ಅತ್ತೆಯನ್ನೇ ಕೊಂದು ತುಂಡು ಮಾಡಿ‌ ಎಸೆದ ಅಳಿಯ:ಡಾಕ್ಟರ್ ಸೇರಿ ನಾಲ್ವರು ಅಂದರ್

ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ಅಳಿಯ ದಂತ ವೈದ್ಯ ಅತ್ತೆಯನ್ನೇ ಭೀಕರವಾಗಿ ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದು ಇಡೀ ಪಟ್ಟಣ ಬೆಚ್ಚಿಬಿದ್ದತ್ತು.

ಲಕ್ಷ್ಮೀದೇವಮ್ಮ ಕೊಲೆಯಾದ ಅತ್ತೆ‌.ಆಕೆಯ
ಅಳಿಯನೇ ಈ ಕೃತ್ಯ ನಡೆಸಿದ್ದೆಂದು ಗೊತ್ತಾಗಿದ್ದು ಈಗ ಕಂಬಿ ಎಣಿಸುತ್ತುದ್ದಾನೆ.

ವೃತ್ತಿಯಲ್ಲಿ ದಂತ ವೈದ್ಯನಾದ ಡಾ. ರಾಮಚಂದ್ರ ತನ್ನ ಸ್ನೇಹಿತ ಸತೀಶ್ ಹಾಗೂ ಕಿರಣ ಎಂಬುವರ ಜೊತೆ ಸೇರಿ ಅತ್ತೆಯನ್ನು ಹತ್ಯೆ ಮಾಡಿದ್ದಾನೆ.

ಮೃತ ಲಕ್ಷ್ಮೀದೇವಮ್ಮ ತನ್ನ ಮಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರಚೋದಿಸುತಿದ್ದಳು ಎಂಬ ಆರೋಪ ಕೇಳಿಬಂದಿದ್ದು ಈ ವಿಷಯ ಗೊತ್ತಾಗಿಯೇ ಅಳಿಯ ಡಾ.ರಾಮಚಂದ್ರ ಅತ್ತೆಯನ್ನ ಕೊಂದು ತುಂಡು,ತುಂಡು ಮಾಡಿ ಬಿಸಾಡಿ ಆಕ್ರೋಶ ಶಮನ ಮಾಡಿಕೊಂಡಿದ್ದ.

ಕೋಳಾಲದಲ್ಲಿ ಇರುವ ಸ್ನೇಹಿತ ಸತೀಶ್ ಎಂಬಾತನ ಫಾರ್ಮ್ ಹೌಸ್‌ನಲ್ಲಿ ಕೊಲೆ ಮಾಡಿ ದೇಹದ ಭಾಗಗಳನ್ನು ಪೀಸ್ ಪೀಸ್ ಮಾಡಿ ಎಸೆದಿದ್ದರು.

ಕೊಲೆ ಮಾಡಿ ಪಾಪ ತೊಳೆದುಕೊಳ್ಳಲು ಆರೋಪಿಗಳು ಧರ್ಮಸ್ಥಳ ಯಾತ್ರೆಗೆ ಹೋಗಿದ್ದರು.

ಲಕ್ಷ್ಮೀದೇವಮ್ಮನ ಕೊಲೆ ಆದರೂ ಅಳಿಯ ಊರಲ್ಲಿ ಇಲ್ಲದಿರುವುದು ಅನುಮಾನಕ್ಕೆಡೆ ಮಾಡಿತ್ತು.

ಇದೇ ಅನುಮಾನದಲ್ಲೇ ಅಳಿಯ ಡಾ.ರಸಮಚಂದ್ರನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮಾಡಿದಾಗ ವಿಷಯ ಗೊತ್ತಾಗಿದೆ.

ಈ ಕೊಲೆ ಸಂಬಂಧ ಕೊರಟಗೆರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಅತ್ತೆಯನ್ನೇ ಕೊಂದು ತುಂಡು ಮಾಡಿ‌ ಎಸೆದ ಅಳಿಯ:ಡಾಕ್ಟರ್ ಸೇರಿ ನಾಲ್ವರು ಅಂದರ್ Read More

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ರೈಡ್ ಮಾಡುವ ಮೂಲಕ ಶಾಕ್‌ ನೀಡಿದೆ.

ಬೀದರ್‌, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರಿಗೆ ಚಳಿ ಬಿಡಿಸಿದ್ದಾರೆ.

ಬೀದರ್‌ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಸುನಿಲ್ ಕುಮಾರ್ ಚಂದ್ರಪ್ರಭಾ ನಿವಾಸದ ಮೇಲೆ ದಾಳಿ ಮಾಡಿದ ಅಧಿಕಾರಿಗಳು,ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೀದರ್ ನಗರದ ಜೈಲ್ ಕಾಲೋನಿಯ ಎಸ್‌ಬಿಪಿ ನಗರದ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ದಾಖಲೆಗಳ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ.

ಅವರು ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ ಬಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಕಲಬುರ್ಗಿಯಲ್ಲಿ ಕರ್ತವ್ಯ ಮಾಡುತ್ತಿದ್ದಾರೆ. ಹೀಗಾಗಿ, ಕಲಬುರ್ಗಿಯ ಆರೋಗ್ಯ ಇಲಾಖೆಯ ಕಚೇರಿ ಹಾಗೂ ನಿವಾಸದ ಮೇಲೂ ದಾಳಿ ಮಾಡಲಾಗಿದೆ.

ತುಮಕೂರಿನಲ್ಲಿ ಕೆಐಎಡಿಬಿ ಕಚೇರಿ ಮೇಲೆ ದಾಳಿ ಮಾಡಲಾಗಿದ್ದು,ಎಇಇ ರಾಜೇಶ್ ಅವರ ಕಚೇರಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ತಿಂಗಳ ಹಿಂದಷ್ಟೇ ತುಮಕೂರಿನ ಕೆಐಎಡಿಬಿ ಕಚೇರಿಗೆ ರಾಜೇಶ್‌ ಬಂದಿದ್ದರು.

ಕೊಪ್ಪಳದಲ್ಲಿ ಎರಡು ಕಡೆ ದಾಳಿ ಲೋಕಾ ಅಧಿಕಾರಿಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಶೇಕು ಚೌಹಾಣ್‌ಗೆ ಸೇರಿದ ಎರಡು ಮನೆ, ಅಭಿಷೇಕ್ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಮನೆಗಳ ಮೇಲೂ ದಾಳಿ ಮಾಡಲಾಗಿದೆ.

ಬಳ್ಳಾರಿಯ ಸ್ವಗ್ರಾಮ ಕಲ್ಲುಕಂಬದ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರು ಟೌನ್ ಆ್ಯಂಡ್ ರೂರಲ್ ಪ್ಲಾಬಿಂಗ್ ಆಫೀಸರ್ ಆಗಿರುವ ಮಾರುತಿ ಬಗಲಿ ಮೂಲತಃ ಬಳ್ಳಾರಿಯ ಕಲ್ಲುಕಂಬ ನಿವಾಸಿ. ಬಳ್ಳಾರಿ ಮಾತ್ರವಲ್ಲದೇ ರಾಜ್ಯದ ವಿವಿಧ ಕಡೆ ಮಾರುತಿ ಬಗಲಿ ಅಕ್ರಮ ಆಸ್ತಿ ಮಾಡಿದ್ದಾರೆಂಬ ಆರೋಪವಿದೆ.

ಕೊಪ್ಪಳದ ಡಿಸ್ಟ್ರಿಕ್ಟ್‌ ಇಂಡಸ್ಟ್ರಿಯಲ್‌ ಆ್ಯಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಶೆಕು ಚೌಹಾಣ್ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ‌

ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್, ಕೌಶಲ್ಯಾಭಿವೃದ್ದಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಅವರುಗಳ ನಿವಾಸದಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ Read More

ಶ್ರೀಸಿದ್ದಲಿಂಗೇಶ್ವರ ಅನಾಥಾಲಯಕ್ಕೆ ಸೇರಲು ಅರ್ಜಿ ಆಹ್ವಾನ

ತುಮಕೂರು: ಶ್ರೀಸಿದ್ದಲಿಂಗೇಶ್ವರ ಅನಾಥಾಲಯ, ಶ್ರೀ ಸಿದ್ದಗಂಗಾಮಠ, ತುಮಕೂರು ಜಿಲ್ಲೆ ಇದರ 2025-26ನೇ ಸಾಲಿಗೆ ಅರ್ಜಿಗಳನ್ನು ಮೇ 5 ರಿಂದ ಮೇ10- ರವರೆಗೆ ಕೊಡಲಾಗುವುದು.

ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯಕ್ಕೆ ಹೊಸದಾಗಿ 3ನೇ ತರಗತಿಯಿಂದ 8ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಬಯಸುವ ಗ್ರಾಮೀಣ ಮತ್ತು ನಗರ ಪ್ರದೇಶದ ಬಡ ಕುಟುಂಬದ ವಿದ್ಯಾರ್ಥಿಗಳು ಖುದ್ದಾಗಿ ಬಂದು ಶ್ರೀ ಮಠದ ಲೆಕ್ಕಪತ್ರ ವಿಭಾಗದಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ.

ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ಕೊಡಲಾಗುವುದು.

ಸರಿಯಾಗಿ ಭರ್ತಿ ಮಾಡಿದ ಪ್ರವೇಶದ ಅರ್ಜಿಯ ಜೊತೆಗೆ ಆಯಾ ತಾಲ್ಲೂಕಿನ ತಹಶೀಲ್ದಾರರಿಂದ ನಿಗದಿತ ನಮೂನೆಯಲ್ಲಿ ಧೃಡೀಕರಿಸಲ್ಪಟ್ಟ ವಾರ್ಷಿಕ ವರಮಾನದ ಆದಾಯ ಪ್ರಮಾಣ ಪತ್ರ ಸೇರಿದಂತೆ ಸಂಪೂರ್ಣ ಮಾಹಿತಿಗಳನ್ನು ನೀಡಬೇಕಿದೆ.

ಪ್ರವೇಶವನ್ನು ಅಪೇಕ್ಷಿಸುವ ವಿದ್ಯಾರ್ಥಿಗಳು 29.5.2025 ರಿಂದ ಪ್ರಾರಂಭವಾಗುವ ಸಂದರ್ಶನದ ವೇಳೆ ಖುದ್ದಾಗಿ ಬಂದು ಅಧ್ಯಕ್ಷರ ಸಂದರ್ಶನವನ್ನು ಪಡೆಯಬೇಕು. ಇದಕ್ಕೆ ಪ್ರತ್ಯೇಕವಾದ ಸಂದರ್ಶನದ ಪತ್ರಗಳನ್ನು ಕಳುಹಿಸಿಕೊಡಲಾಗುವುದಿಲ್ಲ. ಪ್ರವೇಶದ ಅರ್ಜಿಗಳನ್ನು ಅನ್ಲೈನ್ (Online) ನಲ್ಲಿ ಪಡೆಯಲು ಅವಕಾಶ ಇರುವುದಿಲ್ಲ ಎಂದು ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯದ ಪ್ರಕಟಣೆ ತಿಳಿಸಿದೆ.

ಶ್ರೀಸಿದ್ದಲಿಂಗೇಶ್ವರ ಅನಾಥಾಲಯಕ್ಕೆ ಸೇರಲು ಅರ್ಜಿ ಆಹ್ವಾನ Read More

ರಾಸಾಯನಿಕ ಹೊಂದಿರುವ ಗೊಬ್ಬರ ಹೆಚ್ಚು ಬಳಕೆಯಿಂದ ಮಣ್ಣಿನ ಫಲವತ್ತತೆ ನಾಶ:ಅಶೋಕ್

ತುಮಕೂರು: ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಹಾಳಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಬೇಸರ ವ್ಯಕ್ತಪಡಿಸಿದರು.

ಶಿರಾದ ಸ್ಪಟಿಕಪುರಿ ಮಹಾಸಂಸ್ಥಾನದ ಸಹಯೋಗದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಉದ್ಘಾಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು ಸತ್ತುಹೋಗಿವೆ,ಮಣ್ಣಿನ ಫಲವತ್ತತೆ ನಾಶವಾಗಿದೆ,ಇದು ನೈಸರ್ಗಿಕ ಕೃಷಿಯ ಮೇಲೆ ಕೆಟ್ಟ ಪರಿಣಾಮ ಬೀರಿದೆ ಎಂದು ವಿಷಾದಿಸಿದರು.

ಚೀನಾದಲ್ಲಿ ಮಣ್ಣಿನ ಫಲವತ್ತತೆಗಾಗಿ ಈಗ ಏಡಿಗಳನ್ನು ಬಳಸಲಾಗುತ್ತಿದೆ. ಮೊದಲಿಗೆ ರಾಸಾಯನಿಕ ಗೊಬ್ಬರವನ್ನು ಚೆನ್ನಾಗಿ ಬಳಸಿ, ಈಗ ರಾಸಾಯನಿಕ ಗೊಬ್ಬರ ಬಳಸುವುದು ಬೇಡ ಎಂದು ಜಾಗೃತಿ ತರಲಾಗುತ್ತಿದೆ.ಈಗ ಎಲ್ಲರೂ ಮತ್ತೆ ಹಿಂದಕ್ಕೆ ಹೋಗುತ್ತಿದ್ದೇವೆ ಎಂದು ಅಶೋಕ್ ಬೇಸರ ಪಟ್ಟರು.

ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ನೀರಿನ ಕೊರತೆಯೂ ಕಂಡುಬರುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ನೀರಿನ ಕೊರತೆ ಇದೆ. ಆದರೆ ಇಲ್ಲೂ ಮಂಡ್ಯ ಜಿಲ್ಲೆಯಲ್ಲಿ ಮಾಡುವಂತೆ ಕಬ್ಬು ಬೆಳೆಯಲಾಗುತ್ತಿದೆ. ಆದ್ದರಿಂದ ಕೃಷಿ ತಜ್ಞರು, ವಿಜ್ಞಾನಿಗಳು ಹಾಗೂ ಸರ್ಕಾರ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಹಿಂದೆ ಯಾವುದೇ ನೀರು ಕುಡಿದರೂ ಆರೋಗ್ಯ ಕೆಡುತ್ತಿರಲಿಲ್ಲ. ಈಗ ನೀರಿನಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಅನಾರೋಗ್ಯ ಉಂಟಾಗುತ್ತದೆ. ಮಾಲಿನ್ಯದಿಂದಾಗಿ ನೀರು ಹೆಚ್ಚು ಕಲುಷಿತವಾಗಿದೆ ಎಂದು ಹೇಳಿದರು.

ಕೃಷಿ ಕುರಿತಾದ ಜ್ಞಾನ ರೈತ ಕುಟುಂಬಗಳಲ್ಲಿ ಸಹಜವಾಗಿ ಬೆಳೆದುಬಂದಿದೆ. ಹಿಂದಿನ ಕಾಲದಲ್ಲಿ ಯಾವ ರೈತರೂ ಪುಸ್ತಕ ಓದಿ ಕೃಷಿ ಮಾಡುತ್ತಿರಲಿಲ್ಲ ಎಂದು ತಿಳಿಸಿದರು.

ಸ್ಪಟಿಕಪುರಿ ಮಹಾಸಂಸ್ಥಾನ ಮಠವು ಕೃಷಿ ಅಭಿವೃದ್ಧಿಗೆ ಹಲವಾರು ಕೊಡುಗೆ ನೀಡುತ್ತಿದೆ. ಮಠದ ಪೀಠಾಧ್ಯಕ್ಷರಾಗಿರುವ ಪೂಜ್ಯ ನಂಜಾವಧೂತ ಸ್ವಾಮೀಜಿಯವರು ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡುವ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ ಎಂದು ಆರ್.ಅಶೋಕ್ ಶ್ಲಾಘಿಸಿದರು.

ರಾಸಾಯನಿಕ ಹೊಂದಿರುವ ಗೊಬ್ಬರ ಹೆಚ್ಚು ಬಳಕೆಯಿಂದ ಮಣ್ಣಿನ ಫಲವತ್ತತೆ ನಾಶ:ಅಶೋಕ್ Read More

ಊಹಾ ಪತ್ರಿಕೋದ್ಯಮ ಅಪಾಯಕಾರಿ: ಸಿದ್ದರಾಮಯ್ಯ

ತುಮಕೂರು: ಊಹಾ ಪತ್ರಿಕೋದ್ಯಮ ಅಪಾಯಕಾರಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ,ಆದರೆ ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗಿಬಿಡುತ್ತವೆ,
ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯವಾಗಿದೆ,ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ತಿಳಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಮಾಧ್ಯಮದವರಿಗೆ ಸಲಹೆ ನೀಡಿದರು.

ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದು ಹೇಳಿದರು.

ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳು,ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದು ಸಿಎಂ ಮನವಿ ಮಾಡಿದರು.

ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ ಎಂದು ತಿಳಿಸಿದರು.

ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡುತ್ತಾ ಇರುತ್ತಾರೆ ಎಂಬುದರ ಬಗ್ಗೆ ಸದಾ ಎಚ್ಛರಿಕೆ ಇರಲಿ ಎಂದು ಸಿದ್ದರಾಮಯ್ಯ ತಿಳಿಹೇಳಿದರು.

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನು 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಜಿಲ್ಲೆಯ ಶಾಸಕರುಗಳು ಹಾಗೂ ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮೊದಲು ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಸಿದ್ದರಾಮಯ್ಯ ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿಶೇಷವಾಗಿ ಅಭಿನಂದನೆ ಸಲ್ಲಿಸಲಾಯಿತು.

ಊಹಾ ಪತ್ರಿಕೋದ್ಯಮ ಅಪಾಯಕಾರಿ: ಸಿದ್ದರಾಮಯ್ಯ Read More

ಆರೋಗ್ಯಕ್ಕೆ ಉತ್ತಮ ಸಾಧನ ಧ್ಯಾನ

ಬೆಂಗಳೂರು: ಧ್ಯಾನ ಎಂದರೆ ಶ್ವಾಸದ ಮೇಲೆ ಗಮನ.ಧ್ಯಾನವೆಂದರೆ ಕಣ್ಣುಗಳನ್ನು ಮುಚ್ಚಿ ಅಂತರ್ಮುಖಿ ಯಾಗುವಂತಹ ಆಧ್ಯಾತ್ಮಿಕ ಕ್ರಿಯೆ.

ಧ್ಯಾನವೆಂದರೆ ನಮ್ಮೊಂದಿಗೆ ನಾವಿರುವುದು.
ಧ್ಯಾನವೆಂದರೆ ಪರಮಾತ್ಮನ ಅಂಶವಾದ ಜೀವಾತ್ಮ,ಅತ್ಮದೇವರು,
ಪ್ರಾಣದೇವರನ್ನು ಅರಿಯುವುದು ಹಾಗೂ ಅನುಭವಿಸುವುದು ಎಂದು ಹೇಳುತಗತಾರೆ ಪಿರಮಿಡ್ ಮಾಸ್ಟರ್ ನಿಖಿತಾ.

ಒಟ್ಟಾರೆ ಧ್ಯಾನವೆಂದರೆ ಅರಿವಿನ ನಿದ್ರೆ ಎಂದು ಹೇಳಬಹುದು.

ಧ್ಯಾನದ ವಿಧಾನ :
ಯಾವುದಾದರೂ ಸುಖಾಸನದಲ್ಲಿ ಹಾಯಾಗಿ ಕುಳಿತು ಎರಡೂ ಕೈಗನ್ನು ಸೇರಿಸಿಕೊಂಡು, ಕಣ್ಣು ಮುಚ್ಚಿಕೊಂಡು ಪ್ರಕೃತಿ ಸಹಜವಾಗಿ ನಡೆಯುತ್ತಲಿರುವ ಉಚ್ವಾಸ- ನಿಶ್ವಾಸ ಗಳನ್ನೇ ಗಮನಿಸುತ್ತಾ ಇರಬೇಕು.

ಶಾಂತವಾಗಿರಿ, ಶ್ವಾಸವೇ ನೀವಾಗಿರಿ, ಮೃದುವಾಗಿ ಸರಾಗವಾಗಿ ಉಸಿರನ್ನು ತೆಗೆದುಕೊಳ್ಳಿ,ಮೃದುವಾಗಿ ಸಲೀಸಾಗಿ ಉಸಿರನ್ನು ಬಿಡಿ. ನಮ್ಮ ಶ್ವಾಸವೇ ನಮ್ಮ ಗುರು.

ಶ್ವಾಸವನ್ನೇ ಗಮನಿಸುತ್ತಾ ಶ್ವಾಸ ಗುರುವಿನೊಂದಿಗೆ ಇರಿ.
ಆನಾ ಎಂದರೆ ಒಳ ಬರುತ್ತಿರುವ ಉಸಿರು,
‘ಅಪಾನ ‘ ಎಂದರೆ ಹೊರ ಹೋಗುತ್ತಿರುವ ಉಸಿರು, ಸತಿ ಎಂದರೆ ಕೂಡಿರುವುದು; ಜೊತೆ ಇರುವುದು. ಇದೇ
ಆನಾಪಾನಸತಿ ಧ್ಯಾನ ; ಸರಿಯಾದ ಧ್ಯಾನ.

ಧ್ಯಾನವನ್ನು ನಿಯಮಿತವಾಗಿ ತಪ್ಪದೇ ಮಾಡಬೇಕು, ಅವರವರ ವಯಸ್ಸಿಗೆ ಅನುಗುಣವಾಗಿ ಪ್ರತಿಯೊಬ್ಬರೂ,
ಪ್ರತಿನಿತ್ಯವೂ ಧ್ಯಾನ ಮಾಡಬೇಕು ಎಂದು ನಿಖಿತಾ ಸಲಹೆ ನೀಡಿದ್ದರೆ.

ಉದಾಹರಣೆಗೆ ೧೦ ವರ್ಷದವರು ೧೦ ನಿಮಿಷಗಳ ಕಾಲ,೨೦ ವರ್ಷದವರು ೨೦ ನಿಮಿಷಗಳ ಕಾಲ,ನಲವತ್ತು ವರ್ಷದವರು ನಲವತ್ತು ನಿಮಿಷಗಳ ಕಾಲ ಧ್ಯಾನ ಮಾಡಬೇಕು.

ಪಿರಮಿಡ್ ಮಾಸ್ಟರ್ ನಿಖಿತಾ ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಕಾರ್ಯಕ್ರಮ ಕೊಟ್ಟಿದ್ದಾರೆ,ಎರಡರಿಂದ ಮೂರು ಗಂಟೆಗಳ ಕಾಲ ಇದರ ಬಗ್ಗೆ ಅರಿವನ್ನ ಮಹಿಳೆಯರಿಗೆ ದೊಡ್ಡವರಿಗೆ ಮಕ್ಕಳಿಗೆ ಮೂಡಿಸುತ್ತಿದ್ದಾರೆ.

ಆರೋಗ್ಯವಾಗಿ ಇರಬೇಕೆಂದರೆ ಧ್ಯಾನ ಒಂದು ಪ್ರಮುಖ ಕಾರಣ.ನಿಖಿತಾ ಅವರು ಉಚಿತವಾಗಿ ಈ ಕಾರ್ಯಕ್ರಮಗಳನ್ನು ಕೊಡುತ್ತಿದ್ದಾರೆ ಜೊತೆಗೆ ಆನ್ಲೈನ್ ಕ್ಲಾಸ್ ಕೂಡಾ ಮಾಡುತ್ತಿದ್ದಾರೆ.

ಈ ತರಗತಿಗೆ ಸೇರಬಯಸುವವರು ಜೂಮ್ ಮೇಕಿಂಗ್ನಲ್ಲಿ ಭಾಗವಹಿಸಬಹುದು.
ZOOM ID : 6808948844 P.W.SHAMBHAVI

ಶ್ರೀಮತಿ ನಿಖಿತಾ, ಪಿರಮಿಡ್ ಮಾಸ್ಟರ್
ಶ್ರೀ ವೀರಭದ್ರೇಶ್ವರ ಪಿರಮಿಡ್ ಧ್ಯಾನ ಮಂದಿರ,ಗುಬ್ಬಿ.ತುಮಕೂರು ಜಿಲ್ಲೆ.ಈ ವಿಳಾಸದಲ್ಲೂ ಅವರನ್ನು ಸಂಪರ್ಕಿಸಬಹುದು.

ಆರೋಗ್ಯಕ್ಕೆ ಉತ್ತಮ ಸಾಧನ ಧ್ಯಾನ Read More