ಪತಿಯ‌ ಮುಂದೆಯೇ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ

ತಮಿಳುನಾಡು: ಮಹಿಳೆಯ ಮೇಲೆ ಆಕೆಯ ಪತಿಯ ಮುಂದೆಯೇ ಸಾಮೂಹಿಕ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ
ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ
ನಡೆದಿದೆ.

ಶ್ರೀವೈಕುಂಠಂ ಬಳಿ ಅಸ್ಸಾಂ ಮೂಲದ ವಲಸೆ ಕಾರ್ಮಿಕ ಮಹಿಳೆಯ ಮೇಲೆ ಆಕೆಯ ಪತಿಯ ಎದುರೇ ಸಾಮೂಹಿಕ ಅತ್ಯಾಚಾರ ಮಾಡಲಾಗಿದ್ದು,
ಪ್ರಕರಣಕ್ಕೆ ಸಂಬಂಧ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಸಂತ್ರಸ್ತ ದಂಪತಿಗಳು ಎರಡು ವಾರಗಳ ಹಿಂದೆ ಶ್ರೀವೈಕುಂಠಂ ಸಮೀಪದ ಅರಸರ್ಕುಳಂ ಪ್ರದೇಶಕ್ಕೆ ವಲಸೆ ಬಂದಿದ್ದರು.

ಅಲ್ಲಿ ಕಲ್ಲು ಗಣಿಯೊಂದರಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದರು. ಆದರೆ, ಕಡಿಮೆ ವೇತನ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ದಂಪತಿ ಕೆಲಸವನ್ನು ತ್ಯಜಿಸಿ, ಕೇರಳಕ್ಕೆ ಹೋಗಲು ನಿರ್ಧರಿಸಿದರು.

ತಮ್ಮ ಊರಿಗೆ ತೆರಳಲು ರೈಲ್ವೆ ನಿಲ್ದಾಣದ ಕಡೆಗೆ ಆಟೋ ರಿಕ್ಷಾದಲ್ಲಿ ಹೊರಟಿದ್ದರು.
ದಂಪತಿ ಕೆಲಸ ಬಿಟ್ಟು ಹೋಗುತ್ತಿರುವ ವಿಷಯ ಕಲ್ಲು ಗಣಿ ಮಾಲೀಕರಿಂದ ಕಮಿಷನ್ ಆಧಾರದ ಮೇಲೆ ಅವರಿಗೆ ಕೆಲಸ ಕೊಡಿಸಿದ್ದ ಮೊಹಮ್ಮದ್ ಮಹ್ಬೂಲ್ ಹುಸೇನ್ (27) ಎಂಬಾತನಿಗೆ ತಿಳಿಯಿತು.
ಇದರಿಂದ ಕೋಪಗೊಂಡ ಹುಸೇನ್, ತಕ್ಷಣ ಅವರಿಗೆ ಕರೆ ಮಾಡಿ ಕೆಲಸ ಬಿಟ್ಟು ಹೋಗದಂತೆ ಬೆದರಿಕೆ ಹಾಕಿದ್ದಾನೆ.

ಬಳಿಕ, ಆತ ಇಬ್ಬರು ಅಪ್ರಾಪ್ತ ಬಾಲಕರೊಂದಿಗೆ ದ್ವಿಚಕ್ರ ವಾಹನದಲ್ಲಿ ಶಿವಂತಿಪಟ್ಟಿಯ ಬಳಿ ದಂಪತಿಗಾಗಿ ಕಾಯುತ್ತಿದ್ದನು. ಹುಸೇನ್ ಕೂಡ ಅಸ್ಸಾಂ ಮೂಲದವನಾಗಿದ್ದು, ತಿರುನಲ್ವೇಲಿಯಲ್ಲಿ ವಲಸೆ ಕಾರ್ಮಿಕರಿಗೆ ಕೆಲಸ ಕೊಡಿಸುವ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ.
ದಂಪತಿ ಶಿವಂತಿಪಟ್ಟಿಗೆ ತಲುಪುತ್ತಿದ್ದಂತೆ, ಹುಸೇನ್ ಮತ್ತು ಇಬ್ಬರು ಬಾಲಕರು ಅವರನ್ನು ತಡೆದು, ಬಲವಂತವಾಗಿ ಬಳಿಯಿರುವ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ.

ಅಲ್ಲಿ, ಕಲ್ಲು ಗಣಿಯಿಂದ ಹಣ ಕದ್ದಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ದಂಪತಿಗೆ ಹಲ್ಲೆ ನಡೆಸಿದ್ದಾರೆ.

ಬಳಿಕ, ಮೂವರು ಆರೋಪಿಗಳು ಪತಿಯ ಎದುರೇ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಮಾಹಿತಿ ತಿಳಿದ ಪೊಲೀಸರು, ತಕ್ಷಣವೇ ಸ್ಥಳಕ್ಕಾಗಮಿಸಿ ಸಂತ್ರಸ್ತೆಯನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಶ್ರೀವೈಕುಂಠಂ ಎಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

ಮೊಹಮ್ಮದ್ ಮಹ್ಬೂಲ್ ಹುಸೇನ್ ಮತ್ತು ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಪತಿಯ‌ ಮುಂದೆಯೇ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ Read More

ಹಣ್ಣು ಮಾರಾಟಕ್ಕೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ:ಇಬ್ಬರು ಪೊಲೀಸ್ ಅರೆಸ್ಟ್

ತಿರುವಣ್ಣಾಮಲೈ: ಹಣ್ಣು ಮಾರಾಟ ಮಾಡಲು ಬಂದಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ತಮಿಳುನಾಡಿನ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ.

ಆಂಧ್ರಪ್ರದೇಶದ 25 ವರ್ಷದ ಮಹಿಳೆ ಹಣ್ಣುಗಳನ್ನು ಮಾರಾಟ ಮಾಡುವ ಸಲುವಾಗಿ ತಮಿಳುನಾಡಿನ ತಿರುವಣ್ಣಾಮಲೈಗೆ ಬಂದಿದ್ದಳು.

ಸಂತ್ರಸ್ತೆ ಮತ್ತು ಆಕೆಯ ತಾಯಿ ತಿರುವಣ್ಣಾಮಲೈಗೆ ಬಂದಿದ್ದು, ತಡರಾತ್ರಿ ಮನೆಗೆ ಮರಳಲು ಇಬ್ಬರೂ ರಸ್ತೆ ಬದಿ ನಿಂತಿದ್ದಾಗ ಗಸ್ತಿನಲ್ಲಿದ್ದ ಕಾನ್ಸ್ ಟೇಬಲ್ ಗಳಾದ ಡಿ. ಸುರೇಶ್ ರಾಜ್ ಮತ್ತು ಪಿ. ಸುಂದರ್ ತಮ್ಮ ವಾಹನ ನಿಲ್ಲಿಸಿ ಅವರನ್ನು ವಿಚಾರಿಸಿದ್ದಾರೆ.

ಅನಂತರ ಮಹಿಳೆಯರನ್ನು ಬಲವಂತವಾಗಿ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಯುವತಿಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಪೊಲೀಸರನ್ನು ಬಂಧಿಸಿ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಕರಾದ ಪೊಲೀಸರೇ ಈ ಕೃತ್ಯ ಎಸಗಿರುವುದು ನಿಜಕ್ಕೂ ಹೇಯ ಪೊಲೀಸ್ ಇಲಾಖೆಗೇ ಕಪ್ಪು ಮಸಿ‌ ಬಳಿದಂತಾಗಿದೆ.

ಹಣ್ಣು ಮಾರಾಟಕ್ಕೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ:ಇಬ್ಬರು ಪೊಲೀಸ್ ಅರೆಸ್ಟ್ Read More

ಚೆನ್ನೈನ ವಿದ್ಯುತ್ ಸ್ಥಾವರ ಬಳಿ ನಿರ್ಮಾಣಹಂತದ ಕಟ್ಟಡ ಕುಸಿತ:9 ಮಂದಿ ಸಾ*ವು

ಚೆನ್ನೈ: ಚೆನ್ನೈ ಸಮೀಪದ ಎಣ್ಣೋರ್ ಉಷ್ಣ ವಿದ್ಯುತ್ ಸ್ಥಾವರ ಘಟಕದೊಳಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಹತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತ ಒಂಬತ್ತು ಮಂದಿ ಕಾರ್ಮಿಕರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಐವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹಲವು ಕಾರ್ಮಿಕರು ಗಾಯಗೊಂಡಿದ್ದು ಸ್ಟಾನ್ಲೀ ಆಸ್ಪತ್ರೆಗೆ ಸಾಗಿಸಲಾಗಿದೆ.

ಎಣ್ಣಾರ್ ಥರ್ಮಲ್ ಪವರ್ ಸ್ಟೇಷನ್ ಚೆನ್ನೈ ಸಮೀಪದ ತಿರುವಳ್ಳೂರು ಜಿಲ್ಲೆಯ ಮೀಂಜೂರು ಬಳಿಯ ಊರನಂಪೆಡು ಗ್ರಾಮದಲ್ಲಿದೆ. ಈ ವಿದ್ಯುತ್ ಸ್ಥಾವರದ ನಾಲ್ಕನೇ ಹಂತದ ವಿಸ್ತರಣಾ ಕಾಮಗಾರಿ ಕೆಲವು ವರ್ಷಗಳಿಂದಲೂ ನಡೆಯುತ್ತಿದೆ. ಉತ್ತರ ಭಾರತ ಮೂಲದ ಬಹಳಷ್ಟು ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಇಂದು ಮಂಗಳವಾರ ಬಾಯ್ಲರ್ ವಿಭಾಗದಲ್ಲಿ ಬೃಹತ್ ಕಮಾನು ನಿರ್ಮಾಣ ಕಾರ್ಯದಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ನಿರತರಾಗಿದ್ದರು. ಮುಂಗಾಗದಲ್ಲಿ ನಿರ್ಮಿಸಲಾಗಿದ್ದ ಸ್ಕಫೋಲ್ಡ್ ಕಳಚಿ ಬಿದ್ದು ಈ ಅವಘಡ ಸಂಭವಿಸಿದೆ.

ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ‌ ವ್ಯಕ್ತಪಡಿಸಿದ್ದಾರೆ.ಮೃತರ ಕುಟುಂಬಗಳಿಗೆ ತಲಾ‌ 2‌ ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.ಗಾಯಾಳುಗಳ ಚಿಕಿತ್ಸೆಗೆ 50 ಸಾವಿರ ಘೋಷಿಸಿದ್ದಾರೆ.

ನಿನ್ನೆಯಷ್ಟೇ ತಮಿಳುನಾಡಿನಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು ಇಂದು ಕಟ್ಟಡ‌ ಕುಸಿತವಾಗಿದೆ

ಚೆನ್ನೈನ ವಿದ್ಯುತ್ ಸ್ಥಾವರ ಬಳಿ ನಿರ್ಮಾಣಹಂತದ ಕಟ್ಟಡ ಕುಸಿತ:9 ಮಂದಿ ಸಾ*ವು Read More

ಸಿಎಂ ಭೇಟಿ ಮಾಡಿದ ತಮಿಳುನಾಡು ಸಚಿವ ಡಾ.ಕೆ.ಪೊನ್ನುಮುಡಿ

ಬೆಂಗಳೂರು, ಮಾ.12: ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಡಾ.ಕೆ.ಪೊನ್ನುಮುಡಿ ಮತ್ತು ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಚರ್ಚಿಸಿದರು.

ಡಿ ಲಿಮಿಟೇಷನ್ ಮತ್ತಿತರ ಸಂಗತಿಗಳ ವಿಚಾರದಲ್ಲಿ ಧ್ವನಿ ಎತ್ತುವಂತೆ, ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಇಬ್ಬರೂ ಸಿದ್ದು ಬಳಿ ಮನವಿ ಮಾಡಿದರು.

ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದರು.

ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಚರ್ಚಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮದೂ ಬೆಂಬಲ ಸೂಚಿಸಿದ್ದಾರೆ.

ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಸಿಎಂ ಭೇಟಿ ಮಾಡಿದ ತಮಿಳುನಾಡು ಸಚಿವ ಡಾ.ಕೆ.ಪೊನ್ನುಮುಡಿ Read More

ಫೆಂಗಲ್ ಚಂಡಮಾರುತದ ಅಬ್ಬರ:10 ಮಂದಿ ಸಾವು

ಚೆನ್ನೈ: ಫೆಂಗಲ್ ಚಂಡಮಾರುತದ ಅಬ್ಬರದಿಂದ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆ ಆಗುತ್ತಿದ್ದು ಹತ್ತು ಮಂದಿ ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿಯಿಂದ ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲೆಯ 49 ಸೆಂ.ಮೀ ಮಳೆಯಾದಂತಾಗಿದೆ

ಇದು ಪುದುಚೇರಿ ಇತಿಹಾಸದಲ್ಲಿಯೇ ಅತ್ಯಧಿಕ ಮಳೆ ಮತ್ತು ವಿಲ್ಲುಪುರಂನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು,
ಮೈಲಂನಲ್ಲಿನ ಸ್ವಯಂಚಾಲಿತ ಹವಾಮಾನ ಕೇಂದ್ರದಲ್ಲಿ 51 ಸೆಂ.ಮೀ.ನಷ್ಟು ಮಳೆ ಆಗಿದೆ.

ಪುದುಚೇರಿಯಲ್ಲಿ ಮಳೆಯಿಂದಾಗಿ ನಾಲ್ವರು, ತಿರುವಣ್ಣಾಮಲೈನಲ್ಲಿ ಮೂವರು ಮತ್ತು ವೆಲ್ಲೂರು ಮತ್ತು ಚೆನ್ನೈ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಮಳೆಯಿಂದಾಗಿ ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಧರ್ಮಪುರಿ ಮತ್ತು ಸೇಲಂನಲ್ಲಿ ಶಾಲೆಗಳು ಮತ್ತು ತಿರುವಣ್ಣಾಮಲೈ, ಕಡಲೂರು, ವಿಲ್ಲುಪುರಂ, ಪುದುಚೇರಿ ಮತ್ತು ಕೃಷ್ಣಗಿರಿಯಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.ರೈಲು ಸಂಚಾರ ಬಂದ್ ಮಾಡಲಾಗಿದೆ.

ದಾಖಲೆ ಮಳೆಯಿಂದಾಗಿ ಪುದುಚೇರಿಯಲ್ಲಿನ ಜನವಸತಿ ಪ್ರದೇಶಗಳು ಮತ್ತು ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಉಪ್ಪನಾರ್ ಕಾಲುವೆ ತುಂಬಿ ಹರಿಯುತ್ತಿದೆ. ವಿಲ್ಲುಪುರಂ ಜಿಲ್ಲೆಯ ಕೆಲವು ಭಾಗಗಳು ಜಲಾವೃತಗೊಂಡು ಜನ ಹೈರಾಣಾಗಿದ್ದಾರೆ.

ಮಂಗಳವಾರ ಕೂಡಾ ತಿರುಪತ್ತೂರ್, ಕೃಷ್ಣಗಿರಿ, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರ್, ಈರೋಡ್, ನೀಲಗಿರಿ, ಕೊಯಮತ್ತೂರು, ತಿರುಪ್ಪೂರ್, ದಿಂಡಿಗಲ್ ಮತ್ತು ಥೇಣಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಫೆಂಗಲ್ ಚಂಡಮಾರುತದ ಅಬ್ಬರ:10 ಮಂದಿ ಸಾವು Read More