ಲಷ್ಕರ್‌ ಪ್ರಮುಖ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ ಹ*ತ್ಯೆ

ಪಾಕಿಸ್ತಾನ: ನಮ್ಮ ದೇಶದ ಮೂರು ಪ್ರಮುಖ ದಾಳಿಗಳ ಹಿಂದಿನ ಲಷ್ಕರ್‌ನ ಪ್ರಮುಖ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತರು ಹತ್ಯೆ ಮಾಡಿದ್ದಾರೆ.

ಕೆಲವು ಅಪರಿಚಿತ ಬಂಧೂಕುದಾರಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

2001ರಲ್ಲಿ ರಾಂಪುರದಲ್ಲಿ ಸಿಆರ್‌ಪಿಎಫ್ ಶಿಬಿರದ ಮೇಲಿನ ದಾಳಿ, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಕಾಂಗ್ರೆಸ್ ಮೇಲಿನ ದಾಳಿ ಮತ್ತು 2006ರಲ್ಲಿ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿ ಮೇಲಿನ ಈ ಪ್ರಮುಖ ದಾಳಿಗಳಲ್ಲಿ ಖಾಲಿದ್ ಪ್ರಮುಖ ಸಂಚುಕೋರನಾಗಿದ್ದ.

ಐದು ವರ್ಷಗಳ ಅವಧಿಯಲ್ಲಿ ನಡೆಸಲಾದ ಈ ದಾಳಿಗಳು ಅನೇಕ ಜೀವಗಳನ್ನು ಬಲಿ ಪಡೆದಿತ್ತು.

ಖಾಲಿದ್ ಹಲವಾರು ವರ್ಷಗಳ ಕಾಲ ನೇಪಾಳದಲ್ಲಿ ನೆಲೆಸಿದ್ದ.ಅಲ್ಲದೆ ಸ್ಥಳೀಯ ಮಹಿಳೆಯನ್ನು ವಿವಾಹವಾಗಿದ್ದ. ನೇಪಾಳದವನಾದ ಈತ ಲಷ್ಕರ್-ಎ-ತೊಯ್ಬಾದ ಚಟುವಟಿಕೆಗಳನ್ನು ಸಂಘಟಿಸುತ್ತಿದ್ದನೆಂದು ಹೇಳಲಾಗಿದೆ.

ಇತ್ತೀಚೆಗೆ, ಖಾಲಿದ್ ತನ್ನ ಅಡಗುತಾಣವನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಬದಿನ್ ಜಿಲ್ಲೆಯ ಮಟ್ಲಿಗೆ ಸ್ಥಳಾಂತರಿಸಿದ್ದನು. ಆತನ ಮುಖ್ಯ ಗಮನವು ಭಯೋತ್ಪಾದಕ ಕಾರ್ಯಾಚರಣೆಗಳಿಗೆ ನೇಮಕಾತಿ ಮತ್ತು ನಿಧಿಸಂಗ್ರಹಣೆಯಾಗಿತ್ತು ಎಂದು ಮೂಲಗಳು ತಿಳಿಸಿವೆ.

ಲಷ್ಕರ್‌ ಪ್ರಮುಖ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ ಹ*ತ್ಯೆ Read More

2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾ ನಾಳೆ ಭಾರತಕ್ಕೆ

ಮುಂಬೈ: 2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು ಗುರುವಾರ ಬೆಳಗ್ಗೆ ಭಾರತಕ್ಕೆ ಕರೆತರಲಾಗುತ್ತಿದೆ.

ಗುಪ್ತಚರ ಮತ್ತು ತನಿಖಾ ಅಧಿಕಾರಿಗಳ ವಿಶೇಷ ತಂಡ ಈಗಾಗಲೇ ಅಮೆರಿಕದಿಂದ ವಿಮಾನದಲ್ಲಿ ಕರೆದುಕೊಂಡು ಬರುತ್ತಿದ್ದು ನಾಳೆ ಬೆಳಗ್ಗೆ ಭಾರತಕ್ಕೆ ಬರಲಿದ್ದಾರೆ.

ಅಮೆರಿಕದ ನ್ಯಾಯಾಲಯದ ಶಿಫಾರಸುಗಳಿಗೆ ಅನುಗುಣವಾಗಿ, ದೆಹಲಿ ಮತ್ತು ಮುಂಬೈನ ಎರಡು ಜೈಲುಗಳಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಗಳನ್ನು ಜಾರಿ ಮಾಡಲಾಗಿದೆ. ಭಾರತಕ್ಕೆ ಬಂದ ನಂತರ ರಾಣಾನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಎನ್‌ಐಎ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಹಸ್ತಾಂತರ ಕಾರ್ಯಾಚರಣೆಯ ಮೇಲ್ವಿಚಾರಣೆ ನೋಡಿಕೊಂಡಿದ್ದಾರೆ.

ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೆರಿಕ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿತ್ತು.

ಮುಂಬೈ ದಾಳಿ ಪ್ರಕರಣದಲ್ಲಿ ಬೇಕಾಗಿದ್ದ ಪಾಕಿಸ್ತಾನಿ ಮೂಲದ ಕೆನಡಾ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಭಾರತ ಮನವಿ ಮಾಡಿತ್ತು.

ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು.

ಇದಕ್ಕೂ ಮೊದಲು, ಸ್ಯಾನ್ ಫ್ರಾನ್ಸಿಸ್ಕೋದ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಫಾರ್ ದಿ ನಾರ್ತ್ ಸರ್ಕ್ಯೂಟ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದಲ್ಲಿ ತಹಾವೂರ್ ರಾಣಾಗೆ ಸೋಲು ಉಂಟಾಗಿತ್ತು. ಕಳೆದ ವರ್ಷ ನವೆಂಬರ್ 13 ರಂದು ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದ

2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾ ನಾಳೆ ಭಾರತಕ್ಕೆ Read More

ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿ- ಐವರು ಉಗ್ರರು ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ‌ ಚಕಮಕಿಯಲ್ಲಿ ಐವರು ಉಗ್ರರು ಬಲಿಯಾಗಿದ್ದಾರೆ.

ಇದೇ‌ ವೇಳೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರು ತಂಗಿರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭದ್ರತಾ ಪಡೆ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕಾರ್ಡನ್ ಮತ್ತು ಶೋಧ ಕಾರ್ಯ ಪ್ರಾರಂಭಿಸಿದ್ದರು.

ಗುರುವಾರ ಭಯೋತ್ಪಾದಕರು ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಚಿನಾರ್ ಕಾರ್ಪ್ಸ್ ತಿಳಿಸಿದೆ.

ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿ- ಐವರು ಉಗ್ರರು ಬಲಿ Read More

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಜ್ಯ ರಾಜ್ದಾನು ಟೆರರಿಸ್ಟ್ ಗಳಿಗೆ ಫೇವರಿಟ್ ಆಗಿದೆಯೆ ಎಂಬ ಅನುಮಾನ ಕಾಡುತ್ತಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಇಂದು ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನವಾಗಿರುವುದು.

ಬೆಂಗಳೂರಿನ ಜಿಗಣಿಯಲ್ಲಿ ಶಂಕಿತ ಉಗ್ರನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದು,ಸುದ್ದಿ‌ತಿಳಿದು ಬೆಂಗಳೂರಿಗರು ಬೆಚ್ಚಿ ಬಿದ್ದಿದ್ದಾರೆ.

ಗಿರಿಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಶಂಕಿತ ಉಗ್ರ.

ಉಗ್ರ ಗೌತಮ್ ಉಲ್ಫಾ ಸಂಘಟನೆಗೆ ಸೇರಿದವನು ಎಂಬುದು ಆರಂಭಿಕ ಮಾಹಿತಿಯಲ್ಲಿ ತಿಳಿದು ಗೊತ್ತಾಗಿದೆ.

ಗುವಾಹತಿಯಲ್ಲಿ ಐಇಡಿ ಬಾಂಬ್ ಇಟ್ಟು ಬೆಂಗಳೂರಿಗೆ ಫ್ಯಾಮಿಲಿ ಸಮೇತ ಬಂದಿದ್ದ ಈತ ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಗೌತಮ್ ಎನ್ನುವ ಹೆಸರಿನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಎನ್​ಐಎ ತಂಡ ಈತನನ್ನು ಸೆರೆ ಹಿಡಿದಿದೆ.

ಶಂಕಿತ ಉಗ್ರ ಬೆಂಗಳೂರಿನಲ್ಲೂ ಕೂಡ ವಿಧ್ವಂಸಕಾರಿ ಕೃತ್ಯಕ್ಕೆ ಯೋಜನೆ ನಡೆಸಿದ್ದ ಎಂಬ ತಿಳಿದು ಬಂದಿವೆ. ಬಂಧಿತನಿಂದ ಮೊಬೈಲ್ ಮತ್ತು ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್ Read More