ಜಮ್ಮು ಕಾಶ್ಮೀರ ಉಗ್ರರ ದಾಳಿ: ಕಪ್ಪು ಪಟ್ಟಿ ಧರಿಸಿ, ಮೇಣದಬತ್ತಿ ಬೆಳಗಿಸಿ ಕೃಷ್ಣರಾಜ ಯುವ ಬಳಗ ಪ್ರತಿಭಟನೆ

ಮೈಸೂರು: ಜಮ್ಮು ಕಾಶ್ಮೀರ ಉಗ್ರರ ದಾಳಿ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಮತ್ತು ಮೃತರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಬೆಳಗಿ ಕೃಷ್ಣರಾಜ ಯುವ ಬಳಗದ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಶೋಕಾಚಾರಣೆ ನಡೆಸಲಾಯಿತು.

ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿ ಖಂಡಿಸಿ ಕಪ್ಪುಪಟ್ಟಿ ಧರಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿ ಮೇಣದಬತ್ತಿ ಬೆಳಗಿಸಲಾಯಿತು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅತ್ಯಂತ ಪೈಶಾಚಿಕ ಎನಿಸುವಂಥ ಘಟನೆ ನಡೆದಿದ್ದು, 30 ಮಂದಿ ಪ್ರವಾಸಿಗರು ಮೃತಪಟ್ಟಿದ್ದು ಹಲವರಿಗೆ ಗಾಯಗೊಂಡಿದ್ದಾರೆ. ಕರ್ನಾಟಕದ ಶಿವಮೊಗ್ಗದ ಮಂಜುನಾಥ್‌ ರಾವ್‌,ಹಾವೇರಿಯ ಪ್ರವಾಸಿಯೊಬ್ಬರು ಸಾವನ್ನಪ್ಪಿದ್ದಾರೆ.

ನಗರ ಪಾಲಿಕೆ ಮಾಜಿ ಸದಸ್ಯರಾದ ಮಾ ವಿ ರಾಮ್ ಪ್ರಸಾದ್, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷರಾದ ರಾಕೇಶ್ ಭಟ್, ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಖಜಾಂಜಿ ನಾಗರಾಜ್, ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ
ವಿನಯ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ರಮೇಶ್ ರಾಮಪ್ಪ, ಅಪೂರ್ವ ಸುರೇಶ್,
ಶ್ರೀಕಾಂತ್ ಕಶ್ಯಪ್, ಟಿ. ಎಸ್ ಅರುಣ್, ಶ್ರೀನಿವಾಸ್ ಪ್ರಸಾದ್,ರವಿಶಂಕರ್, ಕಡಕೋಳ ಶಿವು, ಪಾಂಡು, ಮಹಾನ್ ಶ್ರೇಯಸ್, ರಾಘವೇಂದ್ರ,ಮಂಜುನಾಥ್, ರಾಕೇಶ್, ನಾಗೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

ಜಮ್ಮು ಕಾಶ್ಮೀರ ಉಗ್ರರ ದಾಳಿ: ಕಪ್ಪು ಪಟ್ಟಿ ಧರಿಸಿ, ಮೇಣದಬತ್ತಿ ಬೆಳಗಿಸಿ ಕೃಷ್ಣರಾಜ ಯುವ ಬಳಗ ಪ್ರತಿಭಟನೆ Read More

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ:ಅಮಿತ್ ಶಾ ವಿಷಾದ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ದೂರವಾಣಿಯಲ್ಲಿ ಕರೆ ಮಾಡಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಉಗ್ರರ ದಾಳಿಯಲ್ಲಿ ಪ್ರವಾಸಕ್ಕೆ ತೆರಳಿದ್ದ 12 ಜನರಿಗೆ ಗಾಯಗಳಾಗಿದ್ದು,ಒಬ್ಬರು ಮೃತಪಟ್ಟಿದ್ದಾರೆ. ಮೃತರಾದ ವ್ಯಕ್ತಿ ಶಿವಮೊಗ್ಗದವರು ಎಂದು ತಿಳಿದುಬಂದಿದೆ.

ಕಾಶ್ಮೀರದ ಸೌಂದರ್ಯ ಸವಿಯಲು ತೆರಳಿದವರಿಗೆ ಈ ದಿನ ಅವರ ಜೀವನದ ಅತ್ಯಂತ ಕೆಟ್ಟ ದಿನವಾಗಿ ಪರಿವರ್ತನೆಯಾಗಿದೆ.

ಈ ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬದವರೊಂದಿಗೆ ನಾವಿದ್ದೇವೆ ಎಂದು ಹೇಳಿದರು.

ಈ ಹೇಯ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಅವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಇಂದು ಪಹಲ್ಗಾಮ್​ನಲ್ಲಿ ನಡೆದ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಫೋನ್​ನಲ್ಲಿಯೇ ವಿವರಿಸಿದ್ದೇನೆ. ಸಂಬಂಧಿತ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದೇನೆ. ಎಲ್ಲಾ ಸಂಸ್ಥೆಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸಲು ಶೀಘ್ರದಲ್ಲೇ ಶ್ರೀನಗರಕ್ಕೆ ತೆರಳುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿರುವ ಬೈಸರನ್‌ನಲ್ಲಿರುವ ರೆಸಾರ್ಟ್ ಪ್ರದೇಶದಲ್ಲಿ ಭಯೋತ್ಪಾದಕರ ಗುಂಪು ದಾಳಿ ನಡೆಸಿತು. ಬೈಸರನ್ ಹುಲ್ಲುಗಾವಲಿನಲ್ಲಿ ಈ ದಾಳಿ ನಡೆದಿದೆ.

ಇದು ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೇಲೆ ಮಾತ್ರ ತಲುಪಬಹುದಾದ ಒಂದು ಸುಂದರ ಸ್ಥಳವಾಗಿದ್ದು, ಆ ಸಮಯದಲ್ಲಿ ಪ್ರವಾಸಿಗರ ಗುಂಪು ಭೇಟಿ ನೀಡುತ್ತಿತ್ತು. ಕಾಶ್ಮೀರದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯ ಮಧ್ಯೆ ಈ ಘಟನೆ ನಡೆದಿದ್ದು ಆತಂಕ ವ್ಯಕ್ತವಾಗಿದೆ.

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿ ಅವರು ಜಮ್ಮು ವಿಭಾಗದ ಮೇಲೆ ವಿಶೇಷ ಗಮನ ಹರಿಸಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಆದೇಶಗಳನ್ನು ನೀಡಿದ್ದರು.ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ:ಅಮಿತ್ ಶಾ ವಿಷಾದ Read More