯತ್ತ ಸಾಗೋಣ, ಬೆಳಗಾವಿ ಜಿಲ್ಲೆಯಿಂದ ಶ್ರೀ ಮಹಾಕಾಳಿ ಮಾಯಕ್ಕಾ ದೇವಿ ದೇವಸ್ಥಾನ ಚಿಂಚಲಿ, ಹಾಸನ ಜಿಲ್ಲೆಯಿಂದ ಗೊಮ್ಮಟೇಶ್ವರ – ಕಾಫಿ, ಬೀದರ್ ಜಿಲ್ಲೆಯಿಂದ ಬೀದರ ಕೊಟೆ, ದಾವಣಗೆರೆ ಜಿಲ್ಲೆಯಿಂದ ಮನೆ ಮನೆಗೆ ಗಂಗೆ, ಚಿತ್ರದುರ್ಗ ಜಿಲ್ಲೆಯಿಂದ ರಾಜವೀರ ಮದಕರಿ ನಾಯಕ, ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮದಿಂದ ಕರ್ನಾಟಕದ ಹೆಮ್ಮೆಯ ಸಂಕೇತ ಮೈಸೂರು ರೇಷ್ಮೆ, ಕೆ.ಎಂ.ಎಫ್ ನಿಂದ ನಂದಿನಿ ಹಾಲಿನ ಶುಭ್ರತೆ… ನೀಡಿದೆ ರೈತ ಪರಿವಾರಕ್ಕೆ ಭದ್ರತೆ, ಡಾ||ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟರ ಸಮಗ್ರ ಅಭಿವೃದ್ಧಿ – ನಮ್ಮ ಧ್ಯೇಯ…ಹೀಗೆ ಪ್ರತಿ ಜಿಲ್ಲೆಗಳಿಂದ ಆಗಮಿಸಿದ್ದ ಸ್ತಬ್ಧ ಚಿತ್ರಗಳು ಮನಸೂರೆಗೊಂಡವು.

ಇವುಗಳಲ್ಲದೆ ಮೆರವಣಿಗೆಯಲ್ಲಿ ಬಂದ ಜಾನಪದ ಕಲಾವಿದರ ವೇಷಭೂಷಣ,ಅವರ ಹಾವಾಬವಾವಕ್ಕೆ ಜನ ಮನಸೋತರು.

ಜಂಬೂ ಸವಾರಿಯಲ್ಲಿ ಗಮನ ಸೆಳೆದ ಸ್ತಬ್ಧಚಿತ್ರಗಳು,ಜಾನಪದ ಕಲೆ Read More

ಮೈಸೂರು ದಸರಾ ಮಹೋತ್ಸವದ ಸ್ತಬ್ಧ ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

ಮೈಸೂರು: ಮೈಸೂರು ದಸರಾ ಮಹೋತ್ಸವ- 2024 ಸ್ತಬ್ಧ ಚಿತ್ರ ಉಪ ಸಮಿತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರಕ್ಕೆ ನೀಡಿದ ಪ್ರಥಮ ಬಹುಮಾನವನ್ನು ಇಲಾಖೆಯ ಅಧಿಕಾರಿಗಳು ಸ್ವೀಕಾರಿಸಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ, ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಹಾಗೂ ಕಲಾವಿದರಾದ ಪ್ರಸಾದ್ ಬಹುಮಾನ ಸ್ವೀಕಾರ ಮಾಡಿದರು.

1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ 39ನೇ ಅಧಿವೇಶನ ನಡೆದಿತ್ತು.ಈ ವರ್ಷ ಅಧಿವೇಶನಕ್ಕೆ 100 ವರ್ಷಗಳು ತುಂಬಿದೆ.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದ ಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕರ್ಷಕವಾಗಿ ಬಿಂಬಿಸಿ ಸ್ತಬ್ದಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.

ಮೈಸೂರು ದಸರಾ ಮಹೋತ್ಸವದ ಸ್ತಬ್ಧ ಚಿತ್ರಗಳಿಗೆ ಪ್ರಶಸ್ತಿ ಪ್ರದಾನ Read More

ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ

ಬೆಂಗಳೂರು: ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ ಸಂದಿದೆ.

ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ ಎಂದು ದಸರಾ ಸ್ತಬ್ಧಚಿತ್ರ ಉಪಸಮಿತಿಯ ವಿಶೇಷಾಧಿಕಾರಿಗಳು ಪ್ರಕಟಿಸಿದ್ದಾರೆ.

1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ 39ನೇ ಅಧಿವೇಶನ ನಡೆದಿತ್ತು.ಈ ವರ್ಷ ಅಧಿವೇಶನಕ್ಕೆ 100 ವರ್ಷಗಳು ತುಂಬುತ್ತಿದೆ.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದ ಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕರ್ಷಕವಾಗಿ ಬಿಂಬಿಸುವ ಸ್ತಬ್ದಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದರು. ಅಸ್ಪೃಶ್ಯತೆ ವಿರುದ್ಧ ಚಳವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರೆನಿಸಿಕೊಂಡರು.

ಬಸವಣ್ಣನವರ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ಘೋಷಿಸಿ ಮಹತ್ವದ ಹೆಜ್ಜೆಯನ್ನಿಟ್ಟರು. ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲು ಆದೇಶಿಸಿದರು.

ಈ ಮಹತ್ವದ ಘಟನೆಗೆ ಸಾಕ್ಷಿಯೆಂಬಂತೆ ಸ್ತಬ್ದಚಿತ್ರದ ಮುಂಭಾಗದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರ ಮಾದರಿ ಪ್ರತಿಕೃತಿಯನ್ನು ಚಿತ್ರಿಸಲಾಗಿತ್ತು. ಬಸವಣ್ಣನವರು ಕುಳಿತ ಪೀಠದ ಕೆಳಭಾಗದಲ್ಲಿ ಕೂಡಲಸಂಗಮದ ಮುಖ್ಯದ್ವಾರದ ಮಾದರಿಯನ್ನು ಚಿತ್ರಿಸಲಾಗಿತ್ತು.

ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನವು ಒಂದು ಮಹತ್ವದ ಘಟನೆಯಾಗಿದೆ. ಇದು ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನವಾಗಿತ್ತು. ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಏಕತೆಯನ್ನು ಪುನಃಸ್ಥಾಪಿಸುವುದು. ಅಸ್ಪೃಶ್ಯತೆ ಮತ್ತು ಇತರ ವಿಷಯಗಳ ಜೊತೆಗೆ ಚರಕ ಮತ್ತು ಖಾದಿಯ ಪ್ರಾಮುಖ್ಯತೆಯನ್ನು ಒತ್ತಿಹೇಳುವುದು ಅವರ ಪ್ರಾಥಮಿಕ ಉದ್ದೇಶವಾಗಿತ್ತು. ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಸಂಪೂರ್ಣ ಆವರಣವನ್ನು ವಿಜಯನಗರ ಎಂದು ಹೆಸರಿಸಲಾಗಿತ್ತು.

ಬಿಳಿ, ಹಸಿರು, ಕೇಸರಿ ಮತ್ತು ಧ್ವಜದ ಮಧ್ಯ ಭಾಗದಲ್ಲಿ ಚರಕ ಇರುವ ತ್ರಿವರ್ಣ ಧ್ವಜವನ್ನು ಇಲ್ಲಿ ಮೊದಲಬಾರಿಗೆ ಹಾರಿಸಿದರು. ಇದರ ಮಾದರಿ ಪ್ರತಿಕೃತಿಯನ್ನು ಮಧ್ಯ ಭಾಗದಲ್ಲಿ ತೋರಿಸಲಾಗಿದೆ. ಅಧಿವೇಶನವು ಮರದ ಚೌಕಟ್ಟುಗಳಿಂದ ಸುತ್ತುವರಿದ ಎತ್ತರದ ವೇದಿಕೆಯಲ್ಲಿ ಮಹಾತ್ಮ ಗಾಂಧಿಯವರು ತಮ್ಮ ಅಧ್ಯಕ್ಷೀಯ ಭಾಷಣವನ್ನು ಮಾಡಿದ್ದರು. ಹಾಗೂ ಸಾರ್ವಜನಿಕರು ಈ ಭಾಷಣವನ್ನು ವೀಕ್ಷಿಸುತ್ತಿರುವ ಮಾದರಿ ಪ್ರತಿಕೃತಿಯನ್ನು ಮಧ್ಯ ಹಾಗೂ ಹಿಂಭಾಗದಲ್ಲಿ ವಿನ್ಯಾಸಗೊಳಿಸಲಾಗಿತ್ತು.

ಸ್ತಬ್ಧಚಿತ್ರದ ಕೆಳಭಾಗದ ಎರಡು ಕಡೆಗಳಲ್ಲಿ ಅಹಿಂಸೆ, ಸತ್ಯಾಗ್ರಹ, ಸ್ವರಾಜ್ಯ ಬಿಂಬಿಸುವ ಧ್ವಜವನ್ನು ಕೈಯಲ್ಲಿ ಹಿಡಿದಿರುವ ಮಾದರಿಯನ್ನು ಚಿತ್ರಿಸಲಾಗಿತ್ತು. ಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸು ಧೈಯವಾಕ್ಯದೊಮಾಹಿತಿ ಆರಂಭಗೊಂಡ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿಯ ಬಗ್ಗೆ ಮಾಹಿತಿ ಫಲಕ‌ ಅಳವಡಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಅವರ ಪರಿಕಲ್ಪನೆಯಂತೆ ,ಕ್ಷೇತ್ರ ಪ್ರಚಾರ ಶಾಖೆ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ.ಅವರು ಸ್ತಬ್ಧಚಿತ್ರ ನಿರ್ಮಾಣಕ್ಕೆ ಶ್ರಮಿಸಿದ್ದರು, ಪ್ರತಿರೂಪಿ ಕಲಾತಂಡದ ಶಶಿಧರ ಅಡಪ ಮತ್ತು ತಂಡದ ಕಲಾವಿದರು ಸ್ತಬ್ಧಚಿತ್ರ ತಯಾರಿಸಿದ್ದರು.

ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ Read More

ಜಂಬೂಸವಾರಿ ಮೆರವಣಿಗೆಗೆ ಮೆರಗು ತಂದಸ್ತಬ್ಧಚಿತ್ರ,ಜಾನಪದ ಕಲೆ

ಮೈಸೂರು: ಈ ಬಾರಿ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಸಾಗಿದ ಸ್ತಬ್ಧಚಿತ್ರ ಮೆರವಣಿಗೆ‌ ಹಾಗೂ ಕಲೆಗಳು ವಿಶೇಷವಾಗಿತ್ತು.

ಇದೇ ಮೊದಲ ಬಾರಿಗೆ 31 ಜಿಲ್ಲೆಗಳಿಂದ 51 ಕಲಾಕೃತಿಗಳು ಭಾಗವಹಿಸಿ ನೋಡುಗರ ಕಣ್ಮನ ಸೆಳೆದವು.

ಕೋಲಾರದ ಕೋಟಿಲಿಂಗೇಶ್ವರ ದೇವಸ್ಥಾನ, ದಕ್ಷಿಣ ಕನ್ನಡದ ಕರಾವಳಿಯ ವಾಣಿಜ್ಯ ಮತ್ತು ಪ್ರವಾಸೋದ್ಯಮ, ಹಾಸನ ಜಿಲ್ಲೆಯ ವಿಶ್ವಪರಂಪರೆಯ ಬೇಲೂರು ಚೆನ್ನಕೇಶವ ದೇವಾಲಯ, ಹಳೆಬೀಡು ಹೊಯ್ಸಳೇಶ್ವರ ದೇವಾಲಯ, ದಾವಣಗೆರೆ ಜಿಲ್ಲೆಯ ನಾವು ಮನುಜರು, ಗದಗ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು

ಪಂಚಾಯತ್‌ರಾಜ್ ವಿಶ್ವವಿದ್ಯಾಲಯ, ಕೊಪ್ಪಳದ ಹುಲಿಗೆಮ್ಮ ದೇವಿ ದೇವಸ್ಥಾನ, ಕಿನ್ನಾಳೆ ಕಲೆ, ಇಟಗಿ ದೇವಸ್ಥಾನ, ಬೀದರ್ ಜಿಲ್ಲೆಯ ಚೆನ್ನ ಬಸವಪಟ್ಟ ದೇವರು, ಚಾಮರಾಜನಗರ ಜಿಲ್ಲೆಯ ಸೋಲಿಗರ ಸೊಗಡನ್ನೊಮ್ಮೆ ಬಂದು ನೋಡು, ಕೊಡಗು ಜಿಲ್ಲೆಯ

ಭೂಸಂರಕ್ಷಣೆ, ಹಾರಂಗಿ ಜಲಾಶಯ, ಕಾಫಿ, ಕಾಳುಮೆಣಸು, ಆನೆ ಕ್ಯಾಂಪ್, ಮುಖ್ಯಮಂತ್ರಿಯ ತವರು ಜಿಲ್ಲೆಯಿಂದ ಮನುಷ್ಯ ಜಾತಿ ತಾನೊಂದೇ ವಲಂ, ಸಂಸತ್ ಭವನ, ಅನುಭವ ಮಂಟಪ, ಬುದ್ಧ, ಬಸವ, ಅಂಬೇಡ್ಕರ್ ಅವರ ಮಾದರಿಗಳು, ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ದೇವಸ್ಥಾನ ಹಾಗೂ ಶಿವನ ಸ್ತಬ್ಧಚಿತ್ರ,ಜಂಬೂ ಸವಾರಿ ಮೆರವಣಿಗೆಯ ಸ್ತಬ್ಧಚಿತ್ರಗಳು ಎಲ್ಲರ ಮನಸೆಳೆದವು.

ಜಂಬೂಸವಾರಿ‌ ಮೆರವಣಿಗೆಗೆ ಜಾನಪದ ಕಲಾಕಾರರು ಮೆರಗು ನೀಡಿದರು.

ಜಂಬೂಸವಾರಿ ಮೆರವಣಿಗೆಗೆ ಮೆರಗು ತಂದಸ್ತಬ್ಧಚಿತ್ರ,ಜಾನಪದ ಕಲೆ Read More