ಪ್ರೀತಿಗೆ ಒಪ್ಪದ ಶಿಕ್ಷಕಿಯ ಕೊಂದ ಪಾಗಲ್ ಪ್ರೇಮಿ

ಮೈಸೂರು: ಯುವಕನೊಬ್ಬ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಈ ಘಟನೆ ನಗರದ ಅಶೋಕಪುರಂನಲ್ಲಿ ನಡೆದಿದ್ದು,ಪಾಂಡವಪುರದ ಎಲೆಕೆರೆ ಹ್ಯಾಂಡ್ ಪೋಸ್ಟ್ ನ ನಿವಾಸಿ ಪೂರ್ಣಿಮಾ (36) ಕೊಲೆಗೀಡಾದ ಶಿಕ್ಷಕಿ.

ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಕೊಲೆ ಮಾಡಿದ ಆರೋಪಿ.

ಅಭಿಷೇಕ್ ಪೂರ್ಣಿಮಾಳನ್ನು ಪ್ರೀತಿಸುತ್ತಿದ್ದ,ಮದುವೆಯಾಗುವಂತೆ ಒತ್ತಾಯಿಸಿದ್ದಾನೆ,ಆದರೆ ಆಕೆ ಸ್ಪಂದಿಸದ ಕಾರಣ ಆಕೆಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಆಕೆ ತೀವ್ರವಾಗಿ ಗಾಯಗೊಂಡಿದ್ದನ್ನು ಕಂಡು ಆತನೆ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ.

ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಆಕೆಗೆ ತಾಳಿ ಕೂಡಾ ಕಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಆದರೆ ಪೂರ್ಣಿಮಾ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ನಗರದ ಅಶೋಕಪುರಂ ಠಾಣೆ ಪೊಲೀಸರು ಆರೋಪಿ ಅಭಿಷೇಕ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೀತಿಗೆ ಒಪ್ಪದ ಶಿಕ್ಷಕಿಯ ಕೊಂದ ಪಾಗಲ್ ಪ್ರೇಮಿ Read More

ನದಿಗೆ ಹಾರಿ ಶಿಕ್ಷಕ ಆತ್ಮಹತ್ಯೆ

ನಂಜನಗೂಡು: ಮಕ್ಕಳನ್ನು ತಿದ್ದಿ ಬುದ್ದಿ ಹೇಳಬೇಕಾದ ಶಿಕ್ಷಕರೆ ಆತ್ಮಹತ್ಯೆ ಹಾದಿ ಹಿಡಿದರೆ ಹೇಗೆ?.

ಮಂಡ್ಯದ ಮೂಲದ ಶಿಕ್ಷಕರೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಿನ ಕಪಿಲಾ ನದಿಗೆ ಬಿದ್ದು ಮಾಡಿಕೊಂಡಿದ್ದಾರೆ.

ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿ ಬಂದ ಅವರು ರಾಷ್ಟ್ರೀಯ ಹೆದ್ದಾರಿ 766 ರ ಕಪಿಲಾ ಸೇತುವೆ ಮೇಲೆ ಕಾರು ನಿಲ್ಲಿಸಿ ಚಪ್ಪಲಿ ಮೊಬೈಲು ಹಾಗೂ ಕಾರಿನ ಕೀ-ಯನ್ನು ಕಾರಿನಲ್ಲೇ ಬಿಟ್ಟು ಅಲ್ಲೇ ಸೇತುವೆಯಿಂದ ನದಿಗೆ ಜಿಗಿದಿದ್ದಾರೆ.

ಬಾಗಿಲು ತೆರೆದ ಕಾರು ಬಹಳ ಸಮಯ ಅಲ್ಲೆ ನಿಂತಿರುವದನ್ನು ಕಂಡವರು ಪೊಲೀಸರಿಗೆ ಸುದ್ದಿ ತಲುಪಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಂಡ್ಯ ನೋಂದಣಿಯ ಕಾರಿನಿಂದ ಮಾಲಿಕರ ವಿಳಾಸ ಪತ್ತೆ ಮಾಡಿದಾಗ ಈ ಆತ್ಮಹತ್ಯೆಯ ಸುಳಿವು ದೊರಕಿದೆ.

ನಂತರ ನಂಜನಗೂಡು ನಗರ ಠಾಣೆಯ ಎಸ್ ರವೀಂದ್ರ ಹಾಗೂ ತಿಮ್ಮಯ್ಯ ಮೂರು ತೆಪ್ಪಗಳನ್ನು ತರಿಸಿ ನುರಿತ ಈಜುಗಾರರಿಂದ ಕಪಿಲಾ ನದಿಯಲ್ಲಿ ಹುಡುಕಿಸಿದಾಗ ಚಂದ್ರು ದೇಹ ಸೇತುವೆಯಿಂದ 1.ಕಿ.ಮಿ ದೂರದಲ್ಲಿ ಅಯ್ಯಪ್ಪ ಸ್ವಾಮಿ ದೇಗುಲಬಳಿ ಪತ್ತೆಯಾಗಿದೆ.

ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡ ಪಟ್ಟಣದ ಪೋಲಿಸರು ನದಿಯಿಂದ ಶವವನ್ನು ತೆಗೆದು ಮರಣೋತ್ತರ ಪರಿಕ್ಷೆಗೆ ಕಳುಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ‌

ಜಿ.ಪಂ ಉದ್ಯೋಗಿ ಪತ್ನಿ ಭಾಗ್ಯ ಹಾಗೂ ಮಕ್ಕಳಾದ ಮನೋಜ ಪಾಟೀಲ್ ಹಾಗೂ ಭಾನುಪ್ರಕಾಶರನ್ನು ಮಂಜು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ನದಿಗೆ ಹಾರಿ ಶಿಕ್ಷಕ ಆತ್ಮಹತ್ಯೆ Read More

27 ವರ್ಷ ಸೇವೆ ಸಲ್ಲಿಸಿ ಅದೇ ಶಾಲೆಯಲ್ಲಿ ನಿವೃತ್ತಿ ಪಡೆದ ಶಿಕ್ಷಕರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಚಾಮರಾಜನಗರ: ತಾವು ವೃತ್ತಿ ಆರಂಭಿಸಿದ ಶಾಲೆಯಲ್ಲಿ 27 ವರ್ಷ ಸೇವೆ ಸಲ್ಲಿಸಿ ಅದೇ ಶಾಲೆಯಲ್ಲಿ ನಿವೃತ್ತಿ ಪಡೆದ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಳೇ ವಿದ್ಯಾರ್ಥಿಗಳು ಸೇರಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿ ಇತರರಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಚಾಮರಾಜನಗರ ತಾಲೂಕಿನ ಹಿರೇಬೇಗೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಬಿ. ಕಾಶಿ ಆರಾಧ್ಯ ಅವರು ಸೇವೆಯಿಂದ ನಿವೃತ್ತಿ ಹೊಂದಿದರು.

ಈ ವೇಳೆ ತಮ್ಮ ಪ್ರೀತಿಯ ಗುರುವಿಗೆ ಹಳೇ ವಿದ್ಯಾರ್ಥಿಗಳು ಚಿನ್ನದುಂಗುರ ತೊಡಿಸಿ ಅಭಿಮಾನ ಮೆರೆದರು.

ಕಾಶಿ ಆರಾಧ್ಯ ಅವರು ತಮ್ಮ ಶಾಲೆಯ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ವಂತ ಹಣದಿಂದ ಸಮವಸ್ತ್ರ ವಿತರಿಸಿದ್ದು ವಿಶೇಷವಾಗಿತ್ತು.

ಜೊತೆಗೆ, ಬಿಸಿಯೂಟ ತಯಾರಿಸುವ 8 ಮಹಿಳಾ ಸಿಬ್ಬಂದಿಗೆ ಸೀರೆ ವಿತರಿಸಿ ಶಾಲೆ ಮತ್ತು ಅಲ್ಲಿನ ಸಿಬ್ಬಂದಿ ಸೇರಿದಂತೆ ಎಲ್ಲರ ಪ್ರೀತಿ, ಗೌರವವನ್ನು ಸ್ಮರಿಸಿದರು.

ಕಾಶಿ ಆರಾಧ್ಯ ಅವರು ಮೂಲತಃ ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದವರಾಗಿದ್ದು,ಅಲ್ಲಿಂದ ಹಿರೇಬೇಗೂರಿಗೆ 27 ವರ್ಷ ನಿತ್ಯ 8 ಕಿ.ಮೀ ಕಾಲ್ನಡಿಗೆಯಲ್ಲೇ ಬರುತ್ತಿದ್ದುದು ವಿಶೇಷ.

ಅವರ ಬಳಿ ಸೈಕಲ್, ಸ್ಕೂಟರ್ ಯಾವುದೂ ಇಲ್ಲ. ಬಸ್ ಮತ್ತು ಇತರೆ ವಾಹನಕ್ಕಾಗಿ ಕಾಯದೇ ಸಮಯಕ್ಕೆ ಸರಿಯಾಗಿ ಶಾಲೆಗೆ ಆಗಮಿಸಿ ಮಕ್ಕಳಲ್ಲೂ ಶಿಸ್ತು ಮೂಡಿಸಿದ್ದರು.

ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರ ಮನ ಗೆದ್ದಿದ್ದ ಕಾಶಿ ಆರಾಧ್ಯರಿಗೆ ಜನರು ತುಂಬು ಪ್ರೀತಿ, ಭಾರದ ಮನಸ್ಸಿನಿಂದ ಬೀಳ್ಕೊಟ್ಟರು.

ನೆಚ್ಚಿನ ಶಿಕ್ಷಕರ ಕುರಿತು ಶಾಲೆಯ ವಿದ್ಯಾರ್ಥಿ ಮಧು ಮಾತನಾಡಿ, ಕಾಶಿ ಗುರುಗಳು ಸಮಯ ಪಾಲನೆಗೆ ಹೆಚ್ಚಿನ ಒತ್ತು ನೀಡುತ್ತಿದ್ದರು, ಅವರು ಕೇವಲ ಪಾಠ ಮಾತ್ರ ಮಾಡುತ್ತಿರಲಿಲ್ಲ, ವಿದ್ಯಾರ್ಥಿಗಳ ಕಷ್ಟಕ್ಕೂ ಸ್ಪಂದಿಸುತ್ತಿದ್ದರು,ಶಾಲೆಯ ಮೇಲೆ ಅವರ ಅಭಿಮಾನ ಹೇಳತೀರದು, ಅವರ ನಿವೃತ್ತಿ ಜೀವನ ಸುಖವಾಗಿರಲಿ ಎಂದು ಪ್ರಾರ್ಥಿಸಿದರು.

27 ವರ್ಷ ಸೇವೆ ಸಲ್ಲಿಸಿ ಅದೇ ಶಾಲೆಯಲ್ಲಿ ನಿವೃತ್ತಿ ಪಡೆದ ಶಿಕ್ಷಕರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ Read More