ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಫಿನಿಷ್

ಶ್ರೀನಗರ: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ.

ಆಪರೇಷನ್ ಮಹಾದೇವ್ ಅಡಿಯಲ್ಲಿ ಶ್ರೀನಗರದಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿ ಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ.

ದಾಳಿಯ ಮಾಸ್ಟರ್​ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿವೆ.

ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ,ಮೂವರು ಉಗ್ರರನ್ನು ಗುಂಡಿಕ್ಕಿ ಕೊಂದಿವೆ.

ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ.

ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರ ಪ್ರಾಣವನ್ನು ಕಳೆದುಕೊಂಡಿದ್ದರು.

ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಫಿನಿಷ್ Read More

ಸೇನಾಪಡೆ ದಾಳಿಗೆ ಇಬ್ಬರು ಉಗ್ರರು ಕತಂ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಬಲಿ ಪಡೆದಿವೆ.

ಉಗ್ರರು ಸೂಪೋರ್‌ ಪ್ರದೇಶದಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು ಇಬ್ಬರು ಉಗ್ರರು ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.

ಈ ಭಾಗದಲ್ಲಿ ಸೇನೆ ಗುರುವಾರ ರಾತ್ರಿಯಿಂದ ಕಾರ್ಯಾಚರಣೆ ಆರಂಭಿಸಿದ್ದು ಇಂದೂ ಕೂಡಾ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಭದ್ರತಾಪಡೆ ವಶಪಡಿಸಿಕೊಂಡಿದೆ.

ಸೇನಾಪಡೆ ದಾಳಿಗೆ ಇಬ್ಬರು ಉಗ್ರರು ಕತಂ Read More